ಪ್ರತಿದಿನ ಎಷ್ಟು ಹಾಲು ಕುಡೀತಿಯಾ? ವೈಭವ್ ಸೂರ್ಯವಂಶಿ ಉತ್ತರ ಹೀಗಿತ್ತು!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಸಂಚಲನ ಸೃಷ್ಟಿಸಿದ್ದ ವೈಭವ್ ಸೂರ್ಯವಂಶಿ ಈ ಬಾರಿ ಬರೋಬ್ಬರಿ 5 ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದರಲ್ಲೂ ಈ ಬಾರಿಯ ಐಪಿಎಲ್ನ ರನ್ ಸರದಾರನಾಗಿ ಹೊರಹೊಮ್ಮಿದ ವೈಭವ್ 15ನೇ ವಯಸ್ಸಿನಲ್ಲೇ ಆರೆಂಜ್ ಕ್ಯಾಪ್ ಮುಡಿಗೇರಿಸಿಕೊಂಡಿದ್ದಾರೆ. ಹಾಗೆಯೇ ಐಪಿಎಲ್ ಸೀಸನ್-19ರ ಅತ್ಯಂತ ಮೌಲ್ಯಯುತ ಆಟಗಾರನೆಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಈ ಪ್ರಶಸ್ತಿ ಸ್ವೀಕರಿಸಿದ ಬಳಿಕ ರವಿಶಾಸ್ತ್ರಿ ನಡೆಸಿದ ಚಿಟ್ ಚಾಟ್ನಲ್ಲಿ ಮಾತನಾಡಿದ ವೈಭವ್ ಸೂರ್ಯವಂಶಿ, “ಇಷ್ಟೊಂದು ಪ್ರಶಸ್ತಿ ಸಿಕ್ಕಿರುವುದು ನಿಜಕ್ಕೂ ಹೆಮ್ಮೆ ಅನಿಸುತ್ತಿದೆ….