ಬೆಳಗಾವಿ: DySP, ಪಿಎಸ್ಐ ಹೆಸರು ಬರೆದಿಟ್ಟು ವ್ಯಕ್ತಿ ಸಾವು, ಕಾರಣವೇನು? – Kannada News
ಬೆಳಗಾವಿ, (ಜೂನ್ 02): ವ್ಯಕ್ತಿಯೋರ್ವ DySP, ಪಿಎಸ್ಐ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆ ಗೋಕಾಕ್ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿದೆ. ಬೆಂಡಿಗೇರಿ ಗ್ರಾಮದಲ್ಲಿ ರವೀಂದ್ರ ದಾನವ್ವಗೋಳ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೊಟ್ಟ ಸಾಲ ವಾಪಸ್ ಕೊಟ್ಟಿಲ್ಲ ಎಂದು ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ರವೀಂದ್ರ ಡೆತ್ ನೋಟ್ನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಪೊಲೀಸರ ಸಹ ಅನ್ಯಾಯ…