Headlines

Video: ಡಿಕೆ ಶಿವಕುಮಾರ್​ಗೆ ಅಭಿನಂದನೆ ತಿಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 28: ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜತೆ ಬೆಳಗ್ಗೆ ಉಪಾಹಾರ ಸೇವಿಸಿರುವ ಸಿದ್ದರಾಮಯ್ಯ ಡಿಕೆ ಶಿವಕುಮಾರ್​ಗೆ ಅಭಿನಂದನೆ ತಿಳಿಸಿದ್ದಾರೆ. ಇಂದು ರಾಜ್ಯಪಾಲರು ಇರುವುದಿಲ್ಲವಂತೆ, ಹೋಗಿ ನೋಡುತ್ತೇನೆ ಎಂದಿದ್ದಾರೆ.ಕಾಂಗ್ರೆಸ್ ಹೈಕಮಾಂಡ್ ತಾನು ಪ್ರಬಲವಾಗಿದೆ ಎಂಬ ಸಂದೇಶವನ್ನು ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಧಿಕಾರ ಹಸ್ತಾಂತರದ ಮೂಲಕ ಸ್ಪಷ್ಟಪಡಿಸಿದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶಗಳಲ್ಲಿ ನಡೆದ ಗೊಂದಲಗಳಿಗೆ ಅವಕಾಶ ನೀಡದೆ, ಸಿದ್ದರಾಮಯ್ಯ ಯಾವುದೇ ಅಸಮಾಧಾನವಿಲ್ಲದೆ ಅಧಿಕಾರ ಹಸ್ತಾಂತರಿಸಲು ಒಪ್ಪಿಕೊಂಡಿದ್ದಾರೆ….

Read More

ಮಾಜಿ ಲವರ್ ಮನೆಗೆ ಹೋಗಿ ಆಕೆಯ ಪತಿಯ ಕೈಯಲ್ಲೇ ಕೊಲೆಯಾದ ಯುವಕ!

ಬೆಂಗಳೂರು, ಮೇ 28: ಹಳೇ ಪ್ರೇಮದ ನೆನಪಿನಲ್ಲಿ ಮಾಜಿ ಪ್ರೇಯಸಿಯನ್ನು (Ex Lover) ಭೇಟಿಯಾಗಲು ಆಕೆಯ ಮನೆಗೆ ತೆರಳಿದ್ದ ಯುವಕನೊಬ್ಬ ಭೀಕರವಾಗಿ ಕೊಲೆಯಾಗಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರೇಯಸಿಯ ಪತಿ ಹಾಗೂ ಆಕೆಯ ಕುಟುಂಬಸ್ಥರೇ ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಮಾಜಿ ಪ್ರೇಯಸಿ ಮನೆಗೆ ಹೋದ ಮೊಹಮ್ಮದ್ ಖಾಸಿಂ ಕೊಲೆಯಾಗಿದ್ದಾನೆ. ಹಳೇ ಪ್ರೇಮಿಯ ಆಗಮನದಿಂದ ಕೆರಳಿದ ಪತಿ ಮತ್ತು ಕುಟುಂಬಸ್ಥರು ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು,…

Read More

ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಘೋಷಿಸಿದ ಸಿದ್ದರಾಮಯ್ಯ!

ಬೆಂಗಳೂರು, ಮೇ 28: ರಾಜ್ಯ ರಾಜಕಾರಣದಲ್ಲಿ ದಶಕದ ದೊಡ್ಡ ಹೈಡ್ರಾಮಾ ಅಂತ್ಯಗೊಳ್ಳುವ ಲಕ್ಷಣಗಳು ಗೋಚರಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಇಂದು ನಡೆದ ಸಚಿವರ ಮಹತ್ವದ ‘ಬ್ರೇಕ್​ಫಾಸ್ಟ್​ ಮೀಟಿಂಗ್’ನಲ್ಲಿ ಸಿದ್ದರಾಮಯ್ಯ ಅವರು ತಾವಾಗಿಯೇ ಪದತ್ಯಾಗ ಮಾಡಲಿರುವ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ರಾಜಭವನಕ್ಕೆ ತೆರಳಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ. ಒಂದು ವೇಳೆ ರಾಜ್ಯಪಾಲರು ಲಭ್ಯವಿಲ್ಲದಿದ್ದರೆ, ಅವರ ಕಾರ್ಯದರ್ಶಿಗೆ ಪತ್ರ ಹಸ್ತಾಂತರಿಸಲು ನಿರ್ಧರಿಸಿದ್ದಾರೆ. ಹೈಕಮಾಂಡ್ ಸೂಚನೆಯಂತೆ…

Read More

ವಿಚಿತ್ರ ಕಾರಣ..! ಅನುಭವಿ ಗೂಗಲ್ ಉದ್ಯೋಗಿಯ ಅರ್ಜಿ ತಿರಸ್ಕಾರ; ಕಾಲೇಜು ಗ್ರೇಡ್ ಕಡಿಮೆ ಬಂದಿದ್ದಕ್ಕೆ ರಿಜೆಕ್ಟ್

ಬೆಂಗಳೂರು, ಮೇ 28: ಈಗಷ್ಟೇ ಕಾಲೇಜು ಮುಗಿಸಿ ಮೊದಲ ಕೆಲಸಕ್ಕೆ ಅರ್ಜಿ ಸಲ್ಲಿಸಿದ ವ್ಯಕ್ತಿಗಳ ಶೈಕ್ಷಣಿಕ ಸಾಧನೆ ಮತ್ತು ಗ್ರೇಡ್​ಗಳನ್ನು ಪರಿಶೀಲಿಸುವುದುಂಟು. ಆದರೆ, ಅನುಭವಿ ವ್ಯಕ್ತಿ ಕೆಲಸಕ್ಕೆ ಅರ್ಜಿ ಸಲ್ಲಿಸಿದಾಗ ಆತನ ಕಾಲೇಜು ಪರೀಕ್ಷೆಗಳ ಅಂಕಗಳಿಗೆ ಸಾಮಾನ್ಯವಾಗಿ ಯಾವ ಕಂಪನಿಗಳೂ ಆದ್ಯತೆ ಕೊಡುವುದಿಲ್ಲ. ಗೂಗಲ್​ನ 8 ವರ್ಷದ ಅನುಭವಿ ಉದ್ಯೋಗಿಯೊಬ್ಬರು ತಮಗಾದ ಅನುಭವವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವರ್ಷಕ್ಕೆ 80 ಲಕ್ಷ ರೂಗೂ ಅಧಿಕ ಸಂಬಳ ಪಡೆಯುವ ಈ ಗೂಗಲ್ ಟೆಕ್ಕಿಯ (Google Employee) ಅರ್ಜಿಯನ್ನು ಭಾರತೀಯ…

Read More

Gold Rate: ಚಿನ್ನದ ಬೆಲೆ ಒಂದು ಗ್ರಾಮ್​ಗೆ 205 ರೂ ಇಳಿಕೆ; ಇಲ್ಲಿದೆ ದರಪಟ್ಟಿ

ನವದೆಹಲಿ, ಮೇ 28: ಚಿನ್ನದ ಬೆಲೆ ಸತತವಾಗಿ ಇಳಿಮುಖವಾಗುತ್ತಿದೆ. ಬೆಳ್ಳಿ ಬೆಲೆಯೂ ಕಳೆದ ಏಳೆಂಟು ದಿನದಲ್ಲಿ ಮೊದಲ ಬಾರಿ ಇಳಿದಿದೆ. ಬಂಗಾರದ ದರ (Gold Rate) ಒಂದು ಗ್ರಾಮ್​ಗೆ 200 ರೂಗಿಂತ ಹೆಚ್ಚಿನ ಮೊತ್ತದಷ್ಟು ಇಳಿಕೆಯಾಗಿದೆ. ಹಿಂದಿನ ಎರಡು ದಿನದಲ್ಲಿ 100 ರೂ ಬೆಲೆ ತಗ್ಗಿತ್ತು. ಭಾರತದಲ್ಲಿಯಷ್ಟೇ ಅಲ್ಲ ಬಹುತೇಕ ದೇಶಗಳ ಮಾರುಕಟ್ಟೆಯಲ್ಲೂ ಚಿನ್ನದ ದರದಲ್ಲಿ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 10 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ…

Read More

ಡೆಲ್ಲಿ ಡೇರ್​​ಡೆವಿಲ್ಸ್​​ಗಿತ್ತು ವೈಭವ್ ಸೂರ್ಯವಂಶಿ ಪಡೆಯೋ ಅವಕಾಶ

ರಾಜಸ್ಥಾನ ರಾಯಲ್ಸ್ ತಂಡದ ಪರ ಆಡುತ್ತಿರುವ 15 ವರ್ಷದ ವೈಭವ್ ಸೂರ್ಯವಂಶಿ ಅವರು ಹೈದರಾಬಾದ್ ತಂಡದ ವಿರುದ್ಧ ಅಬ್ಬರಿಸಿದ್ದಾರೆ. ಕೇವಲ 28 ಬಾಲ್​​ಗೆ 97 ರನ್ ಹೊಡೆದು ಶತಕ ವಂಚಿತರಾಗಿದ್ದರು. ಆದಾಗ್ಯೂ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಆರ್​ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಆಕ್ಷನ್ ವೇಳೆ ವೈಭವ್ ಸೂರ್ಯವಂಶಿ ಅವರನ್ನು ಖರೀದಿಸಲು ಡೆಲ್ಲಿ ಡೇರ್​​ಡೆವಿಲ್ಸ್​​ಗೆ ಅವಕಾಶ ಇತ್ತು. ಆದರೆ ಈ ಅವಕಾಶ ಕೈ ಚೆಲ್ಲಿದ್ದರು. ಒಂದೊಮ್ಮೆ ಅವರು ಆಕ್ಷನ್​ ಅಲ್ಲಿ ಸೂರ್ಯವಂಶಿಯನ್ನು ಖರೀದಿಸಿದ್ದರೆ ಡೆಲ್ಲಿ ಅದೃಷ್ಟ ಬದಲಾಗಿರುತ್ತಿತ್ತು. ಇನ್ನಷ್ಟು ಕ್ರೀಡಾ…

Read More

Weekly Love Horoscope: ಈ ರಾಶಿಯವರಿಗೆ ಈ ವಾರ ಸಂಗಾತಿಯಿಂದ ವಿಶೇಷ ಉಡುಗೊರೆ ಸಿಗುವ ಸಾಧ್ಯತೆಯಿದೆ

ವಾರದ ಪ್ರೇಮ – ಪ್ರೀತಿ ಭವಿಷ್ಯImage Credit source: Pinterest ಮೇ 31ರಿಂದ ಜೂನ್ 06ರವರೆಗೆ ಜೂನ್ ಮೊದಲವಾರವಾಗಲಿದ್ದು, ಗುರುವಿನ ಸ್ಥಾನದ ಬದಲಾವಣೆಯಿಂದ ಪ್ರೇಮ ಜೀವನಕ್ಕೆ ಹೊಸ ಆಯಾಮ ಸಿಗಲಿದೆ. ಶುಕ್ರ ಶತ್ರುವಿನ ಸಹವಾಸದಿಂದ ಸದ್ಯ ಮುಕ್ತನಾಗುವನು. ಪ್ರೇಮದ ಫಲವನ್ನು ಕೊಡುವನು. ಮೇಷ ರಾಶಿ: ನಿಮ್ಮ ರಾಶಿಯಲ್ಲಿಯೇ ಮಂಗಳನಿರುವುದರಿಂದ ಪ್ರೇಮ ಜೀವನದಲ್ಲಿ ಉತ್ಸಾಹ ಹೆಚ್ಚಿರುತ್ತದೆ. ಆದರೆ ಸಂಗಾತಿಯೊಂದಿಗೆ ಮಾತನಾಡುವಾಗ ಹಠಮಾರಿತನ ಬಿಟ್ಟು ನಡೆದುಕೊಳ್ಳುವುದು ಒಳಿತು. ಅನಗತ್ಯ ವಾದಗಳು ದೂರವಾಗಿ ಪ್ರೀತಿ ಮೂಡುವುದು. ವೃಷಭ ರಾಶಿ : ​ನಿಮ್ಮ…

Read More

‘ರಣಬೀರ್, ಕರಣ್ ನನ್ನನ್ನು ತುಳಿಯುತ್ತಿದ್ದಾರೆ’; ರಣವೀರ್ ಸಿಂಗ್

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಸದ್ಯ ಭಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿರ್ದೇಶಕ ಫರ್ಹಾನ್ ಅಖ್ತರ್ ಅವರ ‘ಡಾನ್ 3’ ಚಿತ್ರದಿಂದ ರಣವೀರ್ ಸಿಂಗ್ ದಿಢೀರ್ ಹೊರನಡೆದ ಬೆನ್ನಲ್ಲೇ ಬಿ-ಟೌನ್‌ನಲ್ಲಿ ದೊಡ್ಡ ಬಿರುಗಾಳಿ ಎದ್ದಿದೆ. ರಣವೀರ್ ಅವರ ಈ ನಿರ್ಧಾರದಿಂದಾಗಿ ನಿರ್ಮಾಣ ಸಂಸ್ಥೆ ಎಕ್ಸೆಲ್ ಎಂಟರ್‌ಟೈನ್‌ಮೆಂಟ್‌ಗೆ ಬರೋಬ್ಬರಿ 45 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಹೇಳಲಾಗುತ್ತಿದ್ದು, ಇದರಿಂದ ಆಕ್ರೋಶಗೊಂಡಿರುವ ‘ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನೆ ಎಂಪ್ಲಾಯೀಸ್’ ಒಕ್ಕೂಟವು ರಣವೀರ್ ಸಿಂಗ್ ವಿರುದ್ಧ ಅಸಹಕಾರ ಚಳವಳಿ ಆರಂಭಿಸಲು…

Read More

ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅಪರೂಪದ ಅಪ್ಪುಗೆ, ಬ್ರೇಕ್​ಫಾಸ್ಟ್ ಮೀಟಿಂಗ್ ಎಕ್ಸ್​ಕ್ಲೂಸಿವ್ ದೃಶ್ಯ ಇಲ್ಲಿದೆ

ಬೆಂಗಳೂರು, ಮೇ 28: ರಾಜ್ಯ ರಾಜಕಾರಣದಲ್ಲಿ ಬಹು ನಿರೀಕ್ಷಿತ ನಾಯಕತ್ವ ಬದಲಾವಣೆ ಚರ್ಚೆ ನಡುವೆ ಸಿಎಂ ಸಿದ್​ದರಾಮಯ್ಯ ಕರೆದಿರುವ ಬ್ರೇಕ್ಫಾಸ್ಟ್ ಮೀಟಿಂಗ್ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಸಿದ್ದರಾಮಯ್ಯನವರ ನಿವಾಸ ಕಾವೇರಿಯಲ್ಲಿ ನಡೆದ ಈ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯನವರ ಪಾದಸ್ಪರ್ಶ ಮಾಡಿ ನಂತರ ಆತ್ಮೀಯವಾಗಿ ಆಲಿಂಗಿಸಿಕೊಂಡರು. ಸಿದ್ದರಾಮಯ್ಯನವರು ನಗುಮುಖದಿಂದ ಕಾಣಿಸಿಕೊಂಡರೆ, ಡಿ.ಕೆ. ಶಿವಕುಮಾರ್ ತುಸು ಭಾವುಕರಾಗಿದ್ದಂತೆ ಕಂಡುಬಂದರು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಇಬ್ಬರೂ ನಾಯಕರು ಯಾವುದೇ ಸಿಬ್ಬಂದಿಯಿಲ್ಲದೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು….

Read More

West Bengal:ಬಂಗಾಳದ ಲಕ್ಷ್ಮಿ ಭಂಡಾರ್ ಯೋಜನೆಯಲ್ಲಿ ಬೃಹತ್ ವಂಚನೆ: 30 ಲಕ್ಷ ಜನರಿಗೆ ಸಿಗಲ್ಲ ಸೌಲಭ್ಯ ಸಿಎಂ ಸುವೇಂದು ಘೋಷಣೆ

ಕೋಲ್ಕತ್ತಾ, ಮೇ 28: ಪಶ್ಚಿಮ ಬಂಗಾಳ(West Bengal) ರಾಜಕೀಯದಲ್ಲಿ ಮಹಿಳಾ ಕಲ್ಯಾಣ ಯೋಜನೆಗಳ ಕುರಿತು ಮತ್ತೊಮ್ಮೆ ಭಾರಿ ವಿವಾದ ಸೃಷ್ಟಿಯಾಗಿದೆ. ರಾಜ್ಯದ ಜನಪ್ರಿಯ ‘ಲಕ್ಷ್ಮಿ ಭಂಡಾರ್’ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಸುಮಾರು 3 ಮಿಲಿಯನ್ (30 ಲಕ್ಷ) ಫಲಾನುಭವಿಗಳು ಈ ಯೋಜನೆಗೆ ಸಂಪೂರ್ಣ ಅನರ್ಹರಾಗಿದ್ದಾರೆ ಎಂದು ಮುಖ್ಯಮಂತ್ರಿ ಸುವೇಂದು ಅಧಿಕಾರಿ  ಹೇಳಿದ್ದಾರೆ. ಅನರ್ಹರಾಗಲು ಕಾರಣವೇನು? ನಬನ್ನಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಈ 30 ಲಕ್ಷ ಫಲಾನುಭವಿಗಳು ಭಾರತೀಯ ನಾಗರಿಕರಲ್ಲ ಅಥವಾ ಅವರ ಹೆಸರುಗಳನ್ನು…

Read More