IPL 2027: ಐಪಿಎಲ್ ಆರಂಭಕ್ಕೆ ಡೇಟ್ ಫಿಕ್ಸ್! – Kannada News | IPL 2027 is likely to begin on March 10
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-20 ಆರಂಭಕ್ಕೆ ತಾತ್ಕಾಲಿಕ ಡೇಟ್ ಫಿಕ್ಸ್ ಮಾಡಲಾಗಿದೆ. ಅದರಂತೆ ಐಪಿಎಲ್ 2027 ಮಾರ್ಚ್ 10 ರಿಂದ ಶುರುವಾಗಲಿದೆ. ಅಲ್ಲದೆ ಫೈನಲ್ ಪಂದ್ಯವನ್ನು ಮೇ 15 ರೊಳಗೆ ಮುಗಿಸಲು ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ಅಂತಾರಾಷ್ಟ್ರೀಯ ಕ್ರಿಕೆಟ್ ವೇಳಾಪಟ್ಟಿ ಹಾಗೂ ಆಟಗಾರರ ಹಿತದೃಷ್ಟಿಯಿಂದ ಪ್ರಸ್ತುತ ಇರುವ 74 ಪಂದ್ಯಗಳ ಸ್ವರೂಪದಲ್ಲೇ 2027ರ ಐಪಿಎಲ್ ಟೂರ್ನಿ ಮುಂದುವರಿಯಲಿದೆ. ಇದರೊಂದಿಗೆ, ಭಾರತದ ತೀವ್ರ ಹವಾಮಾನ ವೈಪರೀತ್ಯ ಹಾಗೂ ಮುಂಗಾರು ಮಳೆಯಿಂದ…