ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬೆಂಗಳೂರು, ಮೇ 31: ಇಡೀ ಕರುನಾಡು ಆರ್‌ಸಿಬಿ ಗೆಲುವಿಗಾಗಿ ಪ್ರಾರ್ಥಿಸುತ್ತಿದೆ. ಗೆಲುವು ಸಂಭ್ರಮಾಚರಣೆಗೆ ಬೆಂಗಳೂರಿಗರು ಸಜ್ಜಾಗಿದ್ದಾರೆಯಾದರೂ ರೂಲ್ಸ್‌ಗಳು ಅಡ್ಡಿ ಆಗಿವೆ. ಈ ಮಹತ್ವದ ಪಂದ್ಯದ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಸಂಭ್ರಮಾಚರಣೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಆರ್ಸಿಬಿ ಅಭಿಮಾನಿಗಳ ಹೆಚ್ಚಿನ ಉತ್ಸಾಹವನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಮತ್ತು ನಿಯಮಬಾಹಿರ ಸಂಭ್ರಮಾಚರಣೆಗಳನ್ನು ನಿಯಂತ್ರಿಸಲು ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಗರದಾದ್ಯಂತ ಪೊಲೀಸರಿಂದ ತೀವ್ರ ನಿಗಾ ವಹಿಸಲಾಗಿದ್ದು, ವಿಶೇಷವಾಗಿ ಎಂ.ಜಿ. ರೋಡ್, ಚರ್ಚ್‌ಸ್ಟ್ರೀಟ್ ಸೇರಿದಂತೆ ಹಲವಾರು…