IND vs PAK: ಭಾರತ vs ಪಾಕಿಸ್ತಾನ್ ಮುಖಾಮುಖಿಗೆ ಡೇಟ್ ಫಿಕ್ಸ್ – Kannada News | U19 World Cup 2026: India vs Pakistan Match Date
ಅಂಡರ್-19 ವಿಶ್ವಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಮುಖಾಮುಖಿಗೆ ದಿನಾಂಕ ನಿಗದಿಯಾಗಿದೆ. ಅದರಂತೆ ಫೆಬ್ರವರಿ 1 ರಂದು ನಡೆಯಲಿರುವ ಸೂಪರ್-6 ಹಂತದ 12ನೇ ಪಂದ್ಯದಲ್ಲಿ ಇಂಡೊ-ಪಾಕ್ ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಝಿಂಬಾಬ್ವೆಯ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್ ಮೈದಾನ ಆತಿಥ್ಯವಹಿಸಲಿದೆ. ಈ ಬಾರಿಯ ಅಂಡರ್-19 ಟೂರ್ನಿಯಲ್ಲಿ ಗ್ರೂಪ್-ಬಿ ನಲ್ಲಿ ಕಣಕ್ಕಿಳಿದಿದ್ದ ಭಾರತ ತಂಡವು ಮೊದಲ ಪಂದ್ಯದಲ್ಲಿ ಯುಎಸ್ಎ ವಿರುದ್ಧ 6 ವಿಕೆಟ್ಗಳ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು 18 ರನ್ಗಳಿಂದ ಮಣಿಸಿದ್ದರು. ಹಾಗೆಯೇ ಮೂರನೇ…