ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದ ‘ಕರುಪ್ಪು’ ಸಿನಿಮಾ; 300 ಕೋಟಿ ರೂಪಾಯಿ ಕಲೆಕ್ಷನ್
ಕಾಲಿವುಡ್ ನಟ ಸೂರ್ಯ ಮತ್ತು ಬಹುಭಾಷಾ ನಟಿ ತ್ರಿಷಾ ಅಭಿನಯದ ‘ಕರುಪ್ಪು’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಮೇ 15ರಂದು ಬಿಡುಗಡೆಯಾದ ಈ ಚಿತ್ರ ಪ್ರೇಕ್ಷಕರ ಮನಗೆದ್ದಿದೆ. ಇದೀಗ ವಿಶ್ವಾದ್ಯಂತ ಬರೋಬ್ಬರಿ 300 ಕೋಟಿ ರೂಪಾಯಿ ಗಳಿಕೆ ಮಾಡುವ ಮೂಲಕ ದಾಖಲೆ ಬರೆದಿದೆ. ನಟ ಸೂರ್ಯ ಮತ್ತು ತ್ರಿಷಾ ಜೋಡಿಯ ಈ ಅದ್ಭುತ ಯಶಸ್ಸನ್ನು ಚಿತ್ರತಂಡ ಸಂಭ್ರಮಿಸಿದೆ. ನಿರ್ಮಾಣ ಸಂಸ್ಥೆ ‘ಡ್ರೀಮ್ ವಾರಿಯರ್ ಪಿಕ್ಚರ್ಸ್’ ಈ ಕುರಿತು ಪೋಸ್ಟರ್ ಹಂಚಿಕೊಂಡಿದ್ದು, ‘ಬಾಕ್ಸ್ ಆಫೀಸ್‌ನಲ್ಲಿ ಸೂರ್ಯ ಅವರ ಬಿಗ್ಗೆಸ್ಟ್…