ಸರ್ಕಾರದಿಂದ ಮಹತ್ವದ ಆದೇಶ: ಕರ್ನಾಟಕ ನೌಕರರು ಈ ಬಟ್ಟೆ ಧರಿಸುವುದು ಕಡ್ಡಾಯ – Kannada News | Khadi clothes is mandatory for Karnataka government employees: Important order from the government
ಬೆಂಗಳೂರು, ಜನವರಿ 29: ರಾಜ್ಯ ಸರ್ಕಾರಿ ನೌಕರರಿಗೆ (government employees) ಖಾದಿ (Khadi) ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಆ ಮೂಲಕ ಸರ್ಕಾರ ವಸ್ತ್ರಸಂಹಿತೆ ಜಾರಿಗೊಳಿಸಲು ಮುಂದಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ. ಏಪ್ರಿಲ್ 24ರಂದು ಈ ಯೋಜನೆಗೆ ಚಾಲನೆ ದೊರೆಯಲಿದೆ. ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ,…