ಟ್ರಂಪ್ ಸಂಧಾನ ಯಶಸ್ವಿ: ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ಶಾಂತಿ ಒಪ್ಪಂದ, ಮಿಲಿಟರಿ ಕಾರ್ಯಾಚರಣೆ ಸ್ಥಗಿತ
ವಾಷಿಂಗ್ಟನ್, ಜೂನ್ 02: ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಮಹತ್ವದ ರಾಜತಾಂತ್ರಿಕ ಯಶಸ್ಸು ಸಿಕ್ಕಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ತೀವ್ರ ಪ್ರಯತ್ನಗಳ ಫಲವಾಗಿ, ಇಸ್ರೇಲ್ ಮತ್ತು ಹಿಜ್ಬುಲ್ಲಾ ಸಂಘಟನೆಗಳು ಪರಸ್ಪರ ದಾಳಿಗಳನ್ನು ನಿಲ್ಲಿಸಲು ಒಪ್ಪಿಕೊಂಡಿವೆ. ಲೆಬನಾನ್‌ನಲ್ಲಿ ಇಸ್ರೇಲ್ ನಡೆಸುತ್ತಿರುವ ಸರಣಿ ಮಿಲಿಟರಿ ದಾಳಿಗಳು ಮತ್ತು ನಾಗರಿಕ ಸಾವುನೋವುಗಳ ಕುರಿತು ಅಮೆರಿಕದ ಅಧಿಕಾರಿಗಳು ಆರಂಭದಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ್ದರು. ಇಸ್ರೇಲ್ ಕ್ರಮಗಳು ಇರಾನ್ ಜೊತೆಗಿನ ಅಮೆರಿಕದ ಮಾತುಕತೆಗಳಿಗೆ ಅಡ್ಡಿಪಡಿಸುತ್ತವೆ ಎಂದು ಟ್ರಂಪ್ ಅವರು ಇಸ್ರೇಲ್…