Category Archives: Blog

Your blog category

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿ, ರಾಜ್ಯದೆಲ್ಲೆಡೆ ಒಣ ಹವೆ – Kannada News | Bengaluru temperature: Cold weather in Bengaluru, Dry weather all over karnataka

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿ, ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರು, ಜನವರಿ 24: ಹಲವು ದಿನಗಳಿಂದ ರಾಜ್ಯದಲ್ಲಿ ಶೀತ ಮತ್ತು ಒಣಹವೆಯ (Weather Forecast) ವಾತಾವರಣದವಿದೆ. ಇಂದೂ ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದೆಲ್ಲೆಡೆ ಕಳೆದ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದ್ದು, ಇನ್ನೂ ನಾಲ್ಕು ದಿನ ಇದೇ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಎಲ್ಲೆಲ್ಲಿ ಒಣಹವೆ?

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ಮೈಸೂರು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮಂಜು

ಇಂದು ನಗರದಲ್ಲಿ ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 30°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 7:29 am, Sat, 24 January 26

Source link

ಭಾರತೀಯ ಬ್ಯಾಟರ್​ಗಳ ಸಿಡಿಲಬ್ಬರಕ್ಕೆ ಪಾಕಿಸ್ತಾನ್ ವಿಶ್ವ ದಾಖಲೆ ಧೂಳೀಪಟ – Kannada News | Indian Team Breaks Pakistan World Record in T20 Cricket

ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್​ ರೆಕಾರ್ಡ್ ನಿರ್ಮಿಸಿರುವುದು ಟೀಮ್ ಇಂಡಿಯಾ (Team India). ಅದು ಕೂಡ ಪಾಕಿಸ್ತಾನ್ (Pakistan) ತಂಡದ ವಿಶ್ವ ದಾಖಲೆಯನ್ನು ಧೂಳೀಪಟ ಮಾಡುವ ಮೂಲಕ ಎಂಬುದು ವಿಶೇಷ. 

Source link

ಗಿಲ್ಲಿ ಬಳಿಯೇ ಉಳೀತಾ ಚಿನ್ನದ ಚೈನ್, ಉಂಗುರ? ವಿವರಿಸಿದ ನಟ – Kannada News | Gilli Nata Got Those Gold From Sharavana? Bigg Boss Kannada 12 Winner explain real story

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ (GillI Nata) ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಹೀಗಾಗಿ, ಅವರಿಗೆ ಕೆಲವು ಕಡೆಗಳಲ್ಲಿ ಅವರನ್ನು ಉದ್ಘಾಟನೆಗೆ ಕರೆಯಲಾಗುತ್ತಿದೆ. ಚಿನ್ನದ ಶಾಪ್ ಒಂದರ ಉದ್ಘಾಟನೆಗೆ ಗಿಲ್ಲಿ ನಟ ತೆರಳಿದ್ದರು. ಈ ವೇಳೆ ಅವರ ಮೇಲೆ ಸಾಕಷ್ಟು ಚಿನ್ನ ಹೇರಲಾಯಿತು. ನಂತರದ ಕಥೆಯನ್ನು ಗಿಲ್ಲಿ ವಿವರಿಸಿದ್ದಾರೆ. ಆ ಚಿನ್ನ ನೋಡಿದ ಅವರು ತಮ್ಮದೇ ಎಂದುಕೊಂಡಿದ್ದರು.

ಶರವಣ ಒಡೆತನದ ಚಿನ್ನದ ಅಂಗಡಿ ಉದ್ಘಾಟನೆ ನಡೆದಿದೆ. ಗಿಲ್ಲಿ ನಟ ಅವರನನು ಉದ್ಘಾಟನೆಗೆ ಕರೆಸಲಾಗಿದೆ. ಈ ವೇಳೆ ಗಿಲ್ಲಿ ಅವರು ರಿಬ್ಬನ್ ಕತ್ತರಿಸಿ ಶಾಪ್ ಓಪನ್ ಮಾಡಿದರು. ಆ ಬಳಿಕ ಶರವಣ ಅವರು ಚಿನ್ನದ ಸರಗಳನ್ನು ಗಿಲ್ಲಿಗೆ ತೊಡಿಸಿದ್ದರು. ಅಷ್ಟೇ ಅಲ್ಲ, ಉಂಗುರಗಳನ್ನು ಕೂಡ ಹಾಕಿದರು. ಈ ವಿಡಿಯೋ ವೈರಲ್ ಆಗಿತ್ತು.

ಗಿಲ್ಲಿ ಸಾಮಾನ್ಯ ಜೀವನ ನಡೆಸುತ್ತಾ ಬಂದವರು. ಅವರು ಇಷ್ಟೊಂದು ಚಿನ್ನವನ್ನು ನೋಡಿಯೂ ಇರಲಿಲ್ಲ. ಹಾಗಿರುವಾಗ ದಪ್ಪನೆಯ ಚಿನ್ನದ ಹಾರಗಳೆಲ್ಲ ಇವರ ಕತ್ತೇರಿತ್ತು. ಶರವಣ ಅವರು ಒಂದೊಂದೇ ಚೈನ್​ ಹಾಗೂ ಉಂಗುರು ತೆಗೆದು ಗಿಲ್ಲಿಗೆ ತೊಡಿಸಿದ್ದರು. ಇದನ್ನು ನೋಡಿ ಗಿಲ್ಲಿ ಶಾಕ್ ಆಗಿದ್ದರು. ಅಷ್ಟೇ ಅಲ್ಲ, ಶರವಣಗೂ ಶಾಕ್ ಕೊಟ್ಟಿದ್ದರು. ‘ಈ ಚಿನ್ನ ನನಗೆ ಅಲ್ಲವ’ ಎಂದು ಪ್ರಶ್ನಿಸಿದ್ದರು ಗಿಲ್ಲಿ. ಹಾಗಾದರೆ ಶರವಣ ಅವರು ಈ ಚಿನ್ನವನ್ನು ಗಿಲ್ಲಿಗೆ ಕೊಟ್ರಾ?

ಈ ಬಗ್ಗೆ ಗಿಲ್ಲಿ ನಟ ಮಾತನಾಡಿದ್ದಾರೆ. ಗಿಲ್ಲಿ ಕೈಗೆ ಹಾಕುತ್ತಾ ಇದ್ದಿದ್ದು ಉಂಗುರುವಂತೆ. ಅಷ್ಟೊಂದು ಚಿನ್ನವನ್ನು ಅವರು ಹಾಕಿಯೇ ಇರಲಿಲ್ಲವಂತೆ. ಶರವಣ ಅವರು ಚಿನ್ನ ಹಾಕಿದ್ದು ನೋಡಿ ಅದು ತಮಗೇ ಇರಬಹುದು ಎಂದು ಅವರು ಭಾವಿಸಿದ್ದರಂತೆ. ‘ಏನಿದು ಕೇಳ್ತಾನೆ ಇಲ್ವಲ್ಲ. ಬಹುಶಃ ನನಗೆ ಇರಬಹುದು ಎಂದುಕೊಂಡು, ಚೈನ್​​ನ ಶರ್ಟ್ ಒಳಗೆ ಹಾಕಿಕೊಂಡೆ’ ಎಂದಿದ್ದಾರೆ ಗಿಲ್ಲಿ. ಆದರೆ, ಆ ಬಳಿಕ ಅಸಲಿ ವಿಷಯ ಗೊತ್ತಾಗಿದೆ. ಅವರು ಚಿನ್ನವನ್ನು ಹಿಂದಿರುಗಿಸಿದ್ದಾರೆ.

ಇದನ್ನೂ ಓದಿ: ಗಿಲ್ಲಿಗೆ ದಪ್ಪನೆಯ ಚಿನ್ನದ ಚೈನ್ ಗಿಫ್ಟ್ ಕೊಟ್ಟ ಶರವಣ?

ಈ ಮೊದಲು ಕಿಚ್ಚ ಸುದೀಪ್ ಅವರು ಶರವಣ ಅವರ ಚಿನ್ನದ ಶಾಪ್​​​ನ ಉದ್ಘಾಟನೆ ಮಾಡಲು ತೆರಳಿದ್ದರು. ಈ ವೇಳೆ ಅವರಿಗೂ ಶರವಣ ಅವರು ಚಿನ್ನ ಹಾಕಿದ್ದರು. ಈ ಮೊದಲಿನಿಂದಲೂ ಅವರು ಶಾಪ್ ಉದ್ಘಾಟನೆಗೆ ಬರೋ ಅತಿಥಿಗಳಿಗೆ ಈ ರೀತಿ ಉಂಗುರ ಹಾಕುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

SSLC ಟಾಪರ್​ಗಳಿಗೆ ಇನ್ಮುಂದೆ ಲ್ಯಾಪ್‌ಟಾಪ್ ಬದಲು ನಗದು ಬಹುಮಾನ – Kannada News | Now SSLC Toppers from Karnataka to Get Cash Prize Instead of Laptops, Government Decision

ಬೆಂಗಳೂರು, ಜನವರಿ 24: ರಾಜ್ಯ ಸರ್ಕಾರ ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ (SSLC) ಟಾಪರ್‌ಗಳಿಗೆ ಲ್ಯಾಪ್‌ಟಾಪ್‌ ಬದಲಿಗೆ ನಗದು ಬಹುಮಾನ (Cash Prize) ನೀಡಲಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಈಗಾಗಲೇ ಆದೇಶ ಹೊರಡಿಸಿದ್ದು, ಅದರ ಪ್ರಕಾರ ಪ್ರತಿ ಜಿಲ್ಲೆಯಲ್ಲಿ ಅಗ್ರ ಸ್ಥಾನ ಪಡೆದ ಟಾಪ್-3 ವಿದ್ಯಾರ್ಥಿಗಳ ಆಧಾರ್ ಲಿಂಕ್ಡ್ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ನಗದು ಬಹುಮಾನವು ಪ್ರತಿ ವಿದ್ಯಾರ್ಥಿಗೆ 50,000 ರೂ. ಆಗಿರಲಿದೆ.

2024-25ನೇ ಶೈಕ್ಷಣಿಕ ವರ್ಷದಲ್ಲಿ 758 ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ (SSP) ಮೂಲಕ ನಗದು ಬಹುಮಾನಕ್ಕೆ ಅರ್ಹರಾಗಿದ್ದಾರೆ.

ವಿದ್ಯಾರ್ಥಿಗಳ ಆಧಾರ್ ಸಂಖ್ಯೆಗೆ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತದೆ. ‘ಗುಣಮಟ್ಟದ ಭರವಸೆ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಉಪಕ್ರಮ’ ಯೋಜನೆ ಅಡಿಯಲ್ಲಿ ಈ ಯೋಜನೆಗೆ ಸುಮಾರು 325 ಲಕ್ಷ ರೂ.ಗಳನ್ನು ಮೀಸಲಿಡಲಾಗಿದೆ ಎಂದು ಇಲಾಖೆ ತಿಳಿಸಿದೆ.

ಮಕ್ಕಳ ದಿನಾಚರಣೆ ಸಂದರ್ಭದಲ್ಲಿಈ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದರು. ಆ ನಂತರ, ಸರ್ಕಾರ ಇದೀಗ ಆದೇಶ ಹೊರಡಿಸಿದೆ. ತಮಗೆ ದೊರೆತ ಬಹುಮಾನವನ್ನು ಹೇಗೆ ಬಳಸಿಕೊಳ್ಳಬೇಕೆಂಬ ಸ್ವಾತಂತ್ರ್ಯ ವಿದ್ಯಾರ್ಥಿಗಳಿಗೆ ನೀಡಬೇಕು ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಶಿಕ್ಷಣ ಇಲಾಖೆ ವಿಶೇಷ ಕಾಳಜಿ: ಇಲ್ಲಿದೆ ಮಾರ್ಗಸೂಚಿ

ಲ್ಯಾಪ್‌ಟಾಪ್‌ ನೀಡುವ ಬದಲು ನಗದು ಬಹುಮಾನ ನೀಡುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಆಯ್ಕೆ ಮತ್ತು ಪ್ರಯೋಜನ ದೊರಕಲಿದೆ ಎಂದು ಶಾಲಾ ಹಾಗೂ ಶಿಕ್ಷಣ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಐಎಂಡಿಬಿಯಲ್ಲಿ 7.1 ರೇಟಿಂಗ್; ಈ ಗೋಲ್ಡ್ ಸ್ಮಗ್ಲಿಂಗ್ ವೆಬ್ ಸೀರಿಸ್​​ನ ಮಿಸ್ ಮಾಡಬೇಡಿ – Kannada News | Taskaree: The Smuggler’s Web: Emraan Hashmi’s Netflix Thriller on Gold Smuggling

ಇತ್ತೀಚೆಗೆ ರನ್ಯಾ ರಾವ್ ಪ್ರಕರಣ ಸಾಕಷ್ಟು ಚರ್ಚೆಗೆ ಕಾರಣ ಆಗಿತ್ತು. ನಟಿ ಹಾಗೂ ಪೊಲೀಸ್ ಅಧಿಕಾರಿ ಮಗಳಾಗಿರೋ ಅವರು ವಿದೇಶದಿಂದ ಭಾರತಕ್ಕೆ ಚಿನ್ನವನ್ನು ತರುತ್ತಿದ್ದರು. ಅಕ್ರಮವಾಗಿ ಸಾಕಷ್ಟು ಚಿನ್ನವನ್ನು ಭಾರತಕ್ಕೆ ಸೇರಿಸಿದ್ದರು. ಈ ಸಂದರ್ಭದಲ್ಲಿ ಚಿನ್ನ ಕಳ್ಳ ಸಾಗಣೆಯ ಕುರಿತು ಈಗ ವೆಬ್ ಸೀರಿಸ್ ಒಂದು ಬಂದಿದೆ. ಅದುವೇ ‘ಟಾಸ್ಕ್​​ರೀ: ದಿ ಸ್ಮಗ್ಲರ್ಸ್ ವೆಬ್’. ಇಮ್ರಾನ್ ಹಶ್ಮಿ (Emraan Hashmi ) ನಟನೆಯ ಈ ವೆಬ್ ಸೀರಿಸ್ ನೆಟ್​ಫ್ಲಿಕ್ಸ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ. ಹಿಂದಿ, ಇಂಗ್ಲಿಷ್ ಮೊದಲಾದ ಭಾಷೆಗಳಲ್ಲಿ ಸರಣಿ ಲಭ್ಯವಿದೆ. ಕನ್ನಡ ಭಾಷೆಯಲ್ಲಿ ಚಿತ್ರ ಇಲ್ಲ.

ಬೇರೆ ಬೇರೆ ದೇಶಗಳಿಂದ ಭಾರತಕ್ಕೆ ಚಿನ್ನ, ಡ್ರಗ್ಸ್, ದುಬಾರಿ ಬ್ಯಾಗ್, ವಾಚ್​​ಗಳನ್ನು ಅಕ್ರಮವಾಗಿ ತರಲಾಗುತ್ತದೆ. ಟ್ಯಾಕ್ಸ್ ಕಟ್ಟದೆ ಅದನ್ನು ಭಾರತದ ಮಾರುಕಟ್ಟೆಗೆ ಸೇರಿಸುವ ದೊಡ್ಡ ಜಾಲವೇ ಇದೆ. ಈ ಜಾಲ ಹೇಗೆ ಕೆಲಸ ಮಾಡುತ್ತದೆ ಎಂಬುದರ ಐಡಿಯಾ ಯಾರಿಗೂ ಇರೋದಿಲ್ಲ. ಇದನ್ನು ತೋರಿಸುವ ಉದ್ದೇಶದಿಂದಲೇ ‘ಟಾಸ್ಕ್​​ರೀ’ ವೆಬ್ ಸರಣಿ ಬಂದಿದೆ.

ಅರ್ಜುನ್ (ಇಮ್ರಾನ್ ಹಷ್ಮಿ) ಓರ್ವ ಪ್ರಾಮಾಣಿಕ ಕಸ್ಟಮ್ ಅಧಿಕಾರಿ. ಅಲ್ಲಿ ಅವರು ಸುಪರಿಡಂಟ್ ಸ್ಥಾನ ಅಲಂಕರಿಸಿದ್ದಾರೆ. ಅವರ ರೀತಿಯೇ ಕೆಲವು ಪ್ರಾಮಾಣಿಕ ಅಧಿಕಾರಿಗಳು ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಲ ಅಪ್ರಾಮಾಣಿಕ ಅಧಿಕಾರಿಗಳು ಇದ್ದಾರೆ. ಇವರು ಒಂದು ದೊಡ್ಡ ಚಿನ್ನ ಅಕ್ರಮ ಸಾಗಾಣೆಯ ಜಾಲ ಪತ್ತೆ ಹಚ್ಚುತ್ತಾರೆ. ಅಲ್ಲಿಂದ ತೆರೆದುಕೊಳ್ಳುತ್ತದೆ ಕಥೆ. ಕೆಲವು ಕಡೆಗಳಲ್ಲಿ ಟ್ವಿಸ್ಟ್​​ಗಳನ್ನು ಇಡಲಾಗಿದೆ. ಕಥೆ ಹಾಗೂ ನಿರೂಪಣೆ ವಿಷಯದಲ್ಲಿ ಇನ್ನಷ್ಟು ಗಟ್ಟಿತನ ಬೇಕಿತ್ತು. ಚಿನ್ನ ಕಳ್ಳ ಸಾಗಣೆ ಹೇಗೆಲ್ಲ ನಡೆಯಬಹುದು ಎಂಬುದನ್ನು ತಿಳಿದುಕೊಳ್ಳಲು ಇದೊಂದು ಒಳ್ಳೆಯ ಸರಣಿ.

ಇದನ್ನೂ ಓದಿ: ಇಮ್ರಾನ್ ಹಶ್ಮಿ ಜೊತೆಗೆ ದಿಶಾ ಪಟಾನಿ ಸಿನಿಮಾ, ತಾಳಲಿದ್ದಾರೆ ಹಾಟ್ ಅವತಾರ

ಇಮ್ರಾನ್ ಹಶ್ಮಿ, ಶರದ್ ಕೇಲ್ಕರ್, ನಂದೀಶ್ ಸಂಧು ಸೇರಿದಂತೆ ಅನೇಕರು ಈ ಸರಣಿಯಲ್ಲಿ ನಟಿಸಿದ್ದಾರೆ. ‘ಎ ವೆಡ್​​ನೆಸ್​ಡೇ’, ‘ಧೋನಿ’ ರೀತಿಯ ಸಿನಿಮಾಗಳನ್ನು ನೀಡಿದ ನೀರಜ್ ಪಾಂಡೆ ಇದನ್ನು ನಿರ್ದೇಶನ ಮಾಡಿದ್ದಾರೆ. ಅವರು ಇತ್ತೀಚೆಗೆ ವೆಬ್ ಸರಣಿ ಲೋಕದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ‘ಸ್ಪೆಷಲ್ ಆಪರೇಷನ್’, ‘ಖಾಕೀ’ ರೀತಿಯ ಸರಣಿಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. ಈ ಸರಣಿ ಐಂಡಿಬಿಯಲ್ಲಿ 7.1 ರೇಟಿಂಗ್ (ಜನವರಿ 24, ಮುಂಜಾನೆಎ 7 ಗಂಟೆವರೆಗೆ) ಪಡೆದುಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Daily Devotional: ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ – Kannada News | Daily Devotional: The Spiritual Essence of Kumar Shashti, Traditions and Blessings of Subrahmanya Puja

ಬೆಂಗಳೂರು, ಜನವರಿ 24: ಭಾರತೀಯ ಸನಾತನ ಸಂಸ್ಕೃತಿಯಲ್ಲಿ ಕುಮಾರ ಷಷ್ಠಿಯು ಮಹತ್ವಪೂರ್ಣವಾದ ಹಬ್ಬವಾಗಿದೆ. ಇದು ಭಗವಾನ್ ಸುಬ್ರಹ್ಮಣ್ಯ ಸ್ವಾಮಿಗೆ ಸಮರ್ಪಿತವಾದ ದಿನ. ಶಿವ ಮತ್ತು ಪಾರ್ವತಿಯರ ಪುತ್ರನಾದ ಸುಬ್ರಹ್ಮಣ್ಯ ಸ್ವಾಮಿಯನ್ನು ಕುಮಾರ, ಕಾರ್ತಿಕೇಯ, ಮುರುಗನ್, ಸ್ಕಂದ, ಷಣ್ಮುಖ ಎಂಬ ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ. ಪುರಾಣಗಳ ಪ್ರಕಾರ, ತಾರಕಾಸುರನನ್ನು ಸಂಹಾರ ಮಾಡಲು ಸುಬ್ರಹ್ಮಣ್ಯ ಸ್ವಾಮಿಯು ಅವತರಿಸಿದ ದಿನ ಇದಾಗಿದೆ.

ಕುಮಾರ ಷಷ್ಠಿಯಂದು ಭಕ್ತರು ವಿಶೇಷವಾಗಿ ಸುಬ್ರಹ್ಮಣ್ಯ ಸ್ವಾಮಿಯನ್ನು ಆರಾಧಿಸುತ್ತಾರೆ. ಈ ಪೂಜೆಯು ಧೈರ್ಯ, ಶಕ್ತಿ ಮತ್ತು ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ನೀಡುತ್ತದೆ ಎಂದು ನಂಬಲಾಗಿದೆ. ಕುಮಾರ ಸ್ವಾಮಿಯು ನಾಗಾಂಶವನ್ನು ಹೊಂದಿರುವ ಕಾರಣ, ವಿವಾಹ, ಸಂತಾನ ಮತ್ತು ಸರ್ಪದೋಷ ನಿವಾರಣೆಗಾಗಿ ಭಕ್ತರು ಕುಕ್ಕೆ, ಘಾಟಿಯಂತಹ ಸುಬ್ರಹ್ಮಣ್ಯ ದೇವಾಲಯಗಳಿಗೆ ಭೇಟಿ ನೀಡುತ್ತಾರೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

Source link

Horoscope Today 24 January: ಇಂದು ಈ ರಾಶಿಯವರಿಗೆ ಹಣದ ಸಮಸ್ಯೆ! – Kannada News | Daily Horoscope for January 24th 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 24 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಶನಿವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶುಕ್ಲ ಪಕ್ಷದ ಷಷ್ಠಿ, ಉತ್ತರಾಭಾದ್ರ ನಕ್ಷತ್ರದಿಂದ ಕೂಡಿದೆ. ಅಂದು ಕುಮಾರ ಷಷ್ಠಿಯ ಮಹತ್ವಪೂರ್ಣ ದಿನವೂ ಆಗಿರುತ್ತದೆ.

ಕುಮಾರ ಷಷ್ಠಿಯು ಸುಬ್ರಹ್ಮಣ್ಯ ಸ್ವಾಮಿಯ ಜನ್ಮದಿನವಾಗಿದ್ದು, ತಾರಕಾಸುರನ ಸಂಹಾರದೊಂದಿಗೆ ಸಂಬಂಧ ಹೊಂದಿದೆ. ಚಿತ್ರಾವತಿ, ಮೂಡಿಗೆರೆ, ಗೋಣಿಬೀಡುಗಳಲ್ಲಿ ರಥೋತ್ಸವಗಳು ನಡೆಯಲಿವೆ. ಗ್ರಹಗಳ ಸ್ಥಾನವನ್ನು ಗಮನಿಸಿದರೆ, ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯಲ್ಲಿ ಸಂಚರಿಸುತ್ತಾನೆ.

ಮೇಷ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿರುತ್ತದೆ. ಆದಾಯದಲ್ಲಿ ಏರಿಕೆ, ವ್ಯಾಪಾರದಲ್ಲಿ ಲಾಭ, ಅದೃಷ್ಟ ಪ್ರಾಪ್ತಿ, ಹೊಸ ವಾಹನ ಯೋಗ ಮತ್ತು ಹಣದ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ. ಮನಸ್ಸಿಗೆ ಶಾಂತಿ ಮತ್ತು ತೃಪ್ತಿ ದೊರೆಯಲಿದೆ. ಆರೋಗ್ಯ ಉತ್ತಮವಾಗಿರುತ್ತದೆ ಮತ್ತು ಮಕ್ಕಳಿಂದ ಶುಭವಾಗುತ್ತದೆ. ರೈತರು, ವ್ಯಾಪಾರಸ್ಥರು ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿದ್ದು, ಒತ್ತಡ ಕಡಿಮೆಯಾಗಲಿದೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

 

 

 

 

Source link

ಬಳ್ಳಾರಿಯಲ್ಲಿ ಭುಗಿಲೆದ್ದ ಆಕ್ರೋಶ: ಎಲ್ಲೆಲ್ಲೂ ಖಾಕಿ ಸರ್ಪಗಾವಲು

ಬಳ್ಳಾರಿ, ಜನವರಿ 24: ಬಳ್ಳಾರಿಯಲ್ಲಿ ಬ್ಯಾನರ್‌ ವಿಚಾರಕ್ಕೆ ಶುರುವಾದ ಗಲಾಟೆ ಇನ್ನೂ ಸಂಪೂರ್ಣವಾಗಿ ತಣ್ಣಗಾಗಿಲ್ಲ. ಗನ್‌ಮ್ಯಾನ್‌ಗಳಿಗೆ ಇನ್ನೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಅಷ್ಟರಲ್ಲೇ ರೆಡ್ಡಿಗಳ ಮಧ್ಯೆ ಈಗ ಬೆಂಕಿ ರಾಜಕೀಯ ಶುರುವಾಗಿದೆ. ಶಾಸಕ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಶ್ರೀರಾಮುಲುಗೆ ಸೇರಿದ ಮಾಡೆಲ್‌ ಹೌಸ್‌ಗೆ ಬೆಂಕಿ ಬಿದ್ದಿದೆ. ಬಳ್ಳಾರಿಯ ಜಿ ಸ್ಕ್ವೇರ್‌ನಲ್ಲಿರುವ ಲೇಔಟ್‌ನಲ್ಲಿರುವ ಮಾಡೆಲ್‌ ಹೌಸ್‌ ಹೊತ್ತಿ ಉರಿದಿದೆ. ಇದು ಶಾಸಕ ಭರತ್‌ ರೆಡ್ಡಿ ಅವರದ್ದೇ ಕೃತ್ಯ ಎಂದು ರೆಡ್ಡಿ ಸಹೋದರರು ಆರೋಪಿಸಿದ್ದಾರೆ. ಘಟನೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ ನಡೆಸಿದೆ. ಸದ್ಯ ಬಳ್ಳಾರಿ ಉದ್ವಿಗ್ನಗೊಂಡಿದ್ದು, ಎಲ್ಲೆಡೆ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 24ರ ದಿನಭವಿಷ್ಯ – Kannada News | Numerology Horoscope Jan 24: What’s in store for Janmasankhya 7, 8, 9 individuals?

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 24ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಏಕಾಗ್ರತೆ ಮುಖ್ಯವಾಗುತ್ತದೆ. ಒಂದು ಕೆಲಸ ಮಾಡುವಾಗ ಇತರ ಸಂಗತಿಗಳ ಬಗ್ಗೆಯೂ ಯೋಚನೆ ಮಾಡುತ್ತಾ ಮುಂದುವರಿಸಲ್ಲಿ ಏನಾದರೂ ಸಮಸ್ಯೆ ಆಗುತ್ತದೆ. ಇನ್ನು ಇದೇ ವೇಳೆ ಮನೆಯಲ್ಲಿನ ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳ ಬಗ್ಗೆ ಜಾಗ್ರತೆಯಿಂದ ಇರಬೇಕು. ಮುಖ್ಯವಾಗಿ ಮೊಬೈಲ್ ಫೋನ್ ಚಾರ್ಜಿಂಗ್, ಲ್ಯಾಪ್ ಟಾಪ್ ಚಾರ್ಜಿಂಗ್ ಅಥವಾ ಟ್ಯಾಬ್ ಚಾರ್ಜಿಂಗ್ ಹಾಕುತ್ತಿದ್ದೀರಿ ಎಂದಾದಲ್ಲಿ ತುಂಬ ಹೊತ್ತು ಹಾಗೇ ಹಾಕಿಡದಿರುವುದು ಮತ್ತು ಚಾರ್ಜ್ ಗೆ ಹಾಕಿರುವಾಗಲೇ ಬಳಸುವುದನ್ನು ಮಾಡಬೇಡಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ವಿದೇಶ ಪ್ರಯಾಣಕ್ಕೋ ಅಥವಾ ನೀವಿರುವ ಸ್ಥಳದಿಂದ ದೂರ ಪ್ರದೇಶಕ್ಕೆ ತೆರಳುತ್ತಿದ್ದೀರಿ ಅಂತಾದಲ್ಲಿ ಪ್ರಯಾಣದ ಮೂಲಕ ಶುಭ ಸುದ್ದಿ ಕೇಳುವಂಥ ಯೋಗ ಇದೆ. ಬ್ಯಾಂಕ್ ನಲ್ಲಿ ಎಫ್ ಡಿ ಎಂದಿಟ್ಟಿದ್ದಲ್ಲಿ ಅದನ್ನು ಮುರಿಸುವ ಬಗ್ಗೆ ಆಲೋಚನೆ ಮಾಡಲಿದ್ದೀರಿ. ಅದೇ ಸಮಯದಲ್ಲಿ ಹಣವನ್ನು ಉತ್ತಮ ರಿಟರ್ನ್ ಬರುವ ಕಡೆಗೆ ಹೂಡಿಕೆ ಸಹ ಮಾಡುವ ಕಡೆಗೆ ಚಿಂತಿಸಲಿದ್ದೀರಿ. ತೀರಾ ಆಕ್ರಮಣಕಾರಿಯಾಗಿ ಹಣ ಕೂಡಿಡುವ ಬಗ್ಗೆ ಲೆಕ್ಕಾಚಾರ ಹಾಕಿಕೊಳ್ಳಲಿದ್ದೀರಿ.

ಇದನ್ನೂ ಓದಿ: ಜ. 25ರಂದು ಕೇತು ಸಂಚಾರ; ಈ ಮೂರು ರಾಶಿಯವರು ಜಾಗರೂಕರಾಗಿರಿ

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ನೀವೇನಾದರೂ ಒಡವೆ, ಸೈಟು ಅಥವಾ ಮನೆ- ವಾಹನವೂ ಸೇರಿದಂತೆ ವಸ್ತುಗಳನ್ನು ಅಡಮಾನ ಮಾಡಿದ್ದೀರಿ ಅಂತಾದಲ್ಲಿ ಅದು ಹರಾಜಿಗೆ ಬರುವಂಥ ಸಾಧ್ಯತೆಗಳಿವೆ. ವಿಪರೀತ ಕೆಲಸದ ಒತ್ತಡ ಬೀಳಲಿದೆ. ಕೆಲವು ನೀವಾಗಿಯೇ ಮೈ ಮೇಲೆ ಹಾಕಿಕೊಳ್ಳಲಿದ್ದೀರಿ. ಇನ್ನು ಕೆಲವು ಅನಿರೀಕ್ಷಿತವಾಗಿ ತಾವಾಗಿಯೇ ಹುಡುಕಿಕೊಂಡು ಬರಲಿವೆ. ಇತರರಿಗೆ ನೀವು ನೀಡಿದಂಥ ಸಲುಗೆ ಬಗ್ಗೆ ನಿಮಗೆ ಬೇಸರ ಆಗಲಿದೆ. ಇತರರ ಸಾಲಕ್ಕೆ ನೀವು ಶ್ಯೂರಿಟಿಯಾಗಿ ನಿಂತಲ್ಲಿ ಅಥವಾ ಜಾಮೀನಾಗಿ ನಿಂತಲ್ಲಿ ಭವಿಷ್ಯದಲ್ಲಿ ಪರಿತಪಿಸಬೇಕಾಗುತ್ತದೆ.

ಲೇಖನ- ಸ್ವಾತಿ ಎನ್.ಕೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 24ರ ದಿನಭವಿಷ್ಯ – Kannada News | Numerology Prediction Jan 24: Birth Numbers 4, 5, 6 Daily Fate

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 24ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಎಲ್ಲರನ್ನೂ ನೀವು ಸಮಾನವಾಗಿ ಕಾಣುತ್ತಿಲ್ಲ ಎಂಬ ಆರೋಪವನ್ನು ಹೊತ್ತಿಕೊಳ್ಳಬೇಕಾಗುತ್ತದೆ. ನೀವು ನೀಡುವ ಯಾವ ಸಮಜಾಯಿಷಿಯನ್ನೂ ಕೇಳಿಸಿಕೊಳ್ಳುವ ಸ್ಥಿತಿಯಲ್ಲಿ ಇತರರು ಇರುವುದಿಲ್ಲ. ಈ ಹಿಂದೆ ಯಾವಾಗಲೋ ನೀವಾಡಿದ ಮಾತು, ನಡೆದುಕೊಂಡ ರೀತಿಯನ್ನು ಉದಾಹರಿಸಿ, ನಿಮ್ಮನ್ನು ನಿಂದಿಸುತ್ತಾರೆ. ನೀವು ಯಾರನ್ನು ನೆರವಿಗೆ ಬರಬಹುದು ಎಂದು ಭಾವಿಸಿರುತ್ತೀರೋ ಅವರು ಸಹ ನಿಮ್ಮ ಸಹಾಯಕ್ಕೆ ಬರುವುದಕ್ಕೆ ಆಗಲ್ಲ. ಸಂಬಂಧಿಕರು ನಿಮ್ಮ ಆರ್ಥಿಕ ಪರಿಸ್ಥಿತಿ ಬಗ್ಗೆ ಹೀಗಳೆದರೆ ಅದನ್ನು ಗಂಭೀರವಾಗಿ ಪರಿಗಣಿಸದೇ ಇರುವುದು ಉತ್ತಮ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ತಂದೆ- ತಾಯಿಯ ಆಶೀರ್ವಾದ ನಿಮ್ಮ ಮೇಲೆ ಅತ್ಯುತ್ತಮವಾಗಿ ಇರಲಿದೆ. ಬಾಹ್ಯದಿಂದ ನಿಮ್ಮ ಮೇಲೆ ಒತ್ತಡ ಬಂದರೂ ಅದನ್ನು ಯಶಸ್ವಿಯಾಗಿ ನಿರ್ವಹಿಸಲಿದ್ದೀರಿ. ಸ್ತ್ರೀಶಕ್ತಿ ಸಂಘಗಳಲ್ಲಿ ಇರುವಂಥವರಿಗೆ ನಾಯಕತ್ವ ವಹಿಸುವಂಥ ಅವಕಾಶಗಳಿವೆ. ಮನೆಗೆ ಅಲಂಕಾರಿಕ ವಸ್ತುಗಳನ್ನು ಖರೀದಿಸುವಂಥ ಯೋಗ ನಿಮ್ಮ ಪಾಲಿಗೆ ಇದೆ. ಕರ್ಟನ್ ಮೊದಲಾದ ವಸ್ತುಗಳಿಗೆ ಹೆಚ್ಚಿನ ಹಣವನ್ನು ಖರ್ಚು ಮಾಡಲಿದ್ದೀರಿ. ಹೊಸ ಜವಾಬ್ದಾರಿಗಳನ್ನು ಧೈರ್ಯವಾಗಿ ವಹಿಸಿಕೊಳ್ಳಿ. ದೀರ್ಘಾವಧಿಯಲ್ಲಿ ಅನುಕೂಲ ಆಗಲಿದೆ.

ಇದನ್ನೂ ಓದಿ: ಜನವರಿ 25 ರಂದು ಕೇತು ಸಂಚಾರ; ಈ ಮೂರು ರಾಶಿಗೆ ಅದೃಷ್ಟವೋ ಅದೃಷ್ಟ

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಬ್ಯಾಂಕ್ ವ್ಯವಹಾರಗಳನ್ನು ಮಾಡುವಾಗ ಅತಿಯಾದ ನಿರೀಕ್ಷೆ ಇಟ್ಟುಕೊಂಡು ಮುಂದುವರಿದಲ್ಲಿ ಅಂದುಕೊಂಡಂತೆ ಕೆಲಸ ಆಗದೆ ಬೇಸರಕ್ಕೆ ಕಾರಣ ಆಗಲಿದೆ. ಈಗಾಗಲೇ ಮನೆ ನಿರ್ಮಾಣ ಮಾಡುತ್ತಿದ್ದೀರಿ, ಅದಕ್ಕೆ ಹಣಕಾಸಿನ ಸಮಸ್ಯೆ ಆಗಿದೆ ಎಂದಾದಲ್ಲಿ ಅದು ಉಲ್ಬಣ ಆಗಲಿದೆ. ಸ್ನೇಹಿತರು ಅಥವಾ ಸಂಬಂಧಿಕರು ಅಥವಾ ನೀವು ಬಹಳ ಗೌರವಿಸುವಂಥ ವ್ಯಕ್ತಿಗಳು ಒತ್ತಡ ತಂದರು ಎಂಬ ಕಾರಣಕ್ಕಾಗಿ ಯಾವುದೇ ಕೆಲಸವನ್ನು ಒಪ್ಪಿಕೊಳ್ಳುವುದಕ್ಕೆ ಹೋಗಬೇಡಿ. ನಿಮಗೇ ಸರಿ ಎಂದು ಅನಿಸುವ ತನಕ ಯಾವ ಹೊಸ ಪ್ರಾಜೆಕ್ಟ್ ಒಪ್ಪಿಕೊಳ್ಳದಿರಿ.

ಲೇಖನ- ಸ್ವಾತಿ ಎನ್.ಕೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link