Headlines

ಎಲ್​ಪಿಜಿ ಬಿಕ್ಕಟ್ಟಿನ ಮಧ್ಯೆ ಭಾರತಕ್ಕೆ ಗುಡ್ ನ್ಯೂಸ್: ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – Kannada News

ಪರಿಶೋಧನಾ ಬಾವಿಯಲ್ಲಿ ಪರೀಕ್ಷೆ ವೇಳೆ ನೈಸರ್ಗಿಕ ಅನಿಲ ಹೊತ್ತಿ ಉರಿದಿರುವುದು ಹಾಗೂ ಬಲ ಚಿತ್ರದಲ್ಲಿ ಸಚಿವ ಹರ್ದೀಪ್ ಸಿಂಗ್ ಪುರಿImage Credit source: @HardeepSPuri ನವದೆಹಲಿ, ಜೂನ್ 6: ಭಾರತದ ಇಂಧನ ಕ್ಷೇತ್ರದಲ್ಲಿ (Energy Sector) ಹೊಸದೊಂದು ಆಶಾವಾದ ಮೂಡಿಸುವ ಭಾರಿ ಬೆಳವಣಿಗೆ ನಡೆದಿದೆ. ಅಂಡಮಾನ್ ಸಮುದ್ರದಲ್ಲಿ ಬೃಹತ್ ಪ್ರಮಾಣದ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆಯಾಗಿದ್ದು, ದೇಶೀಯ ಇಂಧನ ಸ್ವಾವಲಂಬನೆಯ ಕನಸಿಗೆ ಹೊಸ ಚಾಲನೆ ಸಿಕ್ಕಂತಾಗಿದೆ. ಸರ್ಕಾರಿ ಸ್ವಾಮ್ಯದ ಆಯಿಲ್ ಇಂಡಿಯಾ ಲಿಮಿಟೆಡ್ (OIL) ಸಂಸ್ಥೆಯು ಅಂಡಮಾನ್…

Read More

ಟೀಮ್ ಇಂಡಿಯಾ ಗೆದ್ದರೂ ಸೋತರೂ ನೋ ಪ್ರಾಬ್ಲಮ್… ಯಾಕೆ ಗೊತ್ತಾ? – Kannada News

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯ ಶುರುವಾಗಿದೆ. ಮುಲ್ಲನ್​ಪುರ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಶುಭ್​​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಈ ಪಂದ್ಯವು ಭಾರತದ ಮುಖ್ಯವಲ್ಲ. ಅಂದರೆ ಈ ಮ್ಯಾಚ್​ನಲ್ಲಿ ಗೆದ್ದರೂ, ಡ್ರಾ ಮಾಡಿಕೊಂಡರೂ ಅಥವಾ ಸೋತರೂ ಟೀಮ್ ಇಂಡಿಯಾ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಏಕೆಂದರೆ ಈ ಪಂದ್ಯವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಭಾಗವಲ್ಲ.  WTC ನಲ್ಲಿ ಅಫ್ಘಾನಿಸ್ತಾನ್ ತಂಡಕ್ಕೆ ಸ್ಥಾನವಿಲ್ಲ: ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ನಿಯಮಗಳ ಪ್ರಕಾರ,…

Read More

Viral: ಆಟೋ ಬಾಡಿಗೆ 150ರೂ., ಖಾತೆಗೆ ಬಂದಿದ್ದು 15 ಸಾವಿರ; ಪ್ರಯಾಣಿಕನ ಹಣವನ್ನು ಮರಳಿಸಿ ಮಾದರಿಯಾದ ಚಾಲಕ – Kannada News

ಆಟೋ ಚಾಲಕನ ಪ್ರಮಾಣಿಕತೆImage Credit source: Pinterest ಬೆಂಗಳೂರು: ಇಂದಿನ ಕಾಲದಲ್ಲಿ ಪ್ರಾಮಾಣಿಕತೆ ಎಂಬುದೇ ಇಲ್ಲ ಎಂಬ ಮಾತುಗಳ ನಡುವೆ, ಬೆಂಗಳೂರಿನ ಆಟೋ ಚಾಲಕನೊಬ್ಬ ತನ್ನ ಅಪ್ಪಟ ಪ್ರಾಮಾಣಿಕತೆಯಿಂದ ಇಡೀ ಇಂಟರ್ನೆಟ್ ಜಗತ್ತಿನ ಮನ ಗೆದ್ದಿದ್ದಾನೆ. ಆಟೋ ಬಾಡಿಗೆಯಾಗಿ ಕೇವಲ 150 ರೂಪಾಯಿ ಡಿಜಿಟಲ್ ಪಾವತಿ ಮಾಡಬೇಕಿದ್ದ ಪ್ರಯಾಣಿಕನೊಬ್ಬ, ಆತುರದಲ್ಲಿ ಆಕಸ್ಮಿಕವಾಗಿ ಬರೋಬ್ಬರಿ 15,682 ರೂಪಾಯಿಗಳನ್ನು ಚಾಲಕನ ಖಾತೆಗೆ ವರ್ಗಾಯಿಸಿ ಆತಂಕಕ್ಕೊಳಗಾಗಿದ್ದನು. ಆದರೆ, ಪ್ರಯಾಣಿಕನ ತಪ್ಪು ಅರಿವಾದ ತಕ್ಷಣವೇ ಯಾವುದೇ ಹಿಂಜರಿಕೆಯಿಲ್ಲದೆ ಇಡೀ ಮೊತ್ತವನ್ನು ಪ್ರಾಮಾಣಿಕವಾಗಿ ಮರಳಿ…

Read More

‘ನಾನಿನ್ನ ಬಿಡಲಾರೆ’: ಅತ್ತೆ ಮಾಳವಿಕಾಳ ನಿಜರೂಪ ಕಂಡು ಬೆಚ್ಚಿಬಿದ್ದ ದುರ್ಗಾ – Kannada News

ಜೀ ಕನ್ನಡ ವಾಹಿನಿಯ ಪ್ರೇಕ್ಷಕರ ನೆಚ್ಚಿನ ‘ನಾನಿನ್ನ ಬಿಡಲಾರೆ’ ಧಾರಾವಾಹಿಯು ಈಗ ಅತ್ಯಂತ ರೋಮಾಂಚನಕಾರಿ ತಿರುವು ಪಡೆದುಕೊಂಡಿದೆ. ಇದುವರೆಗೆ ಯಾರನ್ನು ತನ್ನ ಪ್ರಾಣಕ್ಕಿಂತ ಹೆಚ್ಚಾಗಿ ನಂಬಿದ್ದಳೋ, ಯಾರನ್ನು ಮನೆಯ ನಂದಾದೀಪ ಎಂದುಕೊಂಡಿದ್ದಳೋ, ಆ ಅತ್ತೆ ಮಾಳವಿಕಾಳ ಅಸಲಿ ಮುಖವಾಡ ಈಗ ದುರ್ಗಾಳ ಎದುರು ಕಳಚಿ ಬಿದ್ದಿದೆ. ಸದಾ ಒಳ್ಳೆಯವಳಂತೆ ನಟಿಸುತ್ತಿದ್ದ ಅತ್ತೆಯ ನಿಜವಾದ ಬಣ್ಣ ಬಯಲಾಗುತ್ತಿದ್ದಂತೆ ದುರ್ಗಾ ತೀವ್ರ ಆಘಾತಕ್ಕೊಳಗಾಗಿದ್ದಾಳೆ. ದುರ್ಗಾ ತನ್ನ ಇಡೀ ಬದುಕು, ತನ್ನ ಅಪ್ಪ, ಅಕ್ಕನ ಸಾವು ಎಲ್ಲವೂ ನಿಗೂಢತೆಯಿಂದ ಕೂಡಿದೆ ಎಂದುಕೊಂಡಿರುತ್ತಾಳೆ….

Read More

ಬಡ ಮಕ್ಕಳ ಹೊಟ್ಟೆಮೇಲೆ ಹೊಡೆದ ವಾರ್ಡನ್; 3 ದಿನ ಅನ್ನ-ನೀರಿಲ್ಲದೆ ಪಕ್ಕದ ಹಾಸ್ಟೆಲ್‌ನಲ್ಲಿ ಕೈಚಾಚಿದ ವಿದ್ಯಾರ್ಥಿಗಳು! – Kannada News

ರಾಯಚೂರು, ಜೂನ್ 06: ಕಡು ಬಡತನದ ಹಿನ್ನೆಲೆಯಿಂದ ಬಂದು, ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ವಸತಿ ನಿಲಯಗಳನ್ನೇ ನಂಬಿಕೊಂಡಿರುವ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲೊಂದು ಭೀಕರ ಅನ್ಯಾಯ ನಡೆದಿದೆ. ಜಿಲ್ಲೆಯ (Raichur) ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಕಳೆದ ಮೂರು ದಿನಗಳಿಂದ ಊಟ ಮತ್ತು ಕುಡಿಯುವ ನೀರಿಲ್ಲದೆ ವಿದ್ಯಾರ್ಥಿಗಳು ತೀವ್ರ ಪರದಾಟ ನಡೆಸಿದ್ದಾರೆ. ಹಸಿವಿನ ನೋವು ತಾಳಲಾರದೇ ನೂರಾರು ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಎದುರು ಬೀದಿಗಿಳಿದು ಆಕ್ರೋಶ ಹೊರಹಾಕಿದ್ದಾರೆ. ಮುಖ್ಯಾಂಶಗಳು ರಾಯಚೂರಿನ ಸರ್ಕಾರಿ ಹಾಸ್ಟೆಲ್‌ನಲ್ಲಿ…

Read More

2 ದಿನಗಳಲ್ಲಿ 33 ವಿಕೆಟ್ ಪತನ: ರೋಚಕ ಘಟ್ಟದಲ್ಲಿ ‘ಲಾರ್ಡ್ಸ್’​ ಟೆಸ್ಟ್

ಲಾರ್ಡ್ಸ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ರೋಚಕಘಟ್ಟದತ್ತ ಸಾಗಿದೆ. ಅದು ಕೂಡ ಕೇವಲ 2 ದಿನಗಳಲ್ಲಿ 33 ವಿಕೆಟ್​ಗಳ ಪತನದೊಂದಿಗೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು ಕೇವಲ 140 ರನ್​ಗಳಿಗೆ ಆಲೌಟ್ ಆಗಿದ್ದರು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ನ್ಯೂಝಿಲೆಂಡ್ ಕೇವಲ 113 ರನ್​ಗಳಿಗೆ ಸರ್ಪಪತನ ಕಂಡಿತು. 27 ರನ್​ಗಳ ಅಲ್ಪ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ…

Read More

ಬರ್ತ್ ಡೇ ಪಾರ್ಟಿ ಆಚರಿಸುತ್ತಿದ್ದಾಗಲೇ ಕುಸಿದು ಬಿದ್ದ ಕಟ್ಟಡ: ಕೂದಲೆಳೆ ಅಂತರದಲ್ಲಿ ಪಾರಾದ 15 ಯುವಕರು – Kannada News

ಬೆಳಗಾವಿ, ಜೂನ್ 6: ಧಾರಾಕಾರ ಮಳೆಗೆ ಹಳೆಯ ಕಟ್ಟಡವೊಂದು ದಿಢೀರನೆ ಕುಸಿದು ಬಿದ್ದಿದ್ದು, 15 ಯುವಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ರೋಮಾಂಚಕ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಅಂದಹಾಗೆ, ಘಟನೆ ವೇಳೆ ಯುವಕರು ಸ್ನೇಹಿತನ ಬರ್ತ್​​ ಡೇ ಪಾರ್ಟಿ ಆಚರಿಸುತ್ತಿದ್ದರು. ಅಥಣಿ ಪಟ್ಟಣದ ಹಳದಿ ಕಟ್ಟಡವೊಂದರಲ್ಲಿ ಯುವಕರ ತಂಡವೊಂದು ತಮ್ಮ ಸ್ನೇಹಿತನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿತ್ತು. ಈ ವೇಳೆ ಕಟ್ಟಡದಿಂದ ವಿಚಿತ್ರವಾದ ಶಬ್ದ ಕೇಳಿಬಂದಿದೆ. ಅಪಾಯದ ಮುನ್ಸೂಚನೆ ಅರಿತ ಯುವಕರು ತಕ್ಷಣವೇ ಜಾಗರೂಕರಾಗಿ…

Read More

‘ನಟಿಯನ್ನು ಕೀಳಾಗಿ ತೋರಿಸೋ ಉದ್ದೇಶವಿರಲಿಲ್ಲ’; ಜಾನ್ವಿ ಹೊಕ್ಕುಳ ಪ್ರದರ್ಶನದ ಬಗ್ಗೆ ನಿರ್ದೇಶಕರ ಸ್ಪಷ್ಟನೆ – Kannada News

