40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು? ಇಲ್ಲಿದೆ ಲಿಸ್ಟ್
ಬೆಂಗಳೂರು, (ಮೇ 29): ಈಗಾಗಲೇ ಸಿದ್ದರಾಮಯ್ಯನವರ (Siddaramaiah) ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಜೊತೆಗೆ ಸಚಿವ ಸಂಪುಟವನ್ನು ಸಹ ವಿಸರ್ಜನೆ ಮಾಡಲಾಗಿದೆ. ಹೀಗಾಗಿ ಹೊಸ ಸಿಎಂ ಹಾಗೂ ಸಚಿವರನ್ನು ಆಯ್ಕೆ ಮಾಡಬೇಕಿದ್ದು, ಈ ಸಂಬಂಧ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಯಾರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಕಟ್ಟಬೇಕು? ಯಾರಿಗೆ ಸಚಿವರನ್ನಾಗಿ ಮಾಡಬೇಕು? ಎನ್ನುವ ಬಗ್ಗೆ ಮಾತುಕತೆಗಳು ನಡೆದಿವೆ. ಮತ್ತೊಂದೆಡೆ ಸಚಿವ ಸ್ಥಾನದ ಆಕಾಂಕ್ಷಿಗಳ ಲಾಬಿ…