ಕನ್ನಡದಲ್ಲೂ ಮಧುರ ಗೀತೆಗಳನ್ನು ಹಾಡಿದ್ದ ಖ್ಯಾತ ಗಾಯಕಿ ಸುಮನ್ ಕಲ್ಯಾಣ್‌ಪುರ್ ಇನ್ನಿಲ್ಲ
ಭಾರತೀಯ ಚಿತ್ರರಂಗದ ಪ್ರಸಿದ್ಧ ಗಾಯಕಿ ಸುಮನ್ ಕಲ್ಯಾಣ್‌ಪುರ್ ಅವರು ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮೇ 31ರಂದು ಮುಂಬೈನ ಲೋಖಂಡ್‌ವಾಲಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಆರು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಸಂಗೀತ ಲೋಕವನ್ನು ತಮ್ಮ ಸುಮಧುರ ಧ್ವನಿಯಿಂದ ಆಳಿದ್ದ ಖ್ಯಾತಿ ಇವರಿಗೆ ಇದೆ. ಸುಮನ್ ನಿರ್ಗಮನದೊಂದಿಗೆ ಸಂಗೀತ ಕ್ಷೇತ್ರದ ಅಪರೂಪದ ಕೊಂಡಿಯೊಂದು ಕಳಚಿದಂತಾಗಿದೆ. ಬಾಂಗ್ಲಾದೇಶದ ಢಾಕಾದಲ್ಲಿ ಜನಿಸಿ, ನಂತರ ಮುಂಬೈನಲ್ಲಿ ನೆಲೆಸಿದ್ದ ಸುಮನ್ ಕಲ್ಯಾಣ್‌ಪುರ್ ಅವರು ಹಿಂದಿ,…