17 ವರ್ಷಗಳ ಬಳಿಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಬೆಂಗಳೂರು, ಮೇ 30: ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸತತ 17 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಸಿದ್ದರಾಮಯ್ಯ ಅವರೀಗ ಪಟ್ಟ ತ್ಯಾಗ ಮಾಡಿದ್ದಾರೆ. ಅವರ ನಂತರ ಹೊಸ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಶಾಸಕಾಂಗ ಪಕ್ಷದ ನಾಯಕರ ಆಯ್ಕೆಗೆ ಮುಂಚಿತವಾಗಿ, ಶಾಸಕರು ಎಐಸಿಸಿ (ಅಖಿಲ ಭಾರತ ಕಾಂಗ್ರೆಸ್ ಸಮಿತಿ) ಯಾರ ಹೆಸರನ್ನು ಸೂಚಿಸುತ್ತದೋ ಅದಕ್ಕೆ ತಮ್ಮ ಬೆಂಬಲವಿದೆ ಎಂದು ಹೇಳುವ ಮೂಲಕ ನಿರ್ಧಾರವನ್ನು ಹೈಕಮಾಂಡ್‌ಗೆ ಬಿಟ್ಟರು. ಇದರಿಂದಾಗಿ ಹೈಕಮಾಂಡ್ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಮನವೊಲಿಸುವ…