Category Archives: Blog

Your blog category

‘ಲಗಾನ್’ ಸಿನಿಮಾಗೆ 25 ವರ್ಷಗಳ ಸಂಭ್ರಮ; ಚಿತ್ರಮಂದಿರಗಳಲ್ಲಿ ಮತ್ತೆ ಬಿಡುಗಡೆ – Kannada News

ಭಾರತೀಯ ಚಿತ್ರರಂಗದಲ್ಲಿ ಕ್ರಿಕೆಟ್ ಹಿನ್ನೆಲೆಯ ಸಿನಿಮಾಗಳು ಟ್ರೆಂಡ್ ಆಗುವುದಕ್ಕೂ ದಶಕಗಳ ಮೊದಲೇ, ಕೇವಲ ಒಂದು ಸಾಮಾನ್ಯ ಕ್ರಿಕೆಟ್ ಪಂದ್ಯವನ್ನು ಇಟ್ಟುಕೊಂಡು ಇಡೀ ದೇಶವೇ ರೋಮಾಂಚನಗೊಳ್ಳುವಂತೆ ಮಾಡಿದ ಸಿನಿಮಾ ‘ಲಗಾನ್’ (Lagaan). ಆ ಸಿನಿಮಾ ಬಿಡುಗಡೆಯಾಗಿ ಈಗ 25 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಚಿತ್ರಮಂದಿರಗಳಲ್ಲಿ ಮತ್ತೊಮ್ಮೆ ಅಬ್ಬರಿಸಲು ಸಜ್ಜಾಗಿದೆ. ನಿರ್ದೇಶಕ ಅಶುತೋಷ್ ಗೋವಾರಿಕರ್ ಮತ್ತು ನಟ ಆಮಿರ್ ಖಾನ್ ಕಾಂಬಿನೇಷನ್‌ನ ಈ ಸಿನಿಮಾ ಮರು-ಬಿಡುಗಡೆ (Lagaan Re-release) ಆಗುತ್ತಿದೆ ಎಂಬ ವಿಷಯವನ್ನು ಚಿತ್ರತಂಡ ತಿಳಿಸಿದೆ.

ಇದರ ಅಂಗವಾಗಿ ‘ಆಮಿರ್ ಖಾನ್ ಪ್ರೊಡಕ್ಷನ್ಸ್’ ಸಂಸ್ಥೆಯು ಇತ್ತೀಚೆಗೆ ‘ಲಗಾನ್’ ಚಿತ್ರದ ವಿಶೇಷ ರೀ-ರಿಲೀಸ್ ಟ್ರೇಲರ್ ಹಂಚಿಕೊಂಡಿದ್ದು, ಸಿನಿಪ್ರೇಮಿಗಳಲ್ಲಿ ಹಳೆಯ ನೆನಪುಗಳನ್ನು ಮರುಕಳಿಸುವಂತೆ ಮಾಡಿದೆ. ಬುಧವಾರದಂದು (ಜೂನ್ 3) ಟ್ರೇಲರ್ ಮೂಲಕ ಮರುಬಿಡುಗಡೆಯ ದಿನಾಂಕವನ್ನು ಪ್ರಕಟಸಲಾಗಿದೆ. ‘ಪ್ರತಿಯೊಬ್ಬರ ಹೃದಯ ಮುಟ್ಟಿದ ಲಗಾನ್ ಚಿತ್ರದ 25ನೇ ವರ್ಷದ ಸಂಭ್ರಮಕ್ಕಾಗಿ ಈ ಐತಿಹಾಸಿಕ ಕಥೆ ಮತ್ತೊಮ್ಮೆ ದೊಡ್ಡ ಪರದೆಗೆ ಮರಳುತ್ತಿದೆ. ಜೂನ್ 12, 13 ಮತ್ತು 14ರಂದು ಚಿತ್ರಮಂದಿರಗಳಲ್ಲಿ ಈ ಮ್ಯಾಜಿಕ್ ಅನುಭವಿಸಿ’ ಎಂದು ಪೋಸ್ಟ್ ಮಾಡಲಾಗಿದೆ.

ಹೊಸ ಟ್ರೇಲರ್ ನೋಡಿದ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್‌ಗಳ ಮಳೆ ಸುರಿದಿದ್ದಾರೆ. ಮತ್ತೆ ತೆರೆಮೇಲೆ ಹಳ್ಳಿ ಜನರ ಮತ್ತು ಬ್ರಿಟಿಷರ ನಡುವಿನ ರೋಚಕ ಕ್ರಿಕೆಟ್ ಪಂದ್ಯವನ್ನು ನೋಡಲು ಪ್ರೇಕ್ಷಕರು ಕಾತರರಾಗಿದ್ದಾರೆ. ಎ.ಆರ್. ರೆಹಮಾನ್ ಸಂಗೀತದಲ್ಲಿ ಮೂಡಿಬಂದಿದ್ದ ಸೂಪರ್ ಹಿಟ್ ಹಾಡುಗಳನ್ನು ಮತ್ತೊಮ್ಮೆ ಚಿತ್ರಮಂದಿರದಲ್ಲಿ ಎಂಜಾಯ್ ಮಾಡಲು ಅನೇಕರು ಕಾದಿದ್ದಾರೆ.

‘ಲಗಾನ್’ ಚಿತ್ರದ ರೀ-ರಿಲೀಸ್ ಟ್ರೇಲರ್:

2001ರಲ್ಲಿ ತೆರೆಕಂಡಿದ್ದ ‘ಲಗಾನ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆಯುವುದರ ಜೊತೆಗೆ ಜಾಗತಿಕ ಮಟ್ಟದಲ್ಲಿ ಭಾರತದ ಹೆಸರನ್ನು ಎತ್ತಿಹಿಡಿದಿತ್ತು. ‘ಅತ್ಯುತ್ತಮ ವಿದೇಶಿ ಭಾಷಾ ಚಿತ್ರ’ ವಿಭಾಗದಲ್ಲಿ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಗೆ ನಾಮಿನೇಟ್ ಆದ ಕೆಲವೇ ಕೆಲವು ಭಾರತೀಯ ಸಿನಿಮಾಗಳಲ್ಲಿ ‘ಲಗಾನ್’ ಕೂಡ ಒಂದಾಗಿದೆ. 49ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಈ ಸಿನಿಮಾ ‘ಅತ್ಯುತ್ತಮ ಜನಪ್ರಿಯ ಮನರಂಜನಾ ಸಿನಿಮಾ’ ಸೇರಿದಂತೆ ಬರೋಬ್ಬರಿ 8 ರಾಷ್ಟ್ರ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿತ್ತು.

ಇದನ್ನೂ ಓದಿ: ‘ಲಗಾನ್’ ಶೂಟಿಂಗ್ ವೇಳೆ ಪ್ರತಿ ದಿನ ಗಾಯತ್ರಿ ಮಂತ್ರ ಕೇಳುತ್ತಿದ್ದ ಆಮಿರ್ ಖಾನ್

ಬ್ರಿಟಿಷ್ ಆಳ್ವಿಕೆಯ 1893ರ ಕಾಲಘಟ್ಟದ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಭೀಕರ ಬರಗಾಲ ಮತ್ತು ಬ್ರಿಟಿಷರ ಅತಿಯಾದ ತೆರಿಗೆಯಿಂದ ಕಂಗಾಲಾದ ಭಾರತದ ಹಳ್ಳಿಯೊಂದರ ಜನರಿಗೆ, ಕ್ರೂರ ಬ್ರಿಟಿಷ್ ಅಧಿಕಾರಿಯೊಬ್ಬ ಕ್ರಿಕೆಟ್ ಪಂದ್ಯದ ಸವಾಲು ಹಾಕುತ್ತಾನೆ. ಕ್ರಿಕೆಟ್ ಆಟದ ಬಗ್ಗೆ ಗಂಧ-ಗಾಳಿಯೇ ಗೊತ್ತಿಲ್ಲದ ಹಳ್ಳಿಗರು, ತಮ್ಮ ಸ್ವಾವಲಂಬನೆ ಮತ್ತು ತೆರಿಗೆ ವಿನಾಯಿತಿಗಾಗಿ ಆಟವನ್ನು ಕಲಿತು ಬ್ರಿಟಿಷರ ವಿರುದ್ಧ ಹೇಗೆ ಐತಿಹಾಸಿಕ ಜಯ ಸಾಧಿಸುತ್ತಾರೆ ಎಂಬುದೇ ಈ ಚಿತ್ರದ ಮುಖ್ಯ ಕಥಾಹಂದರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2026: 15 ರನ್ ಬಾರಿಸಲು 13 ಕೋಟಿ ಸಂಬಳ ಪಡೆದ ಸನ್‌ರೈಸರ್ಸ್ ಬ್ಯಾಟರ್

Source link

Video: ಪುಟ್ಟ ಕಂದಮ್ಮನನ್ನು ಬೇಬಿ ಕ್ಯಾರಿಯರ್‌ನಲ್ಲಿ ಕೂರಿಸಿಕೊಂಡು ಡ್ಯಾನ್ಸ್ ಮಾಡಿದ ತಂದೆ – Kannada News

ಅಪ್ಪ (father) ಮಗಳಿಗೆ ಹೇಗೆ ಪ್ರಪಂಚವೋ, ಅದೇ ರೀತಿ ತಂದೆಯಂದಿರಿಗೆ ತಮ್ಮ ಮುದ್ದು ಮಗಳೆಂದರೆ ಪ್ರಾಣಕ್ಕಿಂತಲೂ ಹೆಚ್ಚು. ಈ ತಂದೆ ಮಗಳ ಸುಂದರ ಬಾಂಧವ್ಯವನ್ನು ವರ್ಣಿಸಲು ಪದಗಳೇ ಸಾಲಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಾಂಧವ್ಯ ಸಾರುವ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ತಂದೆ ಮಗಳ ಡ್ಯಾನ್ಸ್ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ. ತಂದೆ ತನ್ನ ಮಗಳನ್ನು ಬೇಬಿ ಕ್ಯಾರಿಯರ್ ನಲ್ಲಿ ಕೂರಿಸಿಕೊಂಡು ಸ್ಟೆಪ್ ಹಾಕಿದ್ದಾನೆ. ಪುಟಾಣಿ ಖುಷಿಯಿಂದ ನಗುತ್ತಿರುವ ವಿಡಿಯೋ ಸದ್ಯ ವೈರಲ್ ಆಗಿದೆ.

little_munchkin28 ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಬೇಬಿ ಕ್ಯಾರಿಯರ್ ನಲ್ಲಿ ಪುಟಾಣಿಯನ್ನು ಕೂರಿಸಿಕೊಂಡು ತಂದೆಯೂ ಲಡ್ಕಿ ಹೈ ಕಹಾಂ ಹಿಂದಿ ಹಾಡಿಗೆ ಸ್ಟೆಪ್ ಹಾಕುವುದನ್ನು ಕಾಣಬಹುದು. ಅಪ್ಪ ಹಾಡಿಗೆ ತಕ್ಕಂತೆ ಡ್ಯಾನ್ಸ್ ಮಾಡುತ್ತಿದ್ದಂತೆ ಕ್ಯಾರಿಯರ್ ನಲ್ಲಿ ಕುಳಿತುಕೊಂಡ ಪುಟಾಣಿ ಖುಷಿಯಿಂದ ಜೋರಾಗಿ ನಗುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ: ಅಪ್ಪ ನೀನು ಸುಮ್ನೆ ಇರ್ತಿಯಾ; ತನ್ನದೇ ಭಾಷೆಯಲ್ಲಿ ತಂದೆಗೆ ಬೈಯುತ್ತಿರುವ ಪುಟಾಣಿ

ಈ ವಿಡಿಯೋ 26 ಮಿಲಿಯನ್ ಗೂ ಅಧಿಕ ವೀಕ್ಷಣೆಗಳನ್ನು ಕಂಡಿವೆ. ಒಬ್ಬ ಬಳಕೆದಾರ, ಅಪ್ಪ ಮಗಳ ಡ್ಯಾನ್ಸ್ ನೋಡಿ ಖುಷಿಯಾಯ್ತು ಎಂದರೆ, ಮತ್ತೊಬ್ಬರು, ಮೂಡ್ ಸರಿ ಇಲ್ಲದಿದ್ದಾಗ ಈ ವಿಡಿಯೋ ತಪ್ಪದೇ ನೋಡ್ಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಪುಟಾಣಿಯ ನಗುವಿಗೆ ಫಿದಾ ಆದ್ವಿ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಂಗಾಳದಲ್ಲಿ ಮಮತಾ ಬ್ಯಾನರ್ಜಿಗೆ ಶಾಕ್; ಟಿಎಂಸಿಯಿಂದ ಉಚ್ಚಾಟಿತರಾಗಿದ್ದ ರಿತಬ್ರತಾ ಬ್ಯಾನರ್ಜಿ ಈಗ ಪ್ರತಿಪಕ್ಷ ನಾಯಕ! – Kannada News

ಕೊಲ್ಕತ್ತಾ, ಜೂನ್ 3: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಅತ್ಯಂತ ಅನಿರೀಕ್ಷಿತ ಬೆಳವಣಿಗೆಯೊಂದು ನಡೆದಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಈ ಹಿಂದೆ ಉಚ್ಚಾಟನೆಗೊಂಡಿದ್ದ ಹಿರಿಯ ನಾಯಕ ರಿತಬ್ರತಾ ಬ್ಯಾನರ್ಜಿ (Ritabrata Banerjee) ಈಗ ಪಶ್ಚಿಮ ಬಂಗಾಳ ವಿಧಾನಸಭೆಯ ಹೊಸ ಪ್ರತಿಪಕ್ಷ ನಾಯಕನಾಗಿ ಆಯ್ಕೆಯಾಗಿದ್ದಾರೆ. ಟಿಎಂಸಿ ಪಕ್ಷದಲ್ಲಿ ಬಂಡಾಯ ಎದ್ದಿದ್ದು, ಪಕ್ಷವು ಅಧಿಕೃತವಾಗಿ ಇಬ್ಬಾಗವಾಗಿದೆ. ಇದು ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಭಾರಿ ಆಘಾತವನ್ನು ನೀಡಿದೆ. ಟಿಎಂಸಿಯಿಂದ ಉಚ್ಚಾಟನೆಗೊಂಡಿದ್ದ ನಾಯಕ ರಿತಬ್ರತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳ ವಿಧಾನಸಭೆಯ ಹೊಸ ಪ್ರತಿಪಕ್ಷ ನಾಯಕನಾಗಿ ಅಧಿಕೃತವಾಗಿ ನೇಮಕಗೊಂಡಿದ್ದಾರೆ.

ಬರೋಬ್ಬರಿ 58 ಶಾಸಕರ ಬೆಂಬಲದೊಂದಿಗೆ ಅವರು ಈ ಜವಾಬ್ದಾರಿಯುತ ಹುದ್ದೆಯನ್ನು ಅಲಂಕರಿಸಿದ್ದಾರೆ. ಪಕ್ಷದಿಂದ ಉಚ್ಚಾಟನೆಗೊಂಡ ನಾಯಕರೊಬ್ಬರು ಇಷ್ಟು ದೊಡ್ಡ ಮಟ್ಟದ ಶಾಸಕರ ಬೆಂಬಲದೊಂದಿಗೆ ಪ್ರತಿಪಕ್ಷ ನಾಯಕರಾಗಿ ಹೊರಹೊಮ್ಮಿರುವುದು ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ರಿತಬ್ರತಾ ಬ್ಯಾನರ್ಜಿ ಅವರು ಅತ್ಯಂತ ಮಹತ್ವದ ಹೇಳಿಕೆ ನೀಡಿದ್ದಾರೆ. ತಮಗೆ ಟಿಎಂಸಿ ಪಕ್ಷದ ಶಾಸಕರ ಬೆಂಬಲವಿರುವುದನ್ನು ಪರೋಕ್ಷವಾಗಿ ಸೂಚಿಸಿರುವ ಅವರು, ತಮ್ಮ ರಾಜಕೀಯ ನಿಷ್ಠೆಯನ್ನು ಸ್ಪಷ್ಟಪಡಿಸಿದ್ದಾರೆ. “ನಾನು ಪ್ರತಿಪಕ್ಷ ನಾಯಕನಾಗಿ ಆಯ್ಕೆಯಾಗಿರಬಹುದು. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ನಮ್ಮ ಸರ್ವೋಚ್ಚ ನಾಯಕಿ. ಇದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟಿಎಂಸಿ ವಲಸಿಗರಿಗೆ ಮುಚ್ಚಿತು ಬಿಜೆಪಿ ಬಾಗಿಲು; ತೃಣಮೂಲೀಕರಣ ತಡೆಯಲು ಬಂಗಾಳದ ಬಿಜೆಪಿ ಶಪಥ

“ನಮ್ಮ ಶಾಸಕಾಂಗ ಪಕ್ಷವು ಇಂದಿಗೂ ಟಿಎಂಸಿ ಮುಖ್ಯಸ್ಥೆ ಮತ್ತು ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನೇ ತನ್ನ ನಾಯಕಿ ಎಂದು ಪರಿಗಣಿಸುತ್ತದೆ. ಅವರು ನಮ್ಮ ಶಾಸಕಾಂಗ ಪಕ್ಷದ ಮುಖ್ಯ ಸಲಹೆಗಾರ್ತಿಯಾಗಿ ಕಾರ್ಯನಿರ್ವಹಿಸಬೇಕು ಎಂದು ನಾವು ವಿನಂತಿಸುತ್ತೇವೆ. ನಮ್ಮ ಬಳಿ ಮೂರನೇ ಎರಡರಷ್ಟು ಶಾಸಕರ ಬೆಂಬಲವಿದೆ. ಹಾಗಾಗಿ ನಾವೇ ನಿಜವಾದ ತೃಣಮೂಲ ಕಾಂಗ್ರೆಸ್. ಸಂಸದೀಯ ನಿಯಮಗಳ ಪ್ರಕಾರ ನಾವೇ ಪಶ್ಚಿಮ ಬಂಗಾಳ ವಿಧಾನಸಭೆಯ ನಿಜವಾದ ಮತ್ತು ಮುಖ್ಯ ವಿರೋಧ ಪಕ್ಷ” ಎನ್ನುವ ಮೂಲಕ ರಿತಬ್ರತಾ ಬ್ಯಾನರ್ಜಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ರಿತಬ್ರತಾ ಬ್ಯಾನರ್ಜಿ ಅವರಿಗೆ 58 ಶಾಸಕರು ಲಿಖಿತ ಬೆಂಬಲ ಸೂಚಿಸಿದ್ದು, ಇದರ ಆಧಾರದ ಮೇಲೆಯೇ ಅವರನ್ನು ಅಧಿಕೃತವಾಗಿ ಪ್ರತಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಟಿಎಂಸಿ ಪಕ್ಷದಿಂದ ಉಚ್ಚಾಟಿತರಾಗಿದ್ದರೂ ಮಮತಾ ಬ್ಯಾನರ್ಜಿ ಅವರನ್ನೇ ತಮ್ಮ ನಾಯಕಿ ಎಂದು ಕರೆಯುವ ಮೂಲಕ ರಿತಬ್ರತಾ ಕುತೂಹಲ ಮೂಡಿಸಿದ್ದಾರೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ; ಪ್ರತಿಭಟನೆಯಲ್ಲಿ ಕೇವಲ 5 ಶಾಸಕರು, 3 ಸಂಸದರು ಭಾಗಿ!

ಈ ಹೊಸ ಬೆಳವಣಿಗೆಯಿಂದಾಗಿ ಪಶ್ಚಿಮ ಬಂಗಾಳ ವಿಧಾನಸಭೆಯ ಒಳಗೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಸಾಂಪ್ರದಾಯಿಕ ಸಮೀಕರಣಗಳು ಸಂಪೂರ್ಣವಾಗಿ ಬದಲಾಗಲಿವೆ. ರಿತಬ್ರತಾ ಬ್ಯಾನರ್ಜಿ ಅವರ ಈ ಹೇಳಿಕೆಗಳು ಪಶ್ಚಿಮ ಬಂಗಾಳದ ಆಡಳಿತಾರೂಢ ಟಿಎಂಸಿ ಮತ್ತು ಇತರ ವಿರೋಧ ಪಕ್ಷಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಬಿಕ್ಕಟ್ಟಿನ ಈ ಸಂದರ್ಭದಲ್ಲಿ ಅವರು ಸದನವನ್ನು ಹೇಗೆ ಮುನ್ನಡೆಸಲಿದ್ದಾರೆ ಮತ್ತು ಮಮತಾ ಬ್ಯಾನರ್ಜಿ ಜೊತೆ ಇವರ ಸಂಬಂಧ ಹೇಗೆ ಇರಲಿದೆ ಎಂಬುದು ಮುಂಬರುವ ದಿನಗಳಲ್ಲಿ ಸ್ಪಷ್ಟವಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆಮಿರ್ ಖಾನ್ 3ನೇ ಮದುವೆಗೆ ದಿನಾಂಕ ನಿಗದಿ; ಜುಲೈ 5ರಂದು ಗೌರಿ ಜೊತೆ ವಿವಾಹ? – Kannada News

ಬಾಲಿವುಡ್‌ ನಟ ಆಮಿರ್ ಖಾನ್ (Aamir Khan) ಅವರು ಮತ್ತೆ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ತಮ್ಮ ಬಹುಕಾಲದ ಗೆಳತಿ ಗೌರಿ ಸ್ಪ್ರ್ಯಾಟ್ (Gauri Spratt) ಅವರೊಂದಿಗೆ ಜುಲೈ 5ರಂದು ಆಮಿರ್ ಖಾನ್ ಸರಳವಾಗಿ ಮದುವೆ (Aamir Khan Wedding) ಆಗಲಿದ್ದಾರೆ ಎಂದು ವರದಿಯಾಗಿದೆ. ಕಳೆದ ವರ್ಷ ತಮ್ಮ 60ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಆಮಿರ್ ಖಾನ್ ಅವರು ಗೌರಿ ಸ್ಪ್ರ್ಯಾಟ್ ಜೊತೆಗಿನ ಪ್ರೀತಿಯನ್ನು ಅಧಿಕೃತವಾಗಿ ಮಾಧ್ಯಮಗಳ ಮುಂದೆ ಒಪ್ಪಿಕೊಂಡಿದ್ದರು. ಅದಕ್ಕೂ ಒಂದು ವರ್ಷದ ಮೊದಲಿನಿಂದಲೇ ಇವರಿಬ್ಬರು ಡೇಟಿಂಗ್ ಮಾಡುತ್ತಿದ್ದರು.

ವರದಿಗಳ ಪ್ರಕಾರ, ಈ ಜೋಡಿಯು ಯಾವುದೇ ಅದ್ದೂರಿ ವಿವಾಹ ಮಹೋತ್ಸವ ಅಥವಾ ಗ್ರ್ಯಾಂಡ್ ರಿಸೆಪ್ಷನ್ ಹಮ್ಮಿಕೊಳ್ಳುತ್ತಿಲ್ಲ. ಕೇವಲ ಅತ್ಯಾಪ್ತರು ಮತ್ತು ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಜುಲೈ 5ರಂದು ಸರಳವಾಗಿ ಕೋರ್ಟ್ ಮ್ಯಾರೇಜ್ ಮಾಡಿಕೊಳ್ಳುವ ಮೂಲಕ ತಮ್ಮ ದಾಂಪತ್ಯ ಜೀವನವನ್ನು ಅಧಿಕೃತಗೊಳಿಸಲಿದ್ದಾರೆ ಎಂದು ವರದಿ ಆಗಿದೆ.

‘ಆಮೀರ್ ಮತ್ತು ಗೌರಿ ಕಳೆದ ಒಂದು ವರ್ಷದಿಂದ ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದಾರೆ. ಒಟ್ಟಿಗೆ ಖುಷಿಯಾದ ಜೀವನ ನಡೆಸುತ್ತಿರುವ ಇಬ್ಬರು, ಈಗ ಕುಟುಂಬದವರ ಸಮ್ಮುಖದಲ್ಲಿ ಮದುವೆಯಾಗಲು ನಿರ್ಧರಿಸಿದ್ದಾರೆ’ ಎಂದು ಆಪ್ತ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಗೌರಿ ಸ್ಪ್ರ್ಯಾಟ್ ಅವರಿಗೆ ಈಗಾಗಲೇ 7 ವರ್ಷದ ಮಗನಿದ್ದಾನೆ. ಆಮಿರ್ ಖಾನ್ ಮತ್ತು ಗೌರಿ ಅವರು ಕಳೆದ 25 ವರ್ಷಗಳಿಂದ ಒಳ್ಳೆಯ ಸ್ನೇಹಿತರಾಗಿದ್ದರು. ಸುದೀರ್ಘ ಸ್ನೇಹದ ಬಳಿಕ ಇಬ್ಬರ ನಡುವೆ ಪ್ರೀತಿ ಚಿಗುರೊಡೆದು, ಈಗ ಮದುವೆಯ ಹಂತಕ್ಕೆ ಬಂದು ತಲುಪಿದೆ.

ಆಮಿರ್ ಖಾನ್ ಮೊದಲು ರೀನಾ ದತ್ತಾ ಅವರನ್ನು 1986ರಲ್ಲಿ ಮದುವೆಯಾಗಿದ್ದರು. ಈ ದಂಪತಿಗೆ ಜುನೈದ್ ಮತ್ತು ಇರಾ ಖಾನ್ ಎಂಬ ಇಬ್ಬರು ಮಕ್ಕಳಿದ್ದಾರೆ. 2002ರಲ್ಲಿ ಅವರು ವಿಚ್ಛೇದನ ಪಡೆದರು. ಬಳಿಕ 2005ರಲ್ಲಿ ನಿರ್ದೇಶಕಿ ಕಿರಣ್ ರಾವ್ ಅವರನ್ನು ವಿವಾಹವಾದರು. ಈ ಜೋಡಿಗೆ ಆಜಾದ್ ಎಂಬ ಮಗನಿದ್ದಾನೆ. ಆದರೆ 2021ರಲ್ಲಿ ಇವರಿಬ್ಬರು ಪರಸ್ಪರ ಒಪ್ಪಿಗೆಯಿಂದ ಬೇರೆಯಾದರು. ವಿಚ್ಛೇದನದ ಬಳಿಕವೂ ಮಗನ ಜವಾಬ್ದಾರಿಯನ್ನು ಇಬ್ಬರು ಒಟ್ಟಿಗೆ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ: ಮಗಳು ಖಂಡಿತಾ 10ನೇ ತರಗತಿ ಫೇಲ್ ಆಗುತ್ತಾಳೆ ಎಂದುಕೊಂಡಿದ್ದ ಆಮಿರ್ ಖಾನ್; ಆದರೆ ಆಗಿದ್ದೇನು?

ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ಪ್ರೀತಿಯ ಬಗ್ಗೆ ಮಾತನಾಡಿದ್ದ ಆಮಿರ್ ಖಾನ್, ‘ನನ್ನ ಜೀವನಕ್ಕೆ ಗೌರಿ ಬಂದಿರುವುದು ನನ್ನ ಅದೃಷ್ಟ. ಅವಳ ಜೊತೆ ಇದ್ದರೆ ನನಗೆ ನೆಮ್ಮದಿ ಸಿಗುತ್ತದೆ. ರೀನಾ ಮತ್ತು ಕಿರಣ್ ರಾವ್ ಜೊತೆಗಿನ ನನ್ನ ಸಂಬಂಧವೂ ಆಳವಾಗಿತ್ತು, ಆದರೆ ಕೆಲವು ಕಾರಣಗಳಿಂದ ಅದು ವರ್ಕೌಟ್ ಆಗಲಿಲ್ಲ. ಆದರೆ ಗೌರಿ ನನ್ನ ಜೀವನಕ್ಕೆ ಬಂದ ಮೇಲೆ ನಾನು ಪರಿಪೂರ್ಣನಾಗಿದ್ದೇನೆ ಎನಿಸುತ್ತಿದೆ’ ಎಂದು ಹೇಳಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಚರಂಡಿಗೊಂದು ‘ನೆಟ್’ ಹಾಕಿದ್ರೆ ಸಾಕು; ಬೆಂಗಳೂರಿನಲ್ಲಿ ಮಳೆಯಿಂದ ಆಗುವ ಸಮಸ್ಯೆ ಸಿಕ್ತು ಸೂಪರ್ ಐಡಿಯಾ! – Kannada News

ಬೆಂಗಳೂರು, ಜೂ.3: ಪ್ರತಿ ಮುಂಗಾರು ಮಳೆಯಲ್ಲೂ ದೇಶದ ಮೆಟ್ರೋ ಸಿಟಿಗಳು ಎದುರಿಸುವ ಅತಿ ದೊಡ್ಡ ಸಮಸ್ಯೆಯೆಂದರೆ ರಸ್ತೆಗಳು ಜಲಾವೃತಗೊಳ್ಳುವುದು ಮತ್ತು ಚರಂಡಿಗಳು ಬ್ಲಾಕ್ ಆಗುವುದು. ಬೆಂಗಳೂರಿನ ಮುಳುಗುವ ಅಂಡರ್‌ಪಾಸ್‌ಗಳು, ಮುಂಬೈನ ಕಸದಿಂದ ತುಂಬಿಹೋಗಿರುವ ರಾಜಕಾಲುವೆಗಳು ಮತ್ತು ಚೆನ್ನೈನ ಜಲಾವೃತ ರಸ್ತೆಗಳು ಇದಕ್ಕೆ ಜೀವಂತ ಸಾಕ್ಷಿ. ಈ ಜ್ವಲಂತ ಸಮಸ್ಯೆಗೆ ಯಾವುದೇ ಕೋಟ್ಯಂತರ ರೂಪಾಯಿಗಳ ಬಜೆಟ್ ಅಥವಾ ರಾಕೆಟ್ ಸೈನ್ಸ್ ತಂತ್ರಜ್ಞಾನದ ಅಗತ್ಯವಿಲ್ಲ, ಕೇವಲ ಒಂದು ಸರಳ ‘ನೆಟ್’ (ಜಾಲರಿ) ಮೂಲಕ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದು ಎಂಬ ನಾವೀನ್ಯತೆಯ ಐಡಿಯಾವೊಂದು ಈಗ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದೀಗ ಬಗ್ಗೆ ಪೋಸ್ಟ್​​​ವೊಂದನ್ನು ಬೆಂಗಳೂರು ಪೋಸ್ಟ್​​​ (@Bengaluru Post) ಎಂಬ ಎಕ್ಸ್​​ ಖಾತೆ ಹಂಚಿಕೊಂಡಿದೆ.

ಪ್ರತಿ ವರ್ಷ ನಗರಗಳು ಮಳೆನೀರು ಮತ್ತು ಪ್ಲಾಸ್ಟಿಕ್ ತ್ಯಾಜ್ಯಗಳ ವಿರುದ್ಧ ದೊಡ್ಡ ಯುದ್ಧವನ್ನೇ ನಡೆಸುತ್ತವೆ. ಸಾರ್ವಜನಿಕರು ಮತ್ತು ಪರಿಸರ ಪ್ರೇಮಿಗಳ ಪ್ರಕಾರ, “ಸಮಸ್ಯೆ ಸೃಷ್ಟಿಸುವ ಚರಂಡಿಗಳೇ ಏಕೆ ಪರಿಹಾರದ ಭಾಗವಾಗಬಾರದು?”. ಪ್ರತಿ ಚರಂಡಿಯ ಮುಖದ್ವಾರ ಅಥವಾ ಒಳಗಡೆ ಬಲವಾದ ನೆಟ್‌ಗಳನ್ನು ಅಳವಡಿಸುವುದರಿಂದ, ನೀರು ಸರಾಗವಾಗಿ ಹರಿದು ಹೋಗುತ್ತದೆ ಮತ್ತು ಪ್ಲಾಸ್ಟಿಕ್ ಸೇರಿದಂತೆ ಎಲ್ಲಾ ಘನ ತ್ಯಾಜ್ಯಗಳು ಒಂದೇ ಕಡೆ ಶೇಖರಣೆಯಾಗುತ್ತವೆ. ಇದರಿಂದಾಗಿ ಚರಂಡಿಗಳು ಬ್ಲಾಕ್ ಆಗುವುದು ಸಂಪೂರ್ಣವಾಗಿ ತಪ್ಪುತ್ತದೆ ಮತ್ತು ಕಸವನ್ನು ಸುಲಭವಾಗಿ ವಿಲೇವಾರಿ ಮಾಡಬಹುದು.

ಇದನ್ನೂ ಓದಿ: ಜೊಹೊ ಮುಖ್ಯ ವಿಜ್ಞಾನಿ ಶ್ರೀಧರ್ ವೆಂಬು ಅವರ ಕರುವಿಯಿಂದ ಚೀನೀ ಪವರ್ ಟೂಲ್ಸ್​ಗೆ ಪೈಪೋಟಿ

ಇಲ್ಲಿದೆ ನೋಡಿ ಎಕ್ಸ್​​ ಪೋಸ್ಟ್​​:

ಬೆಂಗಳೂರಿನ ಹೊರವರ್ತುಲ ರಸ್ತೆ ಭಾಗದಲ್ಲಿ ಮಳೆಯಾದರೆ ಸೃಷ್ಟಿಯಾಗುವ ಟ್ರಾಫಿಕ್ ಮತ್ತು ಪ್ರವಾಹದ ಪರಿಸ್ಥಿತಿಯನ್ನು ನಿಯಂತ್ರಿಸಲು ಈ ಸರಳ ಮತ್ತು ಅತ್ಯಂತ ಕಡಿಮೆ ವೆಚ್ಚದ ತಂತ್ರಜ್ಞಾನವನ್ನು ಪ್ರಾಯೋಗಿಕವಾಗಿ ಬಳಸಬಹುದಾಗಿದೆ. ಬೆಂಗಳೂರಿನ ಹೊರವರ್ತುಲ ರಸ್ತೆ ಕಂಪನಿಗಳ ಸಂಘಟನೆ ಈ ನಿಟ್ಟಿನಲ್ಲಿ ಬಿಬಿಎಂಪಿ ಮತ್ತು ನಗರಾಭಿವೃದ್ಧಿ ಮಂಡಳಿಗಳೊಂದಿಗೆ ಕೈಜೋಡಿಸಿ, ಓಆರ್‌ಆರ್ ವ್ಯಾಪ್ತಿಯ ಚರಂಡಿಗಳಲ್ಲಿ ಇಂತಹ ‘ನೆಟ್’ ಅಳವಡಿಸುವ ಪ್ರಾಯೋಗಿಕ ಯೋಜನೆಯನ್ನು ಪರಿಶೀಲಿಸಬೇಕು ಎಂದು ಸಾರ್ವಜನಿಕರು ಸೋಷಿಯಲ್ ಮೀಡಿಯಾ ಮೂಲಕ ಒತ್ತಾಯಿಸುತ್ತಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:51 pm, Wed, 3 June 26

Source link

ಸಿಎಂ ಆಗಿ ಪ್ರಮಾಣವಚನದ ಬೆನ್ನಲ್ಲೇ ರಾಜ್ಯದ ಜನತೆಗೆ ಮಹತ್ವದ ಕರೆ ಕೊಟ್ಟ ಡಿ.ಕೆ. ಶಿವಕುಮಾರ್​​: ಇಲ್ಲಿದೆ ಮಾಹಿತಿ – Kannada News

ರಾಜ್ಯದ ಜನತೆಗೆ ಮಹತ್ವದ ಕರೆ ಕೊಟ್ಟ ಡಿ.ಕೆ. ಶಿವಕುಮಾರ್Image Credit source: DK Shivakumar X Account

ಬೆಂಗಳೂರು, ಜೂನ್​​ 03: ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ (DK Shivakumar)​​ ಭಾವನಾತ್ಮಕವಾಗಿ ಪೋಸ್ಟ್​​ ಮಾಡಿದ್ದಾರೆ. ನನ್ನ ಬದುಕಿನ ಪ್ರತಿಯೊಂದು ಏಳುಬೀಳುಗಳಲ್ಲೂ ಧೈರ್ಯ ತುಂಬಿದ್ದೀರಿ. ನನ್ನನ್ನು ಹೆಗಲ ಮೇಲೆ ಹೊತ್ತು ಮುನ್ನಡೆಸಿದ ಕೋಟ್ಯಂತರ ಜನತೆ ಹಾಗೂ ಕಾರ್ಯಕರ್ತರ ಆಶೀರ್ವಾದದಿಂದ ಸಿಎಂ ಆಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದೇನೆ. ಈ ಕ್ಷಣದಲ್ಲಿ ನಾನು ನಿಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸಕ್ಕೆ ತಲೆಬಾಗುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

ಡಿಕೆಶಿ ಪೋಸ್ಟ್​​ನಲ್ಲಿ ಏನಿದೆ?

ನನ್ನ ಹೆಗಲ ಮೇಲಿರುವುದು ಕೇವಲ ಮುಖ್ಯಮಂತ್ರಿಯ ಜವಾಬ್ದಾರಿಯಲ್ಲ, ಬದಲಿಗೆ ಕನ್ನಡಿಗರ ಕನಸುಗಳನ್ನು ನನಸು ಮಾಡುವ ಪವಿತ್ರ ಕರ್ತವ್ಯ. ಈ ಅವಕಾಶ ನನಗೆ ಕರುಣಿಸಿದ ಹಿರಿಯರಿಗೆ, ಮಾರ್ಗದರ್ಶಕರಿಗೆ ಹಾಗೂ ನನ್ನ ಶಕ್ತಿಯಾಗಿ ನಿಂತ ಪ್ರತಿಯೊಬ್ಬರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ವೇಗವಾಗಿ ಬದಲಾಗುತ್ತಿರುವ ಇಂದಿನ ತಂತ್ರಜ್ಞಾನದ ಯುಗದಲ್ಲಿ, ಹೊಸ ಆಲೋಚನೆಗಳೊಂದಿಗೆ ನಮ್ಮ ಹೆಮ್ಮೆಯ ಕರ್ನಾಟಕವನ್ನು ಅಭಿವೃದ್ಧಿಯ ಅತ್ಯುನ್ನತ ಶಿಖರಕ್ಕೆ ಕೊಂಡೊಯ್ಯಬೇಕಿದೆ. ಈ ಸರ್ವತೋಮುಖ ಪ್ರಗತಿಯ ದಾರಿಯಲ್ಲಿ ರೈತರು, ಶ್ರಮಿಕರು, ಮಹಿಳೆಯರು, ವಿದ್ಯಾರ್ಥಿಗಳು, ಯುವಜನರು ಹಾಗೂ ಪ್ರತಿಯೊಬ್ಬ ನಾಗರಿಕರ ಸಹಭಾಗಿತ್ವ ನಮಗೆ ಮುಖ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆ ಶಿವಕುಮಾರ್​​ರಿಂದ ದೀರ್ಘದಂಡ ನಮಸ್ಕಾರ

‘ಒಬ್ಬ ವ್ಯಕ್ತಿಯಿಂದ ಬದಲಾವಣೆ ಸಾಧ್ಯವಿಲ್ಲ’

ಯಾವುದೇ ಒಬ್ಬ ವ್ಯಕ್ತಿಯಿಂದ ಬದಲಾವಣೆ ಸಾಧ್ಯವಿಲ್ಲ, ಆದರೆ ನಾವೆಲ್ಲರೂ ಕೈಜೋಡಿಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ. ಹೀಗಾಗಿ ನಮ್ಮ ಭವಿಷ್ಯದ ಪೀಳಿಗೆ ಹೆಮ್ಮೆ ಪಡುವಂತಹ ಸುಂದರ, ಸಮೃದ್ಧ ಮತ್ತು ಪ್ರಗತಿಪರ ಕರ್ನಾಟಕವನ್ನು ಕಟ್ಟೋಣ ಎಂದು ಸಿಎಂ ಡಿ.ಕೆ. ಶಿವಕುಮಾರ್​​ ಕರೆ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ – Kannada News

ಚೆನ್ನೈ, ಜೂನ್ 3: ಜೂನ್ 18ರಂದು ನಡೆಯಲಿರುವ ತಮಿಳುನಾಡಿನ ರಾಜ್ಯಸಭಾ ಉಪಚುನಾವಣೆಗೆ ನಟ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ತನ್ನ ಪಾಲಿನ ಸೀಟನ್ನು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡಲು ನಿರ್ಧರಿಸಿದೆ. ಈ ನಿರ್ಧಾರವು ಮುಂಬರುವ ದಿನಗಳಲ್ಲಿ ತಮಿಳುನಾಡಿನ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ ತೆರವಾಗಿರುವ 1 ರಾಜ್ಯಸಭಾ ಸ್ಥಾನಕ್ಕೆ ಕೇಂದ್ರ ಚುನಾವಣಾ ಆಯೋಗವು ಇತ್ತೀಚೆಗೆ ಉಪಚುನಾವಣೆ ಪ್ರಕಟಿಸಿತ್ತು.

ಜೂನ್ 18ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಅಂದೇ ಸಂಜೆ ಫಲಿತಾಂಶ ಹೊರಬೀಳಲಿದೆ. ವಿಧಾನಸಭೆಯಲ್ಲಿನ ಸಂಖ್ಯಾಬಲ ಮತ್ತು ರಾಜಕೀಯ ತಂತ್ರಗಾರಿಕೆಯ ಭಾಗವಾಗಿ ಟಿವಿಕೆ ಈ ಸ್ಥಾನವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿದ್ದು, ಕಾಂಗ್ರೆಸ್ ಶೀಘ್ರದಲ್ಲೇ ತನ್ನ ಅಧಿಕೃತ ಅಭ್ಯರ್ಥಿಯನ್ನು ಘೋಷಿಸಲಿದೆ.

ಇದನ್ನೂ ಓದಿ: ತಮಿಳುನಾಡು ರಾಜಕೀಯದಲ್ಲಿ ಹೊಸ ತಿರುವು; ಎಐಎಡಿಎಂಕೆಗೆ ರಾಜೀನಾಮೆ ನೀಡಿ ಟಿವಿಕೆಯತ್ತ ಮುಖ ಮಾಡಿದ 3 ಶಾಸಕರು

ಟಿವಿಕೆ ಪಕ್ಷವು ತಮಿಳುನಾಡಿನ ರಾಜಕೀಯ ರಂಗಕ್ಕೆ ಪ್ರವೇಶಿಸಿದ ನಂತರ ತೆಗೆದುಕೊಳ್ಳುತ್ತಿರುವ ಪ್ರಮುಖ ರಾಜಕೀಯ ನಿರ್ಧಾರ ಇದಾಗಿದೆ. ಈಗಾಗಲೇ ಚುನಾವಣಾ ಅಧಿಸೂಚನೆ ಹೊರಬಿದ್ದಿರುವುದರಿಂದ, ಕಾಂಗ್ರೆಸ್ ಹೈಕಮಾಂಡ್ ತಮಿಳುನಾಡಿನ ಹಿರಿಯ ನಾಯಕರೊಬ್ಬರನ್ನು ಈ ಸ್ಥಾನಕ್ಕೆ ಕಣಕ್ಕಿಳಿಸಲು ಚಿಂತನೆ ನಡೆಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ! – Kannada News

ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar)  ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮೊದಲ ಸಚಿವ ಸಂಪುಟ ನಡೆಸಿದ್ದು, ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ  ಘೋಷಣೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ,  ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಫ್ರೀ ಬಸ್​ ಪಾಸ್​ ನೀಡಲಾಗುವುದು ಎಂದು ಘೋಷಿಸಿದರು.  ಇದರೊಂದಿಗೆ ಬೇರೆ ಊರಿಗೆ ಹೋಗಿ ವ್ಯಾಸಂಗ ಮಾಡುವ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿಕೆ ಶಿವಕುಮಾರ್ಶು ಭ ಗಳಿಗೆ, ಶುಭ ಮುಹೂರ್ತ ಬರುತ್ತೆ ಎಂದು ಹೇಳುತ್ತಿದ್ದ ಇವತ್ತು ಸಂಜೆ 4.15ಕ್ಕೆ ಆ ಶುಭ ಗಳಿಗೆ, ಮುಹೂರ್ತ ಬಂತು. ಇವತ್ತು ಹೊಸ ದಿನ, ಹೊಸ ಕೆಲಸ, ಅವಕಾಶ ಆರಂಭಿಸುವ ದಿನ. ಇನ್ನೆರಡು ವರ್ಷಗಳಲ್ಲಿ ಹೊಸ ಅವಕಾಶ ಹುಡುಕುತ್ತಿದ್ದೇನೆ. ರಾಜ್ಯ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತೇನೆ. ರೈತರು, ಕಾರ್ಮಿಕರು, ಎಲ್ಲ ವರ್ಗದ ಜನರಿಗೆ ಕಳೆದ 6 ತಿಂಗಳಿಂದ ಕಾರ್ಯಕ್ರಮಗಳನ್ನ ರೂಪಿಸಿದ್ದೇನೆ ಎಂದು ಹೇಳಿದರು. ಈ ಮೂಲಕ ಮಹತ್ವದ ಕಾರ್ಯಮಗಳ ಘೋಷಣೆ ಮಾಡುವ ಸುಳಿವು ನೀಡಿದರು.

, ರಾಜ್ಯದ ಜನ ನನ್ನ ಮೇಲೆ ಅಪಾರ ವಿಶ್ವಾಸ, ನಂಬಿಕೆ ಇಟ್ಟಿದ್ದಾರೆ. ಈ ಹಿಂದೆ ನನ್ನ ವಿರುದ್ಧ ಟೀಕೆಗಳು ಕೂಡ ಬಂದಿವೆ. ನನ್ನ ರಾಜಕೀಯ ಅನುಭವ ಬಳಸಿಕೊಂಡು ಕೆಲಸ ಮಾಡುತ್ತೇನೆ. ಅನೇಕ ರಾಜಕೀಯ ತಂತ್ರಗಳಿಗೂ ನಾನು ಸಿಲುಕಿದ್ದೇನೆ. ತಿಹಾರ್​ ಜೈಲಿಗೂ ಸಹ ಹೋಗಿ ಬಂದಿದ್ದೇನೆ ಎಂದರು.

ಈ ಸಿಎಂ ಕುರ್ಚಿ ನನ್ನದಲ್ಲ, ಇದು ನಾಡಿನ ಜನತೆಯದ್ದು. ಹೈಕಮಾಂಡ್​ ನಾಯಕರು ನನಗೆ ಈ ಅವಕಾಶವನ್ನ ಕೊಟ್ಟಿದ್ದಾರೆ. ಸ್ವಲ್ಪ ತಡವಾಯಿತು ಆದರೂ ಶುಭ ಗಳಿಗೆ ಬಂದಿದ್ದು, ಎಲ್ಲರೂ ಜೊತೆಗೆ ಸೇರಿ ಕೆಲಸ ಮಾಡುತ್ತೇವೆ. ನಾನು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟವನು ನಾನು. ನಮ್ಮ ಸಂಪುಟ ಸರ್ವ ಜನಾಂಗದ ಶಾಂತಿಯ ತೋಟ ಇದ್ದಂತೆ ಎಂದು ಹೇಳಿದರು.

ಎಲ್ಲವೂ ಕಲೆಕ್ಟಿವ್ ಡಿಸಿಷನ್ ಆಗಿರುತ್ತೆ

ಹೈಕಮಾಂಡ್ ಹೇಳಿದರೆ, ವರಿಷ್ಠರು ಹೇಳಿದರೆ ಐದು ನಿಮಿಷವೂ ಕಾಯಲ್ಲ ಎಂದು ಸಿದ್ದರಾಮಯ್ಯ ಹೇಳಿದ್ರು. ಅದರಂತೆ ವರಿಷ್ಠರು ಕೊಟ್ಟ ಸೂಚನೆ ಮೇರೆಗೆ ಅವರೂ ಸ್ಥಾನವನ್ನು ನನಗೆ ಬಿಟ್ಟು ಕೊಟ್ಟಿದ್ದಾರೆ. ಗ್ರಾಮೀಣ ಹಾಗೂ ನಗರದ ಜನರ ಸಮಸ್ಯೆ ನನಗೆ ಗೊತ್ತಿದೆ. ನಾನು ಎಲ್ಲ ಸಮಸ್ಯೆಗಳನ್ನು ಬಲ್ಲೆ. ಮುಂದೆ ಏನೇ ನಿರ್ಧಾರ ತೆಗೆದುಕೊಂಡರೂ ಅದು ನನ್ನ ನಿರ್ಧಾರ ಆಗಿರಲ್ಲ. ಬದಲಾಗಿ ನನ್ನ ಇಡೀ ಸಂಪುಟದ ನಿರ್ಧಾರ ಆಗಿರುತ್ತದೆ. ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ ಇದೆ. ಎಲ್ಲವೂ ಕಲೆಕ್ಟಿವ್ ಡಿಸಿಷನ್ ಆಗಿರುತ್ತದೆ. ಇವತ್ತು 14 ಜನ ಕ್ಯಾಬಿನೆಟ್ ಗೆ ಸೇರಿದ್ದು, ಸರ್ವ ಜನಾಂಗದ ಶಾಂತಿಯ ತೋಟವನ್ನು ಕ್ಯಾಬಿನೆಟ್ ಬಿಂಬಿಸುತ್ತಿದೆ. ರಾಜ್ಯದಲ್ಲಿ ಉತ್ತಮ ಬಲಿಷ್ಟ ನಾಯಕತ್ವವನ್ನು ಕೊಟ್ಟು ಕೆಲಸ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Source link

ಫಿಟ್ನೆಸ್‌ ಕಾಪಾಡಿಕೊಳ್ಳಲು ಊಟ ಬಿಡುತ್ತಿದ್ದೀರಾ? ಹಾಗಿದ್ರೆ ನೀವು ಈ ಒಂದಿಷ್ಟು ವಿಚಾರಗಳನ್ನು ತಿಳಿದುಕೊಳ್ಳಲೇಬೇಕು – Kannada News

