ಹಿಜಾಬ್ Vs ಕೇಸರಿ ಸಂಘರ್ಷ: ಹಿಂದೂಪರ ಸಂಘಟನೆಗಳಿಂದ ಹುಬ್ಬಳ್ಳಿಯ ಅನೇಕ ಕಡೆ ಕೇಸರಿ ಶಾಲು ವಿತರಣೆ
ಹಿಂದೂಪರ ಸಂಘಟನೆಗಳಿಂದ ಕೇಸರಿ ಶಾಲು ವಿತರಣೆImage Credit source: tv9 ಹುಬ್ಬಳ್ಳಿ, ಜೂನ್ 1: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ (Hijab) ಧರಿಸಲು ಕಾಂಗ್ರೆಸ್ ಸರ್ಕಾರ ಅವಕಾಶ ಕಲ್ಪಿಸಿರುವುದನ್ನು ವಿರೋಧಿಸಿ ಹಿಂದೂಪರ ಸಂಘಟನೆಗಳು ಮತ್ತೊಮ್ಮೆ ಪ್ರತಿಭಟನೆಯ ಹಾದಿ ಹಿಡಿದಿವೆ. ಇಂದಿನಿಂದ ಹೊಸ ಶೈಕ್ಷಣಿಕ ವರ್ಷದ ಶಾಲಾ-ಕಾಲೇಜುಗಳು ಆರಂಭವಾಗಿದ್ದು, ಸರ್ಕಾರದ ಆದೇಶಕ್ಕೆ ಕೌಂಟರ್ ನೀಡಲು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹುಬ್ಬಳ್ಳಿ (Hubballi) ನಗರದ ಪ್ರಮುಖ ಕಾಲೇಜುಗಳ ಮುಂಭಾಗದಲ್ಲಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಿದ್ದಾರೆ. ಈ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣವೇ…