ಸಿಎಂ ಸ್ಥಾನ ತೊರೆದ ಬೆನ್ನಲ್ಲೇ ಸಿದ್ದರಾಮಯ್ಯಗೆ ಆಯ್ತಾ ಹಿನ್ನಡೆ? ಪ್ರಮುಖ ಮನವಿ ತಿರಸ್ಕರಿಸಿದ ಹೈಕಮಾಂಡ್!
ಬೆಂಗಳೂರು, ಮೇ 30: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯಗೆ (Siddaramaiah) ಹೈಕಮಾಂಡ್ ಮಟ್ಟದಲ್ಲಿ ಮೊದಲ ಹಿನ್ನಡೆಯಾಗಿದೆಯೇ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ತೀವ್ರವಾಗಿ ಗರಿಗೆದರಿವೆ. ಹೊಸ ಸರ್ಕಾರ ರಚನೆಗೂ ಮುನ್ನ ಪಕ್ಷ ಮತ್ತು ಸರ್ಕಾರದ ನಡುವೆ ಉತ್ತಮ ಸಮನ್ವಯಕ್ಕಾಗಿ ‘ಸಮನ್ವಯ ಸಮಿತಿ (Coordination Committee)’ ರಚನೆ ಮಾಡಬೇಕು ಎಂದು ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ಗೆ ಮನವಿ ಮಾಡಿದ್ದಾರೆ. ಆದರೆ, ಸಿದ್ದರಾಮಯ್ಯ ಪ್ರಸ್ತಾವನೆಯನ್ನು ಕಾಂಗ್ರೆಸ್ ನಾಯಕತ್ವ ನಿರಸ್ಕರಿಸಿದೆ. ಈ ಬೆಳವಣಿಗೆಯು ಸದ್ಯ ಕಾಂಗ್ರೆಸ್…