Headlines

GT vs RR: ಸತತ 2ನೇ ಪಂದ್ಯದಲ್ಲಿ ಶತಕ ವಂಚಿತರಾದ ವೈಭವ್ ಸೂರ್ಯವಂಶಿ

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಎಲಿಮಿನೆಟರ್ ಪಂದ್ಯದಲ್ಲಿ 97 ರನ್‌ಗಳಿಗೆ ಔಟಾಗಿ ಕೇವಲ 3 ರನ್​ಗಳಿಂದ ಶತಕ ವಂಚಿತರಾಗಿದ್ದ ವೈಭವ್ ಸೂರ್ಯವಂಶಿ, ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧದ ಎರಡನೇ ಕ್ವಾಲಿಫೈಯರ್‌ನಲ್ಲಿ 96 ರನ್‌ಗಳಿಗೆ ಔಟಾಗಿದ್ದಾರೆ. ಬೇಸರದ ಸಂಗತಿಯೆಂದರೆ ಸನ್‌ರೈಸರ್ಸ್ ವಿರುದ್ಧ ವೈಭವ್ ಯಾವ ರೀತಿಯಾಗಿ ಔಟಾಗಿದ್ದರೋ, ಇದೀಗ ಗುಜರಾತ್ ವಿರುದ್ಧ ಅದೇ ರೀತಿಯಾಗಿ ವಿಕೆಟ್ ಒಪ್ಪಿಸಿದರು (PC- PTI). ಮತ್ತೊಂದು ಗಮನಿಸಬೇಕಾದ ಸಂಗತಿಯೆಂದರೆ, ವೈಭವ್ ಅವರ ಈ ಎರಡು ಬಾರಿಯೂ ಶತಕ ವಂಚಿತರಾಗಲು ಕನ್ನಡಿಗರು ಕಾರಣರಾಗಿದ್ದಾರೆ. ಸನ್‌ರೈಸರ್ಸ್ ವಿರುದ್ಧದ…

Read More

ಸಮಂತಾಗೆ ಮೋಸ ಮಾಡಿದ್ರಿ ಎಂದವರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ ನಾಗ ಚೈತನ್ಯ

ಟಾಲಿವುಡ್ ಖ್ಯಾತ ನಟ ನಾಗ ಚೈತನ್ಯ (Naga Chaitanya) ಅವರು ತಮ್ಮ ವ್ಯಕ್ತಿತ್ವದ ಹಕ್ಕುಗಳ ರಕ್ಷಣೆಗಾಗಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ಹೆಸರು, ಫೋಟೋಗಳು, ಕೃತಕ ಬುದ್ಧಿಮತ್ತೆ (ಎಐ) ಬಳಸಿ ಸೃಷ್ಟಿಸಲಾದ ಡೀಪ್‌ಫೇಕ್ ಹಾಗೂ ಅಶ್ಲೀಲ ಕಂಟೆಂಟ್‌ಗಳ ಅನಧಿಕೃತ ಬಳಕೆಯನ್ನು ತಡೆಯಲು ಅವರು ಮೊಕದ್ದಮೆ ಹೂಡಿದ್ದಾರೆ. ಪ್ರಮುಖವಾಗಿ, ಅವರು ಮಾಜಿ ಪತ್ನಿ ಸಮಂತಾ (Samantha) ರುತ್ ಪ್ರಭುಗೆ ವಂಚಿಸಿ, ಆಕೆಯ ವೃತ್ತಿಜೀವನವನ್ನು ಹಾಳು ಮಾಡಿದ್ದಾರೆ ಎಂಬ ಅರ್ಥದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಮತ್ತು ನಿಂದನಾತ್ಮಕ…

Read More

ಹೃದಯಸ್ಪರ್ಶಿ ಘಟನೆ: ಮಳೆಯಲ್ಲಿ ರಸ್ತೆ ದಾಟಲು ಪರದಾಡುತ್ತಿದ್ದ ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಬೆಂಗಳೂರು, ಮೇ 29: ಸಿಲಿಕಾನ್ ಸಿಟಿಯಲ್ಲಿ ಸುರಿದ ಧಾರಾಕಾರ ಮಳೆ ಒಂದೆಡೆ ಅವಾಂತರ ಸೃಷ್ಟಿಸುತ್ತಿದ್ದರೆ, ಮತ್ತೊಂದೆಡೆ ಇದೇ ಮಳೆಯ ನಡುವೆ ಬೆಂಗಳೂರು ಪೊಲೀಸರ ಮಾನವೀಯತೆಯ ದರ್ಶನವಾಗಿದೆ. ಮಳೆಯಲ್ಲಿ ರಸ್ತೆ ದಾಟಲು ಪರದಾಡುತ್ತಿದ್ದ ವಿಕಲಚೇತನ ಯುವಕನನ್ನು ಪೊಲೀಸ್ ಕಾನ್ಸ್ಟೇಬಲ್​​ ಅನಿಲ್​​ ಹೆಗಲ ಮೇಲೆ ಹೊತ್ತು ರಸ್ತೆ ದಾಟಿಸಿದ್ದಾರೆ. ಆ ಮೂಲಕ ಕರ್ತವ್ಯದ ವೇಳೆ ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳೆಲ್ಲಾ ಜಲಾವೃತಗೊಂಡಿವೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಸಾರ್ವಜನಿಕರ ರಕ್ಷಣೆಗೆ…

Read More

ಸಂಗೀತಾ ಮೊಬೈಲ್ಸ್​ನ 52ನೇ ವಾರ್ಷಿಕೋತ್ಸವ ಮಾರಾಟ ಮೇಳ: ದಕ್ಷಿಣ ಭಾರತೀಯರಿಗೆ ಭರ್ಜರಿ ಬಹುಮಾನಗಳ ಸುರಿಮಳೆ, ಸಾಟಿ ಇಲ್ಲದ ಆಫರ್ಸ್

ಭಾರತದ ಪ್ರಮುಖ ಎಲೆಕ್ಟ್ರಾನಿಕ್ಸ್ ಮತ್ತು ಮೊಬೈಲ್ ರಿಟೇಲ್ ಚೇನ್ ಆದ ‘ಸಂಗೀತಾ’ (sangeetha mobiles), ಮೇ 31 ರಿಂದ ತನ್ನ ಭವ್ಯವಾದ 52ನೇ ವರ್ಷದ ವಾರ್ಷಿಕೋತ್ಸವದ (52 years anniversary) ಮಾರಾಟ ಮೇಳವನ್ನು (52nd Anniversary Sale) ಘೋಷಿಸಿದೆ. ಇದನ್ನು ತನ್ನ “ಇತಿಹಾಸದಲ್ಲೇ ಅತ್ಯಂತ ದೊಡ್ಡ ಮತ್ತು ಹೆಚ್ಚು ಕೊಡುಗೆಗಳಿರುವ ಮಾರಾಟ ಮೇಳ” ಎಂದು ಈ ಸಂಸ್ಥೆ ಬಣ್ಣಿಸಿದೆ. ಕೇವಲ ಸ್ಟೋರ್‌ಗೆ ಭೇಟಿ ನೀಡಿದರೂ ಸಾಕು, ಗ್ರಾಹಕರು 6,000 ರೂವರೆಗೆ ಪ್ರಯೋಜನಗಳನ್ನು ಪಡೆಯಬಹುದು. ಅಷ್ಟು ಮಾತ್ರವಲ್ಲ, ಡ್ಯಾಮೇಜ್…

Read More

ಹಿಜಾಬ್ ಧರಿಸಿದ್ದಕ್ಕೆ ಸಿಕ್ಕಾಪಟ್ಟೆ ಟ್ರೋಲ್ ಆದ ಖ್ಯಾತ ನಟಿ ಅಂಕಿತಾ ಲೋಖಂಡೆ

ಕಿರುತೆರೆ ಹಾಗೂ ಬಾಲಿವುಡ್ ನಟಿ ಅಂಕಿತಾ ಲೋಖಂಡೆ (Ankita Lokhande) ಅವರು ಅಬುಧಾಬಿ ಪ್ರವಾಸದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಬೆನ್ನಲ್ಲೇ ಭಾರಿ ಟ್ರೋಲಿಂಗ್‌ಗೆ ಒಳಗಾಗಿದ್ದಾರೆ. ಪತಿ ವಿಕ್ಕಿ ಜೈನ್ ಜೊತೆ ದುಬೈ ಪ್ರವಾಸದಲ್ಲಿರುವ ಅಂಕಿತಾ, ಅಲ್ಲಿನ ಕೆಲವು ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸುವಾಗ ಹಿಜಾಬ್ (Hijab) ಧರಿಸಿದ್ದ ಫೋಟೋಗಳನ್ನು ಪೋಸ್ಟ್ ಮಾಡಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಆದರೆ, ನಟಿಯ ಬೆಂಬಲಕ್ಕೆ ನಿಂತಿರುವ ಅವರ ಅಭಿಮಾನಿಗಳು ಟ್ರೋಲರ್‌ಗಳಿಗೆ ತಕ್ಕ ಪ್ರತ್ಯುತ್ತರ ನೀಡುತ್ತಿದ್ದಾರೆ. ಗುರುವಾರ (ಮೇ…

Read More

GT vs RR: ಅತ್ಯಂತ ನಿಧಾನಗತಿಯ ಅರ್ಧಶತಕ ಬಾರಿಸಿದ ವೈಭವ್ ಸೂರ್ಯವಂಶಿ

ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿರುವ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಎಡಗೈ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ಎರಡೆರಡು ದಾಖಲೆಗಳನ್ನು ನಿರ್ಮಿಸಿದ್ದಾರೆ. ಗುಜರಾತ್ ವಿರುದ್ಧದ ಈ ಪಂದ್ಯದಲ್ಲಿ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ವೈಭವ್, ಈ ಅರ್ಧಶತಕದ ಇನ್ನಿಂಗ್ಸ್ ಮೂಲಕ ಈ ಬಾರಿಯ ಐಪಿಎಲ್‌ನಲ್ಲಿ 700 ರನ್‌ಗಳ ಗಡಿ ದಾಟಿದರು. ಇದರ ಜೊತೆಗೆ ಪ್ಲೇಆಫ್‌ನಲ್ಲಿ 500 ರನ್‌ ಪೂರೈಸುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಪವರ್‌ಪ್ಲೇನಲ್ಲಿ 500…

Read More

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಗೆ ಆಟೋ ಚಾಲಕ ಬಲಿ

ಬೆಂಗಳೂರು, ಮೇ 29: ಇತ್ತೀಚೆಗೆ ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಜನರು ಸಾವನ್ನಪ್ಪಿದ್ದರು. ಇದೀಗ ನಗರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಇಂದು ಸುರಿದ ಭಾರೀ ಮಳೆಗೆ  ಕ್ಲಬ್‌ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವನ್ನಪ್ಪಿರುವಂತಹ ಘಟನೆ ವಿಜಯನಗರದಲ್ಲಿ ನಡೆದಿದೆ. ಗಂಗೊಂಡನಹಳ್ಳಿಯ ನಿವಾಸಿ ಶಿವಬೋರಯ್ಯ(56) ಮೃತ ಆಟೋ ಚಾಲಕ. ಸದ್ಯ ಶಿವಬೋರಯ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ. Published On…

Read More

GT vs RR: ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಯಶಸ್ವಿ ಜೈಸ್ವಾಲ್ ಅವರ ಸಾಮರ್ಥ್ಯ ಇಡೀ ಜಗತ್ತಿಗೆ ತಿಳಿದಿದೆ. ಆದರೆ ಈ ಬಾರಿಯ ಐಪಿಎಲ್‌ನಲ್ಲಿ ಜೈಸ್ವಾಲ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಆದಾಗ್ಯೂ ಗುಜರಾತ್ ಟೈಟಾನ್ಸ್ ವಿರುದ್ಧದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಜೈಸ್ವಾಲ್ ಅವರಿಂದ ಒಂದೊಳ್ಳೆ ಇನ್ನಿಂಗ್ಸ್​ನ ನಿರೀಕ್ಷೆ ಇತ್ತು. ಆದರೆ ಆ ಪಂದ್ಯದಲ್ಲೂ ನಿರಾಸೆ ಮೂಡಿಸಿದ ಜೈಸ್ವಾಲ್ ಕೇವಲ ಎರಡು ಎಸೆತಗಳನ್ನು ಎದುರಿಸಿ ಒಂದು ರನ್ ಗಳಿಸಿ ಔಟಾದರು. ಮೊಹಮ್ಮದ್ ಸಿರಾಜ್ ಎಸೆದ ಬೌನ್ಸರ್ ಎಸೆತವನ್ನು ಸಿಕ್ಸರ್​ಗಟ್ಟುವ ಯತ್ನದಲ್ಲಿ ಜೈಸ್ವಾಲ್ ಕ್ಯಾಚ್ ನೀಡಿದರು. ಈ ಮೂಲಕ ಪ್ಲೇಆಫ್‌ನಲ್ಲಿ…

Read More

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಬೆಂಗಳೂರು, ಮೇ 29: ರಾಜಗುರು ದ್ವಾರಕಾನಾಥ್ ಗುರೂಜಿ ಅವರು ಡಿಕೆ ಶಿವಕುಮಾರ್ ಅವರ ರಾಜಕೀಯ ಜೀವನದ ಬಗ್ಗೆ ಮಹತ್ವದ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಗುರೂಜಿ ಪ್ರಕಾರ, ಡಿಕೆ ಶಿವಕುಮಾರ್ ಅವರ ಜಾತಕದಲ್ಲಿ ಬುಧಾದಿತ್ಯ ಯೋಗವಿದ್ದು, ಇದು ಅವರಿಗೆ ಉನ್ನತ ಸ್ಥಾನಗಳನ್ನು ತಂದುಕೊಡುತ್ತದೆ. ಬಂಗಾರಪ್ಪನವರ ಕಾಲದಿಂದಲೂ ಶಿವಕುಮಾರ್ ಅವರೊಂದಿಗೆ ಸಂಪರ್ಕದಲ್ಲಿರುವ ಗುರೂಜಿ, 40 ವರ್ಷಗಳ ಹಿಂದೆಯೇ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾಗಿ ತಿಳಿಸಿದ್ದಾರೆ. ಡಿಕೆ ಶಿವಕುಮಾರ್​ಗೆ ಅಧಿಕಾರ ಸ್ವಲ್ಪ ತಡವಾಗಿ ಸಿಕ್ಕಿದ್ದು, ಈ ಹಾದಿಯು ಸವಾಲುಗಳಿಂದ ಕೂಡಿದೆ ಎಂದು…

Read More

ಐಟಿ ದಾಳಿ ಕೇಸ್: ಸಿಎಂ ನಿರೀಕ್ಷೆಯಲ್ಲಿರುವ ಡಿಕೆ ಶಿವಕುಮಾರ್​​​​ಗೆ ಕೋರ್ಟ್​​​ ಬಿಗ್ ರಿಲೀಫ್

ಬೆಂಗಳೂರು, (ಮೇ 29): ತೆರಿಗೆ ವಂಚನೆ ಸಂಬಂಧ ಐಟಿ ದಾಳಿ ಪ್ರಕರಣದಲ್ಲಿ (IT Raid Case) ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)  ಅವರಿಗೆ ವಿಧಿಸಲಾಗಿದ್ದ ಜಾಮೀನು ಷರತ್ತನ್ನು ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಸಡಿಲಿಸಿದೆ. ಕೋರ್ಟ್ ಅನುಮತಿ ಇಲ್ಲದೇ ದೇಶ ಬಿಟ್ಟು ತೆರಳುವಂತಿಲ್ಲವೆಂದು ವಿಧಿಸಲಾಗಿದ್ದ ಷರತ್ತು ಸಡಿಲಿಕೆ ಮಾಡಿದೆ. ಸಚಿವರಾಗಿ ಅಧಿಕೃತ ಕೆಲಸ ಹಾಗೂ ವೈಯಕ್ತಿಕ ಉದ್ಯಮದ ನಿಮಿತ್ತ ಮುಂದಿನ ಎರಡು ವರ್ಷಗಳ ಕಾಲ ವಿವಿಧ ದೇಶಗಳಿಗೆ ಪ್ರವಾಸ ಕೈಗೊಳ್ಳಲು ಅನುಮತಿ ನೀಡಿದೆ. ಆದರೆ,…

Read More