ಬಹಿಷ್ಕಾರದ ಬೆದರಿಕೆಯೊಡ್ಡಿದ ಪಾಕಿಸ್ತಾನಕ್ಕೆ ಐಸಿಸಿ ಬಹಿರಂಗ ಪತ್ರ – Kannada News | ICC Statement on ICC Men’s T20 World Cup 2026 Over Pakistan’s Boycott
ಫೆಬ್ರವರಿ 15 ರಂದು ನಡೆಯಲಿರುವ ಭಾರತದ ವಿರುದ್ಧದ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸಲು ಪಾಕಿಸ್ತಾನ ನಿರ್ಧರಿಸಿದ ಬೆನ್ನಲ್ಲೇ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ಗೆ ಬಹಿರಂಗ ಪತ್ರ ಬರೆದಿದೆ. ಈ ಪತ್ರದ ಮೂಲಕ ತನ್ನ ನಿರ್ಧಾರವನ್ನು ಬದಲಿಸುವಂತೆ ಕೇಳಿಕೊಂಡಿದೆ. ಪಿಸಿಬಿ ತೆಗೆದುಕೊಳ್ಳುವ ಒಂದು ನಿರ್ಧಾರದಿಂದ ಉಂಟಾಗುವ ದೀರ್ಘಕಾಲೀನ ಪರಿಣಾಮಗಳನ್ನು ಪರಿಗಣಿಸಿ “ಪರಸ್ಪರ ಸ್ವೀಕಾರಾರ್ಹ ನಿರ್ಣಯವನ್ನು ಅನ್ವೇಷಿಸಲು” ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು ಐಸಿಸಿ ಒತ್ತಾಯಿಸಿದೆ. 2026 ರ ಐಸಿಸಿ ಪುರುಷರ ಟಿ 20 ವಿಶ್ವಕಪ್‌ನಲ್ಲಿ ಭಾಗವಹಿಸಲು…