Category Archives: Blog

Your blog category

Horoscope Today: ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 30, ಶನಿವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನದಂದು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಚತುರ್ದಶಿ, ಶಿವಯೋಗ, ವಣಿಕ ಕರಣ, ವಿಶಾಖ ನಕ್ಷತ್ರ ಇಂದಿನ ಪ್ರಮುಖ ಪಂಚಾಂಗ ವಿವರಗಳಾಗಿವೆ. ಈ ದಿನದ ರಾಹುಕಾಲ ಬೆಳಗ್ಗೆ 9:00 ರಿಂದ 10:40 ರವರೆಗೆ ಇದ್ದು, ಸಂಕಲ್ಪ ಕಾಲ ಮಧ್ಯಾಹ್ನ 1:53 ರಿಂದ 3:29 ರವರೆಗೆ ಇರುತ್ತದೆ. ಇಂದು ರವಿ ವೃಷಭ ರಾಶಿಯಲ್ಲಿ ಹಾಗೂ ಚಂದ್ರ ತುಲಾ ರಾಶಿಯ ವಿಶಾಖ ನಕ್ಷತ್ರದಲ್ಲಿ ಸಂಚಾರ ಮಾಡುತ್ತಿದ್ದಾನೆ. ಇದು ಪ್ರತಿ ರಾಶಿಯವರ ಮೇಲೆ ವಿಭಿನ್ನವಾಗಿ ಪ್ರಭಾವ ಬೀರಲಿದೆ ಎಂದು ಗುರೂಜಿ ಹೇಳಿದ್ದಾರೆ.

 

 

Source link

ಕರ್ನಾಟಕದ ನೂತನ ಸಿಎಂ ಆಯ್ಕೆಗೆ ಕ್ಷಣಗಣನೆ: ಇಂದು ಸಂಜೆ 4ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ

ಸಿದ್ದರಾಮಯ್ಯ & ಡಿಕೆ ಶಿವಕುಮಾರ್Image Credit source: tv9

ಬೆಂಗಳೂರು, ಮೇ 30: ಕರ್ನಾಟಕ ರಾಜಕಾರಣದಲ್ಲಿ ಸಿದ್ದರಾಮಯ್ಯ (Siddaramaiah) ಆಡಳಿತ ಪರ್ವ ಅಧಿಕೃತವಾಗಿ ಅಂತ್ಯಗೊಂಡಿದ್ದು, ನೂತನ ಮುಖ್ಯಮಂತ್ರಿಯ ಪಟ್ಟಾಭಿಷೇಕಕ್ಕೆ ವೇದಿಕೆ ಸಂಪೂರ್ಣ ಸಿದ್ಧವಾಗಿದೆ. ಸಿದ್ದರಾಮಯ್ಯ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ ಬೆನ್ನಲ್ಲೇ, ಮುಂದಿನ ಜವಾಬ್ದಾರಿ ವಹಿಸಿಕೊಳ್ಳಲು ಕಾಂಗ್ರೆಸ್ ಪಾಳಯದಲ್ಲಿ ಭರ್ಜರಿ ಕಸರತ್ತು ಆರಂಭವಾಗಿದೆ. ಇಡೀ ರಾಜ್ಯದ ದೃಷ್ಟಿ ಇಂದು ಸಂಜೆ ವಿಧಾನಸೌಧದಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆಯತ್ತ ನೆಟ್ಟಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಅವರ ಹೆಸರೇ ಮುಖ್ಯಮಂತ್ರಿ ಹುದ್ದೆಗೆ ಬಹುತೇಕ ಅಂತಿಮವಾಗಿದ್ದು, ಇಂದಿನ ಸಭೆಯಲ್ಲಿ ಹೈಕಮಾಂಡ್ ಅಧಿಕೃತ ತೀರ್ಮಾನವನ್ನು ಪ್ರಕಟಿಸಲಿದೆ.

ಮುಖ್ಯಾಂಶಗಳು

  • ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಕಾನ್ಫರೆನ್ಸ್ ಹಾಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಿಗದಿ.
  • ಪಕ್ಷದಲ್ಲಿ ಒಗ್ಗಟ್ಟು ಪ್ರದರ್ಶಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮೂಲಕವೇ ಡಿ.ಕೆ. ಶಿವಕುಮಾರ್ ಹೆಸರನ್ನು ಪ್ರಸ್ತಾಪಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್.
  • ಜೂನ್ 5, 6 ಅಥವಾ 7 ರಂದು ನೂತನ ಸಿಎಂ ಪದಗ್ರಹಣಕ್ಕೆ ಜ್ಯೋತಿಷಿ ದ್ವಾರಕನಾಥ್ ಅವರಿಂದ ಶುಭ ಮುಹೂರ್ತ ನಿಗದಿ.

ವಿಮಾನದಲ್ಲೇ ಸಚಿವ ಸಂಪುಟದ ಪಟ್ಟಿ ಪರಿಶೀಲಿಸಿದ್ದ ಡಿಕೆಶಿ

ಇಂದು ಸಂಜೆ ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ನೂತನ ಸಿಎಲ್‌ಪಿ ನಾಯಕನ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಎಐಸಿಸಿ ನಾಯಕರ ಸಮ್ಮುಖದಲ್ಲಿ ಹೈಕಮಾಂಡ್ ತೀರ್ಮಾನವನ್ನು ಪ್ರಕಟಿಸಲಾಗುತ್ತದೆ. ನೂತನ ಸರ್ಕಾರ ಹಾಗೂ ಸಂಪುಟ ರಚನೆಗೆ ಡಿ.ಕೆ. ಶಿವಕುಮಾರ್ ಈಗಾಗಲೇ ಭರ್ಜರಿ ನೀಲನಕ್ಷೆ ಸಿದ್ಧಪಡಿಸಿಕೊಂಡಿದ್ದಾರೆ. ಇತ್ತೀಚೆಗೆ ದೆಹಲಿಗೆ ತೆರಳುವಾಗ ವಿಮಾನದಲ್ಲೇ ಸಂಭಾವ್ಯ ಸಚಿವರ ಪಟ್ಟಿಯನ್ನು ಹಿಡಿದು ಪರಿಶೀಲನೆ ನಡೆಸಿದ್ದ ಡಿಕೆಶಿ, ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದ ಡಿಕೆಶಿ, ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಖರ್ಗೆ ಅವರ ಪಾದಸ್ಪರ್ಶ ಮಾಡಿ ಆಶೀರ್ವಾದ ಪಡೆದಿದ್ದಾರೆ. ಆದಾಗ್ಯೂ, ಪ್ರಮಾಣವಚನ ಸ್ವೀಕರಿಸಲಿರುವ ಸಚಿವರ ಪಟ್ಟಿಯನ್ನು ಅವರು ಗೌಪ್ಯವಾಗಿಟ್ಟಿದ್ದಾರೆ.

ಭವ್ಯ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್

ಇನ್ನೊಂದೆಡೆ ನೂತನ ಮುಖ್ಯಮಂತ್ರಿಗಳ ಪದಗ್ರಹಣ ಸಮಾರಂಭವನ್ನು ವಿಧಾನಸೌಧದ ಮುಂಭಾಗ ನಡೆಸಬೇಕೇ ಅಥವಾ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಬೇಕೇ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಭವ್ಯ ಸಮಾರಂಭಕ್ಕೆ ದಿನಾಂಕ ನಿಗದಿಪಡಿಸಲು ಡಿಕೆಶಿ ಅವರು ತಮ್ಮ ಆಪ್ತ ರಾಜಗುರು ದ್ವಾರಕನಾಥ್ ಅವರ ಬಳಿ ಸಮಯ ಕೇಳಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ದ್ವಾರಕನಾಥ್, ಜೂನ್ 5, 6 ಮತ್ತು 7 ರಂದು ಅತ್ಯಂತ ಶುಭದಾಯಕವಾದ ಮೂರು ದಿನಾಂಕಗಳನ್ನು ನೀಡಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಟೀಮ್​​​ಗೆ ಢವಢವ: ಈ 13 ಜನರಿಗೆ ಸಚಿವ ಸ್ಥಾನ ಫಿಕ್ಸ್​​?

ಡಿಕೆಶಿ ಮುಖ್ಯಮಂತ್ರಿಯಾಗುತ್ತಿರುವುದು ಅವರ ಅಭಿಮಾನಿ ವಲಯದಲ್ಲಿ ಭಾರಿ ಹರ್ಷ ತಂದಿದ್ದು, ಯಾವುದೇ ವಿಘ್ನ ಎದುರಾಗದಿರಲಿ ಎಂದು ರಾಜ್ಯದ ಹಲವೆಡೆ ವಿಶೇಷ ಪೂಜೆ ಪುನಸ್ಕಾರಗಳನ್ನು ಮಾಡಿಸಲಾಗುತ್ತಿದೆ. ಶಾಸಕ ಇಕ್ಬಾಲ್ ಹುಸೇನ್ ಮಾತನಾಡಿ, ‘ಪ್ರಮಾಣವಚನ ಸಮಾರಂಭಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆಯಿಂದಲೇ 50 ಸಾವಿರಕ್ಕೂ ಹೆಚ್ಚು ಬೆಂಬಲಿಗರು ಭಾಗವಹಿಸಲಿದ್ದೇವೆ’ ಎಂದು ತಿಳಿಸಿದ್ದಾರೆ. ಇಂದಿನ ಸಭೆಯೊಂದಿಗೆ ರಾಜ್ಯದ ಮುಂದಿನ ಆಡಳಿತ ಚುಕ್ಕಾಣಿ ಯಾರಿಗೆ ಸಿಗಲಿದೆ ಎಂಬ ಅಧಿಕೃತ ಚಿತ್ರಣ ಲಭ್ಯವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Daily Devotional: ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ? ಹಾಗಾದರೆ ಈ ವೀಡಿಯೋ ನೋಡಿ

ಪ್ರತಿಯೊಬ್ಬ ವ್ಯಕ್ತಿಯೂ ತನ್ನದಾದ ಒಂದು ಮನೆ ಮತ್ತು ಕಾರು ಹೊಂದಬೇಕೆಂಬ ಆಸೆ ಹೊಂದಿರುತ್ತಾನೆ. ಆದರೆ ಎಷ್ಟೇ ದುಡಿದರೂ ಕೆಲವರಿಗೆ ಈ ಕನಸು ನನಸಾಗುವುದು ಕಷ್ಟವಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮನೆ ಮತ್ತು ವಾಹನ ಹೊಂದುವ ಯೋಗವು ರಾಶಿ ಚಕ್ರದ ನಾಲ್ಕನೇ ಮನೆಯ ಸ್ಥಿತಿಗತಿಗಳನ್ನು ಅವಲಂಬಿಸಿರುತ್ತದೆ. ಮಂಗಳ ಗ್ರಹವು ಭೂಮಿ ಮತ್ತು ಆಸ್ತಿಗೆ ಕಾರಕವಾಗಿದ್ದರೆ, ಶುಕ್ರ ಗ್ರಹವು ವಾಹನ ಮತ್ತು ಐಷಾರಾಮಕ್ಕೆ ಕಾರಕವಾಗಿದೆ. ನಾಲ್ಕನೇ ಮನೆಯ ಅಧಿಪತಿಯು ದುರ್ಬಲನಾಗಿದ್ದರೆ ಅಥವಾ ದುಷ್ಟ ಗ್ರಹಗಳ ಜೊತೆಗಿದ್ದರೆ, ಈ ಯೋಗ ಪ್ರಾಪ್ತಿ ಕಷ್ಟವಾಗುತ್ತದೆ.

ಆದರೆ ಇದಕ್ಕೆ ಪರಿಹಾರಗಳೂ ಇವೆ. ತಾಯಿಗೆ ಸಮಾನರಾದ ಹಿರಿಯರಿಗೆ ಗೌರವ ನೀಡುವುದು, ಬುಧವಾರದಂದು ಗಣಪತಿಗೆ ದುರ್ವೆ ಅರ್ಪಿಸುವುದು, ಐದು ಬುಧವಾರಗಳ ಕಾಲ ಬೆಲ್ಲ ಮತ್ತು ತುಪ್ಪದ ನೈವೇದ್ಯ ಅರ್ಪಿಸುವುದು ಹಾಗೂ ಮಂಗಳವಾರದಂದು ಹನುಮಂತ ಅಥವಾ ಸುಬ್ರಹ್ಮಣ್ಯ ದೇವರ ದರ್ಶನ ಮಾಡುವುದರಿಂದ ಶುಭ ಫಲಗಳು ದೊರೆಯಬಹುದು. ಧರ್ಮ ಮಾರ್ಗದಲ್ಲಿ ನಡೆದು, ಸಕಾರಾತ್ಮಕ ಮನಸ್ಥಿತಿ ಕಾಪಾಡಿಕೊಳ್ಳುವುದು ಸಹ ಮನೆ-ಕಾರು ಯೋಗಕ್ಕೆ ಸಹಾಯಕವಾಗುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ.

 

Source link

‘ಟಾಕ್ಸಿಕ್ ಸೆಟ್​​ನಲ್ಲಿ ಹಾಯ್, ಹೆಲೋ ಹೇಳೋಕೆ ಅವಕಾಶವೇ ಇರಲಿಲ್ಲ’; ಕಿಯಾರಾ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ (Toxic Movie) ಚಿತ್ರದಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರೀಕರಣದ ದಿನಗಳ ಬಗ್ಗೆ ಮಾತನಾಡಿರುವ ಕಿಯಾರಾ, ನಿರ್ದೇಶಕಿ ಗೀತು ಮೋಹನ್‌ದಾಸ್ ಸೆಟ್‌ನಲ್ಲಿ ತಮಗೆ ಹಾಕಿದ್ದ ಕಡಕ್ ರೂಲ್ಸ್ ಹಾಗೂ ಕನ್ನಡದಲ್ಲಿ ನಟಿಸುವಾಗ ಎದುರಾದ ಸವಾಲುಗಳನ್ನು ಹಂಚಿಕೊಂಡಿದ್ದಾರೆ.

‘ಹಾಯ್, ಹೆಲೋ’ಗೆ ಇರಲಿಲ್ಲ ಅವಕಾಶ

ಯಾವಾಗಲೂ ಶೂಟಿಂಗ್ ಸೆಟ್‌ಗೆ ಬಂದ ತಕ್ಷಣ ಎಲ್ಲರಿಗೂ ನಗುನಗುತ್ತಾ ‘ಹಾಯ್, ಗುಡ್ ಮಾರ್ನಿಂಗ್’ ಎಂದು ಮಾತನಾಡಿಸುವುದು ಕಿಯಾರಾ ಅವರ ಅಭ್ಯಾಸವಂತೆ. ಆದರೆ ‘ಟಾಕ್ಸಿಕ್’ ಸೆಟ್‌ನಲ್ಲಿ ಇದಕ್ಕೆ ಬ್ರೇಕ್ ಬಿದ್ದಿತ್ತು. ಈ ಬಗ್ಗೆ ಕಿಯಾರಾ ಮಾಹಿತಿ ನೀಡಿದ್ದಾರೆ.

‘ನಿರ್ದೇಶಕಿ ಗೀತು ಮೋಹನ್‌ದಾಸ್ ಅವರು ನನಗೆ ಮೊದಲೇ ಖಡಕ್ ಆಗಿ ಹೇಳಿದ್ದರು. ನಾಳೆ ನೀನು ಸೆಟ್‌ಗೆ ಬರುವಾಗ ನಿನ್ನ ಪಾತ್ರದ ಮೂಡ್‌ನಲ್ಲೇ ಇರಬೇಕು. ನನಗೆ ಯಾವುದೇ ಔಪಚಾರಿಕ ಮಾತುಕತೆಗಳು ಬೇಡ. ಯಾರಿಗೂ ಹಾಯ್, ಹಲೋ ಎನ್ನಬೇಡ. ನಿನ್ನ ಟೀಮ್ ಜೊತೆಯೂ ಮಾತನಾಡಬೇಡ. ಕೇವಲ ನಿನ್ನ ಕ್ಯಾರೆಕ್ಟರ್ ಜೋನ್‌ನಲ್ಲಿ ಮಾತ್ರ ಇರು ಎಂದು ಸೂಚಿಸಿದ್ದರು. ಪಾತ್ರದ ತೀವ್ರತೆಯನ್ನು ಕಾಯ್ದುಕೊಳ್ಳಲು ಗೀತು ಈ ರೀತಿ ಮಾಡುತ್ತಿದ್ದರು’ ಎಂದು ಕಿಯಾರಾ ನೆನಪಿಸಿಕೊಂಡಿದ್ದಾರೆ.

‘ಟಾಕ್ಸಿಕ್’ ಚಿತ್ರವನ್ನು ಏಕಕಾಲದಲ್ಲಿ ಇಂಗ್ಲಿಷ್ ಹಾಗೂ ಕನ್ನಡ ಎರಡೂ ಭಾಷೆಗಳಲ್ಲಿ ಚಿತ್ರೀಕರಿಸಲಾಗುತ್ತಿದೆ. ಇದು ತಮಗೆ ದೊಡ್ಡ ಸವಾಲಾಗಿತ್ತು ಎಂದು ಕಿಯಾರಾ ಒಪ್ಪಿಕೊಂಡಿದ್ದಾರೆ. ಮೊದಲಿಗೆ ಇಂಗ್ಲಿಷ್‌ನಲ್ಲಿ ದೃಶ್ಯದ ಶೂಟಿಂಗ್ ನಡೆಯುತ್ತಿತ್ತು. ಅದು ಓಕೆ ಆದ ಬಳಿಕ ಅದೇ ದೃಶ್ಯವನ್ನು ಕನ್ನಡದಲ್ಲಿ ಚಿತ್ರೀಕರಿಸಲಾಗುತ್ತಿತ್ತು. ಕನ್ನಡ ಭಾಷೆ ಬಾರದ ಕಾರಣ, ಕಿಯಾರಾ ಅವರು ಪ್ರತಿ ದಿನ ಶೂಟಿಂಗ್‌ಗೂ ಮುನ್ನ ಹಿಂದಿನ ರಾತ್ರಿಯೇ ಕುಳಿತು ಡೈಲಾಗ್‌ಗಳನ್ನು ಬಾಯಿಪಾಠ ಮಾಡುತ್ತಿದ್ದರಂತೆ.

ಇದನ್ನೂ ಓದಿ: ‘‘ಟಾಕ್ಸಿಕ್’ ಪ್ರೇಮಕತೆ ಸಂಪೂರ್ಣ ಭಿನ್ನ’: ಕತೆಯ ಬಗ್ಗೆ ನಾಯಕಿ ಕಿಯಾರಾ ಮಾತು 

ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಿದ ಅನುಭವದ ಬಗ್ಗೆ ಮಾತನಾಡಿದ ಅವರು, ‘ಸಣ್ಣಪುಟ್ಟ ಸಾಂಸ್ಕೃತಿಕ ವ್ಯತ್ಯಾಸಗಳಿರಬಹುದು. ಆದರೆ ಅಂತಿಮವಾಗಿ ನಾವೆಲ್ಲರೂ ಭಾರತೀಯರು. ಹಾಗಾಗಿ ಇಲ್ಲಿನ ಕೆಲಸದ ಶೈಲಿ ನನಗೆ ಹೊಸದೇನೂ ಅನಿಸಲಿಲ್ಲ. ಬಾಲಿವುಡ್ ಹಾಗೂ ತೆಲುಗು ಚಿತ್ರರಂಗದಲ್ಲಿ ಕೆಲಸ ಮಾಡಿದಂತೆಯೇ ಇಲ್ಲೂ ಕೂಡ ಒಳ್ಳೆಯ ಅನುಭವ ಸಿಕ್ಕಿದೆ. ಇಲ್ಲಿನ ಸ್ಟಾರ್‌ಡಮ್ ಹಾಗೂ ಮೇಕಿಂಗ್ ಶೈಲಿ ಅದ್ಭುತವಾಗಿದೆ’ ಎಂದು ಹೊಗಳಿದ್ದಾರೆ.
ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಯಶ್, ನಯನತಾರಾ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಮತ್ತು ತಾರಾ ಸುತಾರಿಯಾ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ. ಜೂನ್ 4ರಂದು ತೆರೆಕಾಣಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಚಿತ್ರದ ಬಿಡುಗಡೆ ದಿನಾಂಕವನ್ನು ಸದ್ಯಕ್ಕೆ ಮುಂದೂಡಲಾಗಿದ್ದು, ಹೊಸ ದಿನಾಂಕದ ಅಧಿಕೃತ ಪ್ರಕಟಣೆ ಬಾಕಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದಿನ ಭವಿಷ್ಯ: ಇಂದು ಈ ರಾಶಿಯವರ ಹಳೆಯದಾದ ದೊಡ್ಡ ತಪ್ಪೊಂದು ಹೊರಬಲಿದೆ..

ಮೇಷ ರಾಶಿ :

ಆಕ್ಷೇಪಕ್ಕೆ ಸಕಾರಣವನ್ನು ಕೊಡುವುದು ಸೂಕ್ತ. ಇದರಿಂದ ತೊಂದರೆ ಸಿಕ್ಕಿಹಾಕಿಕೊಳ್ಳುವ ಸ್ಥಿತಿ ತಪ್ಪುತ್ತದೆ. ಸಂಗಾತಿಯೊಂದಿಗೆ ಜಗಳ ಉಂಟಾದರೂ ಅವರು ಶಾಂತಿ ಕಾಪಾಡುತ್ತಾರೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿ ಮನಸ್ಸಿಗೆ ನೆಮ್ಮದಿ ಪಡೆಯಿರಿ. ಇದರಲ್ಲಿ ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಕಾರ್ಯಗಳನ್ನು ಹಂಚಿ ನೀವು ನಿಶ್ಚಿಂತರಾಗುವಿರಿ. ಯಾರದ್ದಾದರೂ ಪ್ರಲೋಭನೆಗೆ ಒಳಗಾಗುವ ಸಾಧ್ಯತೆ ಇದೆ.

ವೃಷಭ ರಾಶಿ :

ಇಂದು ನಂಬಿಕೆಯ ವಿಚಾರದಲ್ಲಿ ಮನಸ್ಸು ಮುರಿದುಹೋಗುವುದು. ಹಣಕಾಸನ್ನು ಭದ್ರವಾಗಿ ಇಟ್ಟುಕೊಳ್ಳಿ. ಮೋಸ ಹೋಗುವ ಸಾಧ್ಯತೆ ಇದೆ. ಮಕ್ಕಳಿಗೆ ಸಹಾಯ ಮಾಡಿ ಒಳ್ಳೆಯ ಸಂಬಂಧ ಬೆಳೆಸಿಕೊಳ್ಳಿ. ಪ್ರೇಮ ಜೀವನದಲ್ಲಿ ಪ್ರಾಮಾಣಿಕತೆ ಮುಖ್ಯ. ಸಮರ್ಥನೆಯನ್ನು ಕೊಟ್ಟು ಸಮಯವನ್ನು ವ್ಯರ್ಥಮಾಡಬೇಡಿ. ಸ್ವಲ್ಪ‌ಕಾಲದಲ್ಲಿ ಎಲ್ಲವೂ ಸ್ಪಷ್ಟವಾಗಿ ಗೋಚರವಾಗುವುದು. ಆರ್ಥಿಕ ಯೋಜನೆಗಳಿಗೆ ಉತ್ತೇಜನ ದೊರೆಯಲಿದೆ.

ಮಿಥುನ ರಾಶಿ :

ಕಾರ್ಯದ ಒತ್ತಡದಿಂದ ಪೂರ್ತಿಯಾಗಿ ಆಗದೇ ಹೋಗಬಹುದು. ನಾಯಕತ್ವದ ಹೊಣೆಗಾರಿಕೆಗಳೂ ಹೆಚ್ಚಾಗುತ್ತವೆ. ಸಂಗಾತಿಯು ನಿಮ್ಮ ಉತ್ಸುಕತೆಗೆ ಭಂಗ ತರಬಹುದು. ಆತ್ಮತೃಪ್ತಿ ಹೊಸ ಬಾಗಿಲುಗಳನ್ನು ತೆರೆಯುತ್ತದೆ. ಉದ್ಯೋಗದಲ್ಲಿ ಧೈರ್ಯದಿಂದ ಹೊಸ ಪ್ರಯತ್ನ ನಡೆಸಿ. ಸ್ಪರ್ಧಾ ಮನೋಭಾವವಿಲ್ಲದೇ ಎಲ್ಲರ ಜೊತೆ ಖುಷಿಯಿಂದ ಭಾಗವಹಿಸಿ. ಉದಾಸೀನತೆಯೇ ನಿಮ್ಮ ಉದ್ಯೋಗಕ್ಕೆ ಮುಳುವಾಗಬಹುದು. ಉದ್ಯಮದ ಕಾರಣಕ್ಕೆ ಅಧಿಕ ಸುತ್ತಾಟವು ಇರುವುದು.

ಕರ್ಕಾಟಕ ರಾಶಿ :

ಉಳಿದಿರುವ ಗೃಹಕೃತ್ಯಗಳನ್ನು ಪೂರೈಸಲು ಒಂದು ಅನುಕೂಲಕರ ದಿನ. ಉದ್ಯೋಗದಲ್ಲಿ ವಿವೇಕ ಮತ್ತು ತಾರ್ಕಿಕತೆ ಅವಶ್ಯ. ಚಟುವಟಿಕೆಗಳ ಮೂಲಕ ಪುನಶ್ಚತನಗೊಳ್ಳುತ್ತದೆ. ಆರೋಗ್ಯದಲ್ಲಿ ತಾಳ್ಮೆಯೇ ಮುಖ್ಯ. ಹೊಸ ನಿಲುವಿನಿಂದ ಭವಿಷ್ಯ ನಿರ್ಮಿಸಿ. ಆಪ್ತರು ಎನಿಸಿದ ಸ್ನೇಹಿತರ ಜೊತೆ ಆಗಿದ್ದ ನೋವನ್ನು ಹೇಳಿಕೊಂಡು ಹಗುರಾಗಿ. ವೈಯಕ್ತಿಕ ಸಮಸ್ಯೆಯನ್ನು ನೀವು ಯಾರ ಬಳಿಯೂ ಹೇಳಿಕೊಳ್ಳುವುದು ಕಷ್ಟವಾದೀತು. ಸುಮ್ಮನೇ ಎಲ್ಲದಕ್ಕೂ ಒಪ್ಪಿಗೆಯನ್ನು ಸೂಚಿಸುವುದು ಬೇಡ.

ಸಿಂಹ ರಾಶಿ :

ನಿಮ್ಮ ಮುಂಗೋಪವು ನಿಮ್ಮವರಿಗೆ ಮುಜುಗರವಾಗಬಹುದು. ಉದ್ಯೋಗದಿಂದ ಹೊರನಡೆಯುವ ಸಾಧ್ಯತೆ ಇದೆ. ನೆಮ್ಮದಿಯನ್ನು ಕಾಣುವಾಗಲೇ ಈ ಘಟನೆ ನಿಮ್ಮನ್ನು ಆತಂಕಕ್ಕೆ ದೂಡಲಿದೆ. ಪ್ರೀತಿ ಜೀವನ ಚೈತನ್ಯ ತುಂಬಿದಂತೆ ತೋರುತ್ತದೆ. ದೊಡ್ಡ ಮೊತ್ತದ ವ್ಯವಹಾರವನ್ನು ಮಾಡುವಾಗ ಭಯವಿರುವುದು. ನಿಮ್ಮ ಶಾಂತವಾದ ಮನಸ್ಸೇ ಹಲವು ಸಮಸ್ಯೆಗಳನ್ನು ದೂರ ಮಾಡುವುದು. ಪ್ರಾಮಾಣಿಕತೆಯು ಇಂದು ನಿಮಗೆ ವರದಾನವಾಗುವುದು.

ಕನ್ಯಾ ರಾಶಿ:

ಮನೆಯವರ ಮಾತಿನಿಂದ ಮನೆಯ ಬಗ್ಗೆ ನಿಮಗೆ ಒಲವು ಕಡಮೆಯಾದೀತು. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ತಪ್ಪು ಎಲ್ಲ ಕಡೆಯಿಂದ ಸುತ್ತಿ ನಿಮ್ಮ ಬುಡಕ್ಕೇ ಬರವುದು. ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ಅಗತ್ಯ. ಕುಟುಂಬದ ಕೇಂದ್ರಬಿಂದುವಾಗಿ ನೀವು ಬೆಳಗಬಹುದು. ಕಾನೂನಾತ್ಮಕ ವಿಷಯಕ್ಕೆ ಸರಿಯಾದ ಸಲಹೆಯನ್ನು ಪಡೆಯುವಿರಿ. ನೀವು ಸ್ನೇಹಿತನೊಂದಿಗೆ ಯಾವುದೇ ವಿವಾದವನ್ನು ಹೊಂದಿದ್ದರೆ, ಅವರು ನಿಮ್ಮನ್ನು ಸಮಾಧಾನಪಡಿಸಲು ಬರಬಹುದು.

ತುಲಾ ರಾಶಿ :

ಆತ್ಮವಿಶ್ವಾಸದ ಮೂಲಕ ನೀವು ದೈಹಿಕ, ಮಾನಸಿಕ ಸಂಕಟವನ್ನು ಎದುರಿಸಬಹುದು. ಹಳೆಯ ನೆನಪಿನಿಂದ ಶಕ್ತಿ ಕುಗ್ಗಬಹುದು. ಹಣಕಾಸು ಯೋಜನೆಗಳಲ್ಲಿ ಜಾಗರೂಕತೆ ಅವಶ್ಯಕ. ಮನೆಯ ಒತ್ತಡ ಹೆಚ್ಚಾಗಬಹುದು, ಆದರೆ ಸಹಕಾರದಿಂದ ಅದು ಕಡಿಮೆಯಾಗುತ್ತದೆ. ಜನರೊಂದಿಗೆ ಇಣುಕು ನೋಟದಿಂದ ವ್ಯವಹರಿಸಬೇಕು. ಇದರಿಂದ ನಿಮ್ಮ ಮೇಲಿರುವ ಭಾವನೆಯು ಬದಲಾಗುವುದು. ಕೃತಜ್ಞತೆಯನ್ನು ಸ್ಮರಿಸಿಕೊಳ್ಳುವಿರಿ. ಇಂದು ಕೆಲಸಕ್ಕಾಗಿ ಓಡಾಡುವುದು ವ್ಯರ್ಥವೇ ಆಗುವುದು.

ವೃಶ್ಚಿಕ ರಾಶಿ :

ಅವಿವಾಹಿತರಿಗೆ ಮಾಂಗಲ್ಯ ಭಾಗ್ಯ ಕೂಡಿಬರಲಿದೆ. ಮಮಕಾರದಿಂದ ಕೊನೆಗೆ ದುಃಖವೇ ಆಗಬಹುದು. ಕ್ರೀಡೆಯಲ್ಲಿ ಜಯಗಳಿಸುವ ಸಾಧ್ಯತೆ ಇದೆ. ಸಂಬಂಧಿಗಳೊಂದಿಗೆ ಸಣ್ಣ ಪ್ರಯಾಣ ನೆಮ್ಮದಿ ತರಬಹುದು. ಪ್ರೇಮ ಜೀವನದಲ್ಲಿ ಗಾಢತೆಯ ಅನುಭವ. ಪ್ರೇಯಸಿ ಜೊತೆಯಲ್ಲಿ ಹೊರಗೆ ವಾಯುವಿಹಾರಕ್ಕೆ ಹೋಗುವಿರಿ. ನೀವು ವ್ಯವಹಾರದಲ್ಲಿ ಪಾಲುದಾರರಾಗುವುದು ಉತ್ತಮ, ಇದು ನಿಮ್ಮ ವ್ಯವಹಾರವನ್ನು ಇನ್ನಷ್ಟು ವಿಸ್ತರಿಸುತ್ತದೆ.

ಧನು ರಾಶಿ :

ಯಾರ ಮಾತಿಗೂ ಮನಸೋಲದೇ ನಿಮ್ಮದಾದುದನ್ನು ಮಾಡಿ. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ಮನೆಯವರೊಂದಿಗೆ ಹೆಚ್ಚು ಕಾಲ ಇಲ್ಲದಿದ್ದರೆ ಸಂಬಂಧಗಳ ಮೇಲೆ ವಿಪರೀತ ಪರಿಣಾಮ ಬೀರುತ್ತದೆ. ಸಹೋದ್ಯೋಗಿಗಳೊಂದಿಗೆ ಒಳ್ಳೆಯ ಸಂಬಂಧ ಬೆಳೆಸಿಕೊಳ್ಳಿ. ನಿಮ್ಮ ಸಂಗಾತಿಯ ಜೊತೆ ಚರ್ಚಿಸಿದರೆ ಅದು ನಿಮಗೆ ಉತ್ತಮ. ನೀವು ಹಳೆಯ ಸ್ನೇಹಿತರನ್ನು ಭೇಟಿ ಮಾಡಲು ಹೋಗಬಹುದು. ಸ್ವಂತ ಬುದ್ಧಿಯಿಂದ ನಿಮ್ಮ ಕಾರ್ಯವನ್ನು ಮಾಡಿಕೊಳ್ಳಿ.

ಮಕರ ರಾಶಿ :

ಮಕ್ಕಳ ತುಂಟಾಟಕ್ಕೆ ಅವರಿಗೆ ಬೈದು ಅವರ ದ್ವೇಷಕ್ಕೆ ಕಾರಣರಾಗುವಿರಿ. ದಾಂಪತ್ಯದಲ್ಲಿ ಆಪ್ತಭಾವವಿರಲಿದೆ. ಜಾಣ ಕಿವುಡುತನದಿಂದ ದೊಡ್ಡವರಾಗುವುದು ಬೇಡ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಸಂಗಾತಿಯೊಂದಿಗೆ ಜಗಳವಾದರೂ, ತಾಳ್ಮೆ ಬೇಕು. ಕೆಲಸದ ಕಡೆ ನೂರಕ್ಕೆ ನೂರು ಗಮನ ನೀಡಿ. ವಿದೇಶದಲ್ಲಿರುವ ಕುಟುಂಬದ ಸದಸ್ಯರಿಂದ ನಿಮಗೆ ಶುಭ ಸುದ್ದಿಯು ಬರುವುದು. ರಾಜಕೀಯವಾಗಿ ಒತ್ತಡಗಳು ಬರಬಹುದು. ಅದನ್ನು ತಾಳ್ಮೆಯಿಂದ ಎದುರಿಸಬೇಕು.

ಕುಂಭ ರಾಶಿ :

ಸಾಮಾಜಿಕ ಜಾಲತಾಣದಲ್ಲಿ ಸಮಯವನ್ನು ಹೆಚ್ಚು ಕಳೆಯಬಹುದು. ಜೀವನದ ತೊಂದರೆಗಳನ್ನು ಸಂಬಂಧಿಕರೊಂದಿಗೆ ಹಂಚಿಕೊಳ್ಳಬೇಡಿ. ಹಣದ ಹೂಡಿಕೆ ಕುರಿತು ಯೋಚಿಸಿ ನಿರ್ಧಾರ ಮಾಡಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಇರುವಾಗ ಸಹನೆವಹಿಸಿ. ಪ್ರೇಮದಲ್ಲಿ ವಿಶಿಷ್ಟ ಅನುಭವ ಸಾಧ್ಯ. ಆತುರದಲ್ಲಿ ಯಾವುದೇ ಕೆಲಸ ಮಾಡುವುದನ್ನು ಮುಖ್ಯ ಕಾರ್ಯಗಳೇ ಮರೆತುಹೋಗಬಹುದು. ನಿಮ್ಮ ವಿರೋಧಿಗಳಲ್ಲಿ ಒಬ್ಬರು ನಿಮಗೆ ಕಿರುಕುಳ ನೀಡಲು ಪ್ರಯತ್ನಿಸಬಹುದು.

ಮೀನ ರಾಶಿ :

ನಿಮ್ಮೊಳಗೆ ಮಾಡುವ ಕಾರ್ಯದಲ್ಲಿ ಅತೃಪ್ತಭಾವವು ಇರಲಿದೆ‌. ಯಾರದೋ ಕೆಲಸದಲ್ಲಿ ಮಗ್ನರಾಗುವಿರಿ. ಆಲಸ್ಯವು ಮೈತುಂಬಿಕೊಂಡು ನಿದ್ರೆಯನ್ನು ಮಾಡುವ ಮನಃಸ್ಥಿತಿಯಲ್ಲಿ ಇರುವಿರಿ. ಹಣಕಾಸಿನ ಕೆಲಸಗಳಲ್ಲಿ ಯಶಸ್ಸು ಸಿಗಬಹುದು. ಸಂಗಾತಿಯ ಕುಟುಂಬದ ಅಡ್ಡಿ ಕೆಲವೊಂದು ವ್ಯತ್ಯಯ ತಂದರೂ, ನಿಮ್ಮ ಸಹನೆಗೆ ಅದರ ಬಗ್ಗೆ ಪ್ರಭಾವ ಬೀರುವುದಿಲ್ಲ. ನಿಮ್ಮ ಯೋಜನೆಗಳನ್ನು ನೀವು ವೇಗಗೊಳಿಸುತ್ತೀರಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಚತುರ್ದಶೀ, ನಿತ್ಯನಕ್ಷತ್ರ : ಅನೂರಾಧಾ, ಯೋಗ : ವರಿಯಾನ್, ಕರಣ : ವಣಿಜ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 47 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:09 – 10:46, ಯಮಗಂಡ ಕಾಲ 13:58 – 15:35, ಗುಳಿಕ ಕಾಲ 05:56 – 07:33

-ಲೋಹಿತ ಹೆಬ್ಬಾರ್-8762924271 (what’s app only)

Source link

GT vs RR: ಶುಭ್​ಮನ್ ಗಿಲ್ ಶತಕ; ಗುಜರಾತ್​ಗೆ ಫೈನಲ್ ಟಿಕೆಟ್

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಪಿಸಿಎ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 2 ಪಂದ್ಯದಲ್ಲಿ ರಾಜಸ್ಥಾನ್ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದ ಗುಜರಾತ್ ಟೈಟಾನ್ಸ್ ತಂಡ 2026 ರ ಐಪಿಎಲ್ ಫೈನಲ್​ಗೆ ಟಿಕೆಟ್ ಪಡೆದುಕೊಂಡಿದೆ. ಈ ಹೈವೋಲ್ಟೇಜ್ ಕದನದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ 214 ರನ್ ಬಾರಿಸಿ ಗುಜರಾತ್​ಗೆ 215 ರನ್​ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಗುಜರಾತ್ 18.4 ಓವರ್​ಗಳಲ್ಲಿ ಗೆಲುವಿನ ದಡ ಮುಟ್ಟಿತು. ಇದೀಗ ಮೇ 31 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್​ಸಿಬಿ ತಂಡವನ್ನು ಎದುರಿಸಲಿದೆ. ವಾಸ್ತವವಾಗಿ ಇದೇ ಗುಜರಾತ್ ವಿರುದ್ಧ ಕ್ವಾಲಿಫೈಯರ್ 1 ರಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ಫೈನಲ್​ಗೇರಿತ್ತು. ಇದೀಗ ಈ ಎರಡು ತಂಡಗಳ ನಡುವೆ ಫೈನಲ್ ಪಂದ್ಯ ನಡೆಯಲಿದೆ.

Source link

GT vs RR: 47 ಎಸೆತಗಳಲ್ಲಿ 5ನೇ ಐಪಿಎಲ್ ಶತಕ ಬಾರಿಸಿದ ಶುಭ್​ಮನ್ ಗಿಲ್

ರಾಜಸ್ಥಾನ್ ರಾಯಲ್ಸ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ನಾಯಕನ ಇನ್ನಿಂಗ್ಸ್ ಆಡಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಕೇವಲ 47 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ತಂಡವನ್ನು ಗೆಲುವಿನ ಸನಿಹಕ್ಕೆ ತಂದಿದ್ದಾರೆ. ಗೆಲುವಿಗೆ ರಾಜಸ್ಥಾನ್ ನೀಡಿದ 215 ರನ್​ಗಳ ಗುರಿ ಬೆನ್ನಟ್ಟಿದ ಗುಜರಾತ್ ಪರ ಅಬ್ಬರದ ಇನ್ನಿಂಗ್ಸ್ ಆಡಿದ ಶುಭ್​ಮನ್ 15 ಬೌಂಡರಿ ಹಾಗೂ 3 ಬೌಂಡರಿ ಸಹಿತ ತಮ್ಮ ಐದನೇ ಐಪಿಎಲ್ ಶತಕವನ್ನು ಪೂರೈಸಿದರು. ಮಾತ್ರವಲ್ಲದೆ ಸಾಯಿ ಸುದರ್ಶನ್ ಅವರೊಂದಿಗೆ 150 ರನ್​ಗಳ ಜೊತೆಯಾಟವನ್ನು ಕಟ್ಟಿದರು. ಇದು ಈ ಜೋಡಿಯ 11ನೇ ಶತಕದ ಜೊತೆಯಾಟವಾಗಿದ್ದು, ಐಪಿಎಲ್‌ನಲ್ಲಿ ಅತಿ ಹೆಚ್ಚು ಶತಕದ ಜೊತೆಯಾಟ ನಡೆಸಿದ ದಾಖಲೆಯನ್ನು ಈ ಜೋಡಿ ಬರೆಯಿತು.

ರಾಜಸ್ಥಾನ ರಾಯಲ್ಸ್ ವಿರುದ್ಧದ ಎರಡನೇ ಕ್ವಾಲಿಫೈಯರ್‌ನಲ್ಲಿ ಸ್ಮರಣೀಯ ಇನ್ನಿಂಗ್ಸ್ ಆಡಿದ ಗಿಲ್ ಕೇವಲ 47 ಎಸೆತಗಳಲ್ಲಿ ಶತಕ ಬಾರಿಸಿದರು. ಈ ಮೂಲಕ ಗುಜರಾತ್ ಟೈಟಾನ್ಸ್ ಪರ ಅತಿ ವೇಗದ ಶತಕ ಬಾರಿಸಿದ ದಾಖಲೆಯನ್ನು ನಿರ್ಮಿಸಿದರು. 53 ಎಸೆತಗಳಲ್ಲಿ 104 ರನ್ ಬಾರಿಸಿ ಔಟಾದ ಗಿಲ್, ಸಾಯಿ ಸುದರ್ಶನ್ ಅವರೊಂದಿಗೆ 167 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು, ಇದು ಪ್ಲೇಆಫ್‌ನಲ್ಲಿ ಯಾವುದೇ ವಿಕೆಟ್‌ಗೆ ಅತ್ಯಧಿಕ ಜೊತೆಯಾಟವಾಗಿದೆ.

Published On – 11:14 pm, Fri, 29 May 26

Source link

150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ ಸಂಜಯ್ ಮಿಶ್ರಾ

ಬಾಲಿವುಡ್​ನ (Bollywood) ಖ್ಯಾತ ನಟ ಸಂಜಯ್ ಮಿಶ್ರಾ (Sanjay Mishra) ಅವರ ಬಳಿ ನೂರಾರು ಕೋಟಿ ರೂಪಾಯಿ ಆಸ್ತಿ ಇದೆ. ಹಾಗಿದ್ದರೂ ಕೂಡ ಅವರು ಸರಳ ಜೀವನವನ್ನು ಮರೆತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಅವರು ಇತ್ತೀಚೆಗೆ ಹಂಚಿಕೊಂಡ ಒಂದು ವಿಡಿಯೋ ಸಖತ್ ವೈರಲ್ ಆಗಿದೆ. ಮಳೆಗಾಲ ಆರಂಭ ಆಗುವುದಕ್ಕೂ ಮುನ್ನ ದೇವಸ್ಥಾನವನ್ನು ಸ್ವಚ್ಛಗೊಳಿಸುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ. ಸಿನಿಮಾ ಕೆಲಸಗಳಿಂದ ಬಿಡುವು ಪಡೆದಾಗ ಅವರು ತೋಟದ ಮನೆಯಲ್ಲಿ ಕಾಲ ಕಳೆಯುತ್ತಾರೆ. ಅಲ್ಲಿರುವ ಶಿವನ ದೇವಸ್ಥಾನದ ಕೆಲಸಗಳನ್ನು ಅವರು ಮಾಡಿದ್ದಾರೆ. ಈ ವಿಡಿಯೋ ನೋಡಿ ಅಭಿಮಾನಿಗಳು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೂಲಗಳ ಪ್ರಕಾರ, ಸಂಜಯ್ ಮಿಶ್ರಾ ಅವರು ಅಂದಾಜು 150 ಕೋಟಿ ರೂಪಾಯಿ ಒಡೆಯ. ಆದರೂ ಕೂಡ ಅವರು ಹಳ್ಳಿ ಹೈದನಂತೆ ಸುಡು ಬಿಸಿಲಿನಲ್ಲಿ ನಿಂತು ಕೆಲಸ ಮಾಡುತ್ತಿರುವ ವಿಡಿಯೋ (Sanjay Mishra Viral Video) ಎಲ್ಲರ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ಛಲವಾದಿ ನಾರಾಯಣಸ್ವಾಮಿ

ಕಲಬುರಗಿ, ಮೇ 29: ಒಂದು ತಿಂಗಳೊಳಗೆ ನಾಲ್ವರು ಹಿಂದೂ ವಿರೋಧಿಗಳು ಅಧಿಕಾರ ಕಳೆದುಕೊಂಡಿದ್ದಾರೆ ಎಂಬ ಪೋಸ್ಟರ್​​ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಿಳುನಾಡಿನ ಎಂ.ಕೆ ಸ್ಟಾಲಿನ್, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಕೇರಳದ ಪಿಣರಾಯಿ ವಿಜಯನ್​ ಮತ್ತು ಕರ್ನಾಟಕದ ಸಿದ್ದರಾಮಯ್ಯರ ಪೋಸ್ಟರ್ ವೈರಲ್​ ಆಗಿದೆ. ಈ ಸಂಬಂಧ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದು, ಹಿಂದುತ್ವದ ವಿರುದ್ಧ ನಿಲುವು ತಳೆದಿದ್ದ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ನಾಲ್ಕು ಮಂದಿ ಮುಖ್ಯಮಂತ್ರಿಗಳು ಕಳೆದ ಒಂದು ತಿಂಗಳಲ್ಲೇ ತಮ್ಮ ಸ್ಥಾನ ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ಮಾಡಿದರು. ಇನ್ನು ರಾಜಕೀಯ ನಿವೃತ್ತಿ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬದಲಾಗಿ ಕೋಮುವಾದಿಗಳ ವಿರುದ್ಧ ಹೋರಾಟ ಮಾಡುತ್ತೇನೆ ಎಂದಿದ್ದಾರೆ. ಆದರೆ ಅವರೇ ಕೋಮುವಾದಿಗಳು ಎಂದು ತಿರುಗೇಟು ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಡಿಕೆಶಿಗೆ ಸಿಎಂ ಯೋಗ: ನಿಜವಾಯ್ತು ಕೋಡಿಶ್ರೀ ಭವಿಷ್ಯ, ಸಿದ್ದರಾಮಯ್ಯ ಬಗ್ಗೆ ಅಂದು ಸ್ವಾಮೀಜಿ ಹೇಳಿದ್ದೇನು?

ಬೆಂಗಳೂರು , (ಮೇ 29): “ಹಾಲುಮತ ಸಮಾಜದಿಂದ ಅಧಿಕಾರ ಕಿತ್ತುಕೊಳ್ಳುವುದು ಕಷ್ಟ. ಅವರಾಗಿಯೇ ಬಿಟ್ಟರೆ ಮಾತ್ರ ಅಧಿಕಾರ” ಎನ್ನುವ ಮೂಲಕ‌ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ  (Siddaramaiah) ಬಿಟ್ಟು ಕೊಡುವವರೆಗೂ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ಅಧಿಕಾರ ಸಿಗುವುದಿಲ್ಲ ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಈ ಹಿಂದೆ ಭವಿಷ್ಯ (Kodi Shree Predication) ನುಡಿದಿದ್ದರು. ಈಗ ಕೋಡಿಶ್ರೀಗಳ ಭವಿಷ್ಯ ಅಕ್ಷರಶಃ ನಿಜವಾಗಿದೆ. ಹೈಕಮಾಂಡ್ ಸೂಚಿಸಿದಂತೆ ಸಿದ್ದರಾಮಯ್ಯ, ಯಾವುದೇ ತಂಟೆ ತಗಾದೇ ತೆಗೆಯದೇ ನೇರವಾಗಿ ಬಂದು ಮುಖ್ಯಮಂತ್ರಿ ಸ್ಥಾನಕ್​ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಅವರೇ ಸಿಎಂ ಸ್ಥಾನವನ್ನ ನಯವಾಗಿ ಬಿಟ್ಟುಕೊಟ್ಟಿದ್ದಾರೆ. ಇದರೊಂದಿಗೆ ಕೋಡಿ ಶ್ರೀ ನುಡಿದಿದ್ದ ರಾಜಕೀಯ ಭವಿಷ್ಯ ನಿಜವಾಗಿದೆ.

ಬಲವಂತವಾಗಿ ಅಲುಗಾಡಿಸಲು ಆಗಲ್ಲ ಎಂದಿದ್ದ ಶ್ರೀ

ಅಂದು ಮುಖ್ಯಮಂತ್ರಿಗಳ ಅಧಿಕಾರಾವಧಿ ಕುರಿತು ಮಾತನಾಡಿದ್ದ ಶ್ರೀಗಳು, ಸಿದ್ದರಾಮಯ್ಯ ಅವರನ್ನು ಬಲವಂತವಾಗಿ ಅಧಿಕಾರದಿಂದ ಮುಕ್ತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. “ವಿರೋಧ ಪಕ್ಷಗಳಾಗಲಿ ಅಥವಾ ಸ್ವತಃ ಹೈಕಮಾಂಡ್ ಆಗಲಿ ಅವರನ್ನು ಒತ್ತಾಯಪೂರ್ವಕವಾಗಿ ಕುರ್ಚಿಯಿಂದ ಕೆಳಗಿಳಿಸಲು ಸಾಧ್ಯವಿಲ್ಲ. ಒಂದು ವೇಳೆ ಸಿದ್ದರಾಮಯ್ಯ ಅವರು ತಾವಾಗಿಯೇ ಮನಸ್ಸು ಮಾಡಿ ಸ್ಥಾನ ಬಿಟ್ಟುಕೊಟ್ಟರೆ ಮಾತ್ರ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸಾಧ್ಯ” ಎಂದು ಹೇಳಿದ್ದರು. ಅಂದರೆ ಈ ಬದಲಾವಣೆಯ ಹಿಂದೆ ಸಿದ್ದರಾಮಯ್ಯ ಅವರ ಸ್ವಯಂ ನಿರ್ಧಾರವೇ ಪ್ರಮುಖವಾಗಿರುತ್ತದೆ ಎಂದು ಶ್ರೀಗಳು ಅಂದೇ ಸೂಚಿಸಿದ್ದರು.

ಇದನ್ನೂ ನೋಡಿ: ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ

ಕೋಡಿಶ್ರೀಗಳು ಅಂದು ನುಡಿದಿದ್ದ ಭವಿಷ್ಯದಂತೆಯೇ ಇಂದು ಸಿದ್ದರಾಮಯ್ಯ ಅವರು ಯಾವುದೇ ಒತ್ತಡಕ್ಕೆ ಮಣಿಯದೆ, ಹೈಕಮಾಂಡ್ ಮೇಲಿನ ನಿಷ್ಠೆಯಿಂದಾಗಿ ತಾವಾಗಿಯೇ ಸ್ವಪ್ರೇರಣೆಯಿಂದ ಮುಖ್ಯಮಂತ್ರಿ ಸ್ಥಾನವನ್ನು ತ್ಯಾಗ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಈ ಗೌರವಯುತ ನಿರ್ಗಮನದೊಂದಿಗೆ ಕೋಡಿಮಠದ ಶ್ರೀಗಳ ಮಾತುಗಳು ಸತ್ಯವಾಗಿದೆ.

ರಾಹುಲ್ ಸೂಚನೆಯನ್ನು ಶಿರಸಾವಹಿಸಿ ಪಾಲಿಸಿದ ಸಿದ್ದು

2023ರಲ್ಲಿ ಸರ್ಕಾರ ರಚನೆ ವೇಳೆ ಸಿಎಂ ಸ್ಥಾನದ ಅಧಿಕಾರ ಹಂಚಿಕೆ ಬಗ್ಗೆ ಆಗಿತ್ತೆನ್ನಲಾದ ಅಲಿಖಿತ ಒಪ್ಪಂದ ಹಲವು ಸಮಯದ ಗೊಂದಲಗಳ ಬಳಿಕ ಅಂತಿಮವಾಗಿ ಸುಖಾಂತ್ಯ ಕಂಡಿದೆ. ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಬ್ರೇಕ್ ಫಾಸ್ಟ್ ಮೀಟಿಂಗ್​​ನಲ್ಲಿ ಸಿದ್ದರಾಮಯ್ಯ ಹೇಳಿದ್ದರು. ಅಲ್ಲದೇ ಜೊತೆಗೆ ಕರೆದುಕೊಂಡು ಲೋಕಭವನಕ್ಕೆ ತೆರಳಿ ಪಕ್ಕದಲ್ಲೇ ಡಿಕೆ ಶಿವಕುಮಾರ್ ಅವರನ್ನು ಇರಿಸಿಕೊಂಡು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾದರಿಯಾಗಿದ್ದಾರೆ.

ಮೊದಲಿನಿಂದಲೂ ನಾಯಕತ್ವ ಬದಲಾವಣೆ ಮುಸುಕಿನ ಗುದ್ದಾಟ ಶುರುವಾದಗೆಲ್ಲ ಸಿದ್ದರಾಮಯ್ಯನವರು ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆಂದು ಹೇಳಿಕೊಂಡೇ ಬಂದಿದ್ದರು. ಆದ್ರೆ, ಅಂತಿಮವಾಗಿ ರಾಹುಲ್ ಗಾಂಧಿ, ರಾಜೀನಾಮೆ ನೀಡಿ ಎಂದು ಹೇಳುತ್ತಾರೆಂಬ ನಂಬಿಕೆ ಸಿದ್ದರಾಮಯ್ಯನವರಿಗೆ ಇರಲಿಲ್ಲ. ಇವರು ಅಷ್ಟು ಸುಲಭಕ್ಕೆ ಬಿಟ್ಟು ಕೊಡುತ್ತಾರೆ ಎಂಬ ನಂಬಿಕೆಯೂ ಹೈಕಮಾಂಡ್ ನಾಯಕರಿಗಿರಲಿಲ್ಲ. ಅಲ್ಲದೇ ಈ ನಾಯಕತ್ವ ಬದಲಾವಣೆ ಗೊಂದಲ ಇಷ್ಟು ಸುಲಭಕ್ಕೆ ಈ ಪ್ರಕ್ರಿಯೆ ಮುಗಿಯುತ್ತದೆ ಎಂಬ ನಂಬಿಕೆ ಯಾರಿಗೂ ಇರಲಿಲ್ಲ.

ಹೀಗೆ ಸಿದ್ದರಾಮಯ್ಯನವರು ಶಿರಸಾವಹಿಸಿ ಪಾಲಿಸಿರುವುದರಿಂದಲೇ ಇದೀಗ ಡಿಕೆ ಶಿವಕುಮಾರ್​​​ಗೆ ಸಿಎಂ ಆಗುವ ಯೋಗ ಕೂಡಿಬಂದಿದೆ. ಒಂದು ವೇಳೆ ಸಿದ್ದರಾಮಯ್ಯನವರು ತಗಾದೆ ತೆಗೆದು ರಾಜೀನಾಮೆ ನೀಡಲು ಹಿಂದೇಟು ಹಾಕಿದ್ದರೆ ಡಿಕೆ ಶಿವಕುಮಾರ್ ಸಿಎಂ ಆಗುತ್ತಿರಲಿಲ್ಲ. ಒಂದು ವೇಳೆ ಸಿದ್ದರಾಮಯ್ಯನವರಿಂದ ಬಲವಂತವಾಗಿ ಸಿಎಂ ಕುರ್ಚಿ ಕಿತ್ತುಕೊಂಡಿದ್ದರೆ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನವಾಗಿತ್ತು.

Source link