ಕೊಳಚೆ ನೀರಲ್ಲಿ ಶಾಲಾ ವಿದ್ಯಾರ್ಥಿಗಳು ಪ್ಲೇಟ್ ತೊಳೆದ ವೈರಲ್ ಫೋಟೋ ಅಸಲಿಯತ್ತು ಬಿಚ್ಚಿಟ್ಟ ಬಿಇಓ – Kannada News | Jamakhandi BEO Visits Albal School And Clarify about Students Washed Plate in sewage water after midday meal
ಬಾಗಲಕೋಟೆ, (ಜನವರಿ 29): ಜಿಲ್ಲೆಯ ಆಲಬಾಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳು(School Students) ಬಿಸಿಯೂಟದ (midday meal) ನಂತರ ಚರಂಡಿ ಪಕ್ಕದಲ್ಲಿ ತಟ್ಟೆ ತೊಳೆಯುತ್ತಿರುವ ಪೋಟೋ ವೈರಲ್ ಆಗಿದೆ. ಶಾಲೆಯಲ್ಲಿ ಸೂಕ್ತ ನೀರಿನ ವ್ಯವಸ್ಥೆ ಇಲ್ಲದಿರುವುದು ಈ ದುಸ್ಥಿತಿಗೆ ಕಾರಣವಾಗಿದ್ದು, ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಕಿಡಿಕಾರಿದ್ದಾರೆ. ಇದು ಮಕ್ಕಳ ಹಕ್ಕು ಆಯೋಗದ ಗಮನಕ್ಕೂ ಬಂದಿದ್ದು, ಕೂಡಲೇ ಬಾಗಲಕೋಟೆ ಜಿಲ್ಲಾಡಳಿತಕ್ಕೆ ಪತ್ರ ಬರೆದು ಘಟನೆ ಬಗ್ಗೆ ಗಮನಹರಿಸಬೇಕು. ಹಾಗೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಲು…