Hassan: ಪತಿ ಟಾರ್ಚರ್ ತಾಳಲಾರದೆ ವಿಷ ಕುಡಿದ ಪತ್ನಿ ಚಿಕಿತ್ಸೆ ಫಲಿಸದೆ ಸಾವು – Kannada News | Hassan: Woman Dies by Suicide After Alleged Harassment by Husband
ಹಾಸನ, ಫೆಬ್ರವರಿ 01: ಪತಿಯ ಅತಿಯಾದ ಅನುಮಾನ ಮತ್ತು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ. ಎಚ್. ಎಲ್. ಇಂದ್ರ (24) ಮೃತರಾಗಿದ್ದು, ಹೆಚ್. ಮೈಲಳ್ಳಿ ಗ್ರಾಮದಲ್ಲಿನ ಪತಿ ಮನೆಯಲ್ಲಿ ಇವರು ಆತ್ಮಹತ್ಯೆಗೆ ಯತ್ನಿಸಿದ್ದರು. ಚಿಕಿತ್ಸೆಗಾಗಿ ಹಾಸನದ ಹಿಮ್ಸ್ಗೆ ದಾಖಲಿಸಲಾಗಿತ್ತಾದರೂ ದೇಹ ಸ್ಪಂದಿಸದ ಕಾರಣ ಅಂತಿಮವಾಗಿ ಯುವತಿ ಕೊನೆಯುಸಿರೆಳೆದಿದ್ದಾರೆ. ಕಳೆದ ನಾಲ್ಕು ವರ್ಷಗಳ ಹಿಂದೆ ಹೆಚ್. ಮೈಲಳ್ಳಿ ಗ್ರಾಮದ ಎಂ.ಎಚ್. ಸ್ವಾಮಿ ಜೊತೆ ಇಂದ್ರ…