Category Archives: Blog

Your blog category

ದೆಹಲಿ: ಮೂವರು ಅಪ್ರಾಪ್ತರಿಂದ 6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – Kannada News | Delhi Police Detain Three Youths Over Assault on Six Year Old Girl

ನವದೆಹಲಿ, ಜನವರಿ 28: ಆರು ವರ್ಷದ ಬಾಲಕಿ(Girl) ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯ ಭಜನ್‌ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. 10, 13 ಮತ್ತು 14 ವರ್ಷ ವಯಸ್ಸಿನ ಮೂವರು ಅಪ್ರಾಪ್ತ ಬಾಲಕರು ಈ ಅತ್ಯಾಚಾರವೆಸಗಿದ್ದಾರೆ.

ಆರೋಪಿಗಳಲ್ಲಿ ಇಬ್ಬರು ಬಾಲಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ಮೂರನೆಯವನು ಪರಾರಿಯಾಗಿದ್ದಾನೆ. ಮೂರನೇ ಆರೋಪಿಯ ಕುಟುಂಬ ಕೂಡ ನಾಪತ್ತೆಯಾಗಿದೆ.

ಈ ಘಟನೆ ಜನವರಿ 18 ರ ಮಂಗಳವಾರ ನಡೆದಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಂತರ ಹುಡುಗಿಯ ಕುಟುಂಬವು ಪೊಲೀಸರಿಗೆ ದೂರು ನೀಡಿತ್ತು. ಮೂವರು ಹುಡುಗರು ಹುಡುಗಿಯನ್ನು ಆಮಿಷವೊಡ್ಡಿ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಪೊಲೀಸರ ಪ್ರಕಾರ, ಆರೋಪಿಗಳನ್ನು ಗುರುತಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಒಬ್ಬ ಪರಾರಿಯಾಗಿದ್ದಾನೆ. ಇಬ್ಬರು ಆರೋಪಿಗಳನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದ್ದು, ಅಗತ್ಯ ಆರೈಕೆ ಮತ್ತು ಸಮಾಲೋಚನೆ ಒದಗಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಹೇಳಿಕೆಯನ್ನು ದಾಖಲಿಸಲಾಗಿದೆ. ಪ್ರಕರಣದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಮೂರನೇ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.

ಮೂರನೇ ಆರೋಪಿಯನ್ನು ಪತ್ತೆ ಹಚ್ಚಲು ಶೋಧ ತಂಡವನ್ನು ರಚಿಸಲಾಗಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಶೀಘ್ರದಲ್ಲೇ ಮೂರನೇ ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ದೇಶದಲ್ಲಿ ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರದ ವಿರುದ್ಧ ಕಠಿಣ ಕಾನೂನುಗಳಿವೆ, ಆದರೂ ಈ ಅಪರಾಧಗಳು ನಿರಂತರವಾಗಿ ನಡೆಯುತ್ತಿವೆ ಎಂಬುದು ಗಮನಿಸಬೇಕಾದ ಸಂಗತಿ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ಜನ ನಾಯಗನ್’ ವಿಳಂಬಂದಿಂದ ‘ಟಾಕ್ಸಿಕ್’,‘ಕೆಡಿ’ಗೆ ದೊಡ್ಡ ಹೊಡೆತ? – Kannada News | Jana Nayagan Delay: How KVN Productions Toxic and KD Releases Face Major Setbacks

‘ಜನ ನಾಯಗನ್’ ಚಿತ್ರಕ್ಕೆ (Jana Nayagan) ಕೋರ್ಟ್​ನಲ್ಲಿ ಸಾಕಷ್ಟು ಹಿನ್ನಡೆ ಆಗುತ್ತಲೇ ಇದೆ. ಜನವರಿ 9ರಂದೇ ಚಿತ್ರ ರಿಲೀಸ್ ಆಗಬೇಕಿತ್ತು. ಆದರೆ, ಸೆನ್ಸಾರ್ ಪ್ರಮಾಣಪತ್ರ ವಿಷಯದಲ್ಲಿ ಆದ ತೊಂದರೆಯಿಂದ ಸಿನಿಮಾ ರಿಲೀಸ್ ವಿಳಂಬ ಆಗುತ್ತಿದೆ. ಈ ಪ್ರಕರಣ ಇನ್ನೂ ಕೋರ್ಟ್​​ನಲ್ಲೇ ಇದೆ. ‘ಜನ ನಾಯಗನ್’ ಚಿತ್ರದ ವಿಳಂಬವು ‘ಟಾಕ್ಸಿಕ್’ ಹಾಗೂ ‘ಕೆಡಿ’ ಸಿನಿಮಾ ಪ್ರಚಾರದ ಮೇಲೆ ನೇರ ಪರಿಣಾಮ ಬೀರೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ. ‘ಕೆಡಿ’ ರಿಲೀಸ್​​ಗೂ ತೊಂದರೆ ತಂದೊಡ್ಡಬಹುದು ಎಂಬ ಆತಂಕ ಮೂಡಿದೆ.

ವಿಜಯ್ ಅವರ ವೃತ್ತಿ ಜೀವನದ ಕೊನೆಯ ಸಿನಿಮಾ ಆಗಿ ‘ಜನ ನಾಯಗನ್’ ರಿಲೀಸ್ ಆಗುತ್ತಿದೆ. ಇದು ಬಾಲಯ್ಯ ಅವರ ತೆಲುಗಿನ ‘ಭಗವಂತ ಕೇಸರಿ’ ಚಿತ್ರದ ರಿಮೇಕ್. ಇದರಲ್ಲಿ ರಾಜಕೀಯ ವಿಷಯ ಕೂಡ ಇದೆ. ವಿಜಯ್ ಕೂಡ ರಾಜಕೀಯಕ್ಕೆ ಬರುತ್ತಿರುವುದರಿಂದ ರಾಜಕೀಯ ಶಕ್ತಿಗಳು ಸಿನಿಮಾ ರಿಲೀಸ್ ಆಗದಂತೆ ತಡೆಯುತ್ತಿವೆಯೇ ಎಂಬ ಪ್ರಶ್ನೆ ಮೂಡಿದೆ. ಈ ಮಧ್ಯೆ ‘ಟಾಕ್ಸಿಕ್’ ಚಿತ್ರಕ್ಕೂ ತೊಂದರೆ ಎದುರಾಗುವ ಸೂಚನೆ ಸಿಕ್ಕಿದೆ.

‘ಜನ ನಾಯಗನ್’ ಸಿನಿಮಾ ನಿರ್ಮಾಣ ಮಾಡಿದ್ದು ಕನ್ನಡದ ಕೆವಿಎನ್​ ಸಂಸ್ಥೆ. ಯಶ್ ನಟನೆಯ ‘ಟಾಕ್ಸಿಕ್’ ಹಾಗೂ ಧ್ರುವ ಸರ್ಜಾ ವರ ‘ಕೆಡಿ’ ಚಿತ್ರವನ್ನು ಇದೇ ಸಂಸ್ಥೆ ನಿರ್ಮಾಣ ಮಾಡಿದೆ. ಜನವರಿ 9ಕ್ಕೆ ‘ಜನ ನಾಯಗನ್’, ‘ಮಾರ್ಚ್ 19’ಕ್ಕೆ ‘ಟಾಕ್ಸಿಕ್’ ಹಾಗೂ ಏಪ್ರಿಲ್ ಅಂತ್ಯಕ್ಕೆ ‘ಕೆಡಿ’ ರಿಲೀಸ್ ಮಾಡುವ ಪ್ಲ್ಯಾನ್ ಸಂಸ್ಥೆಯದ್ದಾಗಿತ್ತು.

ಇದನ್ನೂ ಓದಿ: ‘ಜನ ನಾಯಗನ್’ ಸಿನಿಮಾಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ: ನೂರಾರು ಕೋಟಿ ನಷ್ಟದ ಭೀತಿ

ಒಂದು ಸಿನಿಮಾ ರಿಲೀಸ್ ಆಗುತ್ತಿದ್ದಂತೆ ಮತ್ತೊಂದು ಚಿತ್ರದ ಪ್ರಚಾರ ಕಾರ್ಯ ಆರಂಭಿಸುವ ಪ್ಲ್ಯಾನ್​ ಅಲ್ಲಿ ಕೆವಿಎನ್ ಇತ್ತು. ಆದರೆ, ‘ಜನ ನಾಯಗನ್’ ಸಿನಿಮಾ ರಿಲೀಸ್ ಡೋಲಾಯಮಾನ ಸ್ಥಿತಿಯಲ್ಲಿ ಇದೆ. ಹೀಗಾಗಿ, ‘ಟಾಕ್ಸಿಕ್’ ಚಿತ್ರದ ಪ್ರಚಾರಕ್ಕೆ ಸಾಕಷ್ಟು ಅಡಚಣೆ ಉಂಟಾಗಬಹುದು ಎಂದು ಹೇಳಲಾಗುತ್ತಾ ಇದೆ. ಆ ಬಳಿಕ ‘ಕೆಡಿ’ ಸಿನಿಮಾದ ಮೇಲೂ ಇದು ಪರಿಣಾಮ ಬೀರಲಿದೆ. ‘ಜನ ನಾಯಗನ್’ ಸಿನಿಮಾ ಯಾವಾಗ ರಿಲೀಸ್ ಆಗುತ್ತದೆ ಎಂಬುದು ಸದ್ಯದ ಪ್ರಶ್ನೆ. ಅದರ ಆಧಾರದ ಮೇಲೆ ಮುಂದಿನ ಪ್ಲ್ಯಾನ್​​ಗಳು ನಿರ್ಧಾರವಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪರಪ್ಪನ ಅಗ್ರಹಾರದಲ್ಲಿ ಕಳ್ಳಾಟಕ್ಕೆ ಬಿದ್ದಿಲ್ಲ ಬ್ರೇಕ್! 200 ಮೊಬೈಲ್ ಫೋನ್​ಗಳ​ ಜೊತೆ ಇನ್ನೂ ಏನೇನು ಸಿಕ್ತು ಗೊತ್ತಾ? – Kannada News | Parappana Agrahara Crackdown:Raids Seize 200+ Mobiles, Expose Illegal Activities

200 ಮೊಬೈಲ್ ಫೋನ್​ಗಳ​ ಜೊತೆ ಇನ್ನೂ ಏನೇನು ಸಿಕ್ತು ಗೊತ್ತಾ?

ಬೆಂಗಳೂರು, ಜನವರಿ 28: ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಬೀಳದಂತಾಗಿದ್ದು, ಜೈಲಾಧಿಕಾರಿಗಳು ಎರಡು ತಿಂಗಳಿಂದ ನಿರಂತರ ದಾಳಿ ನಡೆಸುತ್ತಿದ್ದಾರೆ. ಈ ವೇಳೆ ಕೈದಿಗಳು ಬಚ್ಚಿಟ್ಟುಕೊಂಡಿದ್ದ ಹಲವು ಮೊಬೈಲ್​ಗಳು, ಇಯರ್ ಫೋನ್​ಗಳು ಸಿಕ್ಕಿದ್ದು, ಈ ನಿಷೇಧಿತ ವಸ್ತುಗಳನ್ನು ಇಟ್ಟುಕೊಂಡವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಕೈದಿ ನೋಡಲು ಬಂದಾಕೆಯಿಂದ ಹಣ ನೀಡಲು ಯತ್ನ

ಜೈಲಿನಲ್ಲಿ ಟವರ್–1ರ 6ನೇ ಬ್ಯಾರಕ್‌ನ 4ನೇ ಕೊಠಡಿಯಲ್ಲಿ ನಡೆಸಿದ ರೇಡ್ ವೇಳೆ ಕೈದಿಗಳು ಅಡಗಿಸಿಕೊಂಡಿದ್ದ 8 ಮೊಬೈಲ್ ಫೋನ್‌ಗಳು, 1 ಸಿಮ್ ಕಾರ್ಡ್, 2 ಚಾರ್ಜರ್‌ಗಳು ಹಾಗೂ 3 ಇಯರ್‌ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಕಳೆದ ಎರಡು ತಿಂಗಳ ಅವಧಿಯಲ್ಲಿ 200ಕ್ಕೂ ಹೆಚ್ಚು ಮೊಬೈಲ್‌ಗಳನ್ನು ಜೈಲಾಧಿಕಾರಿಗಳು ಸೀಜ್ ಮಾಡಲಾಗಿದೆ. ಇನ್ನೊಂದೆಡೆ, ಮಹಿಳೆಯೊಬ್ಬರು ಕೈದಿಗೆ ಅಕ್ರಮವಾಗಿ ಹಣ ನೀಡಲು ಯತ್ನಿಸಿದ ಪ್ರಕರಣವೂ ಬೆಳಕಿಗೆ ಬಂದಿದೆ. ಜನವರಿ 23ರಂದು ಕೈದಿ ಸೋಮಶೇಖರ್‌ನನ್ನು ಭೇಟಿಯಾಗಲು ಬಂದ ಅನುಷಾ ಎಂಬ ಮಹಿಳೆ ಮಾತುಕತೆ ವೇಳೆ ಗಾಜಿನ ಕೆಳಭಾಗದ ರಂಧ್ರದ ಮೂಲಕ ಹಣ ನೀಡಲು ಮುಂದಾದಾಗ 22,000 ರೂ. ನಗದು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಪುಂಡಾಟಕ್ಕೆ ಇನ್ನೂ ಬಿದ್ದಿಲ್ಲ ಬ್ರೇಕ್! ಸಿಬ್ಬಂದಿಯ ಮೇಲೇ ಹಲ್ಲೆ

ಹೊಸ ಡಿಜಿಪಿಯ ನಂತರವೂ ಸುಧಾರಿದ ಜೈಲಿನ ಪರಿಸ್ಥಿತಿ

ಕೆಲ ತಿಂಗಳ ಹಿಂದೆ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಡ್ಯಾನ್ಸ್ ಜೊತೆಗೆ ಜೈಲಿನಲ್ಲಿದ್ದ ಕೈದಿಗಳು ಕೈಯಲ್ಲಿ ಮೊಬೈಲ್ ಹಿಡಿದು, ಐಷಾರಾಮಿ ಜೀವನ ನಡೆಸುತ್ತಿದ್ದ ವೀಡಿಯೋಗಳು ವೈರಲ್ ಆಗಿದ್ದವು. ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಿಸಿದ ವೀಡಿಯೋಗಳೂ ಎಲ್ಲೆಡೆ ಹರಿದಾಡಿದ್ದವು.ಈ ಹಿನ್ನೆಲೆ ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು.ನಂತರ ಡಿಜಿಪಿಯಾಗಿ ಬಂದಿದ್ದ ಅಲೋಕ್ ಕುಮಾರ್, ಜೈಲಿನೊಳಗಿನ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರು.ಇದರ ಬೆನ್ನಲ್ಲೇ ಜೈಲಾಧಿಕಾರಿಗಳು ಬ್ಯಾರಕ್‌ಗಳ ಮೇಲೆ ದಾಳಿ ತೀವ್ರಗೊಳಿಸಿದ್ದು, ನಿಷೇಧಿತ ವಸ್ತುಗಳ ಬೇಟೆ ಮುಂದುವರೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಟೀಮ್ ಇಂಡಿಯಾದ ಪ್ರಮುಖ ಆಟಗಾರನಿಗೆ ರೆಸ್ಟ್: ಯಾರಿಗೆ ಸಿಗಲಿದೆ ಚಾನ್ಸ್?

Source link

ಹಿಂದೂ ವ್ಯಕ್ತಿ ಮನೆಗೆ ಬೆಂಕಿ ಹಚ್ಚಿದ ಮುಸ್ಲಿಂ ಯುವಕ: ಕುಮಟಾದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ – Kannada News | Muslim Youth Sets Hindu Man’s House Ablaze in Kumta, Uttara Kannada

ಕಾರವಾರ, ಜನವರಿ 28: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರ ಹಕ್ಕಲದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕುಟುಂಬದವರು ಜಾತ್ರೆಗೆ ತೆರಳಿದ್ದ ಸಂದರ್ಭದಲ್ಲಿ ಯುವಕನೊಬ್ಬ ದಿನಕರ್ ಎಂಬುವರ ಮನೆಗೆ ಬೆಂಕಿ ಹಚ್ಚಿದ್ದಾನೆ. ಕುಮಟಾದ ವೆಂಕಟರಮಣ ಜಾತ್ರೆಗೆ ದಿನಕರ್ ಕುಟುಂಬದವರು ತೆರಳಿದ್ದರು. ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ 18 ವರ್ಷದ ಫೈಸಾನ್ ಜಾಫರ್ ಶೇಕ್ ಎಂಬ ಯುವಕ ಅವರ ಮನೆಗೆ ಬೆಂಕಿ ಹಚ್ಚಿ ದ್ವೇಷ ಸಾಧಿಸಲು ಯತ್ನಿಸಿದ್ದಾನೆ. ಇನ್ನು ಬೆಂಕಿ ಹಚ್ಚಿದ ತಕ್ಷಣವೇ ಆರೋಪಿಯನ್ನು ಸ್ಥಳೀಯರು ಹಿಡಿದಿದ್ದಾರೆ. ಸಾರ್ವಜನಿಕರ ಸಮಯಪ್ರಜ್ಞೆಯಿಂದ ಹೆಚ್ಚಿನ ಅನಾಹುತ ತಪ್ಪಿದೆಯಾದರೂ, ಘಟನೆಯಿಂದಾಗಿ ದೇವರ ಹಕ್ಕಲದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಕ್ರಮ ಕೈಗೊಂಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಅವಳು ನನ್ನ ಮಗಳಾಗಿದ್ದಕ್ಕೆ ಸಾರ್ಥಕವಾಯ್ತು’; ರಿತನ್ಯಾ ಬಗ್ಗೆ ದುನಿಯಾ ವಿಜಯ್ ಮಾತು – Kannada News | Duniya Vijay Happy Over Her Daughter Performance in Land lord Movie

ದುನಿಯಾ ವಿಜಯ್ ಅವರು ಲ್ಯಾಂಡ್ ಲಾರ್ಡ್ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ಅವರ ಮಗಳು ರಿತನ್ಯಾ ವಿಜಯ್ ನಟಿಸಿದ್ದಾರೆ. ಅವರದ್ದು ಸಿನಿಮಾದಲ್ಲಿ ಮಗಳ ಪಾತ್ರವೇ ಎಂಬುದು ವಿಶೇಷ. ‘ನನ್ನ ಮಗಳು ಪದೇ ಪದೇ ಪಾತ್ರ ಹೇಗೆ ಬಂದಿದೆ ಎಂದು ಕೇಳುತ್ತಲೇ ಇದ್ದಳು. ನಾನು ಆಗ ಏನನ್ನೂ ಹೇಳೋಕೆ ಹೋಗಿರಲಿಲ್ಲ. ಇವತ್ತು ಹೆಮ್ಮೆಯಿಂದ ಹೇಳುತ್ತೇನೆ. ಅವಳು ನನ್ನ ಮಗಳಾಗಿದ್ದಕ್ಕೂ ಸಾರ್ಥಕವಾಯಿತು’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ತುಂಡಾಗಿ ಬಿದ್ದ ವಿದ್ಯುತ್ ಕಂಬ, ಓಡಿ ಜೀವ ಉಳಿಸಿಕೊಂಡ ಬಾಲಕ – Kannada News | Schoolboy Survives After Electric Pole Crashes Near Him in Kurnool

ಕರ್ನೂಲ್, ಜನವರಿ 28: ತಂತಿ ಸಮೇತ ವಿದ್ಯುತ್ ಕಂಬ ಏಕಾಏಕಿ ರಸ್ತೆಗೆ ಬಿದ್ದ ಘಟನೆ ಆಂಧ್ರಪ್ರದೇಶದ ಕರ್ನೂಲ್​ನಲ್ಲಿ ನಡೆದಿದೆ. ಅದೇ ಸಮಯದಲ್ಲಿ ಬಾಲಕನೊಬ್ಬ ಅದೇ ದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದ, ಕಂಬ ಬೀಳುತ್ತಿರುವುದನ್ನು ಕಂಡು ಕೂಡಲೇ ತನ್ನೆಲ್ಲಾ ಶಕ್ತಿಗಳನ್ನು ಒಟ್ಟು ಸೇರಿಸಿ ಅಲ್ಲಿಂದ ವೇಗವಾಗಿ ಓಡಿ ಜೀವ ಉಳಿಸಿಕೊಂಡಿದ್ದಾನೆ. ಕರ್ನೂಲ್ ಮುನ್ಸಿಪಲ್ ಕಾರ್ಪೊರೇಷನ್ (ಕೆಎಂಸಿ) ಇತ್ತೀಚೆಗೆ ಈ ಪ್ರದೇಶದಲ್ಲಿ ಒಳಚರಂಡಿ ನಿರ್ಮಾಣ ಕಾರ್ಯವನ್ನು ಕೈಗೊಂಡಿದ್ದು, ಈ ಸಂದರ್ಭದಲ್ಲಿ ರಸ್ತೆಯನ್ನು ಅಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗೆತವು ವಿದ್ಯುತ್ ಕಂಬದ ಅಡಿಪಾಯವನ್ನು ದುರ್ಬಲಗೊಳಿಸಿದೆ.

Source link

6,6,6,6,6,6,6,6,6: ಶರವೇಗದ ಶತಕದೊಂದಿಗೆ ಇತಿಹಾಸ ನಿರ್ಮಿಸಿದ ಹ್ಯಾರಿ ಬ್ರೂಕ್ – Kannada News | Harry Brook Creates History in Sri Lanka

ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ (Harry Brook) ಶರವೇಗದ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಇದಾಗ್ಯೂ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೋ ರೂಟ್ 111 ರನ್​ಗಳ ಇನಿಂಗ್ಸ್ ಆಡಿದರು. ಇನ್ನು ಐದನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಹ್ಯಾರಿ ಬ್ರೂಕ್ ಲಂಕಾ ಬೌಲರ್​ಗಳನ್ನು ಚೆಂಡಾಡಿದರು.

ಕ್ರೀಸ್​ಗೆ ಆಗಮಿಸುತ್ತಿದ್ದಂತೆ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಹ್ಯಾರಿ ಬ್ರೂಕ್ ಸಿಕ್ಸ್-ಫೋರ್​ಗಳ ಸುರಿಮಳೆಗೈದರು. ಈ ಮೂಲಕ ಕೇವಲ 57 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಶ್ರೀಲಂಕಾ ಪಿಚ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡರು. ಈ ಪಟ್ಟಿಯಲ್ಲಿ ಪಾಕಿಸ್ತಾನದ ಶಾಹಿದ್ ಅಫ್ರಿದಿ (54 ಎಸೆತಗಳು) ಅಗ್ರಸ್ಥಾನದಲ್ಲಿದ್ದಾರೆ.

ಇನ್ನು ಶತಕದ ಬಳಿಕ ಕೂಡ ಆರ್ಭಟ ಮುಂದುವರೆಸಿದ ಹ್ಯಾರಿ ಬ್ರೂಕ್ 66 ಎಸೆತಗಳಲ್ಲಿ 9 ಭರ್ಜರಿ ಸಿಕ್ಸರ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 136 ರನ್​ ಬಾರಿಸಿದರು. ಈ 9 ಸಿಕ್ಸರ್​ಗಳೊಂದಿಗೆ ಶ್ರೀಲಂಕಾದಲ್ಲಿ ಏಕದಿನ ಇನಿಂಗ್ಸ್​ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಬ್ರೂಕ್ ತಮ್ಮದಾಗಿಸಿಕೊಂಡರು.

ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾ ಬ್ಯಾಟರ್ ಪಾತುಮ್ ನಿಸ್ಸಂಕಾ ಹೆಸರಿನಲ್ಲಿತ್ತು. 2024 ರಲ್ಲಿ ಅಫ್ಘಾನಿಸ್ತಾನ್ ವಿರುದ್ಧ ತವರಿನಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಪಾತುಮ್ ನಿಸ್ಸಂಕಾ ಬರೋಬ್ಬರಿ 8 ಸಿಕ್ಸ್ ಸಿಡಿಸಿ ಈ ಭರ್ಜರಿ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಬ್ರೂಕ್ ಮುರಿದಿದ್ದಾರೆ.

ಶ್ರೀಲಂಕಾ ವಿರುದ್ಧವೇ ಅವರ ನೆಲದಲ್ಲಿ ಅಬ್ಬರಿಸುವ ಮೂಲಕ ಹ್ಯಾರಿ ಬ್ರೂಕ್ ಬರೋಬ್ಬರಿ 8 ಸಿಕ್ಸರ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಲಂಕಾ ಪಿಚ್​ನಲ್ಲಿ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಇನಿಂಗ್ಸ್​ವೊಂದರಲ್ಲಿ ಅತೀ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Published On – 7:57 am, Wed, 28 January 26

Source link

ನಾದಿನಿಗೆ ಚಾಕುವಿನಿಂದ ಇರಿದು ಬಳಿಕ 16ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟ ಟೆಕ್ಕಿ – Kannada News | High Rise Tragedy in Noida: Engineer Attacks Sister in Law, Dies After Fatal Jump

ಗ್ರೇಟರ್​ ನೋಯ್ಡಾ, ಜನವರಿ 28: ಟೆಕ್ಕಿಯೊಬ್ಬ ನಾದಿನಿಗೆ ಚಾಕುವಿನಿಂದ ಇರಿದು, ಬಳಿಕ ತಾನು 16ನೇ ಮಹಡಿಯಿಂದ ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಬಿಸ್ರಾಖ್ ಪ್ರದೇಶದ ಪ್ಯಾರಾಮೌಂಟ್ ಎಮೋಷನ್ಸ್ ಸೊಸೈಟಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಬಿಹಾರದ ಪಾಟ್ನಾ ಮೂಲದ ಶತ್ರುಘ್ನ ಸಿನ್ಹಾ (38) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಸಿನ್ಹಾ ತನ್ನ ಪತ್ನಿಯೊಂದಿಗೆ ತೀವ್ರ ವಾಗ್ವಾದ ನಡೆಸಿದ್ದ, ನಂತರ ಆಕೆಯ ಮೇಲೆ ಹಲ್ಲೆಗೆ ಯತ್ನಿಸಿದ್ದ.

ಆತನ ನಾದಿನಿ ಮಧ್ಯಪ್ರವೇಶಿಸಿದಾಗ, ತರಕಾರಿ ಚಾಕುವಿನಿಂದ ಆಕೆಯ ಮೇಲೆ ಹಲ್ಲೆ ನಡೆಸಿ, ಆಕೆಯ ಕೈಗೆ ಗಾಯ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಸಮಾಜದ ನಿವಾಸಿಗಳಲ್ಲಿ ಭೀತಿಯನ್ನು ಉಂಟುಮಾಡಿದೆ.

ದಾಳಿ ನಡೆದ ಕೂಡಲೇ ಪತ್ನಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧನ ಮತ್ತು ಸಾರ್ವಜನಿಕ ಅವಮಾನಕ್ಕೆ ಹೆದರಿ, ಸಿನ್ಹಾ ಫ್ಲಾಟ್ ಗೆ ಬೀಗ ಹಾಕಿ ಬಾಲ್ಕನಿಯಲ್ಲಿ ಹೆಜ್ಜೆ ಹಾಕಿದ್ದಾರೆ ಮತ್ತು ಪೊಲೀಸರು ಸ್ಥಳಕ್ಕೆ ತಲುಪುವ ಮೊದಲೇ 16 ನೇ ಮಹಡಿಯಿಂದ ಹಾರಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಓದಿ: ತಾಯಿ, ಮಗ ಆತ್ಮಹತ್ಯೆ: ಪೊಲೀಸರು ಬಿಚ್ಚಿಟ್ರು ಮೊದಲ ಸೊಸೆ ಸಾವಿನ ರಹಸ್ಯ

ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಯಥಾರ್ಥ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಅಲ್ಲಿ ಚಿಕಿತ್ಸೆ ನೀಡುತ್ತಿದ್ದಾಗ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಗಾಯಗೊಂಡಿರುವ ನಾದಿನಿ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

ಬಿಸ್ರಖ್ ಪೊಲೀಸರು ಶವವನ್ನು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇಲ್ಲಿಯವರೆಗೆ ಸ್ಥಳದಿಂದ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಪ್ರಾಥಮಿಕ ತನಿಖೆಯ ಪ್ರಕಾರ ಸಿನ್ಹಾ ಕಳೆದ ಆರು ತಿಂಗಳಿನಿಂದ ನಿರುದ್ಯೋಗಿಯಾಗಿದ್ದು, ತೀವ್ರ ಮಾನಸಿಕ ಒತ್ತಡದಲ್ಲಿದ್ದರು. ಘಟನೆಗೂ ಮುನ್ನ ಅವರು ಮದ್ಯ ಸೇವಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ದಂಪತಿ ನಡುವೆ ಆಗಾಗ ಕೌಟುಂಬಿಕ ಕಲಹಗಳು ನಡೆಯುತ್ತಿದ್ದವು ಎಂದು ವರದಿಯಾಗಿದೆ.

ಸಿನ್ಹಾ ಅವರ ವಿವಾಹವಾಗಿ ಸುಮಾರು 11 ವರ್ಷಗಳು ಕಳೆದಿವೆ, ಎಂಟು ವರ್ಷದ ಮಗನಿದ್ದಾನೆ ಅವರ ಪತ್ನಿ ಐಟಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದಾರೆ. ಕೌಟುಂಬಿಕ ಕಲಹ, ದೀರ್ಘಕಾಲದ ನಿರುದ್ಯೋಗ ಮತ್ತು ಮದ್ಯಪಾನಕ್ಕೆ ಕಾರಣವಾಗುವ ಅಂಶಗಳಾಗಿವೆ ಎಂದು ಸಹಾಯಕ ಪೊಲೀಸ್ ಆಯುಕ್ತ ಪವನ್ ಕುಮಾರ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲಡೆ ಶುಷ್ಕ ವಾತಾವರಣ – Kannada News | Bengaluru temperature: Dry weather all over the karnataka

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲಡೆ ಶುಷ್ಕ ವಾತಾವರಣ

ಬೆಂಗಳೂರು, ಜನವರಿ 28: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಎರಡು ದಿನಗಳ ಹಿಂದೆ ಮೋಡ ಕವಿದು, ಸಾಧಾರಣ ಪ್ರಮಾಣದ ಮಳೆಯಾಗಿತ್ತು. ಆದರೆ ಇಂದು ರಾಜ್ಯದ ಹವಾಮಾನ (Weather Forecast) ಯಥಾಸ್ಥಿತಿ ತಲುಪಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಎಲ್ಲೆಲ್ಲಿ ಒಣಹವೆ?

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಇಂದು ನಗರದಲ್ಲಿ ಎಂದಿನಂತೆ ಚಳಿಯ ಜೊತೆಗೆ ಮೋಡ ಕವಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 17°C ಇದ್ದು, ಗರಿಷ್ಠ 30°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link