Category Archives: Blog

Your blog category

ಕರ್ನಾಟಕದ ಉರ್ದು ಪ್ರಾಥಮಿಕ ಹಾಗು ಪ್ರೌಢ ಶಾಲೆ ಅವಧಿ ಬದಲಾವಣೆ, ಕಾರಣವೇನು? – Kannada News | Karnataka Governmnet revises school timings for Urdu medium schools during Ramzan

ಬೆಂಗಳುರು, (ಫೆಬ್ರವರಿ 02): ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಬ್ಬ (Ramzan Festival)  ಹಿನ್ನೆಲೆಯಲ್ಲಿ ಕರ್ನಾಟಕದ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಪರಿಷ್ಕರಿಸಲಾಗಿದೆ. ರಂಜಾನ್ ತಿಂಗಳಲ್ಲಿ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ (Urdu medium school) ಸಮಯವನ್ನು ಬದಲಾವಣೆ ಮಾಡಲಾಗಿದ್ದು, ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ ನಡೆಸಲು ಆದೇಶಿಸಲಾಗಿದೆ. ಈ ಕುರಿತು ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ ಅಧಿಕೃತವಾಗಿ ಸುತ್ತೋಲೆ ಹೊರಡಿಸಿದೆ.

ಬೆಳಿಗ್ಗೆ 8ರಿಂದ ಮಧ್ಯಾಹ್ನ 12.45ರವರೆಗೆ ತರಗತಿ

ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯ ಪ್ರಕಾರ, ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಈ ಪರಿಷ್ಕೃತ ಸಮಯ ಅನ್ವಯವಾಗಲಿದೆ. ರಂಜಾನ್ ತಿಂಗಳು ಆರಂಭವಾಗುವ ದಿನದಿಂದ 2026ರ ಮಾರ್ಚ್ 20ರವರೆಗೆ ಶಾಲೆಗಳು ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 12.45ರವರೆಗೆ ಕಾರ್ಯನಿರ್ವಹಿಸಲಿವೆ. ಸಾಮಾನ್ಯ ದಿನಗಳಲ್ಲಿ ಶಾಲೆಗಳು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.20ರವರೆಗೆ ನಡೆಯುತ್ತಿದ್ದವು. ಆದರೆ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮನವಿಯನ್ನು ಪುರಸ್ಕರಿಸಿ ಮತ್ತು 2002ರಲ್ಲಿದ್ದ ಹಳೆಯ ಆದೇಶವನ್ನು ಪರಿಶೀಲಿಸಿ ಸರ್ಕಾರ ಈ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಇದನ್ನೂ ಓದಿ: ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಶಿಕ್ಷಣ ಇಲಾಖೆ ವಿಶೇಷ ಕಾಳಜಿ: ಇಲ್ಲಿದೆ ಮಾರ್ಗಸೂಚಿ

ಸುತ್ತೋಲೆತಲ್ಲೇನಿದೆ?

2025-26ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳು ರಂಜಾನ್ ತಿಂಗಳು ಪ್ರಾರಂಭವಾದ ದಿನಾಂದಿಂದ ದಿನಾಂಕ: 20-03-2026ರವರೆಗೆ ಮಾತ್ರ ಶಾಲಾ ಅವಧಿಯ ವೇಳಾಪಟ್ಟಿಯ ಬದಲಾವಣೆ ಮಾಡಲಾಗಿದೆ.

ಈ ವ್ಯವಸ್ಥೆಯಿಂದ ಶಾಲೆಗಳ ಕೆಲಸದ ಅವಧಿಯಲ್ಲಿ ಕಡಿಮೆ ಆಗುವ ಅವಧಿಯನ್ನು ಇತರೇ ರಜಾ ದಿನಗಳಲ್ಲಿ ಕಾರ್ಯ ನಿರ್ವಹಿಸುವ ಮೂಲಕ ಸರಿದೂಗಿಸಿಕೊಳ್ಳತಕ್ಕದ್ದು. ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ರಂಜಾನ್ ಮಾಹೆಯಲ್ಲಿ ಉಪವಾಸ ವ್ರತವನ್ನು ಕೈಗೊಳ್ಳುವುದರಿಂದ ಅವರುಗಳಿಗೆ ರಂಜಾನ್ ಮಾಹೆಯಲ್ಲಿ ಪ್ರತಿದಿನ ಸಂಜೆ ಅರ್ಧ ಗಂಟೆ ಮುಂಚಿತವಾಗಿ ತೆರಳಲು ಅನುಮತಿಸಬಹುದು.

2025-26ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಪರೀಕ್ಷಾ ವೇಳಾಪಟ್ಟಿಯಂತೆ ನಡೆಸುವಂತೆ ಕ್ರಮವಹಿಸುವುದು. 2025-26ನೇ ಸಾಲಿಗೆ ನಿಗದಿಪಡಿಸಿರುವ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ಕರ್ತವ್ಯ ನಿರತ ಉರ್ದು ಮಾಧ್ಯಮದ ಶಿಕ್ಷಕರಿಗೆ ಈ ಆದೇಶವು ಅನ್ವಯಿಸುವುದಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಬಿಜೆಪಿ ಆಕ್ಷೇಪಕ್ಕೆ ಗೃಹ ಸಚಿವ ತಿರುಗೇಟು

ಭಾರತೀಯ ಜನತಾ ಪಕ್ಷವು ಈ ಕ್ರಮವನ್ನು ತೀವ್ರವಾಗಿ ಆಕ್ಷೇಪಿಸಿದ್ದು, ಕಾಂಗ್ರೆಸ್ ತುಷ್ಟೀಕರಣ ರಾಜಕೀಯದಲ್ಲಿ ತೊಡಗಿದೆ. ಯಾವುದೇ ಹಿಂದೂ ಹಬ್ಬಕ್ಕೂ ಅದು ಅದೇ ಕ್ರಮವನ್ನು ತೆಗೆದುಕೊಳ್ಳುತ್ತದೆಯೇ ಎಂದೂ ಬಿಜೆಪಿ ಪ್ರಶ್ನಿಸಿದೆ. ಇನ್ನು ಇದಕ್ಕೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಇದು ಅಲ್ಪಸಂಖ್ಯಾತರ ಓಲೈಕೆಯ ಪ್ರಶ್ನೆಯಲ್ಲ. ಸಂವಿಧಾನದಲ್ಲಿ ಎಸ್ಸಿ/ಎಸ್ಟಿ ಸಮುದಾಯಗಳಿಗೆ ಮೀಸಲಾತಿ ನೀಡಿರುವುದು ಮತ್ತು ಹಿಂದುಳಿದ ವರ್ಗಗಳನ್ನು ಪರಿಗಣಿಸಿರುವುದು ಅವರನ್ನು ಇತರರಿಗೆ ಸಮಾನರನ್ನಾಗಿ ಮಾಡಲು. ಸಾವಿರಾರು ವರ್ಷಗಳಿಂದ ನಿರ್ಲಕ್ಷ್ಯಕ್ಕೊಳಗಾದ ಸಮುದಾಯಗಳನ್ನು ಮೇಲೆತ್ತಲು ಇಂತಹ ಪ್ರೋತ್ಸಾಹ ಅಗತ್ಯ,” ಎಂದು ಅವರು ಹೇಳಿದ್ದಾರೆ. ಉರ್ದು ಮಾಧ್ಯಮದ ಮಕ್ಕಳು ಇತರರೊಂದಿಗೆ ಸಮಾನವಾಗಿ ಬೆಳೆಯಬೇಕು ಎಂಬ ಉದ್ದೇಶದಿಂದ ಸರ್ಕಾರ ಇಂತಹ ಕಾರ್ಯಕ್ರಮಗಳ ಮೂಲಕ ಸಣ್ಣ ಪ್ರೋತ್ಸಾಹ ನೀಡುತ್ತಿದೆ. ಇದನ್ನು ಸಹಿಸದಿದ್ದರೆ, ನೀವು ಸಮಾನತೆಯ ವಿರೋಧಿಗಳು ಎಂದು ಅರ್ಥವಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ನೀಡಿದ ನಿರ್ಮಾಪಕರ ಸಂಘ – Kannada News | Case filed against Chakravarthy Chandrachud over derogatory remarks on KVN Productions

Venkat K. Narayana Thalapathy Vijay, ChandrachudImage Credit source: KVN Productions, Chakravarthy Chandrachud

ನಟ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ನಿರ್ಮಾಪಕರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ದೂರು ನೀಡಲಾಗಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ‘ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ’ (Kannada Film Producers Association) ದೂರು ನೀಡಿದೆ. ತಮ್ಮದೇ ಯೂಟ್ಯೂಬ್ ಚಾನಲ್ ಹೊಂದಿರುವ ಚಂದ್ರಚೂಡ್ ಅವರು ಇತ್ತೀಚೆಗೆ ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ನಿರ್ಮಾಣದ ‘ಜನ ನಾಯಗನ್’ ಸಿನಿಮಾ ಬಗ್ಗೆ ಮಾತನಾಡಿದ್ದರು. ಆ ವಿಡಿಯೋದಲ್ಲಿ ಅವರು ನಿರ್ಮಾಪಕರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ.

‘ಕೆಲವು ನಿರ್ಮಾಪಕರು ಹೀರೋಗಳ ವಿಚಾರ ಬಂದರೆ ಅವರ ಮನೆಯ ಕಮೋಡ್ ಕೂಡ ಚಿನ್ನದಲ್ಲಿ ನೋಡಿಕೊಳ್ಳುತ್ತಾರೆ. ಅವರ ಮನೆಗೆ ಕಾಂಡೋಮ್ ಕೂಡ ತೆಗೆದುಕೊಂಡು ಹೋಗುತ್ತಾರೆ. ಆದರೆ ತಂತ್ರಜ್ಞರು, ಲೈಟ್ ಬಾಯ್ಸ್, ಪ್ರೊಕ್ಷಡನ್ ಹುಡುಗರು, ರೈಟರ್ ವಿಚಾರ ಬಂದರೆ ಸರಿಯಾಗಿ ಹಣ ಕೊಡಲ್ಲ. ಹೇಳಿಕೊಳ್ಳೋಕೆ ಆಗಲ್ಲ. ದೊಡ್ಡ ದೊಡ್ಡ ನಿರ್ಮಾಪಕರು ಈ ರೀತಿ ಮಾಡುತ್ತಾರೆ’ ಎಂದು ಯೂಟ್ಯೂಬ್ ವಿಡಿಯೋದಲ್ಲಿ ಚಂದ್ರಚೂಡ್ ಮಾತನಾಡಿದ್ದರು.

ಆದ್ದರಿಂದ ಚಂದ್ರಚೂಡ್ ವಿರುದ್ಧ ದೂರು ನೀಡಲಾಗಿದೆ. ‘ಅಶ್ಲೀಲ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ಸಾರ್ವಜನಿಕವಾಗಿ ಯೂಟ್ಯೂಬ್ ಮೂಲಕ ನೀಡಿದ್ದಾರೆ. ಈ ಹೇಳಿಕೆಗಳು ಸಂಪೂರ್ಣ ಕನ್ನಡ ಚಲನಚಿತ್ರ ನಿರ್ಮಾಪಕರ ಗೌರವ, ಘನತೆ ಹಾಗೂ ಮಾನಕ್ಕೆ ಗಂಭೀರ ಹಾನಿ ಉಂಟುಮಾಡಿದೆ. ಸಮಾಜದಲ್ಲಿ ನಿರ್ಮಾಪಕರ ಬಗ್ಗೆ ತಪ್ಪು ಕಲ್ಪನೆ, ದ್ವೇಷ ಮತ್ತು ಅವಿಶ್ವಾಸ ಮೂಡಿಸುವ ಉದ್ದೇಶದಿಂದ ಮಾತನಾಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

‘ಯೂಟ್ಯೂಬ್ ಎಂಬ ಡಿಟಿಟಲ್ ಮಾಧ್ಯಮವನ್ನು ದುರುಪಯೋಗಪಡಿಸಿಕೊಂಡು ಅಶ್ಲೀಲ ಮತ್ತು ಕಾನೂನು ವಿರೋಧಿ ವಿಷಯವನ್ನು ಪ್ರಚಾರ ಮಾಡಲಾಗಿದೆ. ಅನೇಕ ಅವಾಚ್ಯ ಶಬ್ದಗಳಲ್ಲಿ ಮಾತನಾಡಿದ್ದಾರೆ. ಇದರ ಬಗ್ಗೆ ಸಂಘಕ್ಕೆ ಅನೇಕ ನಿರ್ಮಾಪಕರು ಮತ್ತು ಕೆವಿಎನ್ ಸಂಸ್ಥೆಯವರು ದೂರು ನೀಡಿರುತ್ತಾರೆ. ಚಂದ್ರಚೂಡ್ ವಿರುದ್ಧ ಪ್ರತಿಭಟನೆ ಮಾಡಲು ಕೆಲವು ನಿರ್ಮಾಪಕರು ತಯಾರಾಗಿರುತ್ತಾರೆ’ ಎಂದು ದೂರಿನಲ್ಲಿ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ಗಿಲ್ಲಿಗೆ ಒಳ್ಳೆಯದಾಗಲಿ, ಅವನ ಹೆಸರಲ್ಲಿ ನಡೆಯುತ್ತಿರುವ ನಾಟಕಕ್ಕಲ್ಲ; ಸುದೀಪ್ ಆಪ್ತ ಚಕ್ರವರ್ತಿ ಚಂದ್ರಚೂಡ್

‘ಸಮಾಜದಲ್ಲಿ ಶಾಂತಿ ಉಂಟುಮಾಡಲು ತಕ್ಷಣವಾಗಿ ಚಂದ್ರಚೂಡ್ ವಿರುದ್ಧ ಮಾನಹಾನಿ, ಉದ್ದೇಶಪೂರ್ವಕ ಅವಮಾನ, ಸಮಾಜದಲ್ಲಿ ಶಾಂತಿಭಂಗ ಮಾಡುವ ಹೇಳಿಕೆ, ಮಹಿಳೆಯರ ಗೌರವಕ್ಕೆ ಧಕ್ಕೆ ಹಾಗೂ ಐಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ಕಾನೂನುಬದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘವು ದೂರು ಸಲ್ಲಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Viral Video: ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ; ಈ ಮಗು ಬದುಕುಳಿದಿದ್ದೇ ಪವಾಡ – Kannada News | Beware before leaving kids on road little girl saved by miracle in Kerala Watch Viral Video

ಕೋಝಿಕೋಡ್, ಫೆಬ್ರವರಿ 2: ಎಲ್ಲ ಪೋಷಕರೂ ತಮ್ಮ ಮಕ್ಕಳ ಸುರಕ್ಷತೆಯ ಬಗ್ಗೆ ಹೆಚ್ಚು ಗಮನ ವಹಿಸುತ್ತಾರೆ. ಒಂದುವೇಳೆ ಒಂದೆರಡು ಸೆಕೆಂಡ್ ಮಕ್ಕಳ ಬಗ್ಗೆ ಗಮನ ಕೊಡದೇ ಇದ್ದರೂ ಅವರ ಜೀವಕ್ಕೇ ಅಪಾಯ ಉಂಟಾದೀತು. ಕೇರಳದ (Kerala)  ಕೋಝಿಕೋಡ್​​ನಲ್ಲಿ ಚಿಕ್ಕ ಹೆಣ್ಣುಮಗುವೊಂದು ರಸ್ತೆಗೆ ಓಡಿಬಂದಾಗಲೇ ಬಸ್​ ಅಡ್ಡಬಂದಿದೆ. ದೇವರ ಕೃಪೆಯಿಂದ ಆ ಬಸ್​ ಆ ಮಗುವಿಗೆ ಡಿಕ್ಕಿ ಹೊಡೆದಿಲ್ಲ. ಅಷ್ಟರಲ್ಲಿ ಆ ಮಗು ಹೆದರಿ ವಾಪಾಸ್ ಓಡಿದೆ. ಆ ವೇಳೆಗೆ ಬೇರೆ ಯಾವುದಾದರೂ ವಾಹನ ಬಂದಿದ್ದರೂ ಆ ಮಗುವಿಗೆ ಡಿಕ್ಕಿ ಹೊಡೆಯುತ್ತಿತ್ತು. ಆದರೆ, ಅದೃಷ್ಟವಶಾತ್ ಆ ರೀತಿ ಯಾವ ವಾಹನಗಳೂ ಬಾರದ ಕಾರಣದಿಂದ ಆ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಹೀಗಾಗಿ, ಮಗುವನ್ನು ಒಂಟಿಯಾಗಿ ಬಿಡುವ ಮುನ್ನ ಎಚ್ಚರವಿರಲಿ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನೀವು ಲಿಫ್ಟ್ ಬಳಸಬಾರದು: ಭಾರವಾದ ಪಾರ್ಸೆಲ್ ಹೊತ್ತು 6ನೇ ಮಹಡಿಗೆ ಮೆಟ್ಟಿಲ ಮೂಲಕ ಸಾಗಿದ ಡೆಲಿವರಿ ಬಾಯ್ – Kannada News | Viral: Delivery Boy Denied Lift Access, Carries Heavy Parcel Up 6 Floors; Netizens Condemn

ಡೆಲಿವರಿ ಬಾಯ್ ಒಬ್ಬರು ಭಾರವಾದ ಪಾರ್ಸೆಲ್ ಹೊತ್ತು 6ನೇ ಮಹಡಿಯವರೆಗೆ ಮೆಟ್ಟಿಲುಗಳನ್ನು ಹತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್​​ ಆಗಿದೆ. ಇದೀಗ ಈ ವಿಡಿಯೋ ನೋಡಿ ನೆಟ್ಟಿಗರು ಅಕ್ರೋಶ ವ್ಯಕ್ತಪಡಿದ್ದಾರೆ. ನಗರವೊಂದರ ವಸತಿ ಸಂಕೀರ್ಣವೊಂದರಲ್ಲಿ (Housing Society), ಡೆಲಿವರಿ ಬಾಯ್ ಒಬ್ಬರಿಗೆ ಲಿಫ್ಟ್ ಬಳಸಲು ಅಲ್ಲಿನ ಭದ್ರತಾ ಸಿಬ್ಬಂದಿ ಅನುಮತಿ ನೀಡಲಿಲ್ಲ. ಈ ಕಾರಣಕ್ಕೆ ಈ ಡೆಲಿವರಿ ಬಾಯ್​​​​​​​​ ಮೆಟ್ಟಿಲಿನಲ್ಲಿ ಹತ್ತಿಕೊಂಡೆ ಬಂದಿದ್ದಾರೆ. ಪಾರ್ಸೆಲ್​​ ತಲುಪಿಸುವ ಅನಿವಾರ್ಯವಾಗಿ ಅತ್ಯಂತ ಭಾರವಾದ ಪಾರ್ಸೆಲ್ ಅನ್ನು ತನ್ನ ಬೆನ್ನಿನ ಮೇಲೆ ಹೊತ್ತುಕೊಂಡು 6ನೇ ಮಹಡಿಯವರೆಗೆ ಮೆಟ್ಟಿಲುಗಳ ಮೂಲಕ ಹೋಗಿದ್ದಾರೆ.

ಈ ವಿಡಿಯೋವನ್ನು ಎಕ್ಸ್ (ಟ್ವಿಟರ್) ನಲ್ಲಿ ಹಂಚಿಕೊಳ್ಳಲಾಗಿದೆ. ಇದರಲ್ಲಿ ಭಾರವಾದ ಪರ್ಸೆಲ್​​ಗಳನ್ನು ಬೆನ್ನು ಮೇಲೆ ಏರಿಸಿಕೊಂಡು ಮೆಟ್ಟಿಲಿನಲ್ಲಿ ಬ್ಯಾಲೇನ್ಸ್​​ ಮಾಡಿಕೊಂಡು ಹೋಗಿದ್ದಾರೆ. ಅವರು 6ನೇ ಮಹಡಿಯ ಫ್ಲಾಟ್‌ಗೆ ತಲುಪಿದಾಗ, ಅವರ ಸ್ಥಿತಿ ಅತ್ಯಂತ ಕೆಟ್ಟಾಗಿತ್ತು ಎಂದು ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ಮನೆಯ ಒಳಗಿನ ವ್ಯಕ್ತಿಯೊಬ್ಬರು “ಆರಾಮ್ ಸೇ” (ನಿಧಾನವಾಗಿ) ಎಂದು ಹೇಳುವುದು ವಿಡಿಯೋದಲ್ಲಿದೆ ನೋಡಬಹುದು. ಈ ವಿಡಿಯೋವನ್ನು ಹಂಚಿಕೊಂಡವರು ಇದನ್ನು “ಅಮಾನವೀಯ ವರ್ತನೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಅಬ್ಬಾ ! ಒಂದು ಎಕರೆ ತೆಂಗಿನ ತೋಟದಲ್ಲಿ 28 ಲಕ್ಷ ರೂ ಗಳಿಸಬಹುದಂತೆ; ಹೇಗೆ? ಇಲ್ಲಿದೆ ವಿಡಿಯೋ

ಎಕ್ಸ್​​ ವಿಡಿಯೋ ಇಲ್ಲಿದೆ ನೋಡಿ:

ಈ ವಿಡಿಯೋ ನೋಡಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, “ಡೆಲಿವರಿ ಮಾಡುವವರಿಗೆ ಲಿಫ್ಟ್ ಬಳಸಲು ಬಿಡದ ಇಂತಹ ಸೊಸೈಟಿ ನಿಯಮಗಳು ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ. ಕೆಲಸಗಾರರನ್ನು ಗೌರವದಿಂದ ಕಾಣದ ವಸತಿ ಸಂಕೀರ್ಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅನೇಕರು ಒತ್ತಾಯಿಸಿದ್ದಾರೆ. ಭಾರತದಲ್ಲಿ ಶ್ರಮ ಅಗ್ಗವಾಗಿ, ಆದರೆ ವಸ್ತುಗಳು ಅಗ್ಗವಾಗಿಲ್ಲ ಎಂದು ಒಬ್ಬರು ಕಮೆಂಟ್​ ಮಾಡಿದ್ದಾರೆ. ಇಂತಹ ಕೃತ್ಯಗಳಿಗೆ ಕೆಲಸದ ಸ್ಥಳದಲ್ಲಿ ಕಿರುಕುಳದ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಮತ್ತೊಬ್ಬರು ಹೇಳಿದ್ದಾರೆ. ಬೆನ್ನಿನ ಮೇಲೆ ಹೊರೆ ಹೊತ್ತ ವ್ಯಕ್ತಿಯನ್ನು ಆರು ಮಹಡಿಗಳಿಗೆ ಮೆಟ್ಟಿಲುಗಳನ್ನು ಬಳಸಲು ಹೇಳಿದವರ ಯಾರೇ ಆಗಿರಲಿ, ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:27 pm, Mon, 2 February 26

Source link

Kalaburagi: ದೆಹಲಿ ಪೊಲೀಸರ ಸೋಗಲ್ಲಿ ದರೋಡೆ; ಸಿನಿಮಾ ಸ್ಟೈಲ್​​ನಲ್ಲಿ ಆರೋಪಿಗಳು ಲಾಕ್​​ – Kannada News | Kalaburagi Police Nab Fake Delhi Cops; Interstate Robbery Gang Arrested

ಬಂಧಿತ ಆರೋಪಿಗಳ ಜೊತೆ ಪೊಲೀಸರುImage Credit source: Tv9 Kannada

ಕಲಬುರಗಿ, ಫೆಬ್ರವರಿ 02: ದೆಹಲಿ ಪೊಲೀಸರ ಸೋಗಿನಲ್ಲಿ ದರೋಡೆ ಮಾಡ್ತಿದ್ದ ನಟೋರಿಯಸ್ ಗ್ಯಾಂಗ್​​ನ ಖೆಡ್ಡಾಕ್ಕೆ ಕೆಡವುವಲ್ಲಿ ಕೊನೆಗೂ ಕಲಬುರಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳು ದೆಹಲಿ, ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ಐದು ರಾಜ್ಯಗಳ ಪೊಲೀಸರ ನಿದ್ದೆಗೆಡಿಸಿದ್ದರು ಎನ್ನಲಾಗಿದ್ದು, ಅಂತಾರಾಜ್ಯ ದರೋಡೆ ಕೋರರಿಂದ ದೆಹಲಿ ಪೊಲೀಸರ ನಕಲಿ ಐಡಿ ಕಾರ್ಡ್​​ಗಳನ್ನ ವಶಪಡಿಸಿಕೊಳ್ಳಲಾಗಿದೆ. 90 ಗ್ರಾಂ ಚಿನ್ನಾಭರಣ ಸೇರಿದಂರೆ ಬರೋಬ್ಬರಿ 27 ಲಕ್ಷ ಮೌಲ್ಯದ ವಸ್ತುಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ.

ದೆಹಲಿ ಮತ್ತು ಭೂಪಾಲ್ ಮೂಲದ ಜಹೀರ್ ಅಬ್ಬಾಸ್ ಅಲಿ, ಖಾಸೀಂ ಯೂಸುಫ್ ಅಲಿ, ಅಲಿ ಮಿರ್ಜಾ, ಅಲಿ ರಾಜಾ ಶೇಖ್ ಬೇಗ್, ಲಾಲ್​​ಶೇಖ್​, ಜಫರ್ ಮತ್ತು ಜಫರ್ ಆಸೀಮ್ ಬಂಧಿತ ಆರೋಪಿಗಳಾಗಿದ್ದಾರೆ. ದೆಹಲಿ ಪೊಲೀಸರ ಸೋಗಿನಲ್ಲಿ ಸಾರ್ವಜನಿಕ ಚಿನ್ನಾಭರಣ ಲೂಟಿ ಮಾಡಿ ಗ್ಯಾಂಗ್​​ ಎಸ್ಕೇಪ್​​ ಆಗುತ್ತಿತ್ತು ಎನ್ನಲಾಗಿದ್ದು, ಕಳೆದ ವಾರವಷ್ಟೆ ತೆಲಂಗಾಣ ಮೆಹಬೂಬ್ ನಗರ ಜಿಲ್ಲೆಯ ಎರಡೂ ಕಡೆ ಖದೀಮರು ದರೋಡೆ ನಡೆಸಿದ್ದರು. ಬಳಿಕ ಕಲಬುರಗಿಗೆ ಎಂಟ್ರಿ ಕೊಟ್ಟಿದ್ದ ಈ ತಂಡದ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸಬ್ ಅರ್ಬನ್ ಪೊಲೀಸರು ನಗರದ ತಾವರಗೇರಾ ಕ್ರಾಸ್ ಬಳಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಇನ್ನು ಈ ಗ್ಯಾಂಗ್ ಸುಳಿವು ಕೊಟ್ಟವರಿಗೆ ದೆಹಲಿ ಪೊಲೀಸ್ ಇಲಾಖೆ 2 ಲಕ್ಷ ಬಹುಮಾನ ಘೋಷಣೆ ಮಾಡಿದ್ರೂ ಆರೋಪಿಗಳ ಸುಳಿವು ಸಿಕ್ಕಿರಲಿಲ್ಲ. ಆದರೆ ಕಲಬುರಗಿ ಪೊಲೀಸರ ಕೈಗೀಗ ಖದೀಮರು ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ: ಸಿನಿಮಾ ಸ್ಟೈಲಲ್ಲಿ ಯುವಕನ ಅಡ್ಡಗಟ್ಟಿ, ಲಾಂಗ್ ಬೀಸಿ 31 ಕ್ಷ ರೂ. ದರೋಡೆ; ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಭಯಾನಕ ಕೃತ್ಯ

ಇನ್ನು ಈ ಗ್ಯಾಂಗ್​​ನ ಏಳು ಜನರಲ್ಲಿ ಇಬ್ಬರು ಪಿಎಸ್​​ಐ ಎಂದು ಹೇಳಿಕೊಂಡು ಫೀಲ್ಡಿಗಿಳಿಯುತ್ತಿದ್ದರು. ಮುಂದೆ ಕಳ್ಳರು ಇದ್ದಾರೆಂದು ಹೆದ್ದಾರಿಯಲ್ಲಿ ತೆರಳುವ ಕಾರು ಮತ್ತು ಬೈಕ್​​ ಸವಾರರನ್ನು ನಂಬಿಸಿ, ನಿಮ್ಮ ಬಳಿ ಇರುವ ಚಿನ್ನಾಬರಣ ನಮ್ಮ ಬಳಿ ಕೊಡಿ ಎನ್ನುತ್ತಿದ್ದರು. ಅಷ್ಟರಲ್ಲಿ ಉಳಿದವರು ದರೋಡೆಕೋರರಂತೆ ಬಂದಾಗ ಅವರಿಂದ ಕಾಪಾಡಿದ್ದೇವೆ ಎಂಬಂತೆ ಬಿಂಬಿಸಿ ಚಿನ್ನಾಭರಣ ಪಡೆಯುತ್ತಿದ್ದ ಇಬ್ಬರು ನಕಲಿ ಅಧಿಕಾರಿಗಳು ಕ್ಷಣಮಾತ್ರದಲ್ಲಿ ಅವರಿಗೆ ನಕಲಿ ಚಿನ್ನಾಭರಣ ನೀಡುತ್ತಿದ್ದರು. ಇದೇ ರೀತಿ ದೆಹಲಿ, ಮಹಾರಾಷ್ಟ್ರ, ತೆಲಂಗಾಣ , ಮಧ್ಯಪ್ರದೇಶ, ಆಂಧ್ರ ಪ್ರದೇಶದ ಹಲವೆಡೆ ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣವನ್ನು ಆರೋಪಿಗಳು ಲೂಟಿ ಮಾಡಿದ್ದರು. ಅಲ್ಲದೇ ಇದೇ ಗ್ಯಾಂಗ್​​ನ ಆರೋಪಿಯೋರ್ವ ಕಲಬುರಗಿಯ ನೆಂಟಸ್ತನ ಮಾಡಿದ್ದ. ಹೀಗಾಗಿ ಇಲ್ಲಿ ರೂಂ ಮಾಡಿಕೊಂಡು ತೆಲಂಗಾಣದದಲ್ಲಿ ದರೋಡೆ ಮಾಡಲಾಗ್ತಿತ್ತು ಎಂಬ ವಿಚಾರವೂ ಬಯಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬಾಲ್ಯ ವಿವಾಹವಾಗಿದ್ದಕ್ಕೆ ಪೋಕ್ಸೊ ಕೇಸ್: ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು – Kannada News | Chikkaballapur: POCSO case over child marriage; Young man dies after attempting suicide

ಚಿಕ್ಕಬಳ್ಳಾಪುರ, ಫೆಬ್ರವರಿ 02: ಬಾಲ್ಯ ವಿವಾಹವಾಗಿದ್ದಕ್ಕೆ ಪೋಕ್ಸೋ ಕೇಸ್ (POCSO Case) ದಾಖಲು ಹಿನ್ನೆಲೆ ಆತ್ಮಹತ್ಯೆಗೆ (suicide) ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ದಿಗವಮಾರಪ್ಪಗಾರಿಪಲ್ಲಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್(19) ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಚೇಳೂರು ಪೊಲೀಸ್​ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು.

ನಡೆದಿದ್ದೇನು?

ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ದಿಗವಮಾರಪ್ಪಗಾರಿಪಲ್ಲಿ ಗ್ರಾಮದ ನಿವಾಸಿಯಾಗಿದ್ದ ಮಂಜುನಾಥ್​ ಇನ್ಸ್ಟಾಗ್ರಾಮ್​ನಲ್ಲಿ​ ಸಾತನೂರು ಮೂಲದ ಹುಡುಗಿಯನ್ನು ಪರಿಚಯ ಮಾಡಿಕೊಂಡು ಬಳಿಕ 2025ರಲ್ಲಿ ಮದುವೆಯಾಗಿದ್ದರು. ಮಂಜುನಾಥ್ 18 ವರ್ಷದವನಿದ್ದಾಗ 16 ವರ್ಷದ ಬಾಲಕಿಯನ್ನು ಪ್ರೀತಿಸಿ ಮದುವೆಯಾಗಿದ್ದ.

ಇದನ್ನೂ ಓದಿ: ಸಂಸಾರ ಹಾಳು ಮಾಡಿದವನ ಸಂಹಾರ: ಕೊಲೆ ಮಾಡಿ ಫೇಸ್ಬುಕ್​​ನಲ್ಲಿ ತಪ್ಪೊಪ್ಪಿಕೊಂಡ ಖದೀಮರು

ಹುಷಾರಿಲ್ಲ ಎಂದು ಬಾಗೇಪಲ್ಲಿ ಆಸ್ಪತ್ರೆಗೆ ಬಂದಿದ್ದಾರೆ. ಬಾಲಕಿ ವಯಸ್ಸು ಕಡಿಮೆ ಎಂದು ತಿಳಿದ ಮಹಿಳಾ ಮತ್ತು ಮಕ್ಕಳ ರಕ್ಷಣಾ ಇಲಾಖಾ ಅಧಿಕಾರಿಗಳು ಈ ವೇಳೆ ಆಗಮಿಸಿ ಬಾಲಕಿಯನ್ನು ಕರೆದುಕೊಂಡು ಹೋಗಿದ್ದಾರೆ. ಪರಿಶೀಲನೆ ವೇಳೆ ಇದೀಗ ಅಪ್ರಾಪ್ತ ಬಾಲಕಿ 8 ತಿಂಗಳ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಸದ್ಯ ಬಾಲಕಿಯನ್ನ ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಇರಿಸಲಾಗಿದೆ. ಹೀಗಿರುವಾಗ ತನಗೆ ಏನಾದರೂ ಮಾಡಿದರೆ ಎಂಬ ಭಯದಲ್ಲಿ ಮಂಜುನಾಥ್ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಂಗಳೂರಿನಲ್ಲಿ 4ನೇ ಮಹಡಿಯಿಂದ ಬಿದ್ದು ಯುವಕ ಸಾವು: 

ಬೆಂಗಳೂರಿನಲ್ಲಿ 4ನೇ ಮಹಡಿಯಿಂದ ಬಿದ್ದು ಅನುಮಾನಾಸ್ಪದವಾಗಿ ಯುವಕ ಸಾವನ್ನಪ್ಪಿರುವಂತಹ ಘಟನೆ ಭಾರತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂಬಂಧಿಕರ ಮನೆಗೆ ಬಂದಾಗ ದುರಂತ ಸಂಭವಿಸಿದೆ.

ಇದನ್ನೂ ಓದಿ: ವಿಜಯನಗರ: ತ್ರಿವಳಿ ಕೊಲೆಯ ಕಾರಣ ಬಯಲು, ಲವ್ವಿಡವ್ವಿಯಿಂದ ತಂಗಿ ಗರ್ಭಿಣಿಯಾದ್ದು ತಿಳಿದು ಕುಟುಂಬವನ್ನೇ ಮುಗಿಸಿದ ಅಣ್ಣ!

ಇರ್ಫಾನ್ ಮುಲ್ಲಾನಿ(26) ಮೃತ ಯುವಕ. ಮನೆ ಮೇಲಿಂದ ಯುವಕ ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಭಾರತಿನಗರ ಪೊಲೀಸ್ ಠಾಣೆಯಲ್ಲಿ ಅಸಹಜ‌ ಸಾವು ಎಂದು ಕೇಸ್ ದಾಖಲಾಗಿದೆ.

ಸಂಪ್​ಗೆ ಬಿದ್ದು ಬಾಲಕ ಸಾವು

ಜಲಮಂಡಳಿ ಪೈಪ್​ಲೈನ್ ಸಂಪ್​ಗೆ ಬಿದ್ದು ಬಾಲಕ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಬಳಿ ನಡೆದಿದೆ. ಚಾಮರಾಜನಗರ ಮೂಲದ ರಮೇಶ್​ ಎಂಬುವರ ಪುತ್ರ ಪ್ರೀತಂ(14) ಮೃತ ಬಾಲಕ. ಜನವರಿ 29ರಂದು ನಾಪತ್ತೆಯಾಗಿದ್ದ. ನಿನ್ನೆ ಸಂಜೆ ಜಲಮಂಡಳಿ ಪೈಪ್​ಲೈನ್ ಸಂಪ್​ನಲ್ಲಿ ಬಾಲಕನ ಶವ ಪತ್ತೆ ಆಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ಆರ್‌.ಆರ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಕಗ್ಗಲಿಪುರ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 4:32 pm, Mon, 2 February 26

Source link

ದೇವಸ್ಥಾನದ ಸುಪ್ರಭಾತ ಹಾಡು ಹಾಕಿರುವುದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್ – Kannada News | War of Words Between Hindu muslim about Morning God Songs In Temple at Doddaballapur

ದೊಡ್ಡಬಳ್ಳಾಪುರ, ಫೆಬ್ರವರಿ 02): ದೇವಸ್ಥಾನದ (Temple) ಸುಪ್ರಭಾತ ಹಾಡಿನ ವಿಚಾರಕ್ಕೆ ಹಿಂದೂ ಹಾಗೂ ಮುಸ್ಲಿಂ (Hindu And Muslim) ಯುವಕರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಶಾಂತಿ ನಗರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ನಗರದ ಶಾಂತಿ ನಗರದ ಶನಿಮಹಾತ್ಮ ದೇವಸ್ಥಾನದಲ್ಲಿ ಇಂದು (ಫೆಬ್ರವರಿ 02) ಬೆಳಗ್ಗೆ ಸುಪ್ರಭಾತ ಹಾಡು ಹಾಕಿದ್ದು, ಇದಕ್ಕೆ ಮುಸ್ಲಿಂ ಯುವಕನೋರ್ವ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಮನೆಯಲ್ಲಿ ತಾಯಿ ಮಲಗಿದ್ದಾಳೆ ಸೌಂಡ್ ಕಡಿಮೆ ಮಾಡು ಎಂದಿದ್ದಾನೆ. ಇದಕ್ಕೆ ಆಕ್ರೋಶಗೊಂಡು ಹಿಂದೂಗಳು ಮಸೀದಿಯಲ್ಲಿ ಅಜಾನ್ ಕೂಗಿದರೆ ನಾವು ಹೀಗೆ ಕೇಳುತ್ತೀವಾ ಎಂದು ಪ್ರಶ್ನಿಸಿದ್ದಾರೆ. ಹೀಗೆ ಎರಡು ಗುಂಪಿನ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ನು ದೇವಸ್ಥಾನದ ಪೂಜಾರಿ ನೀಡಿದ ದೂರಿನನ್ವಯ ದೊಡ್ಡಬಳ್ಳಾಪುರ ನಗರ ಪೊಲೀಸರಿಂದ ಎನ್ಸಿಆರ್ ದಾಖಲಾಗಿದ್ದು, ಎರಡು ಕಡೆಯವರಿಗೆ ಬುದ್ದಿವಾದ ಹೇಳಿ ಕಳುಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಪ್ರಕಟವಾಗದ ಪುಸ್ತಕದಲ್ಲಿರುವ ವಿಷಯ ಉಲ್ಲೇಖಿಸಲು ಹೋಗಿ ಸದನದ ಬಾಯಿಗೆ ಆಹಾರವಾದ್ರಾ ರಾಹುಲ್ ಗಾಂಧಿ – Kannada News | Lok Sabha Disrupted After Rahul Gandhi Quotes Former Army Chief’s Memoir

ನವದೆಹಲಿ, ಫೆಬ್ರವರಿ 02: ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿಕೆ ಕೋಲಾಹಲವನ್ನೇ ಸೃಷ್ಟಿಸಿದೆ. ಲೋಕಸಭೆಯ ಬಜೆಟ್ ಅಧಿವೇಶನದಲ್ಲಿ,  ರಾಹುಲ್ ಗಾಂಧಿ  ರಾಷ್ಟ್ರಪತಿ ಭಾಷಣದ ಬಗ್ಗೆ ಚರ್ಚಿಸುವಾಗ ಡೋಕ್ಲಾಮ್ ಬಗ್ಗೆ ಪ್ರಸ್ತಾಪಿಸಿದರು. ರಾಹುಲ್ ಗಾಂಧಿ ಡೋಕ್ಲಾಮ್ ಬಗ್ಗೆ ಚರ್ಚಿಸಲು ಪ್ರಾರಂಭಿಸಿದ ತಕ್ಷಣ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿಯವರು ಮಾಜಿ ಸೇನಾ ಮುಖ್ಯಸ್ಥ ನರವಾಣೆ ಅವರ ಚೀನಾ ಮತ್ತು ಡೋಕ್ಲಾಮ್ ಬಗ್ಗೆ ಬರೆದ ಪುಸ್ತಕವನ್ನು ಉಲ್ಲೇಖಿಸಲು ಬಯಸಿದ್ದರು. ಆದರೆ, ರಾಜನಾಥ್ ಸಿಂಗ್ ಅವರು ಆಕ್ಷೇಪ ವ್ಯಕ್ತಪಡಿಸಿ, ನೀವು ಉಲ್ಲೇಖಿಸುತ್ತಿರುವ ಪುಸ್ತಕ ಎಂದಿಗೂ ಪ್ರಕಟವಾಗಿಲ್ಲ ಎಂದು ಹೇಳಿದರು.

ಅವರ ಉಲ್ಲೇಖ ತಪ್ಪಾಗಿತ್ತು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ರಾಹುಲ್ ಗಾಂಧಿಯವರ ಮಾತಿಗೆ ಅಡ್ಡಿಪಡಿಸಿದರು, ಪ್ರಕಟವಾಗದ ಪುಸ್ತಕವನ್ನು ಸಂಸತ್ತಿನಲ್ಲಿ ಚರ್ಚಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ರಾಹುಲ್ ಗಾಂಧಿಯವರ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿ, ಪುಸ್ತಕ ಪ್ರಕಟವಾಗಿದೆಯೋ ಇಲ್ಲವೋ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಹೇಳಿದರು.

ನಂತರ ರಾಜನಾಥ್ ಸಿಂಗ್ ರಾಹುಲ್ ಗಾಂಧಿಯವರನ್ನು ಗುರಿಯಾಗಿಸಿಕೊಂಡು, ಸದನವನ್ನು ದಾರಿ ತಪ್ಪಿಸಲು ಪ್ರಯತ್ನಿಸಬೇಡಿ ಮತ್ತು ಇಲ್ಲಿ ಅನಗತ್ಯ ಹೇಳಿಕೆಗಳನ್ನು ನೀಡಬೇಡಿ ಎಂದು ಹೇಳಿದರು.
ಸಮಾಜವಾದಿ ಪಕ್ಷದ ಸಂಸದ ಅಖಿಲೇಶ್ ಯಾದವ್ ಎದ್ದು ನಿಂತು ರಾಹುಲ್ ಅವರನ್ನು ಬೆಂಬಲಿಸಿ ಹೇಳಿಕೆ ನೀಡಿದರು. ರಾಹುಲ್ ಅವರಿಗೆ ಪುಸ್ತಕದ ಕುರಿತು ಮಾತನಾಡಲು ಅವಕಾಶ ನೀಡುವಂತೆ ಅವರು ಲೋಕಸಭಾ ಸ್ಪೀಕರ್ ಅವರನ್ನು ಒತ್ತಾಯಿಸಿದರು. ಚೀನಾ ವಿಷಯವು ಸೂಕ್ಷ್ಮವಾಗಿದೆ.

ಮತ್ತಷ್ಟು ಓದಿ: ರಾಹುಲ್ ಗಾಂಧಿ ಮತಗಳ್ಳತನ ಆರೋಪ ಸಿಎಂ ಸಿದ್ದರಾಮಯ್ಯ ಬುಡಕ್ಕೆ!

ಆದರೆ ಸ್ಪೀಕರ್ ನಂತರ ರಾಹುಲ್ ಅವರಿಗೆ ಅವರು ಸದನದ ಅಲಂಕಾರವನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಹೇಳಿದರು. ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಂಡ ರಾಹುಲ್, ಅವರು ಪುಸ್ತಕಕ್ಕೆ ಹೆದರುತ್ತಾರೆ. ಅವರಿಗೆ ಭಯವಿಲ್ಲದಿದ್ದರೆ, ನನಗೆ ಓದಲು ಅವಾಶ ಮಾಡಿಕೊಡಬೇಕಿತ್ತು ಎಂದು ರಾಹುಲ್​ಗೆ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿರುಗೇಟುನೀಡಿ, ಸದನವು ನಿಯಮಗಳ ಪ್ರಕಾರ ನಡೆಯುತ್ತದೆ ಎಂದು ಹೇಳಿದರು.

ಭಾನುವಾರ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2026-27ರ ಕೇಂದ್ರ ಬಜೆಟ್ ಅನ್ನು ಮಂಡಿಸಿದರು, ಇದು ಅವರ ಸತತ ಒಂಬತ್ತನೇ ಕೇಂದ್ರ ಬಜೆಟ್ ಆಗಿತ್ತು. ಫೆಬ್ರವರಿ 8ರಂದು ಪ್ರಧಾನಿ ನರೇಂದ್ರ ಮೋದಿ ಸದನವನ್ನುದ್ದೇಶಿಸಿ ಮಾತನಾಡುವ ನಿರೀಕ್ಷೆ ಇದೆ.

ಡೋಕ್ಲಾಮ್ ಬಿಕ್ಕಟ್ಟಿ‌ನ ಕುರಿತು M.M.ನರವಾಣೆ ಬರೆದಿರುವ ಪುಸ್ತಕದ ಪ್ರಕಟಣೆಯನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.ಅದಕ್ಕೆ ಪ್ರತಿಕ್ರಿಯಿಸಿದ ಅಮಿತ್ ಶಾ, ರಾಜನಾಥ್ ಸಿಂಗ್, ಕಿರಣ್ ರಿಜಿಜು, ಇನ್ನೂ ಪ್ರಕಟವಾಗದ ಪುಸ್ತಕದ ವಿಷಯಗಳನ್ನು ಉಲ್ಲೇಖಿಸಬೇಡಿ ಎಂದರು.
ಚೀನಾಕ್ಕೆ ಸಂಬಂಧಿಸಿದ ವಿಷಯವು ತುಂಬಾ ಸೂಕ್ಷ್ಮವಾಗಿದೆ, ರ್ಚೆಗೆ ಅವಕಾಶ ‌ನೀಡಬೇಕು ಎಂದು ಅಖಿಲೇಶ್ ಯಾದವ್ ಒತ್ತಾಯಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

3 ತಿಂಗಳಿಂದ ಬಾಂಗ್ಲಾದೇಶದ ಜೈಲಿನಲ್ಲಿದ್ದ ಆಂಧ್ರದ 9 ಮೀನುಗಾರರು ಭಾರತಕ್ಕೆ ವಾಪಾಸ್ – Kannada News | 9 fishermen from Andhra Pradesh return home after being detained in Bangladesh for 3 months

ಹೈದರಾಬಾದ್, ಫೆಬ್ರವರಿ 2: ಬಾಂಗ್ಲಾದೇಶದಲ್ಲಿ ಕಳೆದ 3 ತಿಂಗಳಿನಿಂದ ಬಂಧನದಲ್ಲಿದ್ದ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ 9 ಮೀನುಗಾರರು (Fishermen) ಸ್ವದೇಶಕ್ಕೆ ಮರಳಿದ್ದಾರೆ. ಜನವರಿ 29ರಂದು ಬಾಂಗ್ಲಾದೇಶದ ಕೋಸ್ಟ್ ಗಾರ್ಡ್ ಮೀನುಗಾರರನ್ನು ಭಾರತದ ಕೋಸ್ಟ್​ ಗಾರ್ಡ್​ಗೆ ಹಸ್ತಾಂತರಿಸಲಾಯಿತು. ನಂತರ ಅವರು ಅವರನ್ನು ಸ್ಥಳೀಯ ಪೊಲೀಸರಿಗೆ ಒಪ್ಪಿಸಿದರು.

2025ರ ಅಕ್ಟೋಬರ್‌ನಲ್ಲಿ ಮೀನುಗಾರಿಕೆಗೆ ಹೋಗಿದ್ದ 9 ಮೀನುಗಾರರು ಬಂಗಾಳಕೊಲ್ಲಿಯಲ್ಲಿ ಮೀನುಗಾರಿಕೆ ಮಾಡುವಾಗ ಅಜಾಗರೂಕತೆಯಿಂದ ಸಮುದ್ರದ ಗಡಿಯನ್ನು ದಾಟಿದ್ದರು. ಹೀಗಾಗಿ, ಬಾಂಗ್ಲಾದೇಶದ ನೌಕಾಪಡೆಯ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ನಂತರ ಅವರನ್ನು ಬಗೇರ್‌ಹಟ್ ಜೈಲಿನಲ್ಲಿ ಇರಿಸಲಾಗಿತ್ತು.

ಇದನ್ನೂ ಓದಿ: Chanchal Bhowmik: ಬಾಂಗ್ಲಾದೇಶದಲ್ಲಿ ಮತ್ತೊಂದು ಹಿಂದೂ ಯುವಕನ ಹತ್ಯೆ; ಗ್ಯಾರೇಜ್‌ನೊಳಗೆ ಸಜೀವ ದಹನ

ಭಾರತ ಮತ್ತು ಬಾಂಗ್ಲಾದೇಶದ ನಡುವಿನ ರಾಜತಾಂತ್ರಿಕ ಮಾತುಕತೆಗಳ ನಂತರ ಮೀನುಗಾರರನ್ನು ಬಿಡುಗಡೆ ಮಾಡಲಾಯಿತು. ಬಾಂಗ್ಲಾದಿಂದ ಬಿಡುಗಡೆಯಾದ ಅವರು ಇಂದು ವಿಶಾಖಪಟ್ಟಣಂ ಕರಾವಳಿಗೆ ತಲುಪಿದ್ದಾರೆ.

ಬಾಂಗ್ಲಾದೇಶದಿಂದ ಬಿಡುಗಡೆಯಾದ ಮೀನುಗಾರರನ್ನು ಮರುಪಲ್ಲಿ ಚಿನ್ನಪ್ಪಣ್ಣ, ರಮೇಶ್ ಅಪ್ಪಲಕೊಂಡ, ಪ್ರವೀಣ್, ರಾಮು, ನಕ್ಕ ರಾಮು, ಸೀತಯ್ಯ ಎಂದು ಗುರುತಿಸಲಾಗಿದೆ. ಅವರಲ್ಲಿ 6 ಮಂದಿ ಭೋಗಪುರಂ ಮಂಡಲದ ಕೊಂಡರಾಜುಪಾಲಂ ಗ್ರಾಮದವರು ಮತ್ತು ಮೂವರು ವಿಜಯನಗರಂ ಜಿಲ್ಲೆಯ ತಿಪ್ಪಲವಲಸ ಗ್ರಾಮದವರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಫೆ.6ರಂದು ರಿಲೀಸ್ ಆಗಲಿದೆ ಗಿಲ್ಲಿ ನಟ ಅಭಿನಯದ ‘ಸರ್ಕಾರಿ ಶಾಲೆ H8’ ಸಿನಿಮಾ – Kannada News | Gilli Nata starrer Sarkari Shale H8 Movie Releasing on 6 February

ಹಾಸ್ಯ ಕಲಾವಿದ ಗಿಲ್ಲಿ ನಟ (Gilli Nata) ಅವರು ಬಿಗ್ ಬಾಸ್ ಶೋನಿಂದ ಅಪಾರ ಜನಪ್ರಿಯತೆ ಪಡೆದಿದ್ದಾರೆ. ಬಿಗ್ ಬಾಸ್ ಟ್ರೋಫಿ ವಿನ್ ಆದ ಬಳಿಕ ಹಲವು ಊರುಗಳಲ್ಲಿ ಮೆರವಣಿಗೆ ಮಾಡಿದ್ದೇ ಅವರ ಜನಪ್ರಿಯತೆಗೆ ಸಾಕ್ಷಿ ಆಗಿದೆ. ಬಿಗ್ ಬಾಸ್​​ನಲ್ಲಿ ಸ್ಪರ್ಧಿಸುವುದಕ್ಕೂ ಮುನ್ನವೇ ಅವರು ಒಂದಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ಆ ಪೈಕಿ ‘ಸರ್ಕಾರಿ ಶಾಲೆ H8’ (Sarkari Shale H8) ಕೂಡ ಇದೆ. ಈ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಫೆಬ್ರವರಿಯಿಂದ 6ರಂದು ಈ ಚಿತ್ರ ರಿಲೀಸ್ ಆಗಲಿದೆ. ಇದರಲ್ಲಿ ಸಸ್ಪೆನ್ಸ್, ಥ್ರಿಲ್ಲರ್ ಕಹಾನಿ ಇದೆ.

‘ಸರ್ಕಾರಿ ಶಾಲೆ H8’ ಸಿನಿಮಾದಲ್ಲಿ ಗಿಲ್ಲಿ ನಟ ಮಾತ್ರವಲ್ಲದೇ ಗುಣ ಹರಿಯಬ್ಬೆ, ಮೇಘಶ್ರೀ, ಜನಪದ ಕಲಾವಿದ ಮೋಹನ್, ಸುಚೇಂದ್ರ ಪ್ರಸಾದ್ ಮುಂತಾದವರು ಅಭಿನಯಿಸಿದ್ದಾರೆ. ಗುಣ ಹರಿಯಬ್ಬೆ ಅವರು ಕಥೆ, ಚಿತ್ರಕಥೆ ಬರೆದು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ‘ಗಿರಿಚಂದ್ರ ಪ್ರೊಡಕ್ಷನ್ಸ್’ ಮೂಲಕ ಈ ಚಿತ್ರ ನಿರ್ಮಾಣ ಆಗಿದೆ. ತೇಜಸ್ವಿನಿ ಎಸ್. ಅವರು ಬಂಡವಾಳ ಹೂಡಿದ್ದಾರೆ.

ಕೆಲವು ಕಾರಣಗಳಿಂದಾಗಿ ‘ಸರ್ಕಾರಿ ಶಾಲೆ H8’ ಸಿನಿಮಾ ಮೇಲೆ ನಿರೀಕ್ಷೆ ಇದೆ. ಟೈಟಲ್ ಗಮನ ಸೆಳೆದಿದೆ. ಗಿಲ್ಲಿ ನಟ ಅಭಿನಯದ ಸಿನಿಮಾ ಆದ್ದರಿಂದ ಅವರ ಅಭಿಮಾನಿಗಳಲ್ಲಿ ಹೈಪ್ ಇದೆ. ಈ ಸಿನಿಮಾದ ಕಥೆಯು ಒಂದು ವಿಗ್ರಹದ ಸುತ್ತ ಸುತ್ತಲಿದೆಯಂತೆ. ಈ ಸಿನಿಮಾಗೆ ಬೆಂಗಳೂರು, ಚಿತ್ರದುರ್ಗ, ಶಿರಾ, ಶಿವಮೊಗ್ಗ ಸುತ್ತಮುತ್ತ ಶೂಟಿಂಗ್ ಮಾಡಲಾಗಿದೆ.

‘ಸರ್ಕಾರಿ ಶಾಲೆ H8’ ಸಿನಿಮಾಗೆ ವಿಜೇತ್ ಮಂಜಯ್ಯ ಅವರ ಸಂಗೀತ ನಿರ್ದೇಶನ ಮಾಡಿದ್ದಾರೆ. 3 ಹಾಡುಗಳು ಈ ಸಿನಿಮಾದಲ್ಲಿವೆ. ಕಾಮಿಡಿ ಸಿನಿಮಾಗಳ ಮೂಲಕ ಫೇಮಸ್ ಆದ ನಟ ಶರಣ್ ಮತ್ತು ಮೆಹಬೂಬ್ ಸಾಬ್ ಒಂದೊಂದು ಹಾಡನ್ನು ಹಾಡಿದ್ದಾರೆ. ನಾಗೇಂದ್ರ ಪ್ರಸಾದ್ ಅವರು ಸಾಹಿತ್ಯ ರಚಿಸಿದ್ದಾರೆ.

ಇದನ್ನೂ ಓದಿ: ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ

ಹಿರಿಯ ನಟ ರಾಘವೇಂದ್ರ ರಾಜ್​ಕುಮಾರ್, ಜಗಪ್ಪ, ನವಾಜ್, ಸುಶ್ಮಿತಾ ಜಗಪ್ಪ, ಜೋತಿರಾಜ್, ಕಡ್ಡಿ ವಿಶ್ವ, ನಮ್ರತಾ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ರವಿ ರಾಮದುರ್ಗ ಮತ್ತು ವೀನಸ್ ಮೂರ್ತಿ ಅವರು ‘ಸರ್ಕಾರಿ ಶಾಲೆ H8’ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ. ರವಿತೇಜ ಸಿ.ಹೆಚ್. ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link