Category Archives: Blog

Your blog category

ರಾತ್ರಿ ಮಲಗುವ ಮುನ್ನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಮಿಸ್ ಮಾಡ್ದೆ ಸ್ಟೋರಿ ಓದಿ – Kannada News | Water Before Bed: Good or Bad for Your Sleep?

ನಮ್ಮ ದೇಹಕ್ಕೆ ನೀರು (Water) ಎಷ್ಟು ಮುಖ್ಯ ಎಂಬುದು ತಿಳಿದಿರುವ ವಿಷಯ. ದೇಹದ ಶೇಕಡಾ 60 ರಿಂದ 70 ರಷ್ಟು ಭಾಗ ನೀರಿನಿಂದ ಕೂಡಿದೆ. ಅದಕ್ಕಾಗಿಯೇ ವೈದ್ಯರು ಪ್ರತಿದಿನ ಕನಿಷ್ಠ 8 ಗ್ಲಾಸ್ ನೀರು ಕುಡಿಯಲು ಶಿಫಾರಸು ಮಾಡುತ್ತಾರೆ. ಆದರೆ ಮಲಗುವ ಮುನ್ನ ನೀರು ಕುಡಿಯುವ ವಿಷಯಕ್ಕೆ ಬಂದರೆ ಇದೆ ಅಭಿಪ್ರಾಯಗಳು ಭಿನ್ನವಾಗಿರುತ್ತವೆ. ಹೌದು, ಈ ಅಭ್ಯಾಸ ಬಹಳ ಪ್ರಯೋಜನಗಳನ್ನು ಹೊಂದಿದ್ದರೂ ಕೂಡ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದಿದ್ದರೆ ನಿದ್ರೆಗೆ ಅಡ್ಡಿಯಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಹಾಗಾದರೆ ಮಲಗುವ ಮುನ್ನ ನೀರು ಕುಡಿಯುವುದರಿಂದ ಯಾವ ರೀತಿಯ ಪ್ರಯೋಜನ ಸಿಗುತ್ತದೆ, ಅತಿಯಾಗಿ ನೀರು ಕುಡಿದರೆ ಯಾವ ರೀತಿಯ ಸಮಸ್ಯೆಗಳಾಗುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಲಗುವ ಮುನ್ನ ನೀರು ಕುಡಿಯುವುದರಿಂದಾಗುವ ಪ್ರಯೋಜನಗಳು:

ಮಲಗುವ ಮುನ್ನ ನೀರು ಕುಡಿಯುವುದರಿಂದ ದೇಹದಲ್ಲಿರುವ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದು ರಕ್ತ ಪರಿಚಲನೆ ಸುಧಾರಿಸುತ್ತದೆ. ಕುಡಿಯುವ ನೀರು ದೇಹವನ್ನು ತಂಪಾಗಿಸುತ್ತದೆ ಮತ್ತು ನಿದ್ರೆ ಚೆನ್ನಾಗಿ ಬರಲು ಸಹಾಯ ಮಾಡುತ್ತದೆ. ಇನ್ನು, ಬೆಚ್ಚಗಿನ ನೀರು ಕುಡಿಯುವುದರಿಂದ ಸ್ನಾಯು ನೋವು ಕಡಿಮೆಯಾಗುವುದಲ್ಲದೆ ಜೀರ್ಣಕ್ರಿಯೆಯೂ ಸುಧಾರಿಸುತ್ತದೆ. ನಿಂಬೆ ರಸದೊಂದಿಗೆ ಬೆರೆಸಿದ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಮತ್ತು ಚರ್ಮ ಕಾಂತಿಯುತವಾಗುತ್ತದೆ.

ಅತಿಯಾಗಿ ನೀರು ಕುಡಿಯುವುದರಿಂದಾಗುವ ಸಮಸ್ಯೆಗಳು:

ಮಲಗುವ ಮುನ್ನ ಹೆಚ್ಚು ನೀರು ಕುಡಿದರೆ, ನೋಕ್ಟೋರಿಯಾ ಎಂಬ ಸಮಸ್ಯೆ ಬರುವ ಸಾಧ್ಯತೆ ಇರುತ್ತದೆ. ಹೆಚ್ಚು ನೀರು ಕುಡಿಯುವುದರಿಂದ ರಾತ್ರಿಯಲ್ಲಿ ಪದೇ ಪದೇ ಮೂತ್ರ ವಿಸರ್ಜನೆಗೆ ಹೋಗಬೇಕಾಗಿ ಬರಬಹುದು. ಇದು ನಿದ್ರೆಗೆ ಭಂಗ ತರಬಹುದು. ಸರಿಯಾಗಿ ನಿದ್ರೆ ಆಗದಿದ್ದರೆ ಮರುದಿನ ಆಯಾಸ, ತಲೆನೋವು ಮತ್ತು ಏಕಾಗ್ರತೆಯ ಕೊರತೆ ಉಂಟಾಗಬಹುದು. ದೀರ್ಘಾವಧಿಯಲ್ಲಿ, ಇದು ಹೃದಯದ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಇದನ್ನೂ ಓದಿ: ಕಣ್ಣುಗಳಿಂದ ಆಗಾಗ ನೀರು ಬರುವುದು ಕೆಲವು ರೋಗದ ಮುನ್ಸೂಚನೆಯಾಗಿರಬಹುದು ಎಚ್ಚರ!

ವೈದ್ಯರ ಈ ಸಲಹೆಯನ್ನು ತಪ್ಪದೆ ಪಾಲಿಸಿ:

  • ನೀರು ಕುಡಿದ ತಕ್ಷಣ ಮಲಗುವುದು ಒಳ್ಳೆಯದಲ್ಲ.
  • ನಿದ್ರೆಗೆ ಹೋಗುವ ಕನಿಷ್ಠ 2 ಗಂಟೆಗಳ ಮೊದಲು ನೀರು ಕುಡಿಯುವುದು ಒಳ್ಳೆಯದು.
  • ರಾತ್ರಿ ಊಟದ ಒಂದು ಗಂಟೆಯ ನಂತರ ನೀರು ಕುಡಿಯುವುದು ಸರಾಗ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.
  • ಮಲಗುವ ಮೊದಲು ಬಾಯಾರಿಕೆಯಾದಲ್ಲಿ, ಗ್ಲಾಸ್‌ ತುಂಬಾ ನೀರು ಕುಡಿಯುವುದಕ್ಕಿಂತ ಕೆಲವು ಸಿಪ್ಸ್ ನೀರು ಕುಡಿಯುವುದು ಒಳ್ಳೆಯದು.

ನೀರು ಕುಡಿಯುವುದು ನಿಮ್ಮ ಆರೋಗ್ಯಕ್ಕೆ ಒಳ್ಳೆಯದು, ಆದರೆ ಅದು ನಿಮ್ಮ ನಿದ್ರೆಗೆ ತೊಂದರೆಯಾಗಬಾರದು. ಆದ್ದರಿಂದ, ಮಲಗುವ ಮೊದಲು ಸಮಯಕ್ಕೆ ಅನುಗುಣವಾಗಿ ನೀರು ಕುಡಿಯಿರಿ ಮತ್ತು ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

೩೦೮ ಸ್ಟ್ರೈಕ್ ರೇಟ್​ನಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿದ ವೈಭವ್ ಸೂರ್ಯವಂಶಿ – Kannada News | Vaibhav suryavanshi Smashed Fifty In U19 World Cup 2026

ಆರೋನ್ ಜಾರ್ಜ್​ 16 ಎಸೆತಗಳಲ್ಲಿ 23 ರನ್​ ಬಾರಿಸಿ ಔಟಾದರೆ, ವೈಭವ್ ಸೂರ್ಯವಂಶಿ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದರು. ಅದರಲ್ಲೂ ಝಿಂಬಾಬ್ವೆ ಬೌಲರ್​ಗಳ ಮನಸೋ ಇಚ್ಛೆ ದಂಡಿಸಿದ ಯುವ ದಾಂಡಿಗ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅದು ಕೂಡ 208ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ.

Source link

ರವಿತೇಜ ನಟನೆಯ 77ನೇ ಸಿನಿಮಾಗೆ ‘ಇರುಮುಡಿ’ ಶೀರ್ಷಿಕೆ: ಫಸ್ಟ್ ಲುಕ್ ರಿಲೀಸ್ – Kannada News | Ravi Teja and Priya Bhavani Shankar new movie titled Irumudi

ಟಾಲಿವುಡ್ ನಟ ರವಿತೇಜ (Ravi Teja) ಅವರು ಜನವರಿ 26ರಂದು 58ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡರು. ಅವರ ಬರ್ತ್​ಡೇ ಪ್ರಯುಕ್ತ ಹೊಸ ಸಿನಿಮಾ ಅನೌನ್ಸ್ ಮಾಡಲಾಗಿದೆ. ಇದು ರವಿತೇಜ ನಟನೆಯ 77ನೇ ಸಿನಿಮಾ. ಈ ಚಿತ್ರಕ್ಕೆ ‘ಇರುಮುಡಿ’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾ ಮೂಲಕ ರವಿತೇಜ ಅವರು ಭಕ್ತಪ್ರಧಾನ ಕಥೆಯನ್ನು ಜನರಿಗೆ ಹೇಳಲಿದ್ದಾರೆ. ‘ಇರುಮುಡಿ’ (Irumudi) ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ. ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ನಿರ್ದೇಶಕ ಶಿವ ನಿರ್ವಾಣ ಅವರು ‘ಇರುಮುಡಿ’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಲಿದ್ದಾರೆ. ಭಕ್ತಿಯ ಜೊತೆಗೆ ಭಾವನಾತ್ಮಕ ಅಂಶಗಳು ಇರುವ ಕಥೆಯನ್ನು ಅವರು ಈ ಬಾರಿ ಆಯ್ಕೆ ಮಾಡಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ತಂದೆ ಮತ್ತು ಮಗಳ ಬಾಂಧವ್ಯ ಕೂಡ ಹೈಲೆಟ್ ಆಗಿರಲಿದೆ. ರವಿತೇಜ ಅವರು ಹಿಂದೆಂದೂ ಕಾಣದ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಶಬರಿಮಲೆ ಅಯ್ಯಪ್ಪ ದೀಕ್ಷಾಧಾರಿಗಳು ಯಾತ್ರೆಯ ಸಮಯದಲ್ಲಿ ತಲೆಯ ಮೇಲೆ ಹೊತ್ತುಕೊಂಡು ಸಾಗುವುದನ್ನು ಇರುಮುಡಿ ಎನ್ನುತ್ತಾರೆ. ಅದನ್ನೇ ಶೀರ್ಷಿಕೆಯಾಗಿ ಇಡಲಾಗಿದೆ. ಈಗಾಗಲೇ ಅಯ್ಯಪ್ಪ ಸ್ಟಾಮಿ ಬಗ್ಗೆ ಹಲವು ಸಿನಿಮಾಗಳು ಬಂದಿವೆ. ರವಿತೇಜ ಅವರ ‘ಇರುಮುಡಿ’ ಸಿನಿಮಾ ಯಾವ ರೀತಿ ಭಿನ್ನವಾಗಿರಲಿದೆ ಎಂಬುದನ್ನು ತಿಳಿಯಲು ಫ್ಯಾನ್ಸ್ ಕಾದಿದ್ದಾರೆ.

‘ಇರುಮುಡಿ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡುವುದರ ಜೊತೆಗೆ ಪಾತ್ರವರ್ಗದ ಬಗ್ಗೆಯೂ ಮಾಹಿತಿ ಹಂಚಿಕೊಳ್ಳಲಾಗಿದೆ. ಪ್ರಿಯಾ ಭವಾನಿ ಶಂಕರ್ ಅವರು ಈ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಬೇಬಿ ನಕ್ಷತ್ರಾ ಅವರು ರವಿತೇಜ ಅವರ ಮಗಳ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಾಯಿ ಕುಮಾರ್, ಅಜಯ್ ಘೋಷ್, ರಮೇಶ್ ಇಂದಿರಾ, ಸ್ವಸಿಕಾ ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: ಚಿತ್ರರಂಗಕ್ಕೆ ಎಂಟ್ರಿ ಕೊಡೋಕೆ ರೆಡಿ ಆದ ರವಿತೇಜ ಮಗಳು ಮೋಕ್ಷಧಾ

ನಿರ್ದೇಶಕ ಶಿವ ನಿರ್ವಾಣ ಅವರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಈಗಾಗಲೇ ‘ಇರುಮುಡಿ’ ಸಿನಿಮಾದ ಚಿತ್ರೀಕರಣ ಶುರುವಾಗಿದೆ. ‘ಮೈತ್ರಿ ಮೂವೀ ಮೇಕರ್ಸ್’ ಸಂಸ್ಥೆಯ ಮೂಲಕ ನವೀನ್ ಯರ್ನೇನಿ ಮತ್ತು ರವಿಶಂಕರ್ ಅವರು ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ಜಿವಿ ಪ್ರಕಾಶ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ವಿಷ್ಣು ಶರ್ಮ ಅವರ ಛಾಯಾಗ್ರಹಣ, ಪ್ರವೀಣ್ ಪುಡಿ ಅವರ ಸಂಕಲನದಲ್ಲಿ ‘ಇರುಮುಡಿ’ ಸಿನಿಮಾ ಮೂಡಿಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರಾಜ್ಯದಲ್ಲಿ ಮುಂದುವರೆದ ದರೋಡೆ ಪ್ರಕರಣಗಳು: ಬೆಂಗಳೂರಿನಲ್ಲಿ ಗನ್​ ತೋರಿಸಿ ಬಂಗಾರದ ಅಂಗಡಿ ಲೂಟಿ – Kannada News | Masked men rob jewellery store at gunpoint in nelamangala, heist caught on CCTV

ಬೆಂಗಳೂರು, (ಜನವರಿ 27): ಕರ್ನಾಟಕದಲ್ಲಿ ದರೋಡೆ ಪ್ರಕರಣಗಳು ಮುಂದುವರೆದಿದೆ. ನಿನ್ನೆ ಅಷ್ಟೇ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿನ ಭೂಮಿಕಾ ಜ್ಯುವೆಲರಿ ನುಗ್ಗಿ ಚಿನ್ನಾಭರಣ ದೋಚಿಕೊಂಡು ಎಸ್ಕೇಪ್ ಆಗಿದ್ದರು. ಇದರ ಬೆನ್ನಲ್ಲೇ ಇದೀಗ ಇಂದು (ಜನವರಿ 27) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ದರೋಡೆಕೋರರು ಗನ್ ತೋರಿಸಿ ಜ್ಯುವೆಲ್ಲರಿ ಅಂಗಡಿಯಲ್ಲಿದ್ದ ಚಿನ್ನಾಭರಣ ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ. ಬೈಕ್​ನಲ್ಲಿ ಬಂದಿದ್ದ ಇಬ್ಬರು ದರೋಡೆಕೋರರು ಗನ್ ತೋರಿಸಿ ರಾಮ್​ದೇವ್ ಜ್ಯುವೆಲ್ಲರಿಗೆ ನುಗ್ಗಿದ್ದು, ಕೈಗೆ ಸಿಕ್ಕ ಚಿನ್ನಾಭರಣಗಳನ್ನು ಕದ್ದೊಯ್ದಿದ್ದಾರೆ. ಖದೀಮರು ಕರಾಮತ್ತು ಸಿಸಿಟಿ ಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಭಾರತ-ಯೂರೋಪಿಯನ್ ಒಕ್ಕೂಟ ವ್ಯಾಪಾರ ಒಪ್ಪಂದದಿಂದ ಹೊರಗುಳಿದಿವೆ ಈ ಮೂರು ಸೆಕ್ಟರ್​ಗಳು; ಇಲ್ಲಿದೆ ಡೀಲ್​ನ ಹೈಲೈಟ್ಸ್ – Kannada News | India European Union trade deal, 3 sectors out of coverage, here are few highlights

ಐರೋಪ್ಯ ಒಕ್ಕೂಟದ ಮುಖ್ಯಸ್ಥರೊಂದಿಗೆ ನರೇಂದ್ರ ಮೋದಿ

ನವದೆಹಲಿ, ಜನವರಿ 27: ಭಾರತ ಮತ್ತು ಯೂರೋಪಿಯನ್ ಒಕ್ಕೂಟದ ನಡುವೆ ಮುಕ್ತ ವ್ಯಾಪಾರ ಒಪ್ಪಂದ (India-EU trade pact) ಏರ್ಪಟ್ಟಿದೆ. ವಿಶ್ವದ ಶೇ. 25 ಜಿಡಿಪಿ ಇರುವ ಮತ್ತು 200 ಕೋಟಿ ಜನರಿರುವ ಬೃಹತ್ ಮಾರುಕಟ್ಟೆ ಸೃಷ್ಟಿಸಿರುವ ಈ ಡೀಲ್ ಅನ್ನು ಮದರ್ ಆಫ್ ಆಲ್ ಡೀಲ್ಸ್ ಎಂದು ಬಣ್ಣಿಸಲಾಗುತ್ತಿದೆ. ಭಾರತ ಹಾಗೂ ಯೂರೋಪಿಯನ್ ಒಕ್ಕೂಟ ಎರಡಕ್ಕೂ ಇದು ವಿನ್ ವಿನ್ ಸ್ಥಿತಿ ಎಂದೂ ಪರಿಗಣಿಸಲಾಗುತ್ತಿದೆ.

ವಾಹನ, ಉಕ್ಕು ಮತ್ತು ಕೃಷಿ, ಈ ಮೂರು ಸೆಕ್ಟರ್​ಗಳನ್ನು ಟ್ಯಾರಿಫ್ ಮುಕ್ತಗೊಳಿಸಲಾಗಿರುವ ಸರಕುಗಳ ಪಟ್ಟಿಯಿಂದ ಹೊರಗಿಡಲಾಗಿದೆ. ಈ ಕ್ಷೇತ್ರಗಳನ್ನು ಎರಡೂ ಕಡೆಯಲ್ಲೂ ಸೂಕ್ಷ್ಮ ಸೆಕ್ಟರ್​ಗಳೆಂದು ಪರಿಗಣಿಸಲಾಗಿದೆ. ಆಟೊಮೊಬೈಲ್ ಮತ್ತು ಉಕ್ಕು ಉದ್ಯಮಗಳ ಸುತ್ತ ದೊಡ್ಡ ಸಂಖ್ಯೆಯ ದೇಶೀಯ ಉದ್ದಿಮೆಗಳು ಅವಲಂಬಿತವಾಗಿವೆ. ಕೃಷಿ ಕ್ಷೇತ್ರವು ರೈತರ ಆಧಾರವಾಗಿದೆ. ಹೀಗಾಗಿ, ಈ ಮೂರು ಸೆಕ್ಟರ್​ಗಳಲ್ಲಿನ ಉತ್ಪನ್ನಗಳ ಮೇಲೆ ಟ್ಯಾರಿಫ್​ಗಳು ಮುಂದುವರಿಯುತ್ತವೆ. ಆದರೆ, ಟ್ಯಾರಿಫ್ ದರ ಸ್ವಲ್ಪ ತಗ್ಗಬಹುದು.

ಈ ಡೀಲ್ ಪ್ರಕಾರ ಭಾರತ ಮತ್ತು ಐರೋಪ್ಯ ಒಕ್ಕೂಟವು ಪರಸ್ಪರ ಆಮದು ಸುಂಕಗಳನ್ನು ತೆಗೆದುಹಾಕಲಿವೆ, ಅಥವಾ ಗಣನೀಯವಾಗಿ ಇಳಿಕೆ ಮಾಡಲಿವೆ. ಮುಂದಿನ ಏಳು ವರ್ಷಗಳಲ್ಲಿ ಹಂತ ಹಂತವಾಗಿ ಟ್ಯಾರಿಫ್ ಇಳಿಕೆ ಆಗಲಿದೆ. ಒಟ್ಟಾರೆ ಶೇ. 96ರಷ್ಟು ಸರಕುಗಳಿಗೆ ಟ್ಯಾರಿಫ್ ಇಳಿಕೆ ಆಗುತ್ತದೆ.

ಇದನ್ನೂ ಓದಿ: ಭಾರತ ಮತ್ತು ಯೂರೋಪಿಯನ್ ಯೂನಿಯನ್ ವ್ಯಾಪಾರ ಒಪ್ಪಂದಕ್ಕೆ ಸಹಿ; ಹೊಸ ಇತಿಹಾಸ

ಭಾರತದ ಶೇ. 90ರಷ್ಟು ಸರಕುಗಳಿಗೆ ತತ್​ಕ್ಷಣದಿಂದಲೇ ಟ್ಯಾರಿಫ್ ಮುಕ್ತ ಪ್ರವೇಶ ಸಿಗುತ್ತದೆ. ಮುಂದಿನ ಏಳು ವರ್ಷದಲ್ಲಿ ಶೇ. 99.5ರಷ್ಟು ಐರೋಪ್ಯ ಮಾರುಕಟ್ಟೆ ಭಾರತಕ್ಕೆ ತೆರೆದುಕೊಳ್ಳುತ್ತದೆ. ಭಾರತವು ತತ್​ಕ್ಷಣಕ್ಕೆ ಶೇ. 30ರಷ್ಟು ಮಾರುಕಟ್ಟೆ ಪ್ರವೇಶ ಕಲ್ಪಿಸಲಿದೆ. ಮುಂದಿನ 10 ವರ್ಷದಲ್ಲಿ ಹಂತ ಹಂತವಾಗಿ ಯೂರೋಪ್​ನ ಶೇ. 96ರಷ್ಟು ಸರಕುಗಳಿಗೆ ಟ್ಯಾರಿಫ್ ವಿನಾಯಿತಿ ಕಲ್ಪಿಸಲಿದೆ.

ವಾಹನಗಳ ಮೇಲಿನ ಟ್ಯಾರಿಫ್ ಹೀಗಿರುತ್ತದೆ

ಆಟೊಮೊಬೈಲ್ ಕ್ಷೇತ್ರದಲ್ಲಿ ಕಾರುಗಳ ಮೇಲೆ ಟ್ಯಾರಿಫ್ ಅನ್ನು ಶೇ. 110ರಿಂದ ಶೇ 10ಕ್ಕೆ ಇಳಿಸಲು ಒಪ್ಪಲಾಗಿದೆ. ಆದರೆ, ಷರತ್ತು ಇರುತ್ತದೆ. ವರ್ಷಕ್ಕೆ 2.5 ಲಕ್ಷ ವಾಹನಗಳಿಗೆ ಮಾತ್ರ ಈ ಟ್ಯಾರಿಫ್ ರಿಯಾಯಿತಿ ಇರುತ್ತದೆ.

ಭಾರತವು ವಿಶ್ವದ ಮೂರನೇ ಅತಿದೊಡ್ಡ ಕಾರು ಮಾರುಕಟ್ಟೆಯಾಗಿದೆ. ಇಲ್ಲಿ ವರ್ಷಕ್ಕೆ 44 ಲಕ್ಷ ಕಾರುಗಳು ಮಾರಾಟವಾಗುತ್ತವೆ. ಮಾರುತಿ ಸುಜುಕಿ, ಮಹೀಂದ್ರ, ಟಾಟಾ, ಟೊಯೊಟೋ ಕಂಪನಿಗಳ ಪಾರಮ್ಯ ಇಲ್ಲಿದೆ. ಯೂರೋಪಿಯನ್ ಕಂಪನಿಗಳ ಕಾರುಗಳ ಮಾರುಕಟ್ಟೆ ಪಾಲು ಶೇ. 4 ಮಾತ್ರ. ಈಗ ಟ್ಯಾರಿಫ್ ಇಳಿಕೆಯಿಂದ ಬಿಎಂಡಬ್ಲ್ಯು, ವೋಲ್ಸ್​ವಾಗನ್, ಮರ್ಸಿಡೆಸ್ ಬೆಂಜ್ ಮೊದಲಾದ ಕಂಪನಿಗಳಿಗೆ ಪುಷ್ಟಿ ಸಿಗಬಹುದು.

ಇದನ್ನೂ ಓದಿ: ಭಾರತದೊಂದಿಗೆ ಒಪ್ಪಂದ, ‘ಯೂರೋಪ್ ಕಾಲ ಮೇಲೆ ಚಪ್ಪಡಿ’: ಅಮೆರಿಕ ಸಿಡಿಮಿಡಿ

ಭಾರತದಲ್ಲಿ ಸದ್ಯ 40,000 ಡಾಲರ್​ಗಿಂತ ಕಡಿಮೆ ಮೌಲ್ಯದ ಕಾರುಗಳ ಆಮದಿನ ಮೇಲೆ ಶೇ. 70 ಟ್ಯಾರಿಫ್ ಹಾಕಲಾಗುತ್ತಿದೆ. 40,000 ಡಾಲರ್​ಗಿಂತ ಹೆಚ್ಚಿನ ಮೌಲ್ಯದ ಕಾರುಗಳಿಗೆ ಶೇ. 110ರಷ್ಟು ಸುಂಕ ಇದೆ. ಈಗ 25 ಲಕ್ಷ ರೂಗಿಂತ ಹೆಚ್ಚಿನ ಬೆಲೆಯ ಕಾರುಗಳಿಗೆ ಭಾರತದ ಟ್ಯಾರಿಫ್​ನಲ್ಲಿ ಇಳಿಕೆ ಆಗಲಿದೆ.

ಒಂದು ಒಪ್ಪಂದ, 27 ದೇಶಗಳ ಮಾರುಕಟ್ಟೆ

ಭಾರತಕ್ಕೆ ಈ ಒಂದು ಒಪ್ಪಂದದಿಂದ 27 ಶ್ರೀಮಂತ ದೇಶಗಳ ಮಾರುಕಟ್ಟೆ ಪ್ರವೇಶ ಸಿಕ್ಕಂತಾಗಿದೆ. 6.4 ಲಕ್ಷ ಕೋಟಿ ರೂ ಮೊತ್ತದ ರಫ್ತು ಅವಕಾಶ ಸಿಗಲಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಗೆ ಹೆಚ್ಚಿನ ಬ್ಯುಸಿನೆಸ್ ಸಿಗಲಿದೆ.

ಎಂಜಿನಿಯರಿಂಗ್ ಮತ್ತು ಮ್ಯಾನುಫ್ಯಾಕ್ಚರಿಂಗ್​ನಲ್ಲಿ ಯೂರೋಪ್​ನ ಎರಡು ಟ್ರಿಲಿಯನ್ ಡಾಲರ್ ಕೈಗಾರಿಕಾ ಮಾರುಕಟ್ಟೆಯಲ್ಲಿ ಆದ್ಯತಾ ಪ್ರವೇಶ ಸಿಗಲಿದೆ.

ಆಭರಣ ಸೆಕ್ಟರ್​ಗೆ 79 ಬಿಲಿಯನ್ ಡಾಲರ್ ಮೌಲ್ಯದ ಪ್ರತಿಷ್ಠಿತ ಐರೋಪ್ಯ ಮಾರುಕಟ್ಟೆಯಲ್ಲಿ ಟ್ಯಾರಿಫ್ ರಹಿತ ಪ್ರವೇಶ ಸಿಗುತ್ತದೆ.

ಇದನ್ನೂ ಓದಿ: ಭಾರತ-ಯೂರೋಪಿಯನ್ ಯೂನಿಯನ್ ಒಪ್ಪಂದದಿಂದ ಯಾರಿಗೆ ಲಾಭ?

ಲೆದರ್ ಮತ್ತು ಪಾದರಕ್ಷೆ ಕ್ಷೇತ್ರದಲ್ಲಿ ಶೇ. 17 ಇದ್ದ ಟ್ಯಾರಿಫ್ ಅನ್ನು ಶೂನ್ಯಕ್ಕೆ ಇಳಿಸಲಾಗಿದೆ. ಯೂರೋಪಿಯನ್ ಯೂನಿಯನ್​ನ 100 ಬಿಲಿಯನ್ ಲೆದರ್ ಮಾರುಕಟ್ಟೆ ಭಾರತಕ್ಕೆ ಸಿಗುತ್ತದೆ. ಭಾರತದ ಚಮ್ಮಾರ ಕುಟುಂಬಗಳಿಗೆ ಖುಷಿಯ ಸುದ್ದಿ ಇದು.

ಯೂರೋಪಿಯನ್ ಯೂನಿಯನ್​ನ 263 ಬಿಲಿಯನ್ ಡಾಲರ್ ಮೌಲ್ಯದ ಟೆಕ್ಸ್​ಟೈಲ್ ಮಾರುಕಟ್ಟೆಗೆ ಭಾರತದ ಸರಕುಗಳು ಸುಂಕರಹಿತ ಪ್ರವೇಶ ಪಡೆಯಲಿವೆ. ಭಾರತೀಯ ನೇಕಾರ ಕುಟುಂಬಗಳಿಗೆ ಖುಷಿ ಸುದ್ದಿ ಇದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬಜೆಟ್ ಅಧಿವೇಶನಕ್ಕೂ ಮುನ್ನ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷ ಸಭೆ – Kannada News | Budget Session 2026 Defence Minister Rajnath Singh chairs all party meeting

ನವದೆಹಲಿ, ಜನವರಿ 27: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ (Budget 2026) ಮಂಡಿಸುತ್ತಾರೆ. ಈ ವರ್ಷ, ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಬಜೆಟ್ ಅನ್ನು ಭಾನುವಾರದಂದು ಮಂಡಿಸಲಾಗುವುದು. ಕಳೆದ ಕೆಲವು ವರ್ಷಗಳಿಂದ ಅನುಸರಿಸಿಕೊಂಡು ಬರುತ್ತಿರುವ ಸಂಪ್ರದಾಯದಂತೆ ಫೆಬ್ರವರಿ 1ರಂದು ಸಂಸತ್ತು ಹೇಗೆ ಸುಗಮವಾಗಿ ಕಾರ್ಯನಿರ್ವಹಿಸಬಹುದು ಎಂಬುದರ ಕುರಿತು ಚರ್ಚಿಸಲು ಇಂದು ಸರ್ವಪಕ್ಷ ಸಭೆ ನಡೆಸಲಾಯಿತು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಹಿರಿಯ ಬಿಜೆಪಿ ನಾಯಕರು ಮತ್ತು ಹಲವಾರು ವಿರೋಧ ಪಕ್ಷದ ಪ್ರತಿನಿಧಿಗಳು ಸರ್ವ ಪಕ್ಷ ಸಭೆಯಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ವಿರೋಧ ಪಕ್ಷದ ನಾಯಕರಲ್ಲಿ ಸೇರಿದ್ದರು. ಬಜೆಟ್ ಅಧಿವೇಶನವು ನಾಳೆ (ಬುಧವಾರ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾಡುವ ಭಾಷಣದೊಂದಿಗೆ ಪ್ರಾರಂಭವಾಗಲಿದೆ. ಆರ್ಥಿಕ ಸಮೀಕ್ಷೆಯನ್ನು ಜನವರಿ 29ರಂದು ಮಂಡಿಸಲಾಗುವುದು. ಆದರೆ, ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1ರಂದು ಮಂಡಿಸಲಾಗುವುದು. ಇದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸತತ ಒಂಬತ್ತನೇ ಬಜೆಟ್ ಮಂಡನೆಯಾಗಿದೆ.

ಇದನ್ನೂ ಓದಿ: ಪಿಎಂ ಕಿಸಾನ್ ಹಣ ಎರಡು ಪಟ್ಟು ಹೆಚ್ಚಾಗುತ್ತಾ? ರೈತರ ನಿರೀಕ್ಷೆ ಈ ಬಜೆಟ್​ನಲ್ಲಿ ಈಡೇರುತ್ತಾ?

ಅಧಿವೇಶನದ ಮೊದಲ ಹಂತವು ಫೆಬ್ರವರಿ 13ರವರೆಗೆ ಮುಂದುವರಿಯಲಿದ್ದು, ಈ ಸಮಯದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಮೇಲೆ ಚರ್ಚೆ ಮತ್ತು ಅಂಗೀಕಾರ ನಡೆಯಲಿದೆ. ವಿರಾಮದ ನಂತರ ಮಾರ್ಚ್ 9ರಂದು ಸಂಸತ್ತು ಮತ್ತೆ ಸಭೆ ಸೇರಲಿದ್ದು, ಅಧಿವೇಶನ ಏಪ್ರಿಲ್ 2ರಂದು ಮುಕ್ತಾಯಗೊಳ್ಳಲಿದೆ.

ಇದನ್ನೂ ಓದಿ: Union Budget 2026: ಹಲ್ವಾ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಭಾಗಿ; ಬಜೆಟ್​ಗೆ ಮುಂಚೆ ನಡೆಯುವ ಇದರ ವಿಶೇಷತೆ ಏನು?

ಇಂದು ನಡೆದ ಸರ್ವ ಪಕ್ಷ ಸಭೆಯಲ್ಲಿ ಅಧಿವೇಶನದ ಮೊದಲು ತನ್ನ ಪ್ರಸ್ತಾವಿತ ಶಾಸಕಾಂಗ ಕಾರ್ಯಸೂಚಿಯನ್ನು ಹಂಚಿಕೊಳ್ಳದಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಟೀಕಿಸಿತು. ಸಭೆಯ ನಂತರ ಮಾತನಾಡಿದ ಕಾಂಗ್ರೆಸ್ ನಾಯಕ ಕೆ. ಸುರೇಶ್, ಪರಿಚಯಿಸಬೇಕಾದ ಯಾವುದೇ ಮಸೂದೆಗಳ ಪಟ್ಟಿಯನ್ನು ಹಂಚಿಕೊಳ್ಳದಿದ್ದಕ್ಕಾಗಿ ವಿರೋಧ ಪಕ್ಷಗಳು ಅತೃಪ್ತಿಗೊಂಡಿವೆ ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಈ ಬಾರಿ ಏನೆಲ್ಲ ಇರಲಿದೆ? – Kannada News | 17th Bengaluru International Film Festival 2026 Highlights

ದೇಶಾದ್ಯಂತ ಇರುವ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ (Bengaluru Film Festival)  17ನೇ ಅವತರಣಿಕೆಗೆ ವೇದಿಕೆ ಸಜ್ಜಾಗಿದೆ. ಗುರುವಾರ (ಜನವರಿ 29) ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ವಿಧಾನ ಪರಿಷತ್‍ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್‍ ಉಪಸ್ಥಿತರಿರಲಿದ್ದಾರೆ. ಚಿತ್ರೋತ್ಸವದ ರಾಯಭಾರಿಯಾಗಿ ಬಹುಭಾಷಾ ನಟ ಪ್ರಕಾಶ್‍ ರಾಜ್‍ ಹಾಗೂ ನಟಿ ರುಕ್ಮಿಣಿ ವಸಂತ್ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸಾಧು ಕೋಕಿಲ ಕೂಡ ಉಪಸ್ಥಿತರಿರಲಿದ್ದಾರೆ. ಸಂಜೆ 5.30ರಿಂದ ಡಾ. ಜ್ಯೋತ್ಸ್ನಾ ಶ್ರೀಕಾಂತ್‍ ಅವರ ನೇತೃತ್ವದಲ್ಲಿ 35 ಕಲಾವಿದರಿಂದ ‘ವಿಶ್ವ ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದ್ದು, ಸಂಜೆ 6 ಗಂಟೆಗೆ ಸಭಾ ಕಾರ್ಯಕ್ರಮ ಆರಂಭ ಆಗಲಿದೆ. ರಾತ್ರಿ 8 ಗಂಟೆಗೆ ಈ ವೇದಿಕೆಯಲ್ಲಿ ಉದ್ಘಾಟನಾ ಚಿತ್ರವಾಗಿ ನೆದರ್‍ಲ್ಯಾಂಡ್‍ ದೇಶದ ‘ಪೋರ್ಟ್ ಬ್ಯಾಗೇಜ್‍’ ಸಿನಿಮಾದ ಪ್ರದರ್ಶನ ಆಗಲಿದೆ.

ಜ.30ರಿಂದ ಫೆಬ್ರವರಿ 6ರವರೆಗೂ, ಈ ಚಿತ್ರೋತ್ಸವದಲ್ಲಿ 65 ದೇಶಗಳ ಸುಮಾರು 225 ಅತ್ಯುತ್ತಮ ಚಲನಚಿತ್ರಗಳು ಪ್ರದರ್ಶನಗೊಳ್ಳಲಿದ್ದು ಆಯಾ ದೇಶದ ಸ್ಥಿತಿ-ಗತಿ, ಜನ ಜೀವನ ಮತ್ತು ಸಂಸ್ಕೃತಿಯನ್ನು ಬಿಂಬಿಸಲಿವೆ. ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಅತ್ಯುತ್ತಮ ಚಲನಚಿತ್ರಗಳು ಈ ಚಿತ್ರೋತ್ಸವದಲ್ಲಿ ‘ಬೆಂಗಳೂರಿನಲ್ಲಿ ಜಗತ್ತು’ ಎನ್ನುವ ಶೀರ್ಷಿಕೆಯಡಿ ಈ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ಈ ಚಿತ್ರೋತ್ಸವವನ್ನು ಪ್ರತೀ ವರ್ಷವೂ ಅರ್ಥಪೂರ್ಣವಾದ ಧ್ಯೇಯವಾಕ್ಯದ ಮೂಲಕ ನಡೆಸಲಾಗುತ್ತಿದ್ದು, ಈ ಬಾರಿ ರಾಷ್ಟ್ರಕವಿ ಡಾ.ಜಿ.ಎಸ್‌. ಶಿವರುದ್ರಪ್ಪನವರ ಪ್ರಸಿದ್ಧ ಗೀತೆಯಾಗಿರುವ ‘ಸ್ತ್ರೀ ಎಂದರೆ ಅಷ್ಟೇ ಸಾಕೆ’ ಎಂಬ ಸಾಲಿನೊಂದಿಗೆ ʼಸ್ತ್ರೀ ಸಂವೇದನೆ, ಸಮಾನತೆಯ ದನಿʼ ಎಂಬ ಟ್ಯಾಗ್‌ ಲೈನ್‌ ಹೊಂದಿರುವ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತಿದೆ.

ಇದನ್ನೂ ಓದಿ: ‘ಲ್ಯಾಂಡ್​ಲಾರ್ಡ್’ ಸಿನಿಮಾ ನೋಡೆ ನೋಡ್ತೀನಿ ಎಂದ ಸಿದ್ದರಾಮಯ್ಯ; ದುನಿಯಾ ವಿಜಿ ಚಿತ್ರಕ್ಕೆ ಸಿಎಂ ಬೆಂಬಲ

ಈ ಚಿತ್ರೋತ್ಸವದಲ್ಲಿ ಏಷಿಯನ್‌ ಸಿನಿಮಾ ಸ್ಪರ್ಧಾ ವಿಭಾಗ, ಚಿತ್ರ ಭಾರತಿ (ಭಾರತೀಯ ಸಿನಿಮಾ ಸ್ಪರ್ಧಾ ವಿಭಾಗ), ಕನ್ನಡ ಸಿನಿಮಾ ಸ್ಪರ್ಧಾ ವಿಭಾಗ, ಸಮಕಾಲೀನ ವಿಶ್ವ ಸಿನಿಮಾ, ಕನ್ನಡ ಜನಪ್ರಿಯ ಸಿನಿಮಾ, ಫಿಪ್ರೆಸ್ಕಿ – ವಿಮರ್ಶಕರ ವಾರ, ಜೀವನ ಕಥನ ಆಧಾರಿತ ಚಿತ್ರಗಳು, ದೇಶ ಕೇಂದ್ರಿತ ವಿಶೇಷ: ಪೋಲೆಂಡ್‌, ಭಾರತೀಯ ಉಪಭಾಷಾ ಚಲನಚಿತ್ರಗಳು, ಪುನರಾವಲೋಕನ‌ ಮುಂತಾದ ವಿಭಾಗಗಳಡಿ ಹಲವು ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಕನ್ನಡದ ಮೇರು ನಟ ಪದ್ಮಭೂಷಣ ಡಾ. ರಾಜಕುಮಾರ್‌ ಅಭಿನಯದ ಐದು ಮಹತ್ವದ ಕನ್ನಡ ಚಲನಚಿತ್ರಗಳ ಪ್ರದರ್ಶನ, ಪೋಲೆಂಡಿನ ಪ್ರಖ್ಯಾತ ನಿರ್ದೇಶಕ ಆಂದ್ರೆ ವಾಜ್ದಾ ಅವರ ನಿರ್ದೇಶನದ ಏಳು ಪೋಲಿಷ್‌ ಚಲನಚಿತ್ರಗಳ ಪ್ರದರ್ಶನ, ಖ್ಯಾತ ಅಭಿನೇತ್ರಿ ಸ್ಮಿತಾ ಪಾಟೀಲ್‌ ಅವರ ಹೆಸರಾಂತ ಚಲನಚಿತ್ರಗಳ ಪ್ರದರ್ಶನ, ಥಾಯ್ಲೆಂಡಿನ ಖ್ಯಾತ ನಿರ್ದೇಶಕ ಅಚಿತಪಾಂಗ್‌ ವೀರಸೆಥಕುಲ್ ಅವರ ನಾಲ್ಕು ಪ್ರಮುಖ ಚಲನಚಿತ್ರಗಳ ಪ್ರದರ್ಶನ, ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಜನಮನ್ನಣೆ ಪಡೆದ ಸಮಕಾಲೀನ ಭಾರತೀಯ ಚಲನಚಿತ್ರಗಳ ಪ್ರದರ್ಶನ, ಸಂರಕ್ಷಿಸಲ್ಪಟ್ಟ ಮಹತ್ವದ ಭಾರತೀಯ ಚಲನಚಿತ್ರಗಳ ಪ್ರದರ್ಶನ ಕೂಡಾ ನಡೆಯಲಿದೆ.

ಚಿತ್ರೋತ್ಸವ ನಡೆಯುವ ಎಂಟು ದಿನಗಳ ಕಾಲ ಪ್ರತೀ ದಿನ ಚಿತ್ರ ನಿರ್ಮಾಣ, ನಿರ್ದೇಶನ, ಚಿತ್ರಕತೆ, ತಂತ್ರಜ್ಞಾನ ಮತ್ತು ಉದ್ಯಮಕ್ಕೆ ಸಂಬಂಧಪಟ್ಟಂತೆ ತಜ್ಞರೊಂದಿಗೆ ಸಂವಾದ, ಉಪನ್ಯಾಸ, ಮಾಸ್ಟರ್‌ ಕ್ಲಾಸ್‌, ವಿಚಾರ ಸಂಕಿರಣ ಮೊದಲಾದ ಕಾರ್ಯಕ್ರಮಗಳಿರುತ್ತವೆ. ಚಿತ್ರೋತ್ಸವದ ರಾಯಭರಿ ಪ್ರಕಾಶ್‍ ರಾಜ್‍ ಅವರಿಂದ ‘ನಾವು ಮತ್ತು ನಮ್ಮ ಸಿನಿಮಾ’ ಎಂಬ ವಿಷಯದ ಕುರಿತು ಉಪನ್ಯಾಸ ನಡೆಯಲಿದೆ.

ಇದನ್ನೂ ಓದಿ: ಜನವರಿ 29ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮೂರು ಕಡೆಗಳಲ್ಲಿ ಚಿತ್ರ ಪ್ರದರ್ಶನ

ಸಂಕಲನಕಾರ ಶ್ರೀಕರ್ ಪ್ರಸಾದ್ ಅವರಿಂದ ‘ಚಲನಚಿತ್ರದ ಸಂಕಲನದ ಮಹತ್ವ’, ನಿರ್ದೇಶಕ ಮತ್ತು ಸಂಕಲನಕಾರ ಮಹೇಶ್ ನಾರಾಯಣನ್ ಅವರಿಂದ ‘ಸಮಕಾಲೀನ ಚಲನಚಿತ್ರ ಕಥನ ನಿರೂಪಣೆ ಮತ್ತು ಶೈಲಿ’, ಹೆಸರಾಂತ ಧ್ವನಿ ವಿನ್ಯಾಸಕ ಬಿಶ್ವದೀಪ್‌ ಚಟರ್ಜಿ ಅವರಿಂದ ‘ದೃಶ್ಯಾತೀತ ಧ್ವನಿ – ಆಡಿಯೋಗ್ರಫಿಯ ಕಲೆ’, ಅನುರಾಗ್‌ ಕಶ್ಯಪ್‌ರವರಿಂದ‌ ‘ಸಾಂಪ್ರದಾಯಿಕ ಕಲ್ಪನೆಗಳಾಚೆಗಿನ ಚಲನಚಿತ್ರ ಕಥನಗಾರಿಕೆ’ ಕುರಿತ ಉಪನ್ಯಾಸ ನಡೆಯಲಿದೆ.

ಖ್ಯಾತ ಛಾಯಾಗ್ರಾಹಕ ವಿ.ಕೆ. ಮೂರ್ತಿ ಕುರಿತು ವಾರ್ಷಿಕ ಸ್ಮಾರಕ ಉಪನ್ಯಾಸ ನಡೆಯಲಿದ್ದು, ‘ಲೆನ್ಸ್‌ಗಳ ಆಯ್ಕೆ, ಬೆಳಕಿನ ವಿನ್ಯಾಸ ಮತ್ತು ಛಾಯಾಗ್ರಹಣ ಕಲೆ’ ಕುರಿತು ಮಾತುಕತೆ ನಡೆಯಲಿದ್ದು, ಹಿರಿಯ ಛಾಯಾಗ್ರಾಹಕ ಜಿ.ಎಸ್‌. ಭಾಸ್ಕರ್‌ ಕಾರ್ಯಕ್ರಮ ನಿರ್ವಹಣೆ ಮಾಡಲಿದ್ದಾರೆ. ಡಾ. ಗಿರೀಶ್ ಕಾಸರವಳ್ಳಿ, ಡಾ. ಸಾಧು ಕೋಕಿಲ, ಡಾ. ಜಯಮಾಲ ಹಾಗೂ ಇತರರೊಂದಿಗೆ ಕಳೆದ ನಾಲ್ಕು ದಶಕಗಳ ಕನ್ನಡ ಸಿನಿಮಾ ಬಗ್ಗೆ ಸಂವಾದ, ಗಿರೀಶ್ ಕಾಸರವಳ್ಳಿ ಅವರಿಂದ ʼಚಲನಚಿತ್ರ ಕಥನಗಳಲ್ಲಿ ನಮ್ಮತನ ಮತ್ತು ನೈಜತೆʼ ಕುರಿತ ಉಪನ್ಯಾಸ ನಡೆಯಲಿದೆ. ಕರ್ನಾಟಕ ಲೇಖಕಿಯರ ಸಂಘದ ವತಿಯಿಂದ ಚಿತ್ರೋತ್ಸವದ ಧ್ಯೇಯವಾಕ್ಯ ಕೇಂದ್ರಿತ ಸಂವಾದ ಕಾರ್ಯಕ್ರಮ ಸೇರಿದಂತೆ ಅನೇಕ ಕಾರ್ಯಕ್ರಮಗಳು ಇರಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Union Budget 2026: ಹಲ್ವಾ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಭಾಗಿ; ಬಜೆಟ್​ಗೆ ಮುಂಚೆ ನಡೆಯುವ ಇದರ ವಿಶೇಷತೆ ಏನು? – Kannada News | Union budget 2026 halwa ceremony held on jan 27th know its significance

ನವದೆಹಲಿ, ಜನವರಿ 27: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಇಂದು (ಜ. 27) ಮಂಗಳವಾರ ಹಲ್ವಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ದೆಹಲಿಯ ನಾರ್ತ್ ಬ್ಲಾಕ್​ನಲ್ಲಿರುವ ಬಜೆಟ್ ಪ್ರೆಸ್ ಕಟ್ಟಡದಲ್ಲಿ ಈ ಕಾರ್ಯಕ್ರಮ ನಡೆಯಿತು. ಬಜೆಟ್ (Union Budget 2026) ಸಿದ್ಧತೆಯ ಅಂತಿಮ ಹಂತದ ಕ್ರಿಯೆ ಈ ಹಲ್ವಾ ಕಾರ್ಯಕ್ರಮದ ಮೂಲಕ ಆಗುತ್ತದೆ. ಬಜೆಟ್ ತಯಾರಿಕೆಯಲ್ಲಿ ತೊಡಗಿರುವ ಹಣಕಾಸು ಸಚಿವಾಲಯದ ಅಡಿಯ ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳು ಹಾಗು ಹಿರಿಯ ಅಧಿಕಾರಿಗಳು ಇದರಲ್ಲಿ ಭಾಗವಹಿಸಿದ್ದರು. ಫೆಬ್ರುವರಿ 1ರಂದು ಬಜೆಟ್ ಮಂಡನೆಯಾಗಲಿದೆ.

ಯಾಕಿದು ಹಲ್ವಾ ಕಾರ್ಯಕ್ರಮ?

ಹಲ್ವಾ ಕಾರ್ಯಕ್ರಮ ಬಜೆಟ್ ಸಿದ್ಧತೆಯ ಒಂದು ಸಣ್ಣ ಭಾಗ. ಪ್ರತೀ ಬಾರಿಯ ಬಜೆಟ್​ಗೆ ಮುಂಚೆ ಇದು ನಡೆಯುತ್ತದೆ. ಬಜೆಟ್ ತಯಾರಿಕೆಯಲ್ಲಿ ತೊಡಗಿರುವವರೆಲ್ಲರೂ ಖುಷಿಯಲ್ಲಿ ಸಿಹಿ ತಿನ್ನುವ ಸಂದರ್ಭವಿದು.

ಇದನ್ನೂ ಓದಿ: ಬಜೆಟ್​ನಲ್ಲಿ ಜಿಎಸ್​ಟಿ ದರ ಇಳಿಕೆಗೆ ಕ್ರಮ: ಎಂಎಸ್​ಎಂಇಗಳಿಂದ ನಿರೀಕ್ಷೆ

ದೊಡ್ಡ ಬಾಣಲೆಯಲ್ಲಿ ಹಲ್ವಾ ಸಿದ್ಧಪಡಿಸಲಾಗುತ್ತದೆ. ಹಣಕಾಸು ಸಚಿವರು ಅಥವಾ ಬಜೆಟ್ ಮಂಡಿಸುವವರು ಬಾಣಲೆಯಲ್ಲಿರುವ ಹಲ್ವಾವನ್ನು ತಿರುಗಿಸುವುದು ಸಂಪ್ರದಾಯ. ಆ ಬಳಿಕ ಎಲ್ಲರೂ ಹಲ್ವಾ ತಿಂದು ಸಂತೋಷ ಪಡುತ್ತಾರೆ. ಬಜೆಟ್ ಸಿದ್ಧತೆಯಲ್ಲಿ ಶ್ರಮ ಪಟ್ಟ ಎಲ್ಲರಿಗೂ ಸಿಹಿ ತಿನಿಸುವ ಮೂಲಕ ಸಚಿವರು ತೋರುವ ಕೃತಜ್ಞತೆಯ ಸಂದರ್ಭ ಅದಾಗಿರುತ್ತದೆ. ಭಾರತೀಯ ಸಂಪ್ರದಾಯದಲ್ಲಿ ಒಳ್ಳೆಯ ಕೆಲಸ ಆರಂಭವಾದಾಗ ಮತ್ತು ಯಶಸ್ವಿಯಾದಾಗ ಸಿಹಿ ತಿನಿಸುತ್ತಾರೆ. ಹಲ್ವಾ ಕಾರ್ಯಕ್ರಮ ಅದೇ ಸಂಪ್ರದಾಯದಲ್ಲಿ ರೂಪುಗೊಂಡಿದೆ.

ಹಲ್ವಾ ಕಾರ್ಯಕ್ರಮದ ಬಳಿಕ ಅಧಿಕಾರಿಗಳು ಲಾಕ್

ಹಲ್ವಾ ಕಾರ್ಯಕ್ರಮವು ಬಜೆಟ್ ಸಿದ್ಧತೆಯ ಅಂತಿಮ ಹಂತವಾಗಿರುತ್ತದೆ. ಇದಾದ ಬಳಿಕ ಬಜೆಟ್ ಸಿದ್ಧಪಡಿಸುವವರೆಲ್ಲರೂ ನಾರ್ತ್ ಬ್ಲಾಕ್ ಕಟ್ಟಡದಲ್ಲಿ ಸೇರುತ್ತಾರೆ. ಅಕ್ಷರಶಃ ಅವರು ಲಾಕ್ ಆಗಿರುತ್ತಾರೆ. ಹೊರಗಿನ ಸಂಪರ್ಕ ಇರುವುದಿಲ್ಲ. ಮೊಬೈಲ್ ಬಳಸುವಂತಿಲ್ಲ. ಬಜೆಟ್ ಮಂಡನೆ ಆರಂಭವಾಗುವವರೆಗೂ ಅವರಿಗೆ ಇದು ಲಾಕಿನ್ ಅವಧಿ. ಬಜೆಟ್ ಅಂಶಗಳು ಹೊರಗೆ ಸೋರಿಕೆಯಾಗಬಾರದೆಂದು ಮುಂಜಾಗ್ರತೆಯಾಗಿ ಈ ಬಿಗಿಕ್ರಮ ತೆಗೆದುಕೊಳ್ಳುತ್ತದೆ.

ಇದನ್ನೂ ಓದಿ: ಸಾಮಾನ್ಯ ಹೂಡಿಕೆದಾರರು ಈ ಬಾರಿಯ ಬಜೆಟ್​ನಲ್ಲಿ ಗಮನಿಸಬೇಕಾದ ಸಂಗತಿಗಳಿವು

ನಾರ್ತ್ ಬ್ಲಾಕ್​ನಲ್ಲಿ ಬಜೆಟ್ ಪ್ರೆಸ್ ಇರುವುದು. ಹಣಕಾಸು ಸಚಿವಾಲವು ಇದೇ ನಾರ್ತ್ ಬ್ಲಾಕ್​ನಲ್ಲಿ ಇತ್ತು. ಈಗ ಕರ್ತವ್ಯ ಭವನಕ್ಕೆ ಅದರ ಕಚೇರಿ ವರ್ಗವಾಗಿದೆ. ಆದರೂ 2026-27ರ ಬಜೆಟ್ ಅನ್ನು ನಾರ್ತ್ ಬ್ಲಾಕ್​ನಲ್ಲಿರುವ ಪ್ರೆಸ್​ನಲ್ಲೇ ಮುದ್ರಿಸಲಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಯಾದಗಿರಿ: ಗಣರಾಜ್ಯೋತ್ಸವ ಅಂಗವಾಗಿ ಲುಂಬಿಣಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ; ಇಲ್ಲಿವೆ ಫೋಟೋಸ್​

Source link

ಜ.29ರಂದು ಬೆಂಗಳೂರು ಚಲೋ ಕೈಗೊಂಡ ಸಾರಿಗೆ ನೌಕರರಿಗೆ ಶಾಕ್ ಕೊಟ್ಟ KSRTC – Kannada News | Employees Don’t participate In Bengaluru Chalo protest on january 29 Ordered By KSRTC MD

ಬೆಂಗಳೂರು, (ಜನವರಿ 27): ಕೆಎಸ್‌ಆರ್‌ಟಿಸಿ  (KSRTC) ಸೇರಿದಂತೆ ಕರ್ನಾಟಕದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು (employees) ಸಮರ ಸಾರಿದ್ದಾರೆ. ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ನಾಡಿದ್ದು ಅಂದರೆ ಜನವರಿ 29ರಂದು ಬೆಂಗಳೂರು ಚಲೋಗೆ (Bengaluru Chalo) ಕರೆ ನೀಡಿದ್ದಾರೆ. ಆದ್ರೆ, ಇದಕ್ಕೆ ಕೆಎಸ್​​ಆರ್​​​ಟಿಸಿ ಶಾಕ್ ಕೊಟ್ಟಿದ್ದು, ಸಾರಿಗೆ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ. ಗುರುವಾರ ಡ್ಯೂಟಿಗೆ ಬಂದಿಲ್ಲ ಅಂದರೆ ‘ನೋ ವರ್ಕ್ ನೋ ಪೇ’ ಎಂದು ಕೆಎಸ್ಆರ್ಟಿಸಿ ಎಂಡಿ ಅಕ್ರಂ ಪಾಷ ಆದೇಶ ಹೊರಡಿಸಿದ್ದಾರೆ.

‘ನೋ ವರ್ಕ್ ನೋ ಪೇ’ ಆದೇಶ

ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಜನವರಿ 29ರಂದು ಬೆಂಗಳೂರು ಚಲೋ ಕೈಗೊಂಡಿದ್ದಾರೆ. ಆದ್ರೆ, ಇದಕ್ಕೆ ಒಂದು ದಿನ ಮೊದಲೇ ಕೆಎಸ್​​​ಆರ್​​ಟಿಸಿ ಮಹತ್ವದ ಆದೇಶ ಹೊರಡಿಸಿದ್ದು, ಸಾರಿಗೆ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ ಎಂದು ಎಚ್ಚರಿಕೆ ಸಂದೇಶ ರವಾನಿಸಿದೆ. ಒಂದು ವೇಳೆ ಗುರುವಾರ ಡ್ಯೂಟಿಗೆ ಬಂದಿಲ್ಲ ಅಂದರೆ ‘ನೋ ವರ್ಕ್ ನೋ ಪೇ’ ಎನ್ನುವ ಆದೇಶವನ್ನು ಜಾರಿ ಮಾಡಿದೆ.

ಇದನ್ನೂ ಓದಿ: ಮಂಗಳೂರು-ಕಾಸರಗೋಡು ಪ್ರಯಾಣಿಕರಿಗೆ ಬಿಗ್​​ ಶಾಕ್​ ನೀಡಿದ ಕರ್ನಾಟಕ-ಕೇರಳ ಸರ್ಕಾರ!

ಅಧಿಕಾರಿಗಳಿಗೆ ಖಡಕ್ ಸೂಚನೆ

01-01-2020ರಿಂದ 28-02-2023ರ ವರೆಗಿನ 38 ತಿಂಗಳ ವೇತನ ಪರಿಷ್ಕರಣೆಯ ಹಿಂಬಾಕಿ ಹಾಗೂ
01.01.2024 ರಿಂದ ನಾಲ್ಕು ವರ್ಷಗಳ ವೇತನ ಒಪ್ಪಂದಕ್ಕೆ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿಯು ಜನವರಿ 29ರ ಗುರುವಾರ ಬೆಂಗಳೂರು ಚಲೋಗೆ ಕರೆ ನೀಡಿದೆ. ಈ ಹಿನ್ನೆಲೆ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗದಂತೆ ಮುಂಜಾಗ್ರತಾ ಕೈಗೊಳ್ಳುವಂತೆ ಕೆಎಸ್ಆರ್ಟಿಸಿ ಎಂಡಿ ಅಕ್ರಂ ಪಾಷ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದಿನಾಂಕ.29.01.2026 ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಯಾವುದೇ ರೀತಿಯ ರಜೆಯನ್ನು ಮಂಜೂರು ಮಾಡಬಾರದು. ಕೆಲಸಕ್ಕೆ ಗೈರು ಹಾಜರಾಗುವ ನೌಕರರ ವಿರುದ್ಧ ‘ನೋ ವರ್ಕ್ ನೋ ಪೇ’ ಜಾರಿ ಮಾಡಬೇಕು.
ಅನಿವಾರ್ಯ ಸಂದರ್ಭದಲ್ಲಿ ಅವಶ್ಯವಿದ್ದಲ್ಲಿ ನೌಕರರ ವಾರದ ರಜೆಯನ್ನು ರದ್ದುಗೊಳಿಸಿ ಕರ್ತವ್ಯಕ್ಕೆ ನಿಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜ.29ರಂದು ಬಸ್ ಸಂಚಾರ ಇರುತ್ತಾ ಇಲ್ಲಾ?

ಇದರೊಂದಿಗೆ ಕೆಎಸ್​​​ಆರ್​​ಟಿಸಿ ತನ್ನ ನೌಕರರ ಪ್ರತಿಭಟನೆಗೆ ಬ್ರೇಕ್ ಹಾಕಲು ಮುಂದಾಗಿದೆ. ಹೀಗಾಗಿ ಬೆಂಗಳೂರು ಚಲೋ, ಸಾರಿಗೆ ನೌಕರರ ಮುಂದಿನ ನಡೆ ಮೇಲೆ ನಿಂತಿದೆ.  ಒಂದು ವೇಳೆ ಈ ಆದೇಶಕ್ಕೆ ಹೆದರಿ ಪ್ರತಿಭಟನೆಯಿಂದ ಹಿಂದೆ ಸರಿದರೆ ಎಂದಿನಂತೆ ಬಸ್ ಸಂಚಾರ ಇರಲಿದೆ. ಇನ್ನು ಆದೇಶಕ್ಕೆ ಡೋಟ್​ ಕೇರ್ ಎಂದು ಬೆಂಗಳೂರು ಚಲೋಗೆ ತೆರಳಿದರೆ ಕೆಎಸ್​​ಆರ್​​​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವುದು ಗ್ಯಾರಂಟಿ. ಹೀಗಾಗಿ ಪ್ರಯಾಣಿಕರು ಜನವರಿ 29ರಂದು ಬಸ್ ಪ್ರಯಾಣ ಕೈಬಿಡುವುದು ಒಳಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 4:42 pm, Tue, 27 January 26

Source link