‘ಧುರಂಧರ್’ ಚಿತ್ರತಂಡದ ಸದಸ್ಯನ ಲೈಂಗಿಕ ದೌರ್ಜನ್ಯ ಕೃತ್ಯ ಸಾಬೀತು; ಕಠಿಣ ಕ್ರಮ
ಸೂಪರ್ ಹಿಟ್ ‘ಧುರಂಧರ್’ (Dhurandhar) ಚಿತ್ರದ ಪ್ರೊಡಕ್ಷನ್ ಡಿಸೈನರ್ ಸೈನಿ ಎಸ್. ಜೊಹ್ರೆ (Saini S Johray) ವಿರುದ್ಧ ಕೇಳಿಬಂದಿದ್ದ ಲೈಂಗಿಕ ಕಿರುಕುಳದ ಆರೋಪಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಈಗಾಗಲೇ ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಸೈನಿ ಎಸ್. ಜೊಹ್ರೆಯನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ, ಚಿತ್ರದ ಆಂತರಿಕ ಲೈಂಗಿಕ ಕಿರುಕುಳ ತಡೆ ಸಮಿತಿಯು (POSH Committee) ನಡೆಸಿದ ತನಿಖೆಯಲ್ಲಿ ಜೊಹ್ರೆ ತಪ್ಪಿತಸ್ಥ ಎಂದು ಸಾಬೀತಾಗಿದೆ. ಹಾಗಾಗಿ ‘ಯಶ್ ರಾಜ್ ಫಿಲ್ಮ್ಸ್’ ಸಂಸ್ಥೆಯ…