ಇತ್ತೀಚಿನ ದಿನಗಳಲ್ಲಿ ಬೇಗನೆ ತೂಕ ಇಳಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಹಲವರು ಊಟವನ್ನೇ ಬಿಟ್ಟು ಫಿಟ್ನೆಸ್ ಪ್ರಯಾಣ ಆರಂಭಿಸುತ್ತಿದ್ದಾರೆ. ಬೆಳಗಿನ ಉಪಹಾರ ಬಿಡುವುದು, ಮಧ್ಯಾಹ್ನದ ಊಟ ತಡಮಾಡುವುದು ಅಥವಾ ಕೇವಲ ಕಾಫಿ, ಟೀ ಅಥವಾ ಹಣ್ಣಿನ ಜ್ಯೂಸ್ ಕುಡಿದು ದಿನ ಕಳೆಯುತ್ತಾರೆ. ಆದರೆ ಈ ರೀತಿ ಮಾಡುವುದು ಆರೋಗ್ಯಕರ ವಿಧಾನ ಅಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ತೂಕ ಇಳಿಕೆ ಎಂದರೆ ಕೇವಲ ಜಿಮ್‌ನಲ್ಲಿ ವ್ಯಾಯಾಮ ಮಾಡುವುದಲ್ಲ. ಸರಿಯಾದ ಆಹಾರ ಪದ್ಧತಿ, ಉತ್ತಮ ನಿದ್ರೆ, ಒತ್ತಡ ನಿಯಂತ್ರಣ ಮತ್ತು ದೇಹಕ್ಕೆ ಬೇಕಾದ ವಿಶ್ರಾಂತಿ ಕೂಡ ಅಷ್ಟೇ ಮುಖ್ಯವಾಗುತ್ತದೆ. ಹಾಗಾದರೆ ತೂಕ ಇಳಿಸಿಕೊಳ್ಳಲು (Weight Loss) ಊಟ ಬಿಟ್ಟರೆ ಏನಾಗುತ್ತದೆ, ಆರೋಗ್ಯಕರವಾಗಿ ತೂಕ ಕಡಿಮೆ ಮಾಡಿಕೊಳ್ಳಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಊಟ ಬಿಡುವುದರಿಂದ ಏನಾಗಬಹುದು?

ಹಗಲಿನಲ್ಲಿ ಸರಿಯಾಗಿ ಊಟ ಮಾಡದವರು ಸಂಜೆ ವೇಳೆಗೆ ಹೆಚ್ಚು ಹಸಿವಿನಿಂದ ಬಳಲುತ್ತಾರೆ. ಇದರಿಂದ ರಾತ್ರಿ ಸಮಯದಲ್ಲಿ ಅತಿಯಾಗಿ ತಿನ್ನುವುದು ಅಥವಾ ಜಂಕ್ ಫುಡ್‌ಗಳಿಗೆ ಮೊರೆ ಹೋಗುವ ಸಾಧ್ಯತೆ ಹೆಚ್ಚಿರುತ್ತದೆ. ಈ ರೀತಿಯ ಅಸಮರ್ಪಕ ಆಹಾರ ಪದ್ಧತಿ ಜೀರ್ಣಕ್ರಿಯೆಯ ಮೇಲೂ ಕೆಟ್ಟ ಪರಿಣಾಮ ಬೀರುತ್ತದೆ. ತಜ್ಞರ ಅಭಿಪ್ರಾಯದಂತೆ, ಫಿಟ್ನೆಸ್ ಗೆ ಉಪವಾಸ ಮಾಡುವುದು ಪರಿಹಾರವಲ್ಲ. ಬದಲಿಗೆ ನಿಯಮಿತ ಮತ್ತು ಸಮತೋಲನಯುತ ಜೀವನಶೈಲಿಯೇ ಉತ್ತಮ ಮಾರ್ಗವಾಗಿದೆ.

ಆರೋಗ್ಯಕರವಾಗಿ ತೂಕ ಇಳಿಸಿಕೊಳ್ಳಲು ಏನು ಮಾಡಬೇಕು?

ತಜ್ಞರ ಸಲಹೆ ಪ್ರಕಾರ, ಊಟ ಬಿಡುವ ಬದಲು ಸಮತೋಲನಯುತ ಆಹಾರ ಸೇವನೆ ಮಾಡುವುದು ಬಹಳ ಉತ್ತಮ. ಅದರ ಜೊತೆಗೆ ಆಹಾರದಲ್ಲಿ ಪ್ರೋಟೀನ್, ಫೈಬರ್ (ನಾರು ಪದಾರ್ಥ), ಆರೋಗ್ಯಕರ ಕೊಬ್ಬು, ಕಾಂಪ್ಲೆಕ್ಸ್ ಕಾರ್ಬೋಹೈಡ್ರೇಟ್ಸ್ ಇರಬೇಕು. ಇವು ದೇಹಕ್ಕೆ ದಿನಪೂರ್ತಿ ಶಕ್ತಿಯನ್ನು ನೀಡುತ್ತವೆ ಮತ್ತು ವ್ಯಾಯಾಮದ ಸಾಮರ್ಥ್ಯವನ್ನೂ ಹೆಚ್ಚಿಸುತ್ತವೆ.

ಕ್ರ್ಯಾಶ್ ಡೈಟ್‌ಗಳಿಗೆ ಹೇಳಿ ಬೈ!

ತಾತ್ಕಾಲಿಕವಾಗಿ ತೂಕ ಇಳಿಸುವ ಕ್ರ್ಯಾಶ್ ಡೈಟ್‌, ಡಿಟಾಕ್ಸ್ ಟೀ ಮುಂತಾದ ವಿಧಾನಗಳು ದೀರ್ಘಕಾಲದಲ್ಲಿ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ದೇಹಕ್ಕೆ ಅಗತ್ಯವಾದ ಪೌಷ್ಟಿಕಾಂಶಗಳನ್ನು ನೀಡುವ ಆಹಾರವೇ ನಿಜವಾದ ಫಿಟ್ನೆಸ್‌ಗೆ ದಾರಿಯಾಗಿದೆ. ಸರಿಯಾದ ಸಮಯಕ್ಕೆ ಆಹಾರ ಸೇವಿಸುವುದು, ನಿಯಮಿತ ವ್ಯಾಯಾಮ, ಸಾಕಷ್ಟು ನೀರು ಕುಡಿಯುವುದು ಮತ್ತು ಉತ್ತಮ ನಿದ್ರೆ ಆರೋಗ್ಯಕರ ಜೀವನಶೈಲಿಗೆ ಮುಖ್ಯ. ಹಸಿವು ನಿಯಂತ್ರಿಸುವುದು ಎಂದರೆ ಊಟ ಮಾಡದಿರುವುದಲ್ಲ, ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಸರಿಯಾದ ಸಮಯದಲ್ಲಿ ನೀಡುವುದಾಗಿದೆ. ಹಾಗಾಗಿ ಬೇಗನೆ ತೂಕ ಇಳಿಸಿಕೊಳ್ಳುವ ಆತುರದಲ್ಲಿ ಊಟ ಬಿಟ್ಟು ಆರೋಗ್ಯ ಹಾಳು ಮಾಡಿಕೊಳ್ಳಬೇಡಿ. ದೀರ್ಘಕಾಲದ ಆರೋಗ್ಯ ಮತ್ತು ಫಿಟ್ನೆಸ್‌ಗಾಗಿ ಸಮತೋಲನಯುತ ಆಹಾರ ಹಾಗೂ ನಿಯಮಿತ ಜೀವನಶೈಲಿಯನ್ನೇ ಅನುಸರಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link