Headlines

ಒಬ್ಬರಿಗೆ ಕೊಟ್ಟರೆ ಮತ್ತೊಬ್ಬರಿಗೆ ಬೇಸರ: ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು

ಬೆಂಗಳೂರು, ಮೇ 30: ಕರ್ನಾಟಕದಲ್ಲಿ ಕಾಂಗ್ರೆಸ್ ಹೈಕಮಾಂಡ್ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಗಳ ಸಂಖ್ಯೆ ಮತ್ತು ಅವುಗಳ ಹಂಚಿಕೆ ಕುರಿತು ತೀವ್ರ ಗೊಂದಲದಲ್ಲಿದೆ. ಎರಡರಿಂದ ನಾಲ್ಕು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಅಥವಾ ಯಾವುದೇ ಹುದ್ದೆಯನ್ನು ರಚಿಸದೆ ಇರುವ ಆಯ್ಕೆಗಳ ಕುರಿತು ಚರ್ಚೆ ನಡೆದಿದೆ. ವಿವಿಧ ಜಾತಿ, ಸಮುದಾಯ ಮತ್ತು ಪ್ರಾದೇಶಿಕ ಸಮತೋಲನವನ್ನು ಸಾಧಿಸುವುದು ಪಕ್ಷಕ್ಕೆ ದೊಡ್ಡ ತಲೆನೋವಾಗಿದೆ. ಒಬಿಸಿ, ಲಿಂಗಾಯತ, ಮುಸ್ಲಿಂ ಮತ್ತು ದಲಿತ ಸಮುದಾಯಗಳಿಂದ ಪ್ರಮುಖ ನಾಯಕರು ಡಿಸಿಎಂ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದಾರೆ. ಯತೀಂದ್ರ, ಈಶ್ವರ ಖಂಡ್ರೆ, ಎಂ.ಬಿ….

Read More

ಡಿಕೆಶಿ ಕ್ಯಾಬಿನೆಟ್‌ನ 14 ಸಂಭಾವ್ಯ ಸಚಿವರು ಇವರೇ ನೋಡಿ! ವಿಧಾನಸಭೆ ನೂತನ ಸ್ಪೀಕರ್ ಯಾರಾಗ್ತಾರೆ ಗೊತ್ತಾ?

ಬೆಂಗಳೂರು, ಮೇ.30: ಜೂನ್ 3ರಂದು ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಅವರೊಂದಿಗೆ 14 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿದೆ. ಈ ಸಂಭಾವ್ಯ ಸಚಿವರ ಪಟ್ಟಿ ಟಿವಿ9 ವಾಹಿನಿಗೆ ಲಭ್ಯವಾಗಿದೆ. ಕೆ.ಜೆ. ಜಾರ್ಜ್, ಡಾ. ಜಿ. ಪರಮೇಶ್ವರ, ಪ್ರಿಯಾಂಕ್ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್, ಎಂ.ಬಿ. ಪಾಟೀಲ್, ರೂಪಾ ಶಶಿಧರ್, ಸತೀಶ್ ಜಾರಕಿಹೋಳಿ, ಯತೀಂದ್ರ ಸಿದ್ದರಾಮಯ್ಯ, ಜಮೀರ್ ಅಹಮದ್ ಖಾನ್, ಆರ್. ಚಲುವರಾಯಸ್ವಾಮಿ, ಬೈರತಿ ಸುರೇಶ್, ಯು.ಟಿ. ಖಾದರ್, ಕೃಷ್ಣ ಬೈರೇಗೌಡ,…

Read More

ಸಿಂಧೂ ನದಿ ಒಪ್ಪಂದದ ಬಿಕ್ಕಟ್ಟು: ಪಾಕಿಸ್ತಾನದ ಕರಾಚಿಯಲ್ಲಿ ತೀವ್ರ ಜಲಕ್ಷಾಮ, ರಾಜಕೀಯ ಕೆಸರೆರಚಾಟ

ಕರಾಚಿ, ಮೇ 30: ಭಾರತ ಮತ್ತು ಪಾಕಿಸ್ತಾನ ನಡುವಿನ ಸಿಂಧೂ ನದಿ(Indus River) ನೀರು ಒಪ್ಪಂದವು ಸ್ಥಗಿತಗೊಂಡಿರುವುದು ಪಾಕಿಸ್ತಾನದ ಜಲ ಭದ್ರತೆಯ ಆತಂಕವನ್ನು ಹೆಚ್ಚಿಸಿದೆ. ಇದರ ಬೆನ್ನಲ್ಲೇ ಪಾಕಿಸ್ತಾನದ ಆರ್ಥಿಕ ರಾಜಧಾನಿ ಕರಾಚಿಯಲ್ಲಿ ಬೇಸಿಗೆಯ ಉತ್ತುಂಗದ ನಡುವೆ ತೀವ್ರ ನೀರಿನ ಕೊರತೆ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಕೈಗೊಂಡಿರುವ ದಂಡನಾತ್ಮಕ ಕ್ರಮಗಳಿಂದ ಪಾಕಿಸ್ತಾನ ಈಗಾಗಲೇ ತೀವ್ರ ರಾಜತಾಂತ್ರಿಕ ಮತ್ತು ಆರ್ಥಿಕ ಒತ್ತಡ ಎದುರಿಸುತ್ತಿದೆ. ಶೇ. 70 ರಷ್ಟು ನಗರಕ್ಕೆ ನೀರಿಲ್ಲ:…

Read More

‘ನನ್ನ ಪ್ರಕಾರ ಡಿಸಿಎಂ ಹುದ್ದೇನೇ ಬೇಡ’ ಎಂದ ರಾಮಲಿಂಗಾ ರೆಡ್ಡಿ!

ಬೆಂಗಳೂರು, ಮೇ 30: ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡಲು ಇಂದು ಸಂಜೆ ನಾಲ್ಕು ಗಂಟೆಗೆ ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ. ಈ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರು ಮಾತನಾಡಿ, ಡಿ.ಕೆ. ಶಿವಕುಮಾರ್ ಅವರನ್ನು ಹೈಕಮಾಂಡ್ ಈಗಾಗಲೇ ಪ್ರಪೋಸ್ ಮಾಡಿರುವ ಕಾರಣ ನಾಯಕನ ಆಯ್ಕೆಯಲ್ಲಿ ಯಾವುದೇ ಸ್ಪರ್ಧೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದು ಕೇವಲ ರಾಜ್ಯಪಾಲರಿಗೆ ಮಾಹಿತಿ ನೀಡುವ ಔಪಚಾರಿಕ ಸಭೆಯಾಗಿದೆ ಎಂದರು. ಮಂತ್ರಿಮಂಡಲದಲ್ಲಿ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನಗಳ ಕುರಿತ ಚರ್ಚೆಗಳ…

Read More

ಸ್ಟಾರ್ ನಟಿಯಾಗಬೇಕಿದ್ದ ಮಿತಾಲಿ ಶರ್ಮ ಕೊನೆಗೆ ಭಿಕ್ಷುಕಿ ಆದ ಕಣ್ಣೀರಿನ ಕಥೆ

ಚಿತ್ರರಂಗ ಎಂದರೆ ಕೋಟಿ ಕೋಟಿ ಹಣ, ಗ್ಲಾಮರ್, ಹೆಸರು ಮತ್ತು ಪ್ರಸಿದ್ಧಿ ಮಾತ್ರ ಅಂದುಕೊಳ್ಳುವವರೇ ಹೆಚ್ಚು. ಪ್ರತಿವರ್ಷ ಸಾವಿರಾರು ಜನ ನಟ-ನಟಿಯರಾಗುವ ದೊಡ್ಡ ದೊಡ್ಡ ಕನಸುಗಳನ್ನು ಹೊತ್ತು ಮಾಯಾನಗರಿ ಮುಂಬೈಗೆ ಬರುತ್ತಾರೆ. ಆದರೆ, ಇಲ್ಲಿ ಬಣ್ಣದ ಲೋಕದ ಹೋರಾಟದಲ್ಲಿ ಗೆದ್ದು ನಿಲ್ಲುವವರು ಕೆಲವೇ ಕೆಲವು ಮಂದಿ ಮಾತ್ರ. ಇನ್ನು ಕೆಲವರಿಗೆ ಇಲ್ಲಿ ಎದುರಾಗುವ ಸೋಲನ್ನು ತಡೆದುಕೊಳ್ಳಲು ಸಾಧ್ಯವಾಗುವುದೇ ಇಲ್ಲ. ಅಂತಹದೇ ಒಂದು ಅತ್ಯಂತ ದುಃಖದಾಯಕ ಮತ್ತು ಕರುಣಾಜನಕ ಕಥೆ ಮಾಜಿ ಭೋಜ್‌ಪುರಿ ನಟಿ ಹಾಗೂ ಮಾಡೆಲ್ ಮಿತಾಲಿ…

Read More

ಯುಪಿಎಸ್‌ಸಿ ಫಲಿತಾಂಶದ ಬಗ್ಗೆ ಜನರ ದಾರಿತಪ್ಪಿಸುವ ಜಾಹೀರಾತು: ಎರಡು ಕೋಚಿಂಗ್ ಸಂಸ್ಥೆಗೆ 7 ಲಕ್ಷ ರೂ. ದಂಡ

ನವದೆಹಲಿ, ಮೇ 30: ಯುಪಿಎಸ್‌ಸಿ (UPSC) ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶಕ್ಕೆ ಸಂಬಂಧಿಸಿದಂತೆ ದಾರಿತಪ್ಪಿಸುವ ಜಾಹೀರಾತು ನೀಡಿದ ಪ್ರಮುಖ ಕೋಚಿಂಗ್ ಸಂಸ್ಥೆ ‘ವಾಜಿರಾಮ್ ಮತ್ತು ರವಿ ಐಎಎಸ್ ಸ್ಟಡಿ ಸೆಂಟರ್’ಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ಬರೋಬ್ಬರಿ 7 ಲಕ್ಷ ರೂ. ದಂಡ ವಿಧಿಸಿದೆ. ಗ್ರಾಹಕ ರಕ್ಷಣಾ ಕಾಯ್ದೆ 2019ರ ಉಲ್ಲಂಘನೆ ಮತ್ತು ಉದ್ದೇಶಪೂರ್ವಕವಾಗಿ ಪ್ರಮುಖ ಮಾಹಿತಿಯನ್ನು ಮರೆಮಾಚಿದ್ದಕ್ಕಾಗಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಮುಖ್ಯ ಆಯುಕ್ತೆ ನಿಧಿ ಖರೆ ಮತ್ತು ಆಯುಕ್ತೆ ಅನುಪಮ್ ಮಿಶ್ರಾ…

Read More

ಮೊದಲು ರಸ್ತೆ, ಆಮೇಲೆ ಚರಂಡಿ: ಹುಬ್ಬಳ್ಳಿಯಲ್ಲಿ ಉಲ್ಟಾ ಪ್ಲ್ಯಾನ್​​​ಗೆ ಕೋಟ್ಯಂತರ ರೂ ಹಣ ನೀರಿನಲ್ಲಿ ಹೋಮ

ಒಳಚರಂಡಿಗಾಗಿ ಅಗೆಯಲಾಗಿರುವ ರಸ್ತೆImage Credit source: tv9 kannada ಹುಬ್ಬಳ್ಳಿ, ಮೇ 30: ಹುಬ್ಬಳ್ಳಿ-ಧಾರವಾಡ (Hubballi-Dharwad) ಅವಳಿ ನಗರದಲ್ಲಿ ನೂರಾರು ಕೋಟಿ ರೂ ಖರ್ಚು ಮಾಡಿದರು ಅಭಿವೃದ್ದಿ ಮಾತ್ರ ಹೇಳಿಕೊಳ್ಳುವಂತೆ ಆಗುತ್ತಿಲ್ಲ. ಬದಲಾಗಿ ಜನರ ಕೋಟಿ ಕೋಟಿ ತೆರಿಗೆ ಹಣವನ್ನು ವ್ಯರ್ಥ ಮಾಡುವ ಪ್ರಯತ್ನಗಳೇ ಹೆಚ್ಚಾಗುತ್ತಿವೆ. ವಿವಿಧ ಇಲಾಖೆಯ ಅಧಿಕಾರಿಗಳ ನಡುವಿನ ಸಮನ್ವಯ ಕೊರತೆಯಿಂದ ಕೋಟ್ಯಂತರ ರೂ ಹಣ ಪೋಲಾಗುತ್ತಿದೆ. ಎರಡು ಕೋಟಿ ರೂ ವೆಚ್ಚದಲ್ಲಿ ಸಿಸಿ ರಸ್ತೆ (Road) ನಿರ್ಮಾಣ ಮಾಡಲಾಗಿತ್ತು. ಒಳಚರಂಡಿ ನಿರ್ಮಾಣ ಮಾಡಿ…

Read More

ರಣ್ವೀರ್ ನಿಷೇಧ ಪ್ರಕರಣ: ಒಕ್ಕೂಟಗಳ ನಡುವೆ ಶುರುವಾಯ್ತು ಜಗಳ

ಬಾಲಿವುಡ್​​ನ ಸ್ಟಾರ್ ನಟ ರಣ್ವೀರ್ ಸಿಂಗ್ (Ranveer Singh) ಮೇಲೆ ಸಿನಿಮಾ ನೌಕರರ ಒಕ್ಕೂಟ (FWICE) ಅನಧಿಕೃತ ನಿಷೇಧ ಘೋಷಿಸಿದ್ದು, ರಣ್ವೀರ್ ಸಿಂಗ್ ಕೆಲಸ ಮಾಡುವ ಸಿನಿಮಾನಲ್ಲಿ ತಮ್ಮ ಒಕ್ಕೂಟದ ಯಾವುದೇ ನಟರು, ತಂತ್ರಜ್ಞರು, ಇತರೆ ಕಾರ್ಮಿಕರು ಕೆಲಸ ಮಾಡುವುದಿಲ್ಲ ಎಂದು ಘೋಷಿಸಿದ್ದಾರೆ. ‘ಡಾನ್ 3’ ಸಿನಿಮಾದ ಒಪ್ಪಂದ ಮುರಿದು ನಿರ್ಮಾಪಕರಿಗೆ ಆಗಿರುವ ನಷ್ಟವನ್ನು ತುಂಬಿಕೊಡಲು ನಿರಾಕರಿಸಿದ್ದಕ್ಕಾಗಿ ರಣ್ವೀರ್ ವಿರುದ್ಧ ಈ ನಿಷೇಧ ಹೇರಲಾಗಿದೆ. ಆದರೆ ಇದೀಗ ರಣ್ವೀರ್ ಬೆಂಬಲಕ್ಕೆ ಸಿನಿಮಾ ಮತ್ತು ಟಿವಿ ನಟರ ಒಕ್ಕೂಟ…

Read More

ಜೂನ್ 1 ರಿಂದ ಘಾಟ್ ಸೆಕ್ಷ​ನಲ್ಲಿ ವಂದೇ ಭಾರತ್ ಟ್ರಯಲ್ ರನ್: ಬೆಂಗಳೂರು – ಸುಬ್ರಹ್ಮಣ್ಯ ಪ್ರಯಾಣಕ್ಕಿನ್ನು ನಾಲ್ಕೈದು ಗಂಟೆ ಸಾಕು!

ವಂದೇ ಭಾರತ್ ಎಕ್ಸ್‌ಪ್ರೆಸ್ (ಸಾಂದರ್ಭಿಕ ಚಿತ್ರ)Image Credit source: TV9 Network ಮಂಗಳೂರು, ಮೇ 30: ಕರಾವಳಿ ಕರ್ನಾಟಕ (Coastal Karnataka) ಮತ್ತು ರಾಜಧಾನಿ ಬೆಂಗಳೂರು (Bengaluru) ನಡುವೆ ಕೊನೆಗೂ ‘ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ (Bengaluru–Mangaluru Vande Bharat Express)’ ಸಂಚಾರಕ್ಕೆ ಮುಹೂರ್ತ ಕೂಡಿಬಂದಿದೆ. ಜೂನ್​ನಲ್ಲಿ ಸಂಚಾರ ಆರಂಭವಾಗುವ ನಿರೀಕ್ಷೆ ಇದ್ದು, ಅದರ ಪೂರ್ವಭಾವಿಯಾಗಿ ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ನಡುವಿನ ಅತ್ಯಂತ ಕಠಿಣವಾದ ಘಾಟ್ ವಿಭಾಗದಲ್ಲಿ ಪ್ರಾಯೋಗಿಕ ಸಂಚಾರ ಜೂನ್ 1 ರಿಂದ ಆರಂಭವಾಗಲಿದೆ. ಸದ್ಯ ಈ…

Read More

IPL 2026: ‘ನಿನ್ನ ವಯಸ್ಸಲ್ಲಿ ನಮಗೆ..’; ವೈಭವ್ ಆಟವನ್ನು ಕೊಂಡಾಡಿದ ಅಮಿತಾಬ್ ಬಚ್ಚನ್‌

ನ್ಯೂ ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ಹಾಗೂ ಗುಜರಾತ್ (RR vs GT) ನಡುವಿನ ಕ್ವಾಲಿಫೈಯರ್ 2 ಪಂದ್ಯದಲ್ಲಿ ರಾಜಸ್ಥಾನ್ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದ ಗುಜರಾತ್ ಟೈಟಾನ್ಸ್ ತಂಡ ಮೂರನೇ ಬಾರಿಗೆ ಐಪಿಎಲ್ ಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ 214 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್ 18.4 ಓವರ್​ಗಳಲ್ಲಿ ಗೆಲುವಿನ ದಡ ಮುಟ್ಟಿತು. ಈ ಪಂದ್ಯದಲ್ಲಿ ರಾಜಸ್ಥಾನ್ ಸೋತಿತ್ತಾದರೂ…

Read More