ಬೀದಿ ನಾಯಿಗಳ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಜನ: ಒಂದೇ ದಿನ 36ಕ್ಕೂ ಅಧಿಕ ಮಂದಿ ಮೇಲೆ ದಾಳಿ – Kannada News | Karnataka Stray Dog Attacks: More Than 36 People Injured in Single Day
ಬೀದಿ ನಾಯಿಗಳ ಹಾವಳಿ (ಸಾಂದರ್ಭಿಕ ಚಿತ್ರ) ಶಿವಮೊಗ್ಗ/ ಧಾರವಾಡ, ಜನವರಿ 27: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು ಶಿವಮೊಗ್ಗದ ಭದ್ರವಾತಿ, ಧಾರವಾಡ ಮತ್ತು ಬಾಗಲಕೋಟೆ ಸೇರಿ ವಿವಿಧೆಡೆ ನಿನ್ನೆ ಒಂದೇ ದಿನ 36ಕ್ಕೂ ಹೆಚ್ಚು ಮಂದಿಯ ಮೇಲೆ ದಾಳಿ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಭದ್ರಾವತಿಯಲ್ಲಿ 11 ಜನರಿಗೆ ಹುಚ್ಚು ನಾಯಿ ಕಡಿದಿದ್ದರೆ, ಧಾರವಾಡದಲ್ಲಿ 15ಕ್ಕೂ ಅಧಿಕ ಮಂದಿ ಇಂತಹುದ್ದೇ ಪ್ರಕರಣದಲ್ಲಿ ಗಾಯಗೊಂಡಿದ್ದಾರೆ. ಅತ್ತ ಬಾಗಲಕೋಟೆಯಲ್ಲಿಯೂ 10ಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿ…