ಐಪಿಎಲ್ನಲ್ಲಿ ಈ 3 ನಿಯಮ ಬದಲಿಸಿ: ಸಚಿನ್ ತೆಂಡೂಲ್ಕರ್ ಸಲಹೆ!
ಇಂಡಿಯನ್ ಪ್ರೀಮಿಯರ್ ಲೀಗ್ ಹಾಗೂ ಟಿ20 ಕ್ರಿಕೆಟ್ ಇತ್ತೀಚಿನ ವರ್ಷಗಳಲ್ಲಿ ಸಂಪೂರ್ಣವಾಗಿ ಬ್ಯಾಟರ್ಗಳ ಆಟವಾಗಿ ಬದಲಾಗಿದೆ. ಈ ಬದಲಾವಣೆಯೊಂದಿಗೆ ಬೌಲರ್ಗಳು ಕೇವಲ ರನ್ ನೀಡಲು ಸೀಮತವಾಗಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಈ ಅಸಮತೋಲನವನ್ನು ಸರಿಪಡಿಸಲು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಮೂರು ನಿಯಮಗಳ ಬದಲಾವಣೆಗೆ ಸಲಹೆ ನೀಡಿದ್ದಾರೆ. ಆ ನಿಯಮಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ಇಂಪ್ಯಾಕ್ಟ್ ಪ್ಲೇಯರ್ ನಿಯಮ: ಐಪಿಎಲ್ನಿಂದ ಇಂಪ್ಯಾಕ್ಟ್ ಪ್ಲೇಯರ್ ನಿಯಮವನ್ನು ತೆಗೆದು ಹಾಕಬೇಕು ಎಂದು ಸಚಿನ್ ಸಲಹೆ ನೀಡಿದ್ದಾರೆ….