Headlines

ಜಾಗತಿಕ ವೇದಿಕೆಯಲ್ಲಿ ಮೋದಿ-ಟ್ರಂಪ್ ಐತಿಹಾಸಿಕ ಭೇಟಿಗೆ ಸಿದ್ಧತೆ: ಫ್ರಾನ್ಸ್ ಜಿ7 ಶೃಂಗಸಭೆಯಿಂದ ಭಾರತ-ಅಮೆರಿಕ ಬಾಂಧವ್ಯಕ್ಕೆ ಹೊಸ ಚೈತನ್ಯ – Kannada News

ನರೇಂದ್ರ ಮೋದಿ-ಟ್ರಂಪ್ Image Credit source: India Shipping News ನವದೆಹಲಿ, ಜೂನ್ 04: ಭಾರತ ಮತ್ತು ಅಮೆರಿಕ ನಡುವಿನ ಆರ್ಥಿಕ ಹಾಗೂ ರಾಜತಾಂತ್ರಿಕ ಸಂಬಂಧಗಳನ್ನು ಮತ್ತಷ್ಟು ಉನ್ನತ ಮಟ್ಟಕ್ಕೇರಿಸುವ ಅತ್ಯಂತ ಆಶಾದಾಯಕ ಬೆಳವಣಿಗೆಯೊಂದು ಸಂಭವಿಸಿದೆ. ಈ ತಿಂಗಳು ಫ್ರಾನ್ಸ್​​ನಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಭಾಗವಹಿಸುವುದು ಖಚಿತವಾಗಿದೆ. ಉಭಯ ನಾಯಕರ ನಡುವೆ ಜಾಗತಿಕ ಮಟ್ಟದ ದ್ವಿಪಕ್ಷೀಯ ಮಾತುಕತೆಗಳು ನಡೆಯಲಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ತಮ್ಮ…

Read More

ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ: ತಪ್ಪಿದ ಭಾರಿ ಅನಾಹುತ – Kannada News

ನೆಲಮಂಗಲ, ಜೂನ್​​ 04: ತಾಲೂಕಿನ ಕುಣಿಗಲ್ ಬೈಪಾಸ್ ಬಳಿ ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಹಾಸನ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಈ ಆ್ಯಂಬುಲೆನ್ಸ್ ಮಾರ್ಗಮಧ್ಯೆ ಕ್ಯಾಂಟರ್ಗೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಅದೃಷ್ಟವಶಾತ್​​ ಆ್ಯಂಬುಲೆನ್ಸ್ನಲ್ಲಿದ್ದ ರೋಗಿ ಹಾಗೂ ಚಾಲಕ ಸೇರಿ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯ ತೀವ್ರತೆ ಗಮನಿಸಿದರೆ, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಇನ್ನು ಅಪಘಾತದ ನಡೆದ ಕ್ಷಣಮಾತ್ರದಲ್ಲಿ ಸ್ಥಳೀಯರು ನೆರವಿಗೆ ಧಾವಿಸಿದ್ದು, ಆ್ಯಂಬುಲೆನ್ಸ್‌ನಲ್ಲಿದ್ದ ರೋಗಿಯನ್ನು ಸುರಕ್ಷಿತವಾಗಿ ಬೇರೆ ವಾಹನಕ್ಕೆ ಸ್ಥಳಾಂತರಿಸಿ…

Read More

ತುಮಕೂರು ವಿವಿ ಘಟಿಕೋತ್ಸವದಲ್ಲಿ ದೊಡ್ಡ ಎಡವಟ್ಟು: ರ್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕದ ಬದಲು ನಗದು ಚೆಕ್; ಧರಣಿ ಕುಳಿತ ವಿದ್ಯಾರ್ಥಿಗಳು – Kannada News

