Headlines

ಹಾಡಹಗಲೇ ಸಿನಿಮೀಯ ಮಾದರಿ ದರೋಡೆ: ಬಂಗಾರದ ಅಂಗಡಿಗೆ ನುಗ್ಗಿ ಆಭರಣ ದೋಚಿ ಎಸ್ಕೇಪ್​​ ಆದ ಮೂವರು – Kannada News

ದರೋಡೆಯಾದ ಬಂಗಾರದ ಅಂಗಡಿImage Credit source: Tv9 Kannada ನೆಲಮಂಗಲ, ಜೂನ್​ 02: ಹಾಡಹಗಲೇ ಸಿನಿಮೀಯ ಮಾದರಿ ದರೋಡೆ ಪ್ರಕರಣವೊಂದು ಬೆಂಗಳೂರು (Bengaluru) ಗ್ರಾಮಾಂತರದ ನೆಲಮಂಗಲದಲ್ಲಿ ನಡೆದಿದೆ. ಬೈಕ್​​ನಲ್ಲಿ ಬಂದಿದ್ದ ಆರೋಪಿಗಳು ಬಂಗಾರ ಅಂಗಡಿಯಲ್ಲಿದ್ದವರನ್ನು ಬೆದರಿಸಿ ಆಭರಣಗಳನ್ನು ದೋಚಿ ಎಸ್ಕೇಪ್​​ ಆಗಿದ್ದು, ಘಟನೆ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ನೆಲಮಂಗಲ ಭಾಗದಲ್ಲಿ ಮೇಲಿಂದ ಮೇಲೆ ದರೋಡೆ ಪ್ರಕರಣಗಳು ನಡೆಯುತ್ತಿರೋದು ಸಾರ್ವಜನಿಕರ ತೀವ್ರ ಆತಂಕಕ್ಕೂ ಕಾರಣವಾಗಿದೆ. ಮುಖ್ಯಾಂಶಗಳು ಹಾಡಹಗಲೇ ಬಂಗಾರದ ಅಂಗಡಿಗೆ ನುಗ್ಗಿ ದರೋಡೆ ಬೈಕ್​​ನಲ್ಲಿ ಬಂದಿದ್ದ ಮೂವರು ಆರೋಪಿಗಳಿಂದ…

Read More

ಪಾರ್ಶ್ವವಾಯುವಿಗೆ ತುತ್ತಾಗಿದ್ದ ವ್ಯಕ್ತಿಯ ಕೈಗೆ ಸುತ್ತಿಕೊಂಡ ಹಾವು, 4 ತಾಸು ನರಕಯಾತನೆ – Kannada News

ಬೌಧ್, ಜೂನ್ 02: ವ್ಯಕ್ತಿಯೊಬ್ಬರ ತಾಳ್ಮೆ ಹಾಗೂ ಸಮಯಪ್ರಜ್ಞೆಯಿಂದ ಸಂಭವಿಸಬಹುದಾದ ದೊಡ್ಡ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಪಾರ್ಶ್ವವಾಯುವಿಗೆ ತುತ್ತಾಗಿದ್ದ ವ್ಯಕ್ತಿಯ ಕೈಗೆ ವಿಷಕಾರಿ ಹಾವೊಂದು ಸುತ್ತಿಕೊಂಡ ಪರಿಣಾಮ ಸುಮಾರು ನಾಲ್ಕು ಗಂಟೆಗಳ ಕಾಲ ನರಕಯಾತನೆ ಅನುಭವಿಸಬೇಕಾಯಿತು. ಆದರೆ ಅದೃಷ್ಟವಶಾತ್ ಯಾವುದೇ ತೊಂದರೆಯಾಗಿಲ್ಲ. ಒಡಿಶಾದ ಬೌಧ್ ಜಿಲ್ಲೆಯ ಹರಭಂಗ ಬ್ಲಾಕ್‌ನ ಅದೇನಿಗಢ ಗ್ರಾಮದಲ್ಲಿ ಪಾರ್ಶ್ವವಾಯು (Paralysis) ಪೀಡಿತರಾಗಿ ಚಲನಶೀಲತೆ ಕಳೆದುಕೊಂಡಿದ್ದ ಕೃಷ್ಣ ಚಂದ್ರ ಸಾಹು ಎಂಬ ವ್ಯಕ್ತಿಗೆ ಮಲಗಿದ್ದ ಹಾಸಿಗೆಗೆ ವಿಷಕಾರಿ ಹಾವು ನುಗ್ಗಿತ್ತು. ಕಿಟಕಿಯಿಂದ ನುಗ್ಗಿದ ಯಮಸ್ವರೂಪಿ…

Read More

‘ಪೆದ್ದಿ’ ಅಡ್ವಾನ್ಸ್ ಬುಕಿಂಗ್ ಶುರು, ಬೆಂಗಳೂರಿನಲ್ಲಿ ಎಷ್ಟು ಶೋ? ಟಿಕೆಟ್ ಬೆಲೆ ಎಷ್ಟು?

ರಾಮ್ ಚರಣ್ (Ram Charan), ಶಿವರಾಜ್ ಕುಮಾರ್ ಮತ್ತು ಜಾನ್ಹವಿ ಕಪೂರ್ ನಟಿಸಿರುವ ‘ಪೆದ್ದಿ’ ಸಿನಿಮಾ ಬಿಡುಗಡೆಗೆ ಇನ್ನೆರಡು ದಿನಗಳಷ್ಟೆ ಇದೆ. ಜೂನ್ 4 ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಈಗಾಗಲೇ ಓಪನ್ ಆಗಿದ್ದು, ಬೆಂಗಳೂರು ಸೇರಿದಂತೆ ಹಲವು ಪ್ರಮುಖ ನಗರಗಳಲ್ಲಿ ಸಿನಿಮಾ ಟಿಕೆಟ್ ಮುಂಗಡವಾಗಿ ಕಾಯ್ದಿರಿಸಬಹುದಾಗಿದೆ. ಬೆಂಗಳೂರಿನಲ್ಲಿ ‘ಪೆದ್ದಿ’ ಸಿನಿಮಾಕ್ಕೆ ಸಾಕಷ್ಟು ಶೋಗಳು ಲಭಿಸಿದ್ದು, ಟಿಕೆಟ್ ಬೆಲೆ ಎಷ್ಟಿದೆ? ಮಾಹಿತಿ ಇಲ್ಲಿದೆ… ಈ ಹಿಂದೆ ಜನವರಿ ತಿಂಗಳಲ್ಲಿ ‘ಜನ ನಾಯಗನ್’ ಸಿನಿಮಾದ…

Read More

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ

ಕಿಚ್ಚ ಸುದೀಪ್ ಅವರ ಅಳಿಯ ಸಂಜಿತ್ ಸಂಜೀವ್ ಅವರು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅವರ ನಟನೆಯ ‘ಮ್ಯಾಂಗೋ ಪಚ್ಚ’ ಜೂನ್ 5ರಂದು ರಿಲೀಸ್ ಆಗುತ್ತಿದೆ. ಈ ಚಿತ್ರವನ್ನು ಪ್ರಿಯಾ ಸುದೀಪ್ ಅವರು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಮಾತನಾಡುವಾಗ ಸಂಜಿತ್ ಗುಣದ ಬಗ್ಗೆ ಮಾತನಾಡಿದ್ದಾರೆ. ಕಿಚ್ಚ ಸುದೀಪ್ ಅವರ ಧ್ವನಿ, ಮ್ಯಾನರಿಸಂ ಸೇರಿದಂತೆ ಅನೇಕ ವಿಷಯಗಳು ಸಂಜಿತ್​​ಗೆ ಬಂದಿವೆ ಎಂಬ ವಿಷಯವನ್ನು ರಿವೀಲ್ ಮಾಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

CBSE 12ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ: ಅಂಕಗಳ ಮರುಪರಿಶೀಲನೆ, ಮರುಮೌಲ್ಯಮಾಪನ ಪ್ರಕ್ರಿಯೆ ಆರಂಭ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

CBSE 12ನೇ ತರಗತಿ ಮರುಮೌಲ್ಯಮಾಪನ ಪೋರ್ಟಲ್Image Credit source: Pinterest ಕೇಂದ್ರ ಪ್ರೌಢಶಿಕ್ಷಣ ಮಂಡಳಿ (CBSE) 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಮುಖ ಸುದ್ದಿಯೊಂದನ್ನು ನೀಡಿದೆ. 2026ರ ಬೋರ್ಡ್ ಪರೀಕ್ಷೆಯ ಅಂಕಗಳ ಮರುಪರಿಶೀಲನೆ (Verification of Marks) ಮತ್ತು ಪ್ರಶ್ನೆವಾರು ಮರುಮೌಲ್ಯಮಾಪನ (Re-evaluation) ಪ್ರಕ್ರಿಯೆಯ ಪೋರ್ಟಲ್ ಇಂದು ಅಧಿಕೃತವಾಗಿ ಆರಂಭವಾಗಿದೆ. ತಾಂತ್ರಿಕ ನವೀಕರಣಗಳ ನಂತರ ಸದ್ಯ ಪೋರ್ಟಲ್ ಸುಗಮವಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜೂನ್ 6 ರವರೆಗೆ ಕಾಲಾವಕಾಶ: ಸಿಬಿಎಸ್‌ಇ ಪ್ರಕಟಣೆಯ…

Read More

ಭುವನೇಶ್ವರ್ ಕುಮಾರ್​ ಯಶಸ್ಸಿನ ಗುಟ್ಟು ರಟ್ಟು ಮಾಡಿದ ಸಚಿನ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದರು. ಪ್ರತಿ ಪಂದ್ಯದಲ್ಲೂ ಅತ್ಯುತ್ತಮ ದಾಳಿ ಸಂಘಟಿಸಿದ್ದ ಭುವಿ ರನ್​ ನಿಯಂತ್ರಿಸುವುದರೊಂದಿಗೆ 28 ವಿಕೆಟ್​ಗಳನ್ನೂ ಸಹ ಪಡೆದಿದ್ದರು. ಭುವನೇಶ್ವರ್ ಕುಮಾರ್ ಅವರ ಈ ಭರ್ಜರಿ ಯಶಸ್ಸಿಗೆ ಕಾರಣ ವೋಬ್ಲಿ ಸೀಮ್ ಕೌಶಲ್ಯವೇ ಎಂದಿದ್ದಾರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ವಿಶ್ಲೇಷಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾತನಾಡಿರುವ ಸಚಿನ್ ತೆಂಡೂಲ್ಕರ್, “ಭುವನೇಶ್ವರ್ ಕುಮಾರ್ ಈ ಬಾರಿ ವೋಬ್ಲಿ…

Read More

ಸಿಬಿಎಸ್​ಇ ಮರುಮೌಲ್ಯಮಾಪನ ಪೋರ್ಟಲ್ ತಾಂತ್ರಿಕ ದೋಷ ನಿವಾರಣೆ: ಅಂಕ ಪರಿಶೀಲನೆಗೆ ಜೂನ್ 6 ಕೊನೆಯ ದಿನಾಂಕ

ನವದೆಹಲಿ, ಜೂನ್ 02: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅತ್ಯಂತ ವೇಗದ ಕ್ರಮ ಕೈಗೊಂಡಿದೆ. ಮರುಮೌಲ್ಯಮಾಪನ ಪೋರ್ಟಲ್ ಆರಂಭವಾದ ಮೊದಲ ದಿನ ವಿದ್ಯಾರ್ಥಿಗಳು ಎದುರಿಸುತ್ತಿದ್ದ ಲಾಗಿನ್ ಮತ್ತು ತಾಂತ್ರಿಕ ಸಮಸ್ಯೆಗಳನ್ನು ಮಂಡಳಿಯು ತಕ್ಷಣವೇ ಪರಿಹರಿಸಿದ್ದು, ಪ್ರಸ್ತುತ ಪೋರ್ಟಲ್ ಅತ್ಯಂತ ಸರಾಗವಾಗಿ ಹಾಗೂ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ. ಜೂನ್ 6 ರವರೆಗೆ ಅರ್ಜಿ ಸಲ್ಲಿಸಲು ಸುವರ್ಣಾವಕಾಶ ಸಿಬಿಎಸ್‌ಇ ನೀಡಿರುವ ಅಧಿಕೃತ ಮಾಹಿತಿಯ ಪ್ರಕಾರ, ಉತ್ತರ ಪತ್ರಿಕೆಗಳ ಸ್ಕ್ಯಾನ್ ಮಾಡಿದ ಪ್ರತಿಗಳ ಮರುಪರಿಶೀಲನೆ ಹಾಗೂ ಮರುಮೌಲ್ಯಮಾಪನಕ್ಕಾಗಿ (Revaluation)…

Read More

‘ಅಂದೇ ಹೇಳಿದ್ವಿ ಡಿ. ಕೆ ಶಿವಕುಮಾರ್ ಸಿಎಂ ಆಗ್ತಾರೆ ಅಂತಾ’: ಪಂಚಮುಖಿ ಆಂಜನೇಯ ದೇವಸ್ಥಾನದ ಅರ್ಚಕರ ಸಂತಸ

ರಾಯಚೂರು, ಜೂನ್ 02: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ನಿಯೋಜನೆಗೊಂಡಿರುವ ಬೆನ್ನಲ್ಲೇ, ರಾಯಚೂರು ತಾಲೂಕಿನ ಪ್ರಸಿದ್ಧ ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಸಡಗರ ಮನೆಮಾಡಿದೆ. ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಲಿದ್ದಾರೆ ಎಂದು ಈ ಹಿಂದೆ ಭವಿಷ್ಯ ನುಡಿದಿದ್ದ ದೇವಸ್ಥಾನದ ಮೂಲ ಅರ್ಚಕ ಶಾಮಾಚಾರ್ಯರು ಟಿವಿ9 ಎದುರು ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ಮುಖ್ಯಾಂಶಗಳು ಡಿ.ಕೆ. ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದಿದ್ದ ರಾಯಚೂರು ಅರ್ಚಕರ ಭವಿಷ್ಯ ನಿಜವಾಗಿದೆ. ಪಂಚಮುಖಿ ಸನ್ನಿಧಿಯಲ್ಲಿ ಈ ಹಿಂದೆ ಪೂಜೆ ಸಲ್ಲಿಸಿದ್ದ…

Read More

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಭಾರಿ ಸಮಸ್ಯೆ

ಮೈಸೂರು, ಜೂನ್ 2: ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ವ್ಯಾಪ್ತಿಯ ಕಬಿನಿ ಜಲಾಶಯದ ಹಿನ್ನೀರಿನ ಪ್ರಮಾಣ ದಿನೇ ದಿನೇ ಕುಸಿಯುತ್ತಿರುವುದು ಆತಂಕ ಮೂಡಿಸಿದೆ. ಮುಂಗಾರು ಮಳೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ನಾಗರಹೊಳೆ ಅಭಯಾರಣ್ಯದಲ್ಲಿ ವನ್ಯಜೀವಿಗಳಿಗೆ ತೀವ್ರ ಆಹಾರದ ಕೊರತೆ ಎದುರಾಗಿದೆ. ಕಬಿನಿ ಹಿನ್ನೀರಿನ ಪ್ರದೇಶದಲ್ಲಿ ಹಸಿರು ಸಂಪೂರ್ಣವಾಗಿ ಮಾಯವಾಗಿದ್ದು, ತಿನ್ನಲು ಹಸಿರು ಹುಲ್ಲು ಸಿಗದೆ ಕಾಡಾನೆಗಳು ಪರದಾಡುತ್ತಿವೆ. ಅಲ್ಪ ಪ್ರಮಾಣದ ಮಳೆಯಿಂದಾಗಿ ಅಲ್ಲಲ್ಲಿ ಮಾತ್ರ ಗರಿಕೆ ಬೆಳೆದಿದ್ದು, ಆನೆಗಳು ಕಾಲಿನಿಂದ ಒಣಗಿದ ಮಣ್ಣನ್ನು ಒದ್ದು, ಹುಲ್ಲಿನ ಬೇರುಗಳನ್ನು ಬೇರ್ಪಡಿಸಿ ತಿನ್ನುತ್ತಿರುವ…

Read More

‘ಅವರೇ ನನ್ನ ಮೇಲೆ ಹಣ ಖರ್ಚು ಮಾಡುತ್ತಿದ್ದರು’; ಸುಷ್ಮಿತಾ ಸೇನ್ ಬಗ್ಗೆ ಲಲಿತ್ ಮೋದಿ ಮಾತು

ನಾಲ್ಕು ವರ್ಷಗಳ ಹಿಂದೆ (2022ರಲ್ಲಿ), ಲಲಿತ್ ಮೋದಿ ಮತ್ತು ಸುಶ್ಮಿತಾ ಸೇನ್ ಅವರ ರೋಮ್ಯಾಂಟಿಕ್ ಫೋಟೋಗಳು ಆನ್‌ಲೈನ್‌ನಲ್ಲಿ ವೈರಲ್ ಆದಾಗ ಇಡೀ ದೇಶವೇ ಆಘಾತಕ್ಕೊಳಗಾಗಿತ್ತು. ಉದ್ಯಮಿ ಹಾಗೂ ಐಪಿಎಲ್‌ನ ಮಾಜಿ ಮುಖ್ಯಸ್ಥರಾದ ಲಲಿತ್ ಮೋದಿ ಮತ್ತು ಬಾಲಿವುಡ್‌ನ ಯಶಸ್ವಿ ನಟಿ ಸುಶ್ಮಿತಾ ಸೇನ್ ಅವರ ಈ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವಿವಾದ ಹಾಗೂ ಚರ್ಚೆಗೆ ಕಾರಣವಾಗಿತ್ತು. ದೇಶದಿಂದ ದೂರ ಉಳಿದಿದ್ದ ಲಲಿತ್ ಮೋದಿ ಮತ್ತು ಸುಶ್ಮಿತಾ ಒಟ್ಟಿಗೆ ಬಂದಿದ್ದು ಹೇಗೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿತ್ತು….

Read More