ನಕಲಿ ದಾಖಲೆ ಸೃಷ್ಟಿಸಿ ಕೆಎಸ್ಆರ್ಟಿಸಿ ಸಿಬ್ಬಂದಿ ವರ್ಗಾವಣೆ: ಪರಿಶೀಲನೆ ಬಳಿಕ ಅಸಲಿ ಸತ್ಯ ಬಯಲು – Kannada News | KSRTC Staff Transferred Using Fake Documents; Truth Revealed After Verification
ಬೆಂಗಳೂರು, ಫೆಬ್ರವರಿ 16: ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಲಿದ್ದರು ಕೆಎಸ್ಆರ್ಟಿಸಿ (KSRTC) ಸಿಬ್ಬಂದಿ ವರ್ಗಾವಣೆ (Transfer) ನಡೆದಿರುವಂತಹ ಘಟನೆಯೊಂದು ನಗರದಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ವಿಭಾಗದ ಮಾಗಡಿ ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಚಾಲಕ ಕಂ ನಿರ್ವಾಹಕ ಎಂ.ಜಯದೇವರನ್ನು ಏಕಾಏಕಿ ಮಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು. ಸದ್ಯ ಪರಿಶೀಲನೆ ವೇಳೆ ಯಾರೋ ಇವರ ಹೆಸರಿನಲ್ಲಿ ವರ್ಗಾವಣೆ ಅರ್ಜಿ ಸಲ್ಲಿಸಿರುವುದು ಪತ್ತೆಯಾಗಿದ್ದು, ವಿಧಾನಸೌಧ ಠಾಣೆಯಲ್ಲಿ ಸಚಿನ್ ಎಂಬುವವರ ವಿರುದ್ಧ ಕೇಸ್ ದಾಖಲಾಗಿದೆ. ನಡೆದಿದ್ದೇನು? ಬೆಂಗಳೂರು ದಕ್ಷಿಣ ವಿಭಾಗದ ಮಾಗಡಿ ಘಟಕದಲ್ಲಿ ಕೆಲಸ…