ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ: ದಾಳಿ ವೇಳೆ ಕಂಪನಿಯ ಸರ್ವರ್ ಡೌನ್ ಮಾಡಿ ಕಳ್ಳಾಟ? – Kannada News
ಬೆಳಗಾವಿ, ಜೂನ್ 04: ಶಿವಂ ಅಸೋಸಿಯೇಟ್ಸ್ ಸಂಸ್ಥೆಯಿಂದ ಸಾವಿರಾರು ಕೋಟಿ ಅಕ್ರಮ ಸಂಬಂಧ ತನಿಖೆ ನಡೆಯುತ್ತಿರುವ ನಡುವೆಯೇ ಬೆಳಗಾವಿಯಲ್ಲಿ ಮತ್ತೊಂದು ನೂರಾರು ಕೋಟಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಭಾಗ್ಯ ನಗರದಲ್ಲಿರುವ ಆದಿತ್ಯರಾಜ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ಕಂಪನಿ ಮೇಲೆ ಎಸಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ರೇಡ್ ಕುರಿತು ಮಾಹಿತಿ ಸಿಗುತ್ತಿದ್ದಂತೆ ಆನ್ ಲೈನ್ ಮೂಲಕ ವ್ಯವಹಾರ ನಡೆಸುತ್ತಿದ್ದ ಕಂಪನಿಯ ವೆಬ್ಸೈಟ್ ಸ್ಥಗಿತವಾಗಿದೆ. ಹೀಗಾಗಿ ಕಂಪನಿ ಮಾಲಿಕ ಅಧಿಕಾರಿಗಳಿಗೇ ಚಳ್ಳೆಹಣ್ಣು ತಿನ್ನಿಸಲು ಮುಂದಾದರಾ ಎಂಬ ಅನುಮಾನವೂ ವ್ಯಕ್ತವಾಗಿದೆ….