ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ಸಜ್ಜಾಗುತ್ತಿದೆ ವಿಧಾನಸೌಧ: ಹೇಗಿದೆ ಗೊತ್ತಾ ಸಿದ್ಧತೆ?
ಬೆಂಗಳೂರು, ಮೇ 29: ಕರ್ನಾಟಕದ ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ನಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಅಧಿಕಾರಿಗಳಿಗೆ ಈಗಾಗಲೇ ಅಗತ್ಯ ಸೂಚನೆಗಳನ್ನು ನೀಡಲಾಗಿದ್ದು, ವೇದಿಕೆ ನಿರ್ಮಾಣ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಮಹತ್ವದ ಭದ್ರತಾ ಸಭೆ ನಡೆದಿದ್ದು, ಬಂದೋಬಸ್ತ್ಗೆ ವ್ಯಾಪಕ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಹಿನ್ನೆಲೆ, ನಾಳೆ ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ…