ಜನಾರ್ದನ ರೆಡ್ಡಿ ಮಾಡೆಲ್ ಹೌಸ್‌ಗೆ ಬೆಂಕಿ ಪ್ರಕರಣಕ್ಕೆ ಸ್ಫೋಟಕ ತಿರುವು: ರೀಲ್ಸ್ ಮಾಡಲು ಹೋಗಿ ಬೆಂಕಿ ಹಚ್ಚಿದ್ರಾ ಅಪ್ರಾಪ್ತರು? – Kannada News | Janardhan Reddy Model House Fire Case Takes unexpected Turn, Minors Detained Over Reels Angle
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಬೆಂಕಿ ಬಳ್ಳಾರಿ, ಜನವರಿ 24: ಬಳ್ಳಾರಿಯಲ್ಲಿ (Ballari) ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ (Janardhan Reddy) ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ದೊರೆತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಅಪ್ರಾಪ್ತರು ಸೇರಿ ಒಟ್ಟು 8 ಜನರನ್ನು ಬಳ್ಳಾರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬಳ್ಳಾರಿಯ ಕೌಲ್‌ಬಜಾರ್ ಪ್ರದೇಶದ ನಿವಾಸಿಗಳಾದ 8 ಜನರನ್ನು ವಶಕ್ಕೆ ಪಡೆಯಲಾಗಿದ್ದು, ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್…