‘ಪೆದ್ದಿ’ ಸಿನಿಮಾ ಮೂಲಕ ಜಾನ್ವಿ ಕಪೂರ್ ಅವರು ದಕ್ಷಿಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಳ್ಳಬಹದು ಎಂಬುದು ಅನೇಕರ ಊಹೆ ಆಗಿತ್ತು. ಆದರೆ, ಊಹೆ ತಪ್ಪಾಗಿದೆ. ಜಾನ್ವಿ ಕಪೂರ್ ಅವರನ್ನು (Janhvi Kapoor) ಕೇವಲ ಗ್ಲಾಮರ್ ಗೊಂಬೆಯಾಗಿ ಬಳಕೆ ಮಾಡಿಕೊಳ್ಳಾಗಿದೆ. ‘ದೇವರ’ ಸಿನಿಮಾದಲ್ಲೂ ಇದೇ ರೀತಿಯಲ್ಲಿ ಜಾನ್ವಿ ಪಾತ್ರ ಇತ್ತು. ಈಗ ‘ಪೆದ್ದಿ’ ಚಿತ್ರದಲ್ಲೂ ಅದು ಮುಂದುವರಿದಿದೆ. ಈ ವಿಷಯ ಸಾಕಷ್ಟು ಚರ್ಚೆ ಆಗುತ್ತಿದ್ದು, ನಿರ್ದೇಶಕ ಬುಚ್ಚಿ ಬಾಬು ಸನ ಅವರನ್ನು ಟೀಕೆ ಮಾಡಲಾಗಿದೆ. ಈ ವಿಷಯವಾಗಿ ಅವರು ಸ್ಪಷ್ಟನೆ…

Read More

ಟೀಮ್ ಇಂಡಿಯಾದ ಹೊಸ ಆಶಾಕಿರಣ: ಯಾರು ಈ ಮಾನವ್ ಸುತಾರ್? – Kannada News

ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾಗೆ ಮತ್ತೊಬ್ಬ ಆಟಗಾರನ ಎಂಟ್ರಿಯಾಗಿದೆ. ಈ ಬಾರಿ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಆಟಗಾರನ ಹೆಸರು ಮಾನವ್ ಸುತಾರ್ (Manav Suthar). ವಯಸ್ಸು ಕೇವಲ 23. ಇತ್ತ ಟೀಮ್ ಇಂಡಿಯಾದಲ್ಲಿ ಯುವ ಆಟಗಾರನ ಹೆಸರು ಕಾಣಿಸಿಕೊಳ್ಳುತ್ತಿದ್ದಂತೆ ಯಾರು ಈ ಮಾನವ್ ಸುತಾರ್ ಎಂಬ ಹುಡುಕಾಟ ಕೂಡ ಶುರುವಾಗಿದೆ. ಅಷ್ಟಕ್ಕೂ ಯಾರು ಈ ಸುತಾರ್? ಮಾನವ್ ಸುತಾರ್, ರಾಜಸ್ಥಾನದ ಶ್ರೀ ಗಂಗಾನಗರದ ನಿವಾಸಿ. ಬಾಲ್ಯದಿಂದಲೇ ಕ್ರಿಕೆಟ್‌ನಲ್ಲಿ ತೀವ್ರ ಆಸಕ್ತಿ ಹೊಂದಿದ್ದ ಸುತಾರ್,…

Read More

ಪಾಕ್ ಉಗ್ರನ ಜತೆ ಸಂಪರ್ಕ ಹೊಂದಿದ್ದ ಇಬ್ಬರ ಬಂಧನ: ಕರ್ನಾಟಕದಲ್ಲಿ ಬೇರೂರುತ್ತಿವೆ ಉಗ್ರರ ಸ್ಲೀಪರ್ ಸೆಲ್! – Kannada News

ಅಲ್ಲಾಬಕ್ಷು ಮತ್ತು ಜಮೀರ್ ಖಾನ್Image Credit source: tv9 ಬೆಂಗಳೂರು, ಜೂನ್ 6: ರಾಜ್ಯದಲ್ಲಿ ವಿದೇಶಿ ಉಗ್ರರ ನೆಟ್‌ವರ್ಕ್ ಮತ್ತು ಸ್ಲೀಪರ್ ಸೆಲ್‌ಗಳು ಸಕ್ರಿಯವಾಗಿರುವ ಆತಂಕಕಾರಿ ವಿಚಾರ ಬಯಲಾಗಿದೆ. ಪಾಕಿಸ್ತಾನ (Pakistan) ಮೂಲದ ಶಂಕಿತ ಉಗ್ರನೊಂದಿಗೆ ನಿರಂತರ ಸಂಪರ್ಕದಲ್ಲಿದ್ದುಕೊಂಡು, ದೇಶದ ಭದ್ರತೆಗೆ ಧಕ್ಕೆ ತರಲು ಹಾಗೂ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ ಇಬ್ಬರು ಯುವಕರನ್ನು ತುಮಕೂರು (Tumakur) ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರು ನಿವಾಸಿ ಅಲ್ಲಾಬಕ್ಷು (24) ಮತ್ತು ದಾವಣಗೆರೆಯ…

Read More