ತುಮಕೂರು ವಿವಿ ಘಟಿಕೋತ್ಸವದಲ್ಲಿ ದೊಡ್ಡ ಎಡವಟ್ಟುImage Credit source: Tv9 kannada ತುಮಕೂರು, ಜೂ.4: ತುಮಕೂರು ವಿಶ್ವವಿದ್ಯಾಲಯದ 19ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾರಿ ಎಡವಟ್ಟು ನಡೆದಿದೆ. ವರ್ಷಗಟ್ಟಲೆ ಕಷ್ಟಪಟ್ಟು ಓದಿ ಪ್ರಥಮ ಸ್ಥಾನ ಗಳಿಸಿ, ಚಿನ್ನದ ಪದಕ (Gold Medal) ಪಡೆಯುವ ಕನಸು ಹೊತ್ತು ಬಂದಿದ್ದ ನೂರಾರು ರ್ಯಾಂಕ್ ವಿದ್ಯಾರ್ಥಿಗಳ ಆಸೆಗೆ ವಿಶ್ವವಿದ್ಯಾಲಯವು ತಣ್ಣೀರೆರಚಿದೆ. ಚಿನ್ನದ ಪದಕ ನೀಡುವ ಬದಲು ಕೇವಲ ಪ್ರಮಾಣ ಪತ್ರ ಮತ್ತು ನಗದು ಹಣದ ಚೆಕ್ ನೀಡಿ ಕೈತೊಳೆದುಕೊಳ್ಳಲು ಮುಂದಾದ ವಿವಿಯ ನಡೆಗೆ…

Read More

ಸದ್ದಿಲ್ಲದೆ ಬಿಡುಗಡೆ ಆಯ್ತು ‘ಬಾಹುಬಲಿ: ದಿ ಎಟರ್ನಲ್’ ಟೀಸರ್, ಹೊಸದೆನೂ ಇಲ್ಲ – Kannada News

ಭಾರತೀಯ ಚಿತ್ರರಂಗದಲ್ಲಿ ಇತಿಹಾಸ ಬರೆದ ಸಿನಿಮಾ ‘ಬಾಹುಬಲಿ’ (Bahubali) ಮತ್ತು ‘ಬಾಹುಬಲಿ 2’ ಸಿನಿಮಾ. ಭಾರತೀಯ ಚಿತ್ರರಂಗವನ್ನು ವಿಶ್ವ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಸಿನಿಮಾಗಳು ಇವು. ‘ಬಾಹುಬಲಿ’ ಸಿನಿಮಾದ ಎಲ್ಲ ಪಾತ್ರಗಳು ನೆನಪುಳಿಯುವಂಥಹವು. ಇದೀಗ ‘ಬಾಹುಬಲಿ’ ಕತೆಯನ್ನು ಕೇವಲ ಎರಡು ಸಿನಿಮಾಗಳಿಗೆ ಸೀಮಿತವಾಗಲು ಬಿಡದೆ, ನಿರ್ಮಾಣ ಸಂಸ್ಥೆಯು ಇನ್ನಷ್ಟು ಹಿಗ್ಗಿಸಲು ಮುಂದಾಗಿದ್ದು ‘ಬಾಹುಬಲಿ: ದಿ ಎಟರ್ನಲ್’ ಹೆಸರಿನ ಮತ್ತೊಂದು ಸಿನಿಮಾ ನಿರ್ಮಿಸಿದೆ. ಸಿನಿಮಾದ ಟೀಸರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ‘ಬಾಹುಬಲಿ: ದಿ ಎಟರ್ನಲ್’ ಅನಿಮೇಷನ್ ಸಿನಿಮಾ ಆಗಿದ್ದು,…

Read More

‘ಪೆದ್ದಿ’ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲೇ ತಿರುಪತಿ ಬೆಟ್ಟ ಹತ್ತಿದ ಜಾನ್ವಿ ಕಪೂರ್ – Kannada News

ರಾಮ್ ಚರಣ್, ಜಾನ್ವಿ ಕಪೂರ್ ಮೊದಲಾದವರು ನಟಿಸಿರುವ ‘ಪೆದ್ದಿ’ ಇಂದು (ಜೂನ್ 4) ಬಿಡುಗಡೆ ಆಗಿದೆ. ಈ ಸಂದರ್ಭದಲ್ಲಿ ಜಾನ್ವಿ ಕಪೂರ್ ಅವರು ಆಂಧ್ರಪ್ರದೇಶದ ಪವಿತ್ರ ಕ್ಷೇತ್ರ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ವೆಂಕಟೇಶ್ವರ ಸ್ವಾಮಿಯ ಆಶೀರ್ವಾದ ಪಡೆದಿದ್ದಾರೆ. ಮೆಟ್ಟಿಲುಗಳ ಮಾರ್ಗವಾಗಿ ನಡೆದುಕೊಂಡೇ ಬೆಟ್ಟ ಹತ್ತಿದ ಅವರು, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಪ್ರತಿ ಬಾರಿಯೂ ತಮ್ಮ ಯಾವುದೇ ಹೊಸ ಸಿನಿಮಾ ತೆರೆಗೆ ಬರುವ ಮುನ್ನ ತಿರುಪತಿಗೆ ಭೇಟಿ ನೀಡುವುದನ್ನು ಜಾನ್ವಿ…

Read More

ಕಪ್ ಗೆದ್ದ ಖುಷಿಯಲ್ಲಿದ್ದ ರಜತ್​​ಗೆ ಹೊಸ ಲೀಗ್​​ನ ಮೊದಲ ಪಂದ್ಯದಲ್ಲೇ ಹೀನಾಯ ಸೋಲಿನಾಘಾತ – Kannada News

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿಸಿದ ಕೇವಲ ನಾಲ್ಕೇ ದಿನಗಳಲ್ಲಿ ಕ್ಯಾಪ್ಟನ್ ರಜತ್ ಪಾಟಿದಾರ್ ಮತ್ತೆ ಮೈದಾನಕ್ಕಿಳಿದಿದ್ದಾರೆ. ಅವರು ಮಧ್ಯಪ್ರದೇಶ ಲೀಗ್ ಆಡುತ್ತಿದ್ದು, ಮೊದಲ ಪಂದ್ಯದಲ್ಲೇ ಸೋಲಿನ ಆಘಾತ ಎದುರಾಗಿದೆ. ಹೋಳ್ಕರ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಎಂಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಗ್ವಾಲಿಯರ್ ಚೀತಾಸ್ ತಂಡವನ್ನು ಮುನ್ನಡೆಸಿದ ಪಾಟಿದಾರ್, ಉಜ್ಜಯಿನಿ ಫಾಲ್ಕನ್ಸ್ ವಿರುದ್ಧ 92 ರನ್‌ಗಳ ಹೀನಾಯ ಸೋಲು ಅನುಭವಿಸಿದರು. ಪಂದ್ಯದಲ್ಲಿ ಟಾಸ್ ಗೆದ್ದ ಗ್ವಾಲಿಯರ್ ಚೀತಾಸ್ ನಾಯಕ ರಜತ್ ಪಾಟಿದಾರ್ ಮೊದಲು ಫೀಲ್ಡಿಂಗ್…

Read More

ಸಾವಿರಾರು ಮನೆಗಳಿರುವ ಅಪಾರ್ಟ್​​ಮೆಂಟ್​​ಗಿಲ್ಲ ಸುಸಜ್ಜಿತ ರಸ್ತೆ ಭಾಗ್ಯ: ಪ್ರತಿವರ್ಷ ನಿವಾಸಿಗಳ ದುಡ್ಡಲ್ಲಿಯೇ ನಡೆಯುತ್ತಿದೆ ರೋಡ್​​ ದುರಸ್ತಿ! – Kannada News

ಸಂಪೂರ್ಣ ಹದಗೆಟ್ಟಿರುವ ರಸ್ತೆImage Credit source: Times Of India ಬೆಂಗಳೂರು, ಜೂನ್​​ 04: ಮಳೆಗಾಲದಲ್ಲಿ ರಸ್ತೆ ಸಂಚಾರ ಯೋಗ್ಯವಾಗಿರಲೆಂದು ಬೆಂಗಳೂರಿನ (Bengaluru) ಜಾಲಹಳ್ಳಿ ಪೂರ್ವದ ಬೃಹತ್ ಅಪಾರ್ಟ್‌ಮೆಂಟ್ ಸಮುಚ್ಚಯವೊಂದರ ನಿವಾಸಿಗಳು ಪ್ರತಿವರ್ಷ ತಮ್ಮ ಹಣದಲ್ಲಿಯೇ ರಸ್ತೆ ದುರಸ್ತಿ ಮಾಡಿಸುತ್ತಿದ್ದಾರೆ. ನಗರ ಪಾಲಿಕೆ ಅಥವಾ ಜನಪ್ರತಿನಿಧಿಗಳು ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ವಿಫಲರಾಗಿರುವ ಕಾರಣ 1,000ಕ್ಕೂ ಹೆಚ್ಚು ಮನೆಗಳನ್ನು ಹೊಂದಿರುವ ಅಪಾರ್ಟ್‌ಮೆಂಟ್ ನಿವಾಸಿಗಳಿಗಿದು ಅನಿವಾರ್ಯವಾಗಿದೆ. ಗಂಗಮ್ಮ ಗುಡಿ ಪೊಲೀಸ್ ಠಾಣೆ ರಸ್ತೆಯನ್ನು ಕುವೆಂಪುನಗರಕ್ಕೆ ಸಂಪರ್ಕಿಸುವ ಸುಮಾರು…

Read More

Hindu Tradition: ಪದೇ ಪದೇ ಮನೆಯಲ್ಲಿ ಹಾಲು ಅಥವಾ ಎಣ್ಣೆ ಚೆಲ್ಲುತ್ತಿದೆಯೇ? ವಾಸ್ತು ತಜ್ಞರು ನೀಡಿರುವ ಎಚ್ಚರಿಕೆ ಇಲ್ಲಿದೆ – Kannada News

ಹಾಲು ಅಥವಾ ಎಣ್ಣೆ ಚೆಲ್ಲುವಂತಹ ಘಟನೆImage Credit source: Pinterest ಮನೆಯಲ್ಲಿ ಕೆಲವೊಂದು ಆಕಸ್ಮಿಕ ಘಟನೆಗಳು ನಡೆಯುವುದು ಸಾಮಾನ್ಯ. ಆದರೆ, ಹಿಂದೂ ನಂಬಿಕೆಗಳು ಮತ್ತು ವಾಸ್ತುಶಾಸ್ತ್ರದ ಪ್ರಕಾರ, ಪದೇ ಪದೇ ಹಾಲು ಅಥವಾ ಎಣ್ಣೆ ಚೆಲ್ಲುವಂತಹ ಘಟನೆಗಳು ಶುಭ ಅಥವಾ ಅಶುಭ ಸೂಚನೆಗಳನ್ನು ನೀಡುತ್ತವೆ. ಈ ಶಕುನಗಳನ್ನು ಅರ್ಥಮಾಡಿಕೊಳ್ಳುವುದು ಮತ್ತು ಅವುಗಳ ಹಿಂದಿನ ಮಹತ್ವವನ್ನು ಅರಿತುಕೊಳ್ಳುವುದು ಮುಖ್ಯ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ…

Read More

ವಿಶ್ವ ಶಾಂತಿಗೆ ಬಿಗ್ ಬೂಸ್ಟ್: ಇಸ್ರೇಲ್-ಲೆಬನಾನ್ ಕದನ ವಿರಾಮಕ್ಕೆ ಒಪ್ಪಿಗೆ, ಇರಾನ್ ಮಾತುಕತೆಗೂ ಮುಕ್ತವಾದ ಹಾದಿ – Kannada News

ಟೆಲ್ ಅವಿವ್, ಜೂನ್ 04: ಪಶ್ಚಿಮ ಏಷ್ಯಾದಲ್ಲಿ ದೀರ್ಘಕಾಲದ ಸಂಘರ್ಷವನ್ನು ಕೊನೆಗಾಣಿಸಿ ಶಾಂತಿ ಪುನಃಸ್ಥಾಪಿಸುವ ನಿಟ್ಟಿನಲ್ಲಿ ಅತ್ಯಂತ ಆಶಾದಾಯಕ ಬೆಳವಣಿಗೆಯೊಂದು ನಡೆದಿದೆ. ಅಮೆರಿಕದ ವಿದೇಶಾಂಗ ಇಲಾಖೆಯ ಯಶಸ್ವಿ ಮಧ್ಯಸ್ಥಿಕೆಯಲ್ಲಿ ನಡೆದ ನಾಲ್ಕನೇ ಸುತ್ತಿನ ಮಾತುಕತೆಯ ನಂತರ, ಇಸ್ರೇಲ್(Israel) ಮತ್ತು ಲೆಬನಾನ್ ದೇಶಗಳು ಕದನ ವಿರಾಮವನ್ನು ನವೀಕರಿಸಲು ಐತಿಹಾಸಿಕ ಒಪ್ಪಂದ ಮಾಡಿಕೊಂಡಿವೆ. ಈ ಮಹತ್ವದ ನಿರ್ಧಾರವು ಇಡೀ ಕೊಲ್ಲಿ ವಲಯದಲ್ಲಿ ಯುದ್ಧದ ಕಾರ್ಮೋಡಗಳನ್ನು ಸರಿಸಿ, ಜಾಗತಿಕ ರಾಜತಾಂತ್ರಿಕ ಮಾತುಕತೆಗಳಿಗೆ ಹೊಸ ಚೈತನ್ಯ ನೀಡಿದೆ. ಏನಿದೆ ಹೊಸ ಒಪ್ಪಂದದಲ್ಲಿ? ಜಂಟಿ…

Read More

ರಣವೀರ್ ಮೇಲಿನ ನಿಷೇಧ ತೆಗೆಯಲು ಈ ನಟಿಯ ಪಾತ್ರ ದೊಡ್ಡದು

ನಟ ರಣವೀರ್ ಸಿಂಗ್ ವಿರುದ್ಧದ ಅಸಹಕಾರ ನಿರ್ದೇಶನವನ್ನು ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ ಹಿಂತೆಗೆದುಕೊಂಡಿದೆ. ಫರ್ಹಾನ್ ಅಖ್ತರ್ ನಿರ್ದೇಶನದ ಡಾನ್ 3 ಚಿತ್ರದಿಂದ ಅವರು ಹಠಾತ್ತನೆ ಹಿಂದೆ ಸರಿದ ನಂತರ ಫೆಡರೇಶನ್ ಅವರ ವಿರುದ್ಧ ಈ ನಿರ್ಧಾರವನ್ನು ಘೋಷಿಸಿತ್ತು. ಇಂಡಿಯನ್ ಮೋಷನ್ ಪಿಕ್ಚರ್ ಅಸೋಸಿಯೇಷನ್ ​​ಮತ್ತು ಸಿನಿ ಮತ್ತು ಟಿವಿ ಕಲಾವಿದರ ಸಂಘದ ಹಸ್ತಕ್ಷೇಪದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಫೆಡರೇಶನ್ ಸ್ಪಷ್ಟಪಡಿಸಿದೆ. ಈ ಸಮಯದಲ್ಲಿ, CINTA ಪ್ರಧಾನ ಕಾರ್ಯದರ್ಶಿ ಮತ್ತು ನಟಿ…

Read More