PAK vs AUS: ತವರಿನಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿ ಟಿ20 ಸರಣಿ ಗೆದ್ದ ಪಾಕಿಸ್ತಾನ – Kannada News | Pakistan Secures T20 Series Win vs Australia, Boosts World Cup Morale
ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿರುವ ಪಾಕಿಸ್ತಾನ ತಂಡ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಈ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿದೆ. ಪ್ರಮುಖ ಆಟಗಾರರಿಲ್ಲದೆ ಪಾಕಿಸ್ತಾನಕ್ಕೆ ತೆರಳಿದ್ದ ಆಸ್ಟ್ರೇಲಿಯಾ ಟಿ20 ವಿಶ್ವಕಪ್ಗೂ ಮುನ್ನ ಟಿ20 ಸರಣಿ ಸೋಲಿನ ಆಘಾತಕ್ಕೀಡಾಗಿದೆ. ಸರಣಿಯ ಮೊದಲ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿದ್ದ ಪಾಕಿಸ್ತಾನ ಇದೀಗ ಸರಣಿಯ ಎರಡನೇ ಪಂದ್ಯವನ್ನು ಬರೋಬ್ಬರಿ 90 ರನ್ಗಳಿಂದ ಗೆದ್ದುಕೊಂಡಿದೆ. ಟಿ20 ವಿಶ್ವಕಪ್ಗೂ ಮುನ್ನ ಆಸ್ಟ್ರೇಲಿಯಾ ತಂಡವನ್ನು ಮಣಿಸಿರುವುದು…