ರಾಜಕೀಯ ಹೈವೋಲ್ಟೇಜ್ ಕೇಂದ್ರವಾದ ಡಿಕೆ ಶಿವಕುಮಾರ್ ನಿವಾಸ
ಬೆಂಗಳೂರು, ಮೇ 28: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಸದ್ದು ಜೋರಾಗಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸ ರಾಜಕೀಯ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ. ತಡರಾತ್ರಿ 1 ಗಂಟೆಯವರೆಗೂ ಆಪ್ತರೊಂದಿಗೆ ಚರ್ಚೆ ನಡೆಸಿದ ಡಿಕೆ ಶಿವಕುಮಾರ್, ಪ್ರಸ್ತುತ ವಿಶ್ರಾಂತಿ ಮುಗಿಸಿ ಸಿದ್ದರಾಮಯ್ಯ ಆಯೋಜಿಸಿರುವ ಉಪಾಹಾರ ಕೂಟಕ್ಕೆ ತೆರಳುತ್ತಿದ್ದಾರೆ. ಡಿಕೆ ಶಿವಕುಮಾರ್ ನಿವಾಸದ ಬಳಿ ಆಪ್ತರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಸುಮಾರು 50ಕ್ಕೂ ಹೆಚ್ಚು…