400 ಕೋಟಿ ರೂ. ದರೋಡೆ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಬಂಧನ – Kannada News | Rs 400 Crore Chorla Ghat Demonetised Notes Heist: Prime Accused Kishor Salve Arrested, SIT Probe Intensifies
ಬೆಳಗಾವಿ, ಫೆಬ್ರವರಿ 1: ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ಎರಡು ಕಂಟೇನರ್‌ಗಳಲ್ಲಿದ್ದ ಅಂದಾಜು 400 ಕೋಟಿ ರೂ. ಮೌಲ್ಯದ ರದ್ದಾದ ನೋಟುಗಳ ದರೋಡೆ (400 Crore Robbery Case) ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಿಶೋರ್ ಸಾಳ್ವೆಯನ್ನು ಬಂಧಿಸಲಾಗಿದೆ. ಇದರೊಂದಿಗೆ, ಪ್ರಕರಣ ಸಂಬಂಧ ಮತ್ತಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ. ಕಿಶೋರ್ ಸಾಳ್ವೆ, ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ನಂತರ ಆತನನ್ನು ಬಂಧಿಸಲಾಗಿದೆ. ಕಿಶೋರ್ ಸಾಳ್ವೆ ಬಂಧನದೊಂದಿಗೆ ದರೋಡೆ ಪ್ರಕರಣದಲ್ಲಿ ಬಂಧಿತರ…