Budget 2026: ಚೆನ್ನೈ ಬೆಂಗಳೂರು ಸೇರಿ 7 ಹೈಸ್ಪೀಡ್ ರೈಲ್ವೆ ಕಾರಿಡಾರ್ ಘೋಷಿಸಿದ ನಿರ್ಮಲಾ ಸೀತಾರಾಮನ್ – Kannada News | Budget 2026: Nirmala Sitharaman Announces 7 High Speed Rail Corridors Including Chennai–Bengaluru
ನವದೆಹಲಿ, ಫೆಬ್ರವರಿ 1: ದೇಶದ ಸಾರಿಗೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ಯೋಜನೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್‌ನಲ್ಲಿ (Union Budget 2026) ಘೋಷಣೆ ಮಾಡಿದ್ದಾರೆ. ಚೆನ್ನೈ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳನ್ನು ಸಂಪರ್ಕಿಸುವ ಏಳು ಹೈಸ್ಪೀಡ್ ರೈಲ್ವೆ ಕಾರಿಡಾರ್‌ಗಳನ್ನು (High-Speed Rail Corridors) ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿರುವುದಾಗಿ ಘೋಷಣೆ ಮಾಡಿದ್ದಾರೆ. ಈ ಯೋಜನೆಯಡಿ ಮುಂಬೈ–ಪುಣೆ, ಪುಣೆ–ಹೈದರಾಬಾದ್, ಹೈದರಾಬಾದ್–ಬೆಂಗಳೂರು, ಹೈದರಾಬಾದ್–ಚೆನ್ನೈ, ಚೆನ್ನೈ–ಬೆಂಗಳೂರು, ದೆಹಲಿ–ವಾರಾಣಸಿ ಹಾಗೂ ವಾರಾಣಸಿ–ಸಿಲಿಗುರಿ ನಡುವೆ ಹೈಸ್ಪೀಡ್ ರೈಲು ಮಾರ್ಗಗಳನ್ನು…