IND vs NZ: ಸಂಜು ಸ್ಯಾಮ್ಸನ್ಗೆ ಇದುವೇ ಕೊನೆಯ ಚಾನ್ಸ್ – Kannada News | IND vs NZ 5th T20: Last Chance for Sanju Samson
ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5ನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು (ಜ.31) ತಿರುವನಂತಪುರದ ಗ್ರೀನ್ಫೀಲ್ಡ್ ಮೈದಾನದಲ್ಲಿ ನಡೆಯಲಿರುವ ಪಂದ್ಯವು ಸಂಜು ಸ್ಯಾಮ್ಸನ್ ಪಾಲಿಗೆ ಕೊನೆಯ ಚಾನ್ಸ್. ಏಕೆಂದರೆ ಕಳೆದ ನಾಲ್ಕು ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿರುವ ಸ್ಯಾಮ್ಸನ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೇವಲ 10 ರನ್ ಬಾರಿಸಿದ್ದ ಸ್ಯಾಮ್ಸನ್, ದ್ವಿತೀಯ ಪಂದ್ಯದಲ್ಲಿ 6 ರನ್ಗಳಿಸಲಷ್ಟೇ ಶಕ್ತರಾಗಿದ್ದರು. ಇನ್ನು ಮೂರನೇ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಹಾಗೆಯೇ ನಾಲ್ಕನೇ ಪಂದ್ಯದಲ್ಲಿ 24…