Headlines

ಈ ವರ್ಷ ಟೀಂ ಇಂಡಿಯಾ ಯಾವೆಲ್ಲ ತಂಡಗಳ ವಿರುದ್ಧ ಸೆಣಸಲಿದೆ? ಇಲ್ಲಿದೆ ವಿವರ

19ನೇ ಆವೃತ್ತಿಯ ಐಪಿಎಲ್ (IPL 2026)​ ಮುಕ್ತಾಯಗೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿಯನ್ನು ಎತ್ತಿಹಿಡಿಯುವ ಮೂಲಕ ತಮ್ಮ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡಿದೆ. ಸುಮಾರು 2 ತಿಂಗಳಿಗೂ ಹೆಚ್ಚಿನ ಕಾಲ ನಡೆದ ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಟೀಂ ಇಂಡಿಯಾದ (Team India) ಎಲ್ಲಾ ಆಟಗಾರರು ಭಾಗವಹಿಸಿದ್ದರು. ಹೀಗಾಗಿ ಈ ಸಮಯದಲ್ಲಿ ಭಾರತ ತಂಡ ಯಾವುದೇ ಅಂತರರಾಷ್ಟ್ರೀಯ ಸರಣಿಗಳನ್ನು ಆಡಲಿಲ್ಲ. ಇದೀಗ ಐಪಿಎಲ್ ಮುಗಿದಿದ್ದು, ಟೀಂ ಇಂಡಿಯಾ ಕೂಡ ಅಂತರರಾಷ್ಟ್ರೀಯ…

Read More

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚನಿಗೆ ನೀಡಲಾಗಿದೆ ಟ್ರಿಬ್ಯೂಟ್; ಇದು ಪ್ರಿಯಾ ಸುದೀಪ್ ಸರ್ಪ್ರೈಸ್

ಕಿಚ್ಚ ಸುದೀಪ್ (Kichcha Sudeep) ಅವರ ಪತ್ನಿ ಪ್ರಿಯಾ ಅವರು ಮೊದಲ ಬಾರಿಗೆ ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ‘ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ’ ಬ್ಯಾನರ್ ಮೂಲಕ ಅವರು ‘ಮ್ಯಾಂಗೋ ಪಚ್ಚ’ (Mango Pachcha) ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಟಿವಿ9 ವಿಶೇಷ ಸಂದರ್ಶನದಲ್ಲಿ ಅವರು ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ‘ಸುದೀಪ್ ಅವರಿಗೆ ಸಣ್ಣ ಟ್ರಿಬ್ಯೂಟ್ ರೀತಿ ಈ ಸಿನಿಮಾದಲ್ಲಿ ತೋರಿಸಬೇಕು ಎಂಬ ಆಸೆ ನನಗೆ ಇತ್ತು. ಆ ಬಗ್ಗೆ ನಾನು ಮತ್ತು ಸಂಚಿತ್ ಮಾತನಾಡಿಕೊಂಡ್ವಿ. ಸಿನಿಮಾದ ಎಲ್ಲೋ ಒಂದು ಸಣ್ಣ…

Read More

ಸಿದ್ದರಾಮಯ್ಯ ಪುತ್ರನಿಗೆ ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಬೆಂಗಳೂರು, (ಜೂನ್ 01): ಡಿ.ಕೆ. ಶಿವಕುಮಾರ್​ ಅವರು ಇದೇ ಜೂನ್ 03ರಂದು ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದ್ರೆ, ಡಿಕೆ ಶಿವಕುಮಾರ್ ಜೊತೆ ಕೆಲವರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಹೀಗಾಗಿ ಸಚಿವರು ಆಗುವ ಶಾಸಕರು ಯಾರ್ಯಾರು ಎನ್ನುವುದೇ ಕುತೂಹಲ ಮೂಡಿಸಿದೆ. ಇನ್ನೊಂದೆಡೆ ಮಂತ್ರಿ ಸ್ಥಾನಕ್ಕೆ ಶಾಸಕರು ಭರ್ಜರಿ ಲಾಬಿ ನಡೆಸಿದ್ದಾರೆ. ಹೌದು.. ಬೀದರ್​ನಿಂದ ಹಿಡಿದು ಚಾಮರಾಜನಗರದವರೆಗೆ ಮಂತ್ರಿಗಿರಿಗಾಗಿ ಪೈಪೋಟಿ ಶುರುವಾಗಿದೆ. ಸಿದ್ದರಾಮಯ್ಯರ ಸಂಪುಟದಲ್ಲಿ ಇದ್ದ, ಕೆಲವರಿಗೆ ಪಟ್ಟ ಕೈತಪ್ಪಿ ಹೋಗೋ ಆತಂಕವೂ ಕಾಡುತ್ತಿದೆ. ಹೀಗಾಗಿ ಅನೇಕರು…

Read More

ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಮೂರು ದಿನದ ಕಂದಮ್ಮನಿಗೆ ಮರುಜೀವ ನೀಡಿದ ಆ್ಯಂಬುಲೆನ್ಸ್ ಸಿಬ್ಬಂದಿ

ಹೈದರಾಬಾದ್, ಜೂನ್ 01: ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಮೂರು ದಿನದ ಮಗುವಿಗೆ ತುರ್ತು ಚಿಕಿತ್ಸೆ ನೀಡಿ ಆ್ಯಂಬುಲೆನ್ಸ್ ಸಿಬ್ಬಂದಿ ಜೀವ ಉಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಗುವಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದ ಹಿನ್ನಲೆ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್‌ನ ಆಸ್ಪತ್ರೆಗೆ ರೆಫರ್ ಮಾಡಿದ್ದರು ಅದಕ್ಕಾಗಿ ಮಗುವನ್ನು ಕರೆದೊಯ್ಯುವಾಗ ಶಿಶು ಚಿಂತಾಜನಕ ಸ್ಥಿತಿಗೆ ತಲುಪಿತ್ತು ಕೂಡಲೇ ಎಚ್ಚೆತ್ತ ಆ್ಯಂಬುಲೆನ್ಸ್ ಸಿಬ್ಬಂದಿ ಸಿಪಿಆರ್ (CPR) ನೀಡಿ ಜೀವ ಉಳಿಸಿದ್ದಾರೆ. ಘಟನೆ ಏನು? ವಿಕಾರಾಬಾದ್ ಜಿಲ್ಲೆಯ ಕೊಡಂಗಲ್ ಕ್ಷೇತ್ರದ ತುಂಕಿಮೆಟ್ಲ…

Read More

ಪರಮೇಶ್ವರ್, ರಾಜಣ್ಣಗೆ ಗೌರವ ಡಾಕ್ಟರೇಟ್ ನೀಡದಿರಲು ತುಮಕೂರು ವಿವಿ ನಿರ್ಧಾರ

ತುಮಕೂರು, ಜೂನ್​ 01: ತುಮಕೂರು ವಿಶ್ವವಿದ್ಯಾಲಯದ (Tumkur University) 19ನೇ ಘಟಿಕೋತ್ಸವವು ಜೂನ್ 3ರಂದು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದ್ದು, ಈ ಬಾರಿ ಸಕ್ರಿಯ ರಾಜಕಾರಣಿಗಳಿಗೆ ಗೌರವ ಡಾಕ್ಟರೇಟ್ (Honorary Doctorate) ನೀಡದಿರಲು ವಿವಿಯ ಪರಿಶೀಲನಾ ಸಮಿತಿ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆ ಮಾಜಿ ಸಚಿವರಾದ ಡಾ. ಜಿ. ಪರಮೇಶ್ವರ್ ಹಾಗೂ ಕೆ. ಎನ್. ರಾಜಣ್ಣಗೆ ಗೌರವ ಡಾಕ್ಟರೇಟ್​ ನೀಡದಿರಲು ನಿರ್ಧರಿಸಲಾಗಿದೆ ಎಂದು ತುಮಕೂರು ವಿವಿ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತಿಳಿಸಿದ್ದಾರೆ. ಮುಖ್ಯಾಂಶಗಳು ತುಮಕೂರು ವಿವಿ…

Read More

ಆಫ್ರಿಕಾದಿಂದ ಬಂದ ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಕುಂಟಾ: 1 ದಿನಕ್ಕೆ 4 ಲಕ್ಷ ರೂಪಾಯಿ ಸಂಬಳ

ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅವರು ಬಹುನಿರೀಕ್ಷಿತ ‘ಪೆದ್ದಿ’ (Peddi) ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಹಲವು ದಿನಗಳ ವಿಳಂಬದ ನಂತರ ಈ ಸಿನಿಮಾ ಕೊನೆಗೂ ಜೂನ್ 4ರಂದು ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಪ್ರಚಾರದ ವೇಳೆ ರಾಮ್ ಚರಣ್ (Ram Charan) ಅವರ ರಗಡ್ ಲುಕ್ ಮತ್ತು ಲಾಂಗ್ ಹೇರ್ ಸ್ಟೈಲ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸೌಂಡ್ ಮಾಡುತ್ತಿದ್ದರೆ, ಅವರ ಜೊತೆಗಿರುವ ಬಾಡಿಗಾರ್ಡ್ ಕೆವಿನ್ ಕುಂಟಾ (Kevin Kunta) ಕೂಡ ಎಲ್ಲರ…

Read More

IPL 2026 Final: ಕರ್ನೂಲ್​ನಲ್ಲಿ ಆರ್​ಸಿಬಿ ಫ್ಯಾನ್ಸ್ ಅತಿರೇಕ; ಬಸ್ ಮೇಲೆ ಕಲ್ಲು ತೂರಾಟ

2025 ರ ಐಪಿಎಲ್‌ನಲ್ಲಿ ಆರ್​ಸಿಬಿ ಚಾಂಪಿಯನ್‌ ಆದ ಬಳಿಕ ರಾಜ್ಯಾದ್ಯಂತ ಕೋಟ್ಯಾಂತರ ಅಭಿಮಾನಿಗಳು ರಸ್ತೆಗಳಿದು ಸಂಭ್ರಮಾಚರಣೆ ನಡೆಸಿದರು. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಗಳಾಗಿದ್ದವು. ಹೀಗಾಗಿ ಈ ಬಾರಿ ಆ ರೀತಿಯ ಘಟನೆಗಳು ನಡೆಯುವುದನ್ನು ತಡೆಯುವ ಸಲುವಾಗಿ ರಾಜ್ಯದಲ್ಲಿ ಬಿಗ್ ಬಂದೋಬಸ್ತ್ ಮಾಡಲಾಗಿತ್ತು. ಹೀಗಾಗಿ ಈ ಬಾರಿ ರಾಜ್ಯದಲ್ಲಿ ಆ ರೀತಿಯ ಅಹಿತಕರ ಘಟನೆಗಳು ಯಾವು ನಡೆಯಲಿಲ್ಲ. ಆದರೆ ಪಕ್ಕದ ರಾಜ್ಯ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಆರ್​ಸಿಬಿ ಫ್ಯಾನ್ಸ್​ಗಳ ಅತಿರೇಕದಿಂದಾಗಿ ಸಾರ್ವಜನಿಕರು ತೊಂದರೆಗೊಳಗಾಗಿದ್ದಾರೆ. ಮಾತ್ರವಲ್ಲದೆ ಅಭಿಮಾನಿಗಳ ಸಂಭ್ರಮಾಚರಣೆ ಹಿಂಸಾತ್ಮಕವಾಗಿ…

Read More

ಜಿಲ್ಲಾ ಕೇಂದ್ರದ ಲೈಬ್ರರಿಗಳಿಗೂ ಟಕ್ಕರ್ ನೀಡುವಂತಿದೆ ಪುಟ್ಟ ಹಳ್ಳಿಯ ಹೈಟೆಕ್ ಗ್ರಂಥಾಲಯ: ಏನೇನಿದೆ ಗೊತ್ತಾ?

ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ತಾಲೂಕಿನ ಶ್ರೀಮಂಡಲ ಎಂಬ ಪುಟ್ಟ ಗ್ರಾಮದಲ್ಲಿ ಈಗೊಂದು ಹೈಟೆಕ್ ಡಿಜಿಟಲ್ ಲೈಬ್ರರಿ ನಿರ್ಮಾಣವಾಗಿದೆ. ಮಕ್ಕಳ ಓದಿಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಆಧುನಿಕ ಸೌಲಭ್ಯಗಳನ್ನು ಇಲ್ಲಿ ಕಲ್ಪಿಸಲಾಗಿದೆ. ಗ್ರಾಮ ಮಟ್ಟದ ಈ ಗ್ರಂಥಾಲಯವು ಜಿಲ್ಲಾ ಕೇಂದ್ರದ ದೊಡ್ಡ ದೊಡ್ಡ ಲೈಬ್ರರಿಗಳನ್ನೇ ಮಿರಿಸುವಂತಿದ್ದು, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಆಸರೆಯಾಗಿದೆ. ಬೀದರ್​ ತಾಲೂಕಿನ ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ಶ್ರೀಮಂಡಲ ಗ್ರಾಮದ ಬಡ ವಿದ್ಯಾರ್ಥಿಗಳಿಗೆ ಪ್ರತಿದಿನ ತಾಲೂಕು ಕೇಂದ್ರವಾದ ಬೀದರ್…

Read More

Chanakya Niti: ಈ ಐದು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಪಡುವುದು ತರವಲ್ಲ

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ನಿರ್ಧಾರ ತೆಗೆದುಕೊಳ್ಳುವಿಕೆಯ ಬಗ್ಗೆ ಕೆಲವು ಸಂಗತಿಗಳನ್ನು ವಿವರಿಸಿದ್ದಾರೆ.  ನಾವು ಕೆಲವೊಮ್ಮೆ ತಾಳ್ಮೆಯನ್ನು ವಹಿಸದೆ  ಆತುರದಿಂದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಇದರಿಂದಾಗಿ ಭವಿಷ್ಯದಲ್ಲಿ ಕೆಟ್ಟ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. ಜೊತೆಗೆ ಈ ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ, ಕೆಲಸಗಳನ್ನು ಮಾಡುವಾಗ ತುಂಬಾನೇ ತಾಳ್ಮೆಯನ್ನು ವಹಿಸಬೇಕು, ಚಿಂತಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಇಲ್ಲದಿದ್ದರೆ ಭವಿಷ್ಯವೇ ಹಾಳಾಗುತ್ತದೆ ಎಂದು ಎಂದಿದ್ದಾರೆ. ಹಾಗಿದ್ರೆ ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಪಡಬಾರದು ಎಂಬುದನ್ನು ನೋಡೋಣ ಬನ್ನಿ. ಈ…

Read More

ಜೂನ್​ನಲ್ಲಿ ಪ್ಯಾನ್ ಕಾರ್ಡ್, ಯುಪಿಐ, ಅಡ್ವಾನ್ಸ್ ಟ್ಯಾಕ್ಸ್ ಇತ್ಯಾದಿ ಪ್ರಮುಖ ಬದಲಾವಣೆಗಳನ್ನು ಗಮನಿಸಿ

ನವದೆಹಲಿ, ಜೂನ್ 1: ಹೊಸ ತಿಂಗಳು ಆರಂಭವಾಗುತ್ತಿದ್ದಂತೆ ದೇಶದಲ್ಲಿ ಸಾಮಾನ್ಯ ಜನರ ಜೇಬಿನ ಮೇಲೆ ನೇರ ಪರಿಣಾಮ ಬೀರುವ ಹಲವು ಪ್ರಮುಖ ಆರ್ಥಿಕ ಮತ್ತು ಬ್ಯಾಂಕಿಂಗ್ ನಿಯಮಗಳು (Financial and Banking rules) ಬದಲಾಗಿವೆ. ಆದಾಯ ತೆರಿಗೆ ಸಲ್ಲಿಕೆದಾರರಿಂದ ಹಿಡಿದು ಸಾಮಾನ್ಯ ಯುಪಿಐ (UPI) ಬಳಕೆದಾರರವರೆಗೆ ಪ್ರತಿಯೊಬ್ಬರೂ ತಿಳಿಯಲೇಬೇಕಾದ ಪ್ರಮುಖ 5 ಬದಲಾವಣೆಗಳ ವಿವರ ಇಲ್ಲಿದೆ: ಪ್ಯಾನ್ ಕಾರ್ಡ್ ನಿಯಮ ಸರಳೀಕರಣ ಕೇಂದ್ರ ಸರ್ಕಾರವು ಪ್ಯಾನ್ ಕಾರ್ಡ್ (PAN Card) ವಿತರಣಾ ಪ್ರಕ್ರಿಯೆಯನ್ನು ಮತ್ತಷ್ಟು ವೇಗಗೊಳಿಸಲು ಮತ್ತು…

Read More