ತಮಿಳುನಾಡಿನಲ್ಲಿ ಹೊಸ ಪಕ್ಷ ಕಟ್ಟಲು ಮುಂದಾದ್ರಾ ಬಿಜೆಪಿ ನಾಯಕ ಅಣ್ಣಾಮಲೈ?
ಚೆನ್ನೈ, ಜೂನ್ 1: ತಮಿಳುನಾಡು ರಾಜಕಾರಣದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗುವ ಮುನ್ಸೂಚನೆ ದೊರೆತಿದೆ. ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ ಅಣ್ಣಾಮಲೈ(K Annamalai) ಹೊಸ ಪಕ್ಷ ಕಟ್ಟಲು ಸಿದ್ಧತೆ ಆರಂಭಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಮಾನ ಮನಸ್ಕ ಜನರನ್ನು ಒಗ್ಗೂಡಿಸುವುದು ಮತ್ತು ತಳಮಟ್ಟದಲ್ಲಿ ಬಲಿಷ್ಠ ಸ್ವಯಂಸೇವಕರ ಪಡೆಯನ್ನು ನಿರ್ಮಿಸುವುದು ಈ ಆಂದೋಲನದ ಮುಖ್ಯ ಉದ್ದೇಶ ಎನ್ನಲಾಗಿದೆ. ಈ ಹೊಸ ಚಳವಳಿಗೆ “ಮಕ್ಕಳ್ ಶಕ್ತಿ ಇಯಕ್ಕಂ” (ಜನಶಕ್ತಿ ಆಂದೋಲನ) ಎಂದು ಹೆಸರಿಡಬಹುದು ಎಂಬ ವದಂತಿಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ….