ನಿವೃತ್ತಿ ಘೋಷಿಸಿದ ಗಾಯಕ ಅರಿಜಿತ್ ಸಿಂಗ್: ಕೋಟ್ಯಂತರ ಅಭಿಮಾನಿಗಳಿಗೆ ಶಾಕ್ – Kannada News | Singer Arijit Singh announces retirement from playback singing
ನೂರಾರು ಸೂಪರ್ ಹಿಟ್ ಗೀತೆಗಳನ್ನು ಹಾಡಿರುವ ಗಾಯಕ ಅರಿಜಿತ್ ಸಿಂಗ್ ಅವರು ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಏಕಾಏಕಿ ಅವರು ನಿವೃತ್ತಿ (Arijit Singh Retirement) ಘೋಷಿಸಿದ್ದಾರೆ. ಅವರು ಈ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಬೇಡಿಕೆಯ ಉತ್ತುಂಗದಲ್ಲಿ ಇರುವಾಗಲೇ ಅರಿಜಿತ್ ಸಿಂಗ್ ಅವರು ನಿವೃತ್ತಿ ಘೋಷಿಸಿರುವುದು ಅಚ್ಚರಿ ಮೂಡಿಸಿದೆ. ಹಲವಾರು ಲವ್ ಸಾಂಗ್ಗಳನ್ನು ಹಾಡುವ ಮೂಲಕ ಅರಿಜಿತ್ ಸಿಂಗ್ (Arijit Singh) ಅವರು ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಅವರ ಧ್ವನಿಯಲ್ಲಿ ಹೊಸ ಹೊಸ ಹಾಡುಗಳನ್ನು…