ಮಳೆ ಅಬ್ಬರಕ್ಕೆ ಕೆಜಿಎಫ್ನಲ್ಲಿ ಕುಸಿದ ಕಟ್ಟಡದ ಗೋಡೆ: 7 ಮಂದಿ ಬದುಕಿದ್ದೇ ಪವಾಡ!
ಕೋಲಾರ, ಮೇ 30: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಸಾಲು ಸಾಲು ಅವಾಂತರಗಳಿಗೆ ಕಾರಣವಾಗಿದ್ದು, ಕೆಜಿಎಫ್ ನಗರದಲ್ಲಿ ವರುಣಾರ್ಭಟಕ್ಕೆ ಕಟ್ಟಡವೊಂದು ಕುಸಿದಿರುವ ಘಟನೆ ನಡೆದಿದೆ. ಈ ವೇಳೆ ಅಲ್ಲೇ ಇದ್ದ 7 ಜನರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರೆ. ಮಾರಿಕುಪ್ಪಂನ ಕೃಷ್ಣಮೂರ್ತಿ ಎಂಬುವರ ಮನೆ ಕುಸಿದಿದ್ದು, ಮನೆಯ ಒಂದು ಬದಿಯ ಗೋಡೆ ಸಂಪೂರ್ಣವಾಗಿ ನಾಶವಾಗಿದೆ. ಅತ್ತ ರಾಬರ್ಟ್ ಸನ್ ಪೇಟೆಯಲ್ಲಿ ಬೃಹತ್ ಮರಗಳು ಧರೆಗುರುಳಿದ್ದರೂ ತಹಶೀಲ್ದಾರ್ ಹಾಗೂ ನಗರಸಭೆ ಆಯುಕ್ತರು ಸ್ಥಳಗಳಿಗೆ ಭೇಟಿ ನೀಡದೆ ನಿರ್ಲಕ್ಷ್ಯ ತೋರಿರುವ ಆರೋಪ…