ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ, ಭುಗಿಲೆದ್ದ ಆಕ್ರೋಶ – Kannada News | Republic Day 2026: Karnataka tableau out from Delhi Republic Day parade
ನವದೆಹಲಿ/ಬೆಂಗಳೂರು,(ಜನವರಿ 24): ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ ಬಾರಿ ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಪಥಸಂಚಲನದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಸಿಕ್ಕಿಲ್ಲ. ಈ ಬಾರಿ ಕರ್ನಾಟಕದಿಂದ ‘ಮಿಲೆಟ್ಸ್ ಟು ಮೈಕ್ರೋಚಿಪ್’ (ಸಿರಿಧಾನ್ಯದಿಂದ ಮೈಕ್ರೋಚಿಪ್‌ವರೆಗೆ) ಎಂಬ ಪರಿಕಲ್ಪನೆಯ ಸ್ತಬ್ಧಚಿತ್ರವನ್ನ ಸಿದ್ಧಪಡಿಸಲಾಗಿತ್ತು. ಆದ್ರೆ, ಕೊನೆ ಕ್ಷಣದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ಪರೇಡ್‌ನಿಂದ ಹೊರಬಿದ್ದಿದೆ. ಈ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದೆ. ಮಿಲೆಟ್ಸ್ ಟು ಮೈಕ್ರೋ ಚಿಪ್’ ವಿಷಯಾಧಾರಿತ ಸ್ತಬ್ಧ…