Headlines

ಅರೆಸ್ಟ್​ ಆದ್ರೂ ಖುಷಿ ಖುಷಿಯಲ್ಲಿರುವ ರಾಜೀವ್ ಗೌಡ ಹೇಳಿದ್ದೇನು? – Kannada News | Sidlaghatta official threat case: Accused Rajeev Gowda First Reaction after Arrested By Police

ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ (Sidlaghatta official threat case) ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಂಖಂಡ ರಾಜೀವ್ ಗೌಡನನ್ನು (Rajeev Gowda) ಬಂಧಿಸಲಾಗಿದೆ. ಕಳೆದ 14 ದಿನಗಳಿಂದ ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ನಿನ್ನೆ(ಜನವರಿ 26) ಕೇರಳದ ಗಡಿಭಾಗದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಪೊಲೀಸರು ಆರೋಪಿ ರಾಜೀವ್ ಗೌಡನನ್ನು ಶಿಡ್ಲಘಟ್ಟಕ್ಕೆ ಕರೆತಂದಿದ್ದು, ವೈದ್ಯಕೀಯ ತಪಾಸಣೆ ಮಾಡಿಸಿದ್ದಾರೆ. ಈ ವೇಲೆ ರಾಜೀವ್ ಗೌಡ ಏನು ಹೇಳಿದ್ದಾನೆ ಎನ್ನುವುದನ್ನು…

Read More

ಗಿಲ್ಲಿ ಮೊದಲ ಬಾರಿ ವೇದಿಕೆ ಏರಿದಾಗ ಏನಾಗಿತ್ತು? ನಂತರ ಗಿಲ್ಲಿ ಮಾಡಿದ್ದೇನು? – Kannada News | How was Gilli Nata in his initial days Guru explains

ಗಿಲ್ಲಿ ನಟ (Gilli Nata), ಪ್ರಸ್ತುತ ರಾಜ್ಯದಾದ್ಯಂತ ಹೆಚ್ಚು ಪ್ರಚಲಿತದಲ್ಲಿರುವ ಹೆಸರು. ಬಿಗ್​​ಬಾಸ್ ವಿನ್ನರ್ ಆಗಿರುವ ಗಿಲ್ಲಿಗೆ ರಾಜ್ಯದ ಜನ ಭರಪೂರ ಪ್ರೀತಿ ಕೊಡುತ್ತಿದ್ದಾರೆ. ಗಿಲ್ಲಿ ಹೋದಲ್ಲೆಲ್ಲ ಜನ ಸಾಗರವೇ ಸೇರುತ್ತಿದೆ. ಬಿಗ್​​ಬಾಸ್ ಮನೆಯಲ್ಲಿದ್ದಾಗ ಗಿಲ್ಲಿ ತಮ್ಮ ಹಾಸ್ಯ, ತಮ್ಮ ಮ್ಯಾನರಿಸಂ ಇನ್ನಿತರೆಗಳಿಂದ ಗಮನ ಸೆಳೆದಿದ್ದಾರೆ. ಈಗ ಗಿಲ್ಲಿ ಸೆಲೆಬ್ರಿಟಿ. ಗಿಲ್ಲಿ ವೇದಿಕೆ ಏರಿದರೆ ಜನ ಚಪ್ಪಾಳೆ, ಶಿಳ್ಳೆ ಹೊಡೆಯುತ್ತಿದ್ದಾರೆ. ಆದರೆ ಗಿಲ್ಲಿ ಮೊದಲ ಬಾರಿಗೆ ವೇದಿಕೆ ಏರಿದಾಗ ಏನಾಗಿತ್ತು ಗೊತ್ತೆ? ಗಿಲ್ಲಿಯ ಗೆಳೆಯರು, ಗಿಲ್ಲಿಗೆ ಆರಂಭದಲ್ಲಿ…

Read More

ಜೈಲಿನಿಂದ ಆಚೆ ಬರುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಶಾಕ್ ​ – Kannada News | Dharwad Yogesh Gowda Murder Case: Karnataka High Court Rejects Congress MLA Vinay Kulkarni Bail Plea

ಬೆಂಗಳೂರು, (ಜನವರಿ 27): ಧಾರವಾಡ ಬಿಜೆಪಿ ಮುಖಂಡ ಯೋಗೀಶ್‌ ಗೌಡ  ಕೊಲೆ ಪ್ರಕರಣದಲ್ಲಿ((Yogesh Gowda Murder Case)) 15ನೇ ಆರೋಪಿಯಾಗಿರುವ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ (Vinay Kulkarni) ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಸಿದೆ. ಸುಪ್ರೀಂಕೋರ್ಟ್​ಗೇ ಅರ್ಜಿ ಸಲ್ಲಿಸುವುದು ಸೂಕ್ತವೆಂದು ಹೇಳಿ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ (Karnataka High Court) ಪೀಠ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿಯಾಗಿದೆ. ಧಾರವಾಡ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್…

Read More

ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ಶಿಫ್ಟ್ – Kannada News | Shivamogga School Students Ill: 59 Hospitalized After Anemia Tablets in Bhadravathi

ಶಿವಮೊಗ್ಗ, ಜನವರಿ 27: ಜಿಲ್ಲೆಯ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಮಾತ್ರೆ ತಿಂದು ಅಸ್ವಸ್ಥರಾಗಿರುವಂತಹ ಘಟನೆ ನಡೆದಿದೆ. ಅನಿಮಿಯಾ ತಡೆಗಟ್ಟಲು ವಾರಕ್ಕೊಮ್ಮೆ ಖನಿಜಾಶಂದ ಮಾತ್ರೆ ನೀಡಲಾಗುತ್ತದೆ. ಇಂದು ಮಧ್ಯಾಹ್ನ ಶಾಲೆಯಲ್ಲಿ ಮಾತ್ರೆ ನೀಡಲಾಗಿತ್ತು. ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಯಲ್ಲಿ ಸುಮಾರು 59 ವಿದ್ಯಾರ್ಥಿಗಳಿಗೆ ಏಕಾಏಕಿ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ವಿದ್ಯಾರ್ಥಿಗಳಿಗೆ ಭದ್ರಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಯಾವುದೇ ವಿದ್ಯಾರ್ಥಿಗಳಿಗೆ ಜೀವಾಪಾಯವಿಲ್ಲ ಎಂದು ಟಿಹೆಚ್​ಓ…

Read More

‘ಮಿನಿ ಕಾಶ್ಮೀರ’ದಲ್ಲಿ ಮಕ್ಕಳ ಆಟ: ಪ್ರವಾಸಿಗರಿಗೆ ಇದು ಸ್ವರ್ಗ – Kannada News | Experience Bhaderwah Winter: Jammu and Kashmir’s Snowfall Wonderland Boosts Tourism

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದರ್ವಾ (Bhaderwah) ಕಣಿವೆಯಲ್ಲಿ ಈಗ ಪ್ರಕೃತಿಯ ವೈಭವ ಮೇಳೈಸಿದೆ! ಜನವರಿ ತಿಂಗಳ ಈ ಚಳಿಯಲ್ಲಿ ಅಲ್ಲಿ ಬೀಳುತ್ತಿರುವ ದಟ್ಟವಾದ ಹಿಮಪಾತವು (Snowfall) ಪ್ರವಾಸಿಗರಿಗೆ ಮತ್ತು ಸ್ಥಳೀಯರಿಗೆ ಹಬ್ಬದ ವಾತಾವರಣ ತಂದಿದೆ. ಹಿಮದ ಮನುಷ್ಯನನ್ನು (Snowman) ಮಾಡುವುದು, ಒಬ್ಬರಿಗೊಬ್ಬರು ಹಿಮದ ಉಂಡೆಗಳನ್ನು ಎಸೆಯುತ್ತಾ ಆಡುವುದು ಮತ್ತು ಹಿಮದ ಮೇಲೆ ಜಾರುವ (Sledding) ಮೂಲಕ ಮಕ್ಕಳು ಈ ಕ್ಷಣಗಳನ್ನು ಸವಿಯುತ್ತಿದ್ದಾರೆ. ಭದರ್ವಾ ಕಣಿವೆಯನ್ನು ‘ಮಿನಿ ಕಾಶ್ಮೀರ’ ಎಂದೇ ಕರೆಯಲಾಗುತ್ತದೆ. ಇಲ್ಲಿನ ದೇವದಾರು ಮರಗಳು…

Read More

KVS Recruitment 2026: ಕೇಂದ್ರೀಯ ವಿದ್ಯಾಲಯಗಳಲ್ಲಿ 987 ಶಿಕ್ಷಕರ ನೇಮಕ; ಕಿರು ಅಧಿಸೂಚನೆ ಬಿಡುಗಡೆ – Kannada News | KVS Special Educator Recruitment 2026: 987 PRT and TGT Vacancies Announced – Apply Soon!

ಕೇಂದ್ರೀಯ ವಿದ್ಯಾಲಯಗಳಲ್ಲಿ ಶಿಕ್ಷಕರ ನೇಮಕ ಕೇಂದ್ರೀಯ ವಿದ್ಯಾಲಯ ಸಂಘಟನೆ (KVS) ದೇಶದ ವಿವಿಧ ರಾಜ್ಯಗಳಲ್ಲಿರುವ ಕೇಂದ್ರೀಯ ವಿದ್ಯಾಲಯಗಳಲ್ಲಿ ವಿಶೇಷ ಶಿಕ್ಷಕರ (Special Educators) ನೇಮಕಾತಿಗಾಗಿ ಕಿರು ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 987 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಈ ಹುದ್ದೆಗಳು ಪ್ರಾಥಮಿಕ ಶಿಕ್ಷಕ (PRT) ಮತ್ತು ತರಬೇತಿ ಪಡೆದ ಪದವೀಧರ ಶಿಕ್ಷಕ (TGT) ಹುದ್ದೆಗಳಿಗೆ ಸೇರಿವೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಈ ನೇಮಕಾತಿಯನ್ನು ದೇಶವ್ಯಾಪಿಯಾಗಿ ನಡೆಸಲು KVS ನಿರ್ಧರಿಸಿದೆ. ಯಾವ ರಾಜ್ಯಗಳಲ್ಲಿ…

Read More

ಜ.29ರಂದು ಬೆಂಗಳೂರು ಚಲೋ ಕೈಗೊಂಡ ಸಾರಿಗೆ ನೌಕರರಿಗೆ ಶಾಕ್ ಕೊಟ್ಟ KSRTC – Kannada News | Employees Don’t participate In Bengaluru Chalo protest on january 29 Ordered By KSRTC MD

ಬೆಂಗಳೂರು, (ಜನವರಿ 27): ಕೆಎಸ್‌ಆರ್‌ಟಿಸಿ  (KSRTC) ಸೇರಿದಂತೆ ಕರ್ನಾಟಕದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು (employees) ಸಮರ ಸಾರಿದ್ದಾರೆ. ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ನಾಡಿದ್ದು ಅಂದರೆ ಜನವರಿ 29ರಂದು ಬೆಂಗಳೂರು ಚಲೋಗೆ (Bengaluru Chalo) ಕರೆ ನೀಡಿದ್ದಾರೆ. ಆದ್ರೆ, ಇದಕ್ಕೆ ಕೆಎಸ್​​ಆರ್​​​ಟಿಸಿ ಶಾಕ್ ಕೊಟ್ಟಿದ್ದು, ಸಾರಿಗೆ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ. ಗುರುವಾರ ಡ್ಯೂಟಿಗೆ…

Read More

Hubli: ಪದ್ಮಶ್ರೀ ಪುರಸ್ಕೃತ ಪ್ರಭಾಕರ್ ಕೋರೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸನ್ಮಾನ – Kannada News | Union Minister Pralhad Joshi Honors Padma Shri Prabhakar Kore in Hubli

ಪ್ರಭಾಕರ್ ಕೋರೆ ಅವರಿಗೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಂದ ಸನ್ಮಾನ ಹುಬ್ಬಳ್ಳಿ, ಜನವರಿ 27: 2026ನೇ ಸಾಲಿನ ಪದ್ಮಶ್ರೀ ಪುರಸ್ಕಾರಕ್ಕೆ ಭಾಜನರಾದ ಕೆಎಲ್ಇ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಪ್ರಭಾಕರ್ ಕೋರೆ ಅವರನ್ನು ಕುಟುಂಬದ ಸದಸ್ಯರೊಡಗೂಡಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ  ಸನ್ಮಾನಿಸಿ, ಅಭಿನಂದಿಸಿದ್ದಾರೆ. ಸಾಹಿತ್ಯ, ಶಿಕ್ಷಣ ಕ್ಷೇತ್ರದಲ್ಲಿನ ಕೋರೆ ಅವರ ಅಭೂತಪೂರ್ವ ಸೇವೆ ಗುರುತಿಸಿ ಅತ್ಯುನ್ನತ ಪ್ರಶಸ್ತಿಗೆ ಕೆಂದ್ರ ಸರ್ಕಾರ ಅವರನ್ನು ಆಯ್ಕೆ ಮಾಡಿದ್ದು, ಗಣರಾಜ್ಯೋತ್ಸವದ ಹಿಂದಿನ ದಿನ ಈ ಬಗ್ಗೆ ಅಧಿಕೃತವಾಗಿ ಘೋಷಿಸಿತ್ತು. ಇನ್ನು ಸನ್ಮಾನ…

Read More

ಇಬ್ಬರೂ ಸಾಯೋಣ ಎಂದು ಯುವತಿಯನ್ನು ನಂಬಿಸಿ ಕೊಂದ ಹಂತಕ! – Kannada News | Kerala Man murders relative after faking suicide pact

ಕೋಝಿಕೋಡ್, ಜನವರಿ 27: ಕೇರಳದಲ್ಲಿ ಆರಂಭದಲ್ಲಿ ಆತ್ಮಹತ್ಯೆ ಎಂದು ಭಾವಿಸಲಾಗಿದ್ದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಇಂದು ಪೊಲೀಸರು 36 ವರ್ಷದ ವ್ಯಕ್ತಿಯನ್ನು ತನ್ನ ಸಂಬಂಧಿಯ ಕೊಲೆಗೆ (Murder) ಸಂಬಂಧಿಸಿದಂತೆ ಬಂಧಿಸಿದ್ದಾರೆ. ಜನವರಿ 24ರಂದು ಯುವತಿಯ ಸಾವು ಸಂಭವಿಸಿದಾಗ ಅದನ್ನು ಆತ್ಮಹತ್ಯೆ ಎಂದು ಭಾವಿಸಲಾಗಿತ್ತು. ಆದರೆ, ತನ್ನ ಅಕ್ರಮ ಸಂಬಂಧವನ್ನು ಮರೆಮಾಡಲು ವ್ಯಕ್ತಿಯೊಬ್ಬ ಆಕೆಯನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ನಂಬಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಶನಿವಾರ ಎಲತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಆರೋಪಿಯ…

Read More

ಹೆತ್ತ ತಾಯಿಯನ್ನೇ ಅಟ್ಟಾಡಿಸಿ ಕೊಂದ ರಕ್ಕಸ ಮಗ: ಕಾರಣ ಕೇಳಿದ್ರೆ ಎಂತವರಿಗೂ ಪಿತ್ತ ನೆತ್ತಿಗೇರುತ್ತೆ! – Kannada News | For Money, Son Murders Mother in Lingasugur, Raichur

ಹತ್ಯೆಯಾದ ಚಂದವ್ವ ಮತ್ತು ಆರೋಪಿ ಕುಮಾರ್​​. ರಾಯಚೂರು, ಜನವರಿ 27: ರಕ್ಕಸ ಮಗನೋರ್ವ ಹೆತ್ತ ತಾಯಿಯನ್ನೇ ಅಟ್ಟಾಡಿಸಿ, ಆಕೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಜಕ್ಕೇರು ತಾಂಡಾದಲ್ಲಿ ನಡೆದಿದೆ. ಚಂದವ್ವ (45) ಮೃತ ಮಹಿಳೆಯಾಗಿದ್ದು, ಆಕೆಯ ಮೊದಲ ಪುತ್ರ ಕುಮಾರನೇ ಆರೋಪಿಯಾಗಿದ್ದಾನೆ. ಘಟನೆ ಸಂಬಂಧ ಆರೋಪಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ. ಮಗನಿಂದಲೇ ಕೊಲೆಯಾದ ಚಂದವ್ವಗೆ ಒಟ್ಟು 6 ಜನ ಮಕ್ಕಳು. ಆ ಪೈಕಿ 4 ಜನ…

Read More