ಇಂಧನ ದರ ಏರಿಕೆ ಬರೆ: ಸರಕು ಸಾಗಣೆ ದರ ಹೆಚ್ಚಳಕ್ಕೆ ಲಾರಿ ಮಾಲೀಕರ ನಿರ್ಧಾರ, ಪ್ರಧಾನಿ ಮೋದಿಗೆ ಸಿಮ್ಟಾ ಪತ್ರ
ಬೆಂಗಳೂರು, ಮೇ 30: ಇಸ್ರೇಲ್, ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧದ ಜಾಗತಿಕ ಪರಿಣಾಮವಾಗಿ ದೇಶದಲ್ಲಿ ಇಂಧನ ದರಗಳು ಪದೇಪದೆ ಏರಿಕೆಯಾಗುತ್ತಿದ್ದು, ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕಳೆದ ಕೇವಲ ಹತ್ತು ದಿನಗಳಲ್ಲಿ ಬರೋಬ್ಬರಿ ನಾಲ್ಕು ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಹೆಚ್ಚಿಸಲಾಗಿದೆ. ಈ ಹಠಾತ್ ದರ ಏರಿಕೆಯಿಂದ ಕಂಗಾಲಾಗಿರುವ ದಕ್ಷಿಣ ಭಾರತ ಮೋಟಾರ್ ಟ್ರಾನ್ಸ್‌ಪೋರ್ಟರ್ಸ್ ಅಸೋಸಿಯೇಷನ್ (SIMTA) ಹಾಗೂ ವಾಹನ ಮಾಲೀಕರು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ತುರ್ತು ಪತ್ರ…