‘ಗೋಲ್ಮಾಲ್’ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ – Kannada News | Gunshots fired at director Rohit Shetty Mumbai home in Juhu
ಹಿಂದಿ ಚಿತ್ರರಂಗದ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮನೆ ಮೇಲೆ ಗುಂಡಿನ ದಾಳಿ (Firing) ಮಾಡಲಾಗಿದೆ. ಮುಂಬೈನ ಜುಹುನಲ್ಲಿ ರೋಹಿತ್ ಶೆಟ್ಟಿ (Rohit Shetty) ನಿವಾಸ ಇದೆ. ಶನಿವಾರ (ಜನವರಿ 31) ರಾತ್ರಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಗುಂಡಿನ ದಾಳಿಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ. ಒಟ್ಟು ನಾಲ್ಕು ಸುತ್ತು ಗುಂಡು ಹಾರಿಸಲಾಯಿತು ಎಂದು ಸ್ಥಳೀಯರು ಹೇಳಿದ್ದಾರೆ. ಈ ಕೃತ್ಯ ಎಸಗಿದವರು ಯಾರು ಎಂಬುದು ಇನ್ನೂ ಪತ್ತೆ ಆಗಿಲ್ಲ. ಘಟನೆ ನಡೆದ ಕೂಡಲೇ ಕಾರ್ಯಪ್ರವೃತ್ತರಾಗಿರುವ ಮುಂಬೈ…