Headlines

ತಾಳ್ಮೆ ಕಳೆದುಕೊಂಡಿಲ್ಲ, ಮಾತು ತಪ್ಪಿದ್ದಕ್ಕೆ ಬೇಸರವಷ್ಟೇ: ರಾಜೀನಾಮೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಹೇಳಿಕೆ – Kannada News

ಬೆಂಗಳೂರು, ಜೂನ್ 6: ಖಾತೆ ಹಂಚಿಕೆ ಅಸಮಾಧಾನದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿ ಸಂಚಲನ ಮೂಡಿಸಿದ್ದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಇಂದು (ಜೂನ್ 6) ಬೆಂಗಳೂರಿನ ಕೋರಮಂಗಲ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ಮುಂದಿನ ನಡೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‘ನನ್ನ ರಾಜೀನಾಮೆಯನ್ನು ಅಂಗೀಕಾರ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ನಾನು ನನ್ನ ಸ್ಪಷ್ಟ ಅಭಿಪ್ರಾಯವನ್ನು ನಾಯಕರ ಮುಂದೆ ಇಟ್ಟಿದ್ದೇನೆ’ ಎಂದು ಅವರು ತಿಳಿಸಿದರು. ಇದೇ…

Read More

ಕ್ಲಿಯರ್ ಔಟ್ ಆಗಿದ್ದರೂ… ನಾಟಕವಾಡಿ ಬಚಾವಾದ ಕೆಎಲ್ ರಾಹುಲ್! – Kannada News

ಮುಲ್ಲನ್‌ಪುರ ಕ್ರೀಡಾಂಗಣದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದ ಮೊದಲ ದಿನದಾಟದಲ್ಲೇ ಸ್ವಾರಸ್ಯಕರ ಘಟನೆ ನಡೆದಿದೆ. ಅದು ಕೂಡ ಕೆಎಲ್ ರಾಹುಲ್ ಅವರ ನಾಟಕದೊಂದಿಗೆ..! ಹೌದು, ಈ ಮ್ಯಾಚ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಿದ್ದರು. ಈ ಪಂದ್ಯದ 11ನೇ ಓವರ್‌ನಲ್ಲಿ ಅಫ್ಘಾನಿಸ್ತಾನದ ವೇಗಿ ಝಿಯಾವುರ್ ರೆಹಮಾನ್ ಎಸೆದ ಚೆಂಡನ್ನು ರಾಹುಲ್ ಕಟ್ ಮಾಡಲು ಯತ್ನಿಸಿದರು. ಈ…

Read More

Karnataka CET 2026 Toppers: ಕೆಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಹೆಣ್ಣು ಮಕ್ಕಳದ್ದೇ ಮೇಲುಗೈ! – Kannada News

ಕೆಸಿಇಟಿ ಫಲಿತಾಂಶ ಟಾಪರ್‌ಗಳ ಪಟ್ಟಿ ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (UGCET) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಇಂದು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಫಲಿತಾಂಶದ ಜೊತೆಯಲ್ಲೇ ರಾಜ್ಯದ ಅತ್ಯಂತ ಪೈಪೋಟಿಯುಕ್ತ ವೃತ್ತಿಪರ ಕೋರ್ಸ್‌ಗಳಾದ ಇಂಜಿನಿಯರಿಂಗ್ ಹಾಗೂ ವೆಟರ್ನರಿ (ಪಶುಸಂಗೋಪನೆ) ವಿಭಾಗದ ಟಾಪರ್‌ಗಳ ಪಟ್ಟಿಯನ್ನು ಸಹ ಪ್ರಕಟಿಸಲಾಗಿದ್ದು, ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ ತನಿಷಾ ಕಾರ್ತಿಕ್ ಸಾಧನೆ: ರಾಜ್ಯಾದ್ಯಂತ ತೀವ್ರ ಕುತೂಹಲ…

Read More

ಮೃತ ಮಹಿಳೆಯ ಕುಟುಂಬದವರಿಗೆ ಪರಿಹಾರ ನೀಡದ್ದಕ್ಕೆ ಕೆಕೆಆರ್​ಟಿಸಿ ಬಸ್ಸನ್ನೇ ಜಪ್ತಿ ಮಾಡಿದ್ರು!

ಬೀದರ್, ಜೂನ್ 6: ನ್ಯಾಯಾಲಯದ ಆದೇಶವಾಗಿದ್ದರೂ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ನಿಗದಿತ ಪರಿಹಾರ ಮೊತ್ತ ನೀಡಲು ವಿಳಂಬ ಮಾಡಿದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (KKRTC) ಬೀದರ್ ನ್ಯಾಯಾಲಯ ಭಾರಿ ಶಾಕ್ ನೀಡಿದೆ. ಕೋರ್ಟ್ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಕೆಕೆಆರ್‌ಟಿಸಿ ಸಂಸ್ಥೆಗೆ ಸೇರಿದ ಬಸ್ಸನ್ನೇ ಜಪ್ತಿ ಮಾಡಲಾಗಿದೆ. 2021 ರ ಆಗಸ್ಟ್ 15 ರಂದು ಭಾಲ್ಕಿ ತಾಲೂಕಿನ ಟೆಕ್ನಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ರೇಖಾ ಸುನೀಲ್ (35)…

Read More

ಬಾಲಿವುಡ್ ಸ್ಟಾರ್ ನಿರ್ದೇಶಕನ ಚಿತ್ರಕ್ಕೆ ರವಿ ಬಸ್ರೂರು ಮ್ಯೂಸಿಕ್

ಮಲಯಾಳಂನಲ್ಲಿ ಸಿದ್ಧವಾದ ‘ದೃಶ್ಯಂ’  (Drishyam) ಸರಣಿ ಅದೇ ಹೆಸರಲ್ಲಿ ಹಿಂದಿಗೂ ರಿಮೇಕ್ ಆಗಿದೆ. ಈಗಾಗಲೇ ಎರಡು ಭಾಗ ತೆರೆಗೆ ಬಂದಿದ್ದು, ಮೂರನೇ ಭಾಗದ ಶೂಟಿಂಗ್ ಮುಕ್ತಾಯಗೊಂಡಿದೆ. ಈ ವರ್ಷದ ಅಕ್ಟೋಬರ್ 2ರಂದು ಸಿನಿಮಾ ತೆರೆಗೆ ಬರಲು ಸಜ್ಜಾಗುತ್ತಿದೆ. ಈ ಬಾರಿ ಈ ಚಿತ್ರದಲ್ಲಿ ಕನ್ನಡಿಗರು ಹೆಮ್ಮೆಪಡುವಂತಹ ದೊಡ್ಡ ಸುದ್ದಿಯೊಂದಿದೆ. ಹೌದು, ಭಾರತೀಯ ಚಿತ್ರರಂಗದ ಸ್ಟಾರ್ ಮ್ಯೂಸಿಕ್ ಡೈರೆಕ್ಟರ್, ಕನ್ನಡಿಗ ರವಿ ಬಸ್ರೂರು ಅವರಿಗೆ ‘ದೃಶ್ಯಂ 3’ ಚಿತ್ರಕ್ಕೆ ಸಂಗೀತ ನೀಡುವ ಆಫರ್ ಸಿಕ್ಕಿದೆ. ವಿಶೇಷವೆಂದರೆ, ‘ದೃಶ್ಯಂ’ ಸರಣಿಯ…

Read More

ಇಂದು ಸಂಜೆಯೇ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ಸಾಧ್ಯತೆ! ರಣದೀಪ್ ಸುರ್ಜೇವಾಲ, ಡಿಕೆಶಿ ತುರ್ತು ಮಾತುಕತೆ – Kannada News

ಬೆಂಗಳೂರು, ಜೂನ್ 6: ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದಲ್ಲಿ ಉದ್ಭವಿಸಿರುವ ಖಾತೆ ಹಂಚಿಕೆ ಬಿಕ್ಕಟ್ಟು ಸದ್ಯ ಶಮನಗೊಳ್ಳುವ ಹಂತಕ್ಕೆ ತಲುಪಿದೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂಡಾಯವೆದ್ದಿದ್ದ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಸಂಜೆ ವೇಳೆಗೆ ರಾಜೀನಾಮೆಯನ್ನು ವಾಪಸ್ ಪಡೆಯುವ ಸಾಧ್ಯತೆ ದಟ್ಟವಾಗಿದೆ. ಎಐಸಿಸಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮಧ್ಯಪ್ರವೇಶಿಸಿ ಸಂಧಾನ ನಡೆಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ಅವರು ಅಸಮಾಧಾನಗೊಂಡಿರುವ ಮುನಿಯಪ್ಪ ಹಾಗೂ ರಾಮಲಿಂಗಾ…

Read More

‘ಮ್ಯಾಂಗೋ ಪಚ್ಚ’ ರಿಲೀಸ್ ಬೆನ್ನಲ್ಲೇ ಕಿಚ್ಚ ಸುದೀಪ್ ಸುದ್ದಿಗೋಷ್ಠಿ – Kannada News

ಸುದೀಪ್ ಅಳಿಯ ಸಂಚಿತ್ ಸಂಜೀವ್ ಅವರ ‘ಮ್ಯಾಂಗೋ ಪಚ್ಚ’ ಸಿನಿಮಾ ಮೆಚ್ಚುಗೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಸಿನಿಮಾ ಸುದ್ದಿಗೋಷ್ಠಿ ಕರೆದಿದೆ. ಈ ಸುದ್ದಿಗೋಷ್ಠಿಯಲ್ಲಿ ಚಿತ್ರದ ವಿಭಿನ್ನ ಕಥಾಹಂದರ ಹಾಗೂ ಮೇಕಿಂಗ್ ಬಗ್ಗೆ ಪ್ರೇಕ್ಷಕರಿಂದ ಅದ್ಭುತವಾದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಇಡೀ ತಂಡ ಸಂತಸ ವ್ಯಕ್ತಪಡಿಸಿದೆ. ಕಮರ್ಷಿಯಲ್ ಅಂಶಗಳ ಜೊತೆಗೆ ಸಾಗುವ ಈ ಕಥೆ ಜನರಿಗೆ ಸಖತ್ ಇಷ್ಟವಾಗಿದ್ದು, ಪ್ರೇಕ್ಷಕರು ಚಿತ್ರಮಂದಿರಗಳತ್ತ ಮುಖ ಮಾಡುತ್ತಿದ್ದಾರೆ. ಮೊದಲ ಸಿನಿಮಾದಲ್ಲೇ ಸಂಚಿತ್ ಸಂಜೀವ್ ತಮ್ಮ ಅತ್ಯುತ್ತಮ ನಟನೆ, ಆಕ್ಷನ್ ಹಾಗೂ ಸ್ವಾಗ್…

Read More

KCET Result 2026: ಕೆಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್‌ ಇಲ್ಲಿದೆ.. – Kannada News

ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳ ಬಹುದಿನಗಳ ಕಾಯುವಿಕೆಗೆ ಕೊನೆಗೂ ತೆರೆ ಬಿದ್ದಿದೆ. 2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (UGCET-2026) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಇಂದು ಅಧಿಕೃತವಾಗಿ ಪ್ರಕಟಿಸಿದೆ. ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಕೆಇಎ ಸಹಾಧ್ಯಕ್ಷರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಇಂದು ಮಧ್ಯಾಹ್ನ 12:00 ಗಂಟೆಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಬಿಡುಗಡೆ ಮಾಡಿದ್ದಾರೆ. ಮಧ್ಯಾಹ್ನ 2:00 ಗಂಟೆಯ ನಂತರ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ತಮ್ಮ ಅಂಕಪಟ್ಟಿ ಮತ್ತು…

Read More

Viral: 9 ಟು 5 ಲೈಫ್ ಬೇಡಪ್ಪಾ: ಬೆಂಗಳೂರಲ್ಲಿ 60 ಸಾವಿರ ಸಂಬಳದ ಕೆಲಸಕ್ಕೆ 22ರ ಯುವತಿ ದಿಢೀರ್ ರಿಸೈನ್! – Kannada News

ಬೆಂಗಳೂರಲ್ಲಿ 60 ಸಾವಿರ ಸಂಬಳದ ಕೆಲಸಕ್ಕೆ 22ರ ಯುವತಿ ದಿಢೀರ್ ರಿಸೈನ್! Image Credit source: dikshaaonly instagram account ಬೆಂಗಳೂರು, ಜೂನ್ 06: ಇಂದಿನ ದಿನಗಳಲ್ಲಿ ಕೈತುಂಬಾ ಸಂಬಳ ಕೊಡುವ ಐಟಿ ಅಥವಾ ಕಾರ್ಪೊರೇಟ್ ಕೆಲಸ ಸಿಗುವುದೇ ಕಷ್ಟ. ಇಂತಹ ಸಂದರ್ಭದಲ್ಲಿ ಬೆಂಗಳೂರಿನಲ್ಲಿರುವ (Bengaluru) 22 ವರ್ಷದ ದೀಕ್ಷಾ ಎಂಬ ಯುವತಿ, ತನಗಿದ್ದ ತಿಂಗಳ 60 ಸಾವಿರ ರೂ. ಆದಾಯದ ಮಾರ್ಕೆಟಿಂಗ್ ಕೆಲಸಕ್ಕೆ ಯಾವುದೇ ಪರ್ಯಾಯ ಯೋಜನೆ ಇಲ್ಲದೆ ರಾಜೀನಾಮೆ ನೀಡಿ ಎಲ್ಲರ ಗಮನ ಸೆಳೆದಿದ್ದಾಳೆ….

Read More

ದೇವದತ್ ಪಡಿಕ್ಕಲ್​ಗೆ ಕೇವಲ 2.6 ಲಕ್ಷ ರೂ..! – Kannada News

ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್ ‘ಇಂಡಿಯನ್ ಪ್ರೀಮಿಯರ್ ಲೀಗ್’ (IPL) ಮುಕ್ತಾಯದ ಬೆನ್ನಲ್ಲೇ, ಕರ್ನಾಟಕದಲ್ಲಿ  ‘ಮಹಾರಾಜ ಟ್ರೋಫಿ ಟಿ20’ ಟೂರ್ನಿಗೆ ವೇದಿಕೆ ಸಿದ್ಧವಾಗಿದೆ. ಇದರ ಮೊದಲ ಹೆಜ್ಜೆಯಾಗಿ ಈಗಾಗಲೇ 6 ತಂಡಗಳ ಹರಾಜು ಪ್ರಕ್ರಿಯೆ ಮುಗಿದಿದೆ. ಈ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ದೇವದತ್ ಪಡಿಕ್ಕಲ್ ಮಾರಾಟವಾಗಿದ್ದು ಕೇವಲ 2.6 ಲಕ್ಷ ರೂ.ಗೆ ಎಂದರೆ ನಂಬಲೇಬೇಕು! ಮಹಾರಾಜ ಟ್ರೋಫಿ ಟಿ20 ಟೂರ್ನಿಯ ನಿಯಮಗಳ ಪ್ರಕಾರ, ಭಾರತ ತಂಡವನ್ನು ಅಥವಾ ಐಪಿಎಲ್ (IPL)…

Read More