Headlines

ತಾವು ಹೊಸ ಪಕ್ಷ ಕಟ್ಟುವ ವದಂತಿ ಬಗ್ಗೆ ಅಣ್ಣಾಮಲೈ ಹೇಳಿದ್ದೇನು?

ಚೆನ್ನೈ, ಜೂನ್ 02: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ ಅಣ್ಣಾಮಲೈ(K Annamalai) ಅವರು ಬಿಜೆಪಿಗೆ ರಾಜೀನಾಮೆ ನೀಡಿ ಹೊಸ ಪಕ್ಷವನ್ನು ಸ್ಥಾಪಿಸಲಿದ್ದಾರೆ ಎನ್ನುವ ವದಂತಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಈ ಊಹಾಪೋಹಗಳ ನಡುವೆಯೇ ಸೋಮವಾರ ನವದೆಹಲಿಗೆ ಹೊರಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಮತ್ತು ಮಾಧ್ಯಮಗಳು ಸ್ವಲ್ಪ ಸಮಯ ಕಾಯಬೇಕು ಎಂದು ವಿನಂತಿಸಿದ್ದಾರೆ. ದಯವಿಟ್ಟು ಸ್ವಲ್ಪ ದಿನ ಕಾಯಿರಿ, ಒಂದೆರಡು ದಿನಗಳಲ್ಲಿ ನಾವೆಲ್ಲರೂ ಒಟ್ಟಿಗೆ ಕುಳಿತು ಮಾತನಾಡೋಣ, ಆಗ ಎಲ್ಲವೂ ಸ್ಪಷ್ಟವಾಗುತ್ತದೆ…

Read More

Horoscope Today: ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಜೂನ್ 2, ಮಂಗಳವಾರದ ದ್ವಾದಶ ರಾಶಿಗಳ ಸಮಗ್ರ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ಬಿದಿಗೆ ತಿಥಿ, ಸಾಧ್ಯ ಯೋಗ, ಗರಜ ಕರಣ, ಮತ್ತು ಮೂಲಾ ನಕ್ಷತ್ರದ ವೈಶಿಷ್ಟ್ಯಗಳೊಂದಿಗೆ ಈ ದಿನದ ಫಲವನ್ನು ವಿವರಿಸಲಾಗಿದೆ. ಈ ದಿನ ರಾಹುಕಾಲವು ಮಧ್ಯಾಹ್ನ 3:29 ರಿಂದ ಸಂಜೆ 5:05 ರವರೆಗೆ ಇರಲಿದ್ದು, ಶುಭಕಾಲವು…

Read More

ಡಿಕೆ ಶಿವಕುಮಾರ್ ಸಂಪುಟ ಸೇರಲು ಆಕಾಂಕ್ಷಿಗಳ ಭರ್ಜರಿ ಲಾಬಿ, ದೆಹಲಿ ದಂಡಯಾತ್ರೆ: ಸ್ಪೀಕರ್ ಆಗಲು ನಾಯಕರ ಹಿಂದೇಟು

ಬೆಂಗಳೂರು, ಜೂನ್ 2: ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗುತ್ತಿದ್ದಂತೆಯೇ, ಇತ್ತ ಸಚಿವ ಸಂಪುಟ ಸೇರಲು ಆಕಾಂಕ್ಷಿ ಶಾಸಕರ ಭರ್ಜರಿ ಲಾಬಿ ಮತ್ತು ಕಸರತ್ತು ಶುರುವಾಗಿದೆ. ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಕಾಂಗ್ರೆಸ್ (Congress) ಶಾಸಕರು ಹಾಗೂ ಎಂಎಲ್‌ಸಿಗಳು ದೆಹಲಿಗೆ ದಂಡಯಾತ್ರೆ ನಡೆಸುತ್ತಿದ್ದು, ಹೈಕಮಾಂಡ್ ನಾಯಕರ ಕದ ತಟ್ಟುತ್ತಿದ್ದಾರೆ. ಪ್ರಾದೇಶಿಕ ಮತ್ತು ಸಮುದಾಯವಾರು ಲೆಕ್ಕಾಚಾರಗಳ ನಡುವೆ ಸಚಿವ ಸಂಪುಟ ರಚನೆ ಹೈಕಮಾಂಡ್‌ಗೆ ಕಬ್ಬಿಣದ ಕಡಲೆಯಾಗಿ ಮಾರ್ಣಪಟ್ಟಿದೆ. ಮತ್ತೊಂದೆಡೆ ಸಿದ್ದರಾಮಯ್ಯ ಹಾಗೂ…

Read More

ಶ್ರೀದೇವಿ ಹಾದಿಯಲ್ಲಿ ಸಾಗಿದ ಜಾನ್ವಿ ಕಪೂರ್; ಆ ಒಂದು ಕೆಲಸಕ್ಕೆ ಭಾರೀ ಮೆಚ್ಚುಗೆ

ಬಾಲಿವುಡ್‌ನ ಯುವ ನಟಿ ಜಾನ್ವಿ ಕಪೂರ್ (Janhvi Kapoor) ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸುವ ಪ್ರಯತ್ನದಲ್ಲಿ ಇದ್ದಾರೆ. ಸ್ಟಾರ್ ಹಿನ್ನೆಲೆಯಿಂದ ಬಂದರೂ ಸಹ ವೃತ್ತಿಜೀವನದ ಆರಂಭದಲ್ಲೇ ಸಾಕಷ್ಟು ಏಳು-ಬೀಳುಗಳನ್ನು ಕಂಡಿರುವ ಅವರು, ಸದ್ಯ ತಮ್ಮ ಸಿನಿಮಾಗಳ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿದ್ದಾರೆ. ಸದ್ಯಕ್ಕೆ ಜಾನ್ವಿ ಅವರ ಸಂಪೂರ್ಣ ಗಮನ ಪ್ಯಾನ್-ಇಂಡಿಯಾ ಸಿನಿಮಾಗಳ ಮೇಲಿದ್ದು, ದಕ್ಷಿಣ ಭಾರತದತ್ತ ಹೆಜ್ಜೆ ಇಟ್ಟಿದ್ದಾರೆ. ಅವರು ಶ್ರೀದೇವಿ ಹಾದಿಯಲ್ಲೇ ಸಾಗುತ್ತಿದ್ದಾರೆ. ರಾಮ್ ಚರಣ್ ಹಾಗೂ ಜಾನ್ವಿ ಕಪೂರ್ ನಟನೆಯ ಬಹುನಿರೀಕ್ಷಿತ ತೆಲುಗು ಸಿನಿಮಾ…

Read More

Daily Devotional: ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಹಿಂದೂ ನಂಬಿಕೆಗಳ ಪ್ರಕಾರ, ಮನೆಯಲ್ಲಿ ಹಾಲು ಅಥವಾ ಎಣ್ಣೆ ಚೆಲ್ಲುವುದಕ್ಕೆ ವಿಶೇಷ ಅರ್ಥವಿದೆ. ಪದೇ ಪದೇ ಹಾಲು ಆಕಸ್ಮಿಕವಾಗಿ ಚೆಲ್ಲಿದರೆ ಅದನ್ನು ಶುಭ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದು ಸಮೃದ್ಧಿ, ದೈವಬಲ, ಗ್ರಹಬಲ ವೃದ್ಧಿ ಮತ್ತು ಅದೃಷ್ಟದ ಆಗಮನವನ್ನು ಸೂಚಿಸುತ್ತದೆ. ಹಾಲು ಚಂದ್ರನ ಪ್ರತೀಕವಾಗಿದ್ದು, ವಿಷ್ಣು ಅನುಗ್ರಹವನ್ನು ತರುತ್ತದೆ. ಗೃಹ ಪ್ರವೇಶಗಳಲ್ಲಿ ಹಾಲು ಉಕ್ಕಿಸುವುದು ಇದೇ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಆರ್ಥಿಕ ಭಯ ಎದುರಿಸಲಾಗದು

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಮಂಗಳ ಪಕ್ಷ : ಕೃಷ್ಣ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಮೂಲಾ, ಯೋಗ : ಸಿದ್ಧ, ಕರಣ : ಗರಜ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 48 pm, ಇಂದಿನ ಶುಭಾಶುಭ ಕಾಲ : ರಾಹು…

Read More

IPL 2026: ಅತಿ ಹೆಚ್ಚು ಪಂದ್ಯ ಶ್ರೇಷ್ಠ; ಅಗ್ರಸ್ಥಾನಕ್ಕೇರಿದ ವಿರಾಟ್ ಕೊಹ್ಲಿ

ಅಹಮದಾಬಾದ್‌ನಲ್ಲಿ ನಡೆದ ಐಪಿಎಲ್ 2026 ರ ಫೈನಲ್‌ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ನೀಡಿದ 155 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ಪರ 37 ವರ್ಷದ ವಿರಾಟ್ ಕೊಹ್ಲಿ ಅಜೇಯ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಸತತ ಎರಡನೇ ಐಪಿಎಲ್ ಟ್ರೋಫಿಗೆ ಮುನ್ನಡೆಸಿದರು. ಕೊಹ್ಲಿಯ ಈ ಅಜೇಯ ಆಟಕ್ಕಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತು. ಆರಂಭಿಕನಾಗಿ ಬಂದು ಕೊನೆಯವರೆಗೂ ಅಜೇಯರಾಗಿ ಉಳಿದ ವಿರಾಟ್ ಕೊಹ್ಲಿ 42 ಎಸೆತಗಳಲ್ಲಿ 75 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು. ಅವರ…

Read More

ವಿಚ್ಛೇದನ ಸಿಗೋ ತನಕ ಸಿನಿಮಾ ಮಾಡಲ್ಲ ಅಂತ ಹೇಳಿ ಈಗ ಉಲ್ಟಾ ಹೊಡೆದ ಜಯಂ ರವಿ

ಪತ್ನಿ ಆರತಿ ಅವರಿಂದ ವಿಚ್ಛೇದನ ಪಡೆಯುವವರೆಗೂ ಚಿತ್ರರಂಗದಿಂದ ದೂರ ಉಳಿಯುವುದಾಗಿ ಘೋಷಿಸಿದ್ದ ತಮಿಳು ನಟ ಜಯಂ ರವಿ (Jayam Ravi), ಈಗ ಚಿತ್ರಪ್ರೇಮಿಗಳಿಗೆ ಭರ್ಜರಿ ಸರ್ಪ್ರೈಸ್ ನೀಡಿದ್ದಾರೆ. ಖ್ಯಾತ ನಿರ್ದೇಶಕ ಲೋಕೇಶ್ ಕನಕರಾಜ್ ಅವರ ಸಿನಿಮಾ ಯೂನಿಮ್ಯಾಟಿಕ್ ಯೂನಿವರ್ಸ್ (LCU) ಸೇರುವ ಮೂಲಕ ಜಯಂ ರವಿ ಚಿತ್ರರಂಗಕ್ಕೆ ಭರ್ಜರಿ ಕಮ್‌ಬ್ಯಾಕ್ ಮಾಡುತ್ತಿದ್ದಾರೆ. ಲೋಕೇಶ್ ಕನಕರಾಜ್ ಪ್ರಸ್ತುತಪಡಿಸುತ್ತಿರುವ ‘ಬೆಂಜ್’ (Benz) ಚಿತ್ರಕ್ಕೆ ಜಯಂ ರವಿ (ರವಿ ಮೋಹನ್) ಆಯ್ಕೆಯಾಗಿದ್ದಾರೆ. ಜಯಂ ರವಿ ಅವರು ಲೋಕೇಶ್ ಸಿನಿಮ್ಯಾಟಿಕ್ ಯೂನಿವರ್ಸ್​ನ ಭಾಗವಾಗಿರುವುದು…

Read More

ಹವಾಮಾನ ಬದಲಾವಣೆ ಕೀಲು ನೋವಿನ ಹೆಚ್ಚಳಕ್ಕೆ ಕಾರಣವಾಗುತ್ತಾ? ತಡೆಗಟ್ಟಲು ಏನು ಮಾಡಬಹುದು?

ಇತ್ತೀಚೆಗೆ ದೇಶದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ನಿರಂತರ ಬದಲಾವಣೆ ಕಂಡುಬರುತ್ತಿದೆ. ಕೆಲವೊಮ್ಮೆ ಮಳೆ, ಮತ್ತೆ ಕೆಲವೊಮ್ಮೆ ಬಿಸಿಲು ಮತ್ತು ತಾಪಮಾನದಲ್ಲಿನ ಏರಿಳಿತಗಳು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿವೆ. ವಿಶೇಷವಾಗಿ ಕೀಲು ನೋವು (Joint Pain) ಮತ್ತು ಸಂಧಿವಾತ ಸಮಸ್ಯೆಯಿಂದ ಬಳಲುತ್ತಿರುವವರಲ್ಲಿ ಹವಾಮಾನ ಬದಲಾದಾಗ ನೋವು ಮತ್ತು ಬಿಗಿತ ಹೆಚ್ಚಾಗಿ ಕಂಡುಬರುತ್ತಿದೆ. ಈ ಸಮಸ್ಯೆ ಎಲ್ಲರಿಗೂ ಒಂದೇ ರೀತಿಯಾಗಿ ಕಂಡುಬರುವುದಿಲ್ಲವಾದರೂ ನಿರ್ಲಕ್ಷ್ಯ ಮಾಡಬಾರದು ಎಂದು ವೈದ್ಯರು ಹೇಳುತ್ತಾರೆ. ಹಾಗಾದರೆ ಹವಾಮಾನ ಬದಲಾವಣೆಗೂ ಕೀಲು ನೋವಿಗೂ ಏನು ಸಂಬಂಧ,…

Read More

ಹೈಕಮಾಂಡ್ ಕೈ ಸೇರಿದ ಮೊದಲ ಹಂತದ ಪಟ್ಟಿ: ಇಲ್ಲಿದೆ ಡಿಕೆಶಿ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ವಿವರ

ಬೆಂಗಳೂರು, (ಜೂನ್ 01): ರಾಜ್ಯ ರಾಜಕಾರಣದಲ್ಲಿ (Karnataka Politics) ಅಧಿಕಾರ ಹಸ್ತಾಂತರ ಪ್ರಕ್ರಿಯೆ ಸಲೀಸಾಗಿ ಆಗಿದೆ. ಸಿದ್ದರಾಮಯ್ಯ (Siddaramaiah) ಹಾಗೂ ಡಿ.ಕೆ. ಶಿವಕುಮಾರ್ (Dk Shivakumar) ಯಾವುದೇ ಗೊಂದಲ, ಗಲಾಟೆ ಪವರ್ ಶೇರ್ ಮಾಡಿಕೊಂಡಿದ್ದಾರೆ. ಕುರ್ಚಿ ಬದಲಾಗುವ ಮೊದಲು ಹಾಗೂ ಬಳಿಕವೂ ತಾವು ಜೋಡೆತ್ತು ಅಂತ್ಲೇ ಬಿಂಬಿಸಿಕೊಳ್ತಿದ್ದಾರೆ. ಆದ್ರೆ ಅಧಿಕಾರ ಹಸ್ತಾಂತರದ ಕಗ್ಗಂಟು ಬಿಡಿಸುವಲ್ಲಿ ಯಶಸ್ವಿಯಾದ ಹೈಕಮಾಂಡ್​ಗೆ ಈಗ ಸರ್ಕಾರ ರಚನೆಯ ಸರ್ಕಸ್ ಶುರುವಾಗಿದೆ. ಸಚಿವ ಸಂಪುಟದಲ್ಲಿ ಯಾರನ್ನ ಸೇರಿಸ್ಬೇಕು? ಸಿದ್ದರಾಮಯ್ಯ ಸಂಪುಟದಲ್ಲಿದ್ದ ಇನ್ಯಾರನ್ನ ಕೈಬಿಡಬೇಕು ಅನ್ನೋ…

